'ಪುಷ್ಪ-2' ಮುಗಿಯೋ ಮೊದಲೇ ಮತ್ತೊಂದು ಸಿನಿಮಾದಲ್ಲಿ ಅಲ್ಲು ಅರ್ಜುನ್; ನಿರ್ದೇಶಕ ಯಾರು?
ಟಾಲಿವುಡ್ ಸ್ಟಾರ್ ಅಲ್ಲು ಅರ್ಜುನ್ ಪುಷ್ಪ-2 ಮುಗಿಯೋ ಮೊದಲೇ ಮತ್ತೊಂದು ಸಿನಿಮಾಗೆ ಸಹಿ ಹಾಕಿದ್ದಾರೆ.
ಟಾಲಿವುಡ್ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಸದ್ಯ ಪುಷ್ಪ-2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಮೊದಲ ಭಾಗದ ಸಕ್ಸಸ್ ಬಳಿಕ ಪುಷ್ಪ-2 ಮೇಲಿನ ನಿರೀಕ್ಷೆ ಹೆಚ್ಚಾಗಿದ್ದು ಸದ್ಯ ಭರ್ಜರಿ ಚಿತ್ರೀಕರಣ ನಡೆಯುತ್ತಿದೆ. ನಿರೀಕ್ಷೆಗೆ ತಕ್ಕಂತೆ ಪುಷ್ಪ-2 ತಯಾರಾಗುತ್ತಿದೆ ಎನ್ನುವ ಮಾತು ಕೇಳಿ ಬಂದಿದೆ. ಈ ನಡುವೆ ಅಲ್ಲು ಅರ್ಜುನ್ ಕಡೆಯಿಂದ ಮತ್ತೊಂದು ಸುದ್ದಿ ವೈರಲ್ ಆಗಿದೆ. ಸ್ಟೈಲಿಶ್ ಸ್ಟಾರ್ ಪುಷ್ಪ-2 ಚಿತ್ರೀಕರಣ ಮುಗಿಯೋ ಮೊದಲೇ ಮೊತ್ತೊಂದು ಸಿನಿಮಾಗೆ ಸಹಿ ಮಾಡಿದ್ದಾರೆ. ಪುಷ್ಪ-2 ಬಳಿಕ ಅಲ್ಲು ಅರ್ಜುನ್ ಯಾವ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿತ್ತು. ಆದರೀಗ ಕುತೂಹಲಕ್ಕೆ ತೆರೆಬಿದ್ದಿದೆ. ಪ್ಯಾನ್ ಇಂಡಿಯಾ ಸ್ಟಾರ್ ಇದೀಗ ತೆಲುಗಿನ ಖ್ಯಾತ ನಿರ್ದೇಶಕ ಅರ್ಜುನ್ ರೆಡ್ಡಿ ಖ್ಯಾತಿಯ ಸಂದೀಪ್ ರೆಡ್ಡಿ ವಾಂಗ ಜೊತೆ ಹೊಸ ಸಿನಿಮಾ ಮಾಡುತ್ತಿದ್ದಾರೆ.
ಮೊದಲ ಸಿನಿಮಾ ಮೂಲಕವೇ ಸೂಪರ್ ಸಕ್ಸಸ್ ಕಂಡ ನಿರ್ದೇಶಕ ಸಂದೀಪ್ ರೆಡ್ಡಿ ವಾಂಗ ತೆಲುಗಿನಲ್ಲಿ ಅರ್ಜುನ್ ರೆಡ್ಡಿ ಬ್ಲಾಕ್‌ಬಸ್ಟರ್ ಆದ ಬಳಿಕ ಹಿಂದಿಗೆ ಹಾರಿದರು. ಬಾಲಿವುಡ್‌ನಲ್ಲಿ ಕಬೀರ್ ಸಿಂಗ್ ಹೆಸರಿನಲ್ಲಿ ಅರ್ಜುನ್ ರೆಡ್ಡಿ ಸಿನಿಮಾವನ್ನು ರಿಮೇಕ್ ಮಾಡಿದರು. ಕಬೀರ್ ಸಿಂಗ್ ಕೂಡ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡಿತು. ಶಾಹಿದಿ ಕಪೂರ್ ನಾಯಕನಾಗಿ ಕಾಣಿಸಿಕೊಂಡಿದ್ದರು. ಕಬೀರ್ ಸಿಂಗ್ ಬಳಿಕ ಮತ್ತೆ ಹಿಂದಿ ಸಿನಿಮಾ ಒಪ್ಪಿಕೊಂಡಿರುವ ಸಂದೀಪ್ ರೆಡ್ಡಿ ರಬೀರ್ ಕಪೂರ್ ಜೊತೆ ಅನಿಮಲ್ ಸಿನಿಮಾ ಮಾಡುತ್ತಿದ್ದಾರೆ. ಅನಿಮಲ್ ನಲ್ಲಿ ರಣಬೀರ್ ಕಪೂರ್ ಜೊತೆ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳುತ್ತಿದ್ದಾರೆ. ಅನಿಮಲ್ ಸಿನಿಮಾದ ಚಿತ್ರೀಕರಣ ಮುಗಿಯೋ ಮೊದಲೇ ಸಂದೀಪ್ ರೆಡ್ಡಿ ನಟ ಅಲ್ಲು ಅರ್ಜುನ್ ಜೊತೆ ಸಿನಿಮಾ ಒಪ್ಪಿಕೊಂಡಿದ್ದಾರೆ.
ಅಲ್ಲು ಅರ್ಜುನ್ ಮತ್ತು ಸಂದೀಪ್ ರೆಡ್ಡಿ ವಾಂಗ ಸಿನಿಮಾಗೆ ಭೂಷಣ್ ಕುಮಾರ್ ಅವರ ಫಿಲ್ಮ್ ಸ್ಟೂಡಿಯೋ ಮತ್ತು ಟೀ ಸೀರಿಸ್ ಮತ್ತು ಸಂದೀಪ್ ರೆಡ್ಡಿ ಅವರ ಭದ್ರಕಾಳಿ ಪಿಕ್ಟರ್ಸ್ ನಿರ್ಮಾಣ ಮಾಡುತ್ತಿದೆ. ಸಂದೀಪ್ ರೆಡ್ಡಿ ಪ್ರಭಾಸ್ ಜೊತೆಯೂ ಸಿನಿಮಾ ಮಾಡುತ್ತಿದ್ದಾರೆ. ಸ್ಪಿರಿಟ್ ಎನ್ನುವ ಚಿತ್ರ ಮಾಡುತ್ತಿದ್ದು ಈ ಸಿನಿಮಾ ಮುಗಿದ ಬಳಿಕ ಅಲ್ಲು ಅರ್ಜುನ್ ಜೊತೆಗಿನ ಸಿನಿಮಾ ಪ್ರಾರಂಭಿಸಲಿದ್ದಾರೆ. ಅಷ್ಟೊತ್ತಿಗೆ ಅಲ್ಲು ಪುಷ್ಪ-2 ಸಿನಿಮಾವನ್ನು ಮುಗಿಸಿರುತ್ತಾರೆ.
Allu Arjun: ಇನ್‌ಸ್ಟಾಗ್ರಾಮ್‌ನಲ್ಲಿ 20 ಮಿಲಿಯನ್ ಫಾಲೋವರ್ಸ್ ಹೊಂದಿದ ದಕ್ಷಿಣದ ಮೊದಲ ನಟ ಇವರೇ!
ಅಲ್ಲು ಅರ್ಜುನ್ ಪುಷ್ಪ-2
ಪುಷ್ಪ-1 ಸೂಪರ್ ಸಕ್ಸಸ್ ಬಳಿಕ ಅಲ್ಲು ಅರ್ಜುನ್ ಪುಷ್ಪ-2 ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗುತ್ತಿದ್ದಾರೆ. ಪುಷ್ಪ-2 ಈಗಾಗಲೇ ಭಾರಿ ನಿರೀಕ್ಷೆ ಮೂಡಿಸಿದ ಸಿನಿಮಾಗಳಲ್ಲಿ ಒಂದಾಗಿದೆ. ರಶ್ಮಿಕಾ ಮಂದಣ್ಣ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಪುಷ್ಪ-1 ಮೂಲಕ ಅಲ್ಲು ಅರ್ಜುನ್ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿದರು. ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರ ಹೊಮ್ಮಿರುವ ಅಲ್ಲು ಅರ್ಜುನ್ ಮುಂದಿನ ಸಿನಿಮಾಗಳ ಮೇಲು ನಿರೀಕ್ಷೆ, ಕುತೂಹಲ ಹೆಚ್ಚಾಗಿದೆ. ಹಾಗಾಗಿ ಯಾವ ರೀತಿಯ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಾರೆ ಎಂದು ಅಭಿಮಾನಿಗಳು ಕಾತರರಾಗಿದ್ದರು. ಇದೀಗ ಆ ಕುತೂಹಲಕ್ಕೆ ತೆರೆಬಿದ್ದಿದೆ. ತೆಲುಗು ನಿರ್ದೇಶಕನ ಜೊತೆಯೇ ಸಿನಿಮಾ ಮಾಡುವ ಮೂಲಕ ಅಬಿಮಾನಿಗಳ ಮೆಚ್ಚಿಗೆ ಪಡಿದ್ದಾರೆ.
ಫ್ಯಾಮಿಲಿ ಜೊತೆ ಜಂಗಲ್ ಸಫಾರಿ; ಅಲ್ಲು ಅರ್ಜುನ್ ಹಾಲಿಡೇ ಫೋಟೋಗಳು ವೈರಲ್!
ಇನ್ನು ಹೆಸರಿಡದ ಅಲ್ಲು ಅರ್ಜುನ್ ಹೊಸ ಸಿನಿಮಾ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ದೊಡ್ಡ ಮಟ್ಟದಲ್ಲಿ ಸಿನಿಮಾ ಮಾಡಲು ಚಿತ್ರತಂಡ ಪ್ಲಾನ್ ಮಾಡಿದ್ದು ಸದ್ಯ ಪ್ರಿಪ್ರೊಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಅಂದಹಾಗೆ ಇನ್ನು ಉಳಿದಂತೆ ಸಿನಿಮಾದಲ್ಲಿ ಯಾರೆಲ್ಲ ನಟಿಸಲಿದ್ದಾರೆ, ನಾಯಕಿ ಯಾರು ಎನ್ನುವ ಕುತೂಹಲಕ್ಕೆ ಸದ್ಯದಲ್ಲೇ ತೆರೆಬೀಳಲಿದೆ.