ಅಲಿಯಾ ಜಾಗಕ್ಕೆ ರಶ್ಮಿಕಾ ಎಂಟ್ರಿ; ಮತ್ತೋರ್ವ ಸ್ಟಾರ್ ನಟನ ಸಿನಿಮಾದಲ್ಲಿ 'ಪುಷ್ಪ' ನಟಿ
ರಶ್ಮಿಕಾ ಮಂದಣ್ಣ ತೆಲುಗಿನ ಸ್ಟಾರ್ ನಟ ಜೂ.ಎನ್ ಟಿ ಆರ್ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಈ ಸಿನಿಮಾಗೆ ಮೊದಲು ಬಾಲಿವುಡ್ ಸ್ಟಾರ್ ನಟಿ ಅಲಿಯಾ ಭಟ್ ಆಯ್ಕೆಯಾಗಿದ್ದರು. ಆದರೀಗ ಅಲಿಯಾ ಔಟ್ ಆಗಿದ್ದು ರಶ್ಮಿಕಾ ಎಂಟ್ರಿ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ.
ದಕ್ಷಿಣ ಭಾರತೀಯ ಸಿನಿಮಾರಂಗದಲ್ಲಿ ಸದ್ಯ ಸದ್ದು ಮಾಡುತ್ತಿರುವ ನಟಿ ರಶ್ಮಿಕಾ ಮಂದಣ್ಣ(Rashmika Mandanna) ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ತೆಲುಗು ಮತ್ತು ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿರುವ ರಶ್ಮಿಕಾ ಇತ್ತೀಚಿಗಷ್ಟೆ ತಮಿಳು ಸ್ಟಾರ್ ನಟ ದಳಪತಿ ವಿಜಯ್(Thalapathy Vijay) ಸಿನಿಮಾಗೆ ಆಯ್ಕೆಯಾಗುವ ಮೂಲಕ ಮತ್ತೊಂದು ದೊಡ್ಡ ಸಿನಿಮಾದಲ್ಲಿ ಮಿಂಚಲು ಸಜ್ಜಾಗಿದ್ದರು. ಇದರ ಬೆನ್ನಲ್ಲೇ ರಶ್ಮಿಕಾ ಬಾಲಿವುಡ್ ಸ್ಟಾರ್ ರಣಬೀರ್ ಕಪೂರ್ ಸಿನಿಮಾಗೆ ಆಯ್ಕೆಯಾಗದ್ದಾರೆ. ಇದೀಗ ದಕ್ಷಿಣದ ಭಾರತದ ಮತ್ತೊರ್ವ ಖ್ಯಾತ ನಟನ ಸಿನಿಮಾಗೆ ಆಯ್ಕೆಯಾಗಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.
ಹೌದು, ರಶ್ಮಿಕಾ ಮಂದಣ್ಣ ತೆಲುಗಿನ ಸ್ಟಾರ್ ನಟ ಜೂ.ಎನ್ ಟಿ ಆರ್(Jr. NTR) ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಜೂ.ಎನ್ ಟಿ ಆರ್ ನಟನೆಯ 30ನೇ ಸಿನಿಮಾದೆ ರಶ್ಮಿಕಾ ನಾಯಕಿ ಎನ್ನುವ ಸುದ್ದಿ ವೈರಲ್ ಆಗಿದೆ. ಅಂದಹಾಗೆ ಈ ಸಿನಿಮಾಗೆ ಮೊದಲು ಬಾಲಿವುಡ್ ಸ್ಟಾರ್ ನಟಿ ಅಲಿಯಾ ಭಟ್ ಆಯ್ಕೆಯಾಗಿದ್ದರು. ಆರ್ ಆರ್ ಆರ್ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದ ಜೂ.ಎನ್ ಟಿ ಆರ್ ಮತ್ತು ಅಲಿಯಾ ಬಳಿಕ ಮತ್ತೊಂದು ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಲು ರೆಡಿಯಾಗಿದ್ದರು. ಆದರೆ ಇದೀಗ ಅಲಿಯಾ ಸಿನಿಮಾದಿಂದ ಔಟ್ ಆಗಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ.
ಮದುವೆ ಬಳಿಕ ರಶ್ಮಿಕಾ ಜೊತೆ ಮನಾಲಿಯಲ್ಲಿ ಕಾಣಿಸಿಕೊಂಡ ರಣಬೀರ್ ಕಪೂರ್; ಫೋಟೋ ವೈರಲ್
ಅಲಿಯಾ ಜಾಗಕ್ಕೆ ದಕ್ಷಿಣದ ನಟಿ ರಶ್ಮಿಕಾ ಮಂದಣ್ಣ ಆಯ್ಕೆಯಾಗಿದ್ದಾರೆ. ಅಂದಹಾಗೆ ರಶ್ಮಿಕಾ ಈಗಾಗಲೇ ತೆಲುಗಿನ ಬಹುತೇಕ ಸ್ಟಾರ್ ನಟರ ಜೊತೆ ನಟಿಸಿದ್ದಾರೆ. ಮಹೇಶ್ ಬಾಬು, ಅಲ್ಲು ಅರ್ಜುನ್ ಬಳಿಕ ಇದೀಗ ಜೂ.ಎನ್ ಟಿ ಆರ್ ಜೊತೆ ನಟಿಸಲು ಸಜ್ಜಾಗಿದ್ದಾರೆ. ಅಂದಹಾಗೆ ರಶ್ಮಿಕಾ ಸದ್ಯ ಅಲ್ಲು ಅರ್ಜುನ್ ಜೊತೆ ಪುಷ್ಪ-2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದಲ್ಲಿ ರಶ್ಮಿಕಾ ಡಿಗ್ಲಾಮ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.
ಇನ್ನು ತಮಿಳಿನಲ್ಲಿ ವಿಜಯ್ ನಟನಯ ದಳಪತಿ66 ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಇದು ರಶ್ಮಿಕಾಗೆ 2ನೇ ತಮಿಳು ಸಿನಿಮಾವಾಗಿದೆ. ಈ ಮೊದಲು ಸುಲ್ತಾನ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಇನ್ನು ಬಾಲಿವುಡ್ ನಲ್ಲೂ ರಶ್ಮಿಕಾ ಸಖತ್ ಬ್ಯುಸಿಯಾಗಿದ್ದಾರೆ. ಮೊದಲ ಸಿನಿಮಾ ಬಿಡುಗಡೆಯೂ ಮೊದಲು ರಶ್ಮಿಕಾ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಮಿಷನ್ ಮಜ್ನು ಬಳಿಕ ಅಮಿತಾಭ್ ಬಚ್ಚನ್ ನಟನೆಯ ಗುಡ್ ಬೈ ಸಿನಿಮಾದಲ್ಲಿ ನಟಿಸಿದ್ದಾರೆ. ಸದ್ಯ ರಶ್ಮಿಕಾ ಬಾಲಿವುಡ್ ಸ್ಟಾರ್ ರಣಬೀರ್ ಕಪೂರ್ ನಟನೆಯ ಅನಿಮಲ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದ್ದು ಮನಾಲಿಯಲ್ಲಿ ಚಿತ್ರೀಕರಣ ನಡೆಯುತ್ತಿದೆ.
'ದಳಪತಿ 66' ಸಿನಿಮಾಗೆ ರಶ್ಮಿಕಾಗೂ ಮೊದಲು ಆಯ್ಕೆಯಾಗಿದ್ದು ಈ ಸ್ಟಾರ್ ನಟಿ
ಇನ್ನು ಜೂ ಎನ್ ಟಿ ಆರ್ ಸದ್ಯ ಆರ್ ಆರ್ ಆರ್ ಸಿನಿಮಾದ ಸಕ್ಸಸ್ ನ ಸಂಭ್ರಮದಲ್ಲಿದ್ದಾರೆ. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದ್ದು ಬಾಕ್ಸ್ ಆಫೀಸ್ ನಲ್ಲೂ ಭರ್ಜರಿ ಕಮಾಯಿ ಮಾಡಿದೆ. ಸದ್ಯ ಕಲೆಕ್ಷನ್ ವಿಚಾರದಲ್ಲಿ ಆರ್ ಆರ್ ಆರ್ ಭಾರತದ 3ನೇ ಅತೀ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾವಾಗಿದೆ. ಈ ಸಿನಿಮಾ ಬಳಿಕ ಜೂ.ಎನ್ ಟಿ ಆರ್ ಅಧಿಕೃತವಾಗಿ ಯಾವುದೇ ಸಿನಿಮಾ ಅನೌನ್ಸ್ ಮಾಡಿಲ್ಲ. ಆದರೆ ಮುಂದಿನ ಸಿನಿಮಾ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.