ಶಾರುಖ್ ಖಾನ್ 'ಜವಾನ್'ನಲ್ಲಿ ಮತ್ತೋರ್ವ ಸೌತ್ ಸ್ಟಾರ್; 'ಪಠಾಣ್' ಸ್ಟಾರ್ ಜೊತೆ 'ಪುಷ್ಪ' ಸ್ಟಾರ್
ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್ ನಟನೆಯ ಜವಾನ್ ಸಿನಿಮಾದಲ್ಲಿ ಟಾಲಿವುಡ್ ಸ್ಟಾರ್ ಅಲ್ಲು ಅರ್ಜುನ್ ನಟಿಸುತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ.
ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್ ಸದ್ಯ ಪಠಾಣ್ ಸಿನಿಮಾದ ಸಕ್ಸಸ್ ನಲ್ಲಿದ್ದಾರೆ. ಶಾರುಖ್ ಅನೇಕ ವರ್ಷಗಳ ಬಳಿಕ ತೆರೆಮೇಲೆ ಬಂದಿದ್ದು ಪಠಾಣ್ ಮೂಲಕ ದೊಡ್ಡ ಮಟ್ಟದ ಯಶಸ್ಸು ಕಂಡಿದೆ. ಪಠಾಣ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಕಮಾಯಿ ಮಾಡಿದೆ. ಪಠಾಣ್ ಸಕ್ಸಸ್ ಬೆನ್ನಲ್ಲೇ ಶಾರುಖ್ ಮುಂದಿನ ಸಿನಿಮಾಗಳ ಶೂಟಿಂಗ್ ಕೂಡ ಪ್ರಾರಂಭಿಸಿದ್ದಾರೆ. ಪಠಾಣ್ ಸಿನಿಮಾ ರಿಲೀಸ್ ಆಗಿ ಬ್ಲಾಕ್ ಬಸ್ಟರ್ ಹಿಟ್ ಆಗಿದ್ದು ಆಯ್ತು. ಈಗೇನಿದ್ರು ಮುಂದಿನ ಸಿನಿಮಾಗಳ ಬಗ್ಗೆ ಮಾತು. ಈಗಾಗಲೇ ಶಾರುಖ್ ಜವಾನ್ ಸಿನಿಮಾದ ಶೂಟಿಂಗ್ ಪ್ರಾರಂಭಿಸಿದ್ದಾರೆ. ಜವಾನ್ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಾಗಿದೆ.
ಈ ವರ್ಷದ ಜೂನ್ ನಲ್ಲಿ ರಿಲೀಸ್ ಆಗುತ್ತಿರುವ ಜವಾನ್ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದ್ದೆ. ಪಠಾಣ್ ಸಕ್ಸಸ್ ಆದ ಕಾರಣ ಜವಾನ್ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ಈಗಾಗಲೇ ಜವಾನ್ ಸಿನಿಮಾದಲ್ಲಿ ಅನೇಕ ಸೌತ್ ಸ್ಟಾರ್ ನಟಿಸುತ್ತಿದ್ದಾರೆ. ಈ ನಡುವೆ ಇದೀಗ ಮತ್ತೋರ್ವ ಸ್ಟಾರ್ ನಟ ಜವಾನ್ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಅದು ಮತ್ಯಾರು ಅಲ್ಲ ತೆಲುಗು ಸ್ಟಾರ್ ಅಲ್ಲು ಅರ್ಜುನ್. ತಮಿಳು ಸ್ಟಾರ್ ಅಟ್ಲೀ ಕುಮಾರ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಜವಾನ್ ಸಿನಿಮಾದಲ್ಲಿ ನಯನತಾರಾ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ರಮುಖ ಪಾತ್ರದಲ್ಲಿ ವಿಜಯ್ ಸೇತುಪತಿ ನಟಿಸುತ್ತಿದ್ದಾರೆ. ಜೊತೆಗೆ ತಮಿಳು ಸ್ಟಾರ್ ನಟ ದಳಪತಿ ವಿಜಯ್ ಕೂಡ ಅತಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.
ನಯನತಾರಾ ಮನೆಗೆ ಶಾರುಖ್ ದಿಢೀರ್ ಭೇಟಿ ; ಸೌತ್ ಸ್ಟಾರ್‌ಗೆ ಕಿಸ್ ಮಾಡಿ ಹೊರಟ ಕಿಂಗ್ ಖಾನ್
ಇದೀಗ ಜವಾನ್ ಸಿನಿಮಾಗೆ ಅಲ್ಲು ಅರ್ಜುನ್ ಹೆಸರು ಕೇಳಿಬರುತ್ತಿವುದು ಅಚ್ಚರಿ ಮೂಡಿಸಿದೆ. ಅಲ್ಲು ಅರ್ಜುನ್ ನಿಜಕ್ಕೂ ಜವಾನ್ ಸಿನಿಮಾದಲ್ಲಿ ನಟಿಸುತ್ತಾರಾ ಎನ್ನುವ ಬಗ್ಗೆ ಯಾವುದೇ ಮಾಹಿತಿ ರಿವೀಲ್ ಆಗಿಲ್ಲ. ಆದರೆ ಈ ಸುದ್ದಿ ಕೇಳಿ ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ. ಅಂದಹಾಗೆ ಜವಾನ್ ಸಿನಿಮಾ ಮೂಲಕ ಅಲ್ಲು ಅರ್ಜುನ್ ಬಾಲಿವುಡ್‌ಗೆ ಎಂಟ್ರಿ ಕೊಡಲಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ.
ಈ ಬಗ್ಗೆ ಮೂಲಗಳ ಆಂಗ್ಲ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ಚಿತ್ರದಲ್ಲಿ ಅಲ್ಲು ಅರ್ಜುನ್ ಬಹಳ ಮುಖ್ಯವಾದ ಪಾತ್ರದಲ್ಲಿ ನಟಿಸಲು ಆಫರ್ ಮಾಡಲಾಗಿದೆ. ಆಧರೆ ಅಲ್ಲು ಅರ್ಜುನ್ ಇನ್ನೂ ಗ್ರೀನ್ ಸಿಗ್ನಲ್ ನೀಡಿಲ್ಲ. ಆದರೆ ಅಲ್ಲು ಅರ್ಜುನ್ ಈ ಪಾತ್ರ ಮಾಡ್ತಾರೆ ಎನ್ನುವ ನಂಬಿಕೆ ಇದೆ. ಈ ಪಾತ್ರಕ್ಕೆ ಕಲಾವಿದರ ಆಯ್ಕೆ ಸಾಕಷ್ಟ ಕಷ್ಟವಾಗಿದೆ. ಶಾರುಖ್ ಜೊತೆ ಯಾರು ಕಾಣಿಸಿಕೊಳ್ಳದ ಸ್ಟಾರ್ ನನ್ನು ಕರೆತರುವ ಪ್ರಯತ್ನ. ಸದ್ಯದಲ್ಲೇ ಅಲ್ಲು ಅರ್ಜುನ್ ಗ್ರೀನ್ ಸಿಗ್ನಲ್ ನೀಡುತ್ತಾರೆ' ಎಂದು ಹೇಳಿದ್ದಾರೆ.
ಶಾರುಖ್ ಖಾನ್ ಮ್ಯಾನೇಜರ್ ಪೂಜಾ ದಾದ್ಲಾನಿ ಯಾರು? ಆಕೆಯ ಸಂಬಳ ಕೇಳಿದ್ರೆ ಅಚ್ಚರಿ ಪಡ್ತೀರಿ!
ಅಲ್ಲು ಅರ್ಜುನ್ ಸದ್ಯ ಪುಷ್ಪ ಸಿನಿಮಾ ಪಾರ್ಟ್ 2ನಲ್ಲಿ ಬ್ಯುಸಿಯಾಗಿದ್ದಾರೆ. ಪುಷ್ಪ ಸಿವನಿಮಾ ಮೂಲಕ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಅಲ್ಲು ಅರ್ಜುನ್ ಬೇಡಿಕೆ ಹೆಚ್ಚಾಗಿದೆ. ಬಾಲಿವುಡ್ ನಲ್ಲೂ ಅಲ್ಲು ಅರ್ಜುನ್ ಗೆ ಉತ್ತಮ ಬೇಡಿಕೆ ಇದೆ. ಇದೀಗ ಪಾರ್ಟ್ -2 ಮೇಲೆ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ. ಪುಷ್ಪ ಪಾರ್ಟ್-2 ಹೇಗಿರಲಿದೆ ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸುತ್ತಿದ್ದಾರೆ. ಮಲಯಾಳಂ ಸ್ಟಾರ ಫಹಾದ್ ಪಾಸಿಲ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪೊಲೀಸ್ ಆಗಿ ಅಬ್ಬರಿಸುತ್ತಿದ್ದಾರೆ.