ಅಲ್ಲು ಅರ್ಜುನ್ 'ಪುಷ್ಪ-2'ಗೂ ಬೆಂಗಳೂರಿಗೂ ಇದೆ ನಂಟು? ಇಂಟ್ರಸ್ಟಿಂಗ್ ಮಾಹಿತಿ ಬಹಿರಂಗ

ಅಲ್ಲು ಅರ್ಜುನ್ ನಟನೆಯ 'ಪುಷ್ಪ-2'ಗೂ ಬೆಂಗಳೂರಿಗೂ ನಂಟಿದೆ. ಬಹುನಿರೀಕ್ಷೆಯ ಸಿನಿಮಾದ ಮುಂದಿನ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Allu Arjun starrer Pushpa 2 next schedule to be shot in Bengaluru sgk

ತೆಲುಗು ಸ್ಟಾರ್ ಅಲ್ಲು ಅರ್ಜುನ್ ನಟನೆಯ ಪುಷ್ಪ-2 ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ಮೊದಲ ಭಾಗ ರಿಲೀಸ್ ಆದ ಬಳಿಕ ಪಾರ್ಟ್-2 ಮೇಲಿನ ಕುತೂಹಲ ದುಪ್ಪಟಾಗಿದೆ. ಪುಷ್ಪ ರಿಲೀಸ್ ಆಗಿ ವರ್ಷದ ಮೇಲಾಯಿತು. ಆದರೆ ಪಾರ್ಟ್ -2ನ ಸಿದ್ಧತೆ ಇನ್ನೂ ನಡೆಯುತ್ತಲೇ ಇತ್ತು. ಈಗಾಗಲೇ ಎಲ್ಲಾ ತಯಾರಿ ಮಾಡಿಕೊಂಡು ಅಲ್ಲು ಅರ್ಜುನ್ ಮತ್ತು ಅಂಡ್ ತಂಡ ಇತ್ತೀಚೆಗಷ್ಟೆ ಚಿತ್ರೀಕರಣ ಪ್ರಾರಂಭ ಮಾಡಿತ್ತು. ಇದೀಗ ಸಿನಿಮಾದ ಬಗ್ಗೆ ಮತ್ತೊಂದು ಇಂಟ್ರಸ್ಟಿಂಗ್ ವಿಚಾರ ಬಹಿರಂಗವಾಗಿದೆ. ಪುಷ್ಪ-2ಗೂ ಬೆಂಗಳೂರಿಗೂ ನಂಟಿರುವ ವಿಚಾರ ರಿವೀಲ್ ಆಗಿದೆ. ಏನದು ಅಂತಿರಾ ಪುಷ್ಪ-2 ಸಿನಿಮಾದ ಮುಂದಿನ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯಲಿದೆ ಎನ್ನುವ ಮಾತು ಕೇಳಿ ಬರುತ್ತಿದೆ. 

ಅಲ್ಲು ಅರ್ಜುನ್ ಮತ್ತು ನಿರ್ದೇಶಕ ಸುಕುಮಾರ್ ಕಾಂಬಿನೇಷನ್‌ನ ಪುಷ್ಪ-2 ಮುಂದಿನ ಶೆಡ್ಯೂಲ್ ಬೆಂಗಳೂರಿನಿಂದ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಸಿನಿಮಾತಂಡ ಪ್ಲಾನ್ ಮಾಡಿದ್ದು ಸದ್ಯದಲ್ಲೇ ಇಡೀ ತಂಡ ಬೆಂಗಳೂರಿಗೆ ಆಗಮಿಸಲಿದೆ. ಅಂದಹಾಗೆ ಪುಷ್ಪ-2ನಲ್ಲಿ ದೊಡ್ಡ ತಾರಾಬಳಗವೇ ಇದೆ ಎನ್ನುವ ಮಾತು ಕೇಳಿ ಬರುತ್ತಿದೆ. ಮೊದಲ ಭಾಗದ ಕೊನೆಯಲ್ಲಿ ಎಂಟ್ರಿ ಕೊಟ್ಟಿದ್ದ ಮಲಯಾಳಂ ಸ್ಟಾರ್ ಫಹಾದ್ ಫಾಸಿಲ್ ಪಾರ್ಟ್-2ನಲ್ಲಿ ಅಬ್ಬರಿಸಲಿದ್ದಾರೆ. ಇನ್ನೂ ಮತ್ತೊಂದು ಇಂಟ್ರೆಸ್ಟಿಂಗ್ ವಿಚಾರ ಎಂದರೆ ಸೌತ್ ಸ್ಟಾರ್ ಸಾಯಿ ಪಲ್ಲವಿ ಕೂಡ ಎಂಟ್ರಿ ಕೊಟ್ಟಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಇನ್ನೂ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಮುಂದುವರೆಯಲಿದ್ದಾರೆ. 

ಬೆಂಗಳೂರಿನ ಶೆಡ್ಯೂಲ್ ನಲ್ಲಿ ಅಲ್ಲು ಅರ್ಜುನ್, ಫಹಾದ್ ಫಾಸಿಲ್ ಕಾಣಿಸಿಕೊಳ್ಳಲಿದ್ದಾರೆ. ಇಬ್ಬರೂ ಸ್ಟಾರ್ ನಟರ ಪ್ರಮುಖ ದೃಶ್ಯದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ. ಈ ಬಗ್ಗೆ ಸಿನಿಮಾತಂಡದ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ. ಆದರೆ ಚಿತ್ರತಂಡ ಬೆಂಗಳೂರಿನಲ್ಲಿ ಚಿತ್ರೀಕರಣ ಮಾಡಲು ಉತ್ಸುಕರಾಗಿದ್ದಾರೆ ಎನ್ನಲಾಗಿದೆ. ಅಂದಹಾಗೆ ಫಹಾದ್ ಫಾಸಿಲ್ ಈಗಾಗಲೇ ಬೆಂಗಳೂರಿನಲ್ಲಿದ್ದು ಸದ್ಯದಲ್ಲೇ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರಂತೆ.

ಅಲ್ಲು ಅರ್ಜುನ್ 'ಪುಷ್ಪ-2' ಸಿನಿಮಾಗೆ ಎಂಟ್ರಿ ಕೊಟ್ಟ ಸಾಯಿ ಪಲ್ಲವಿ

 ಟಾಲಿವುಡ್ ಸ್ಟಾರ್ ಅಲ್ಲು ಅರ್ಜುನ್ ಇತ್ತೀಚೆಗೆ ಪತ್ನಿ ಸ್ನೇಹಾ ಮತ್ತು ಇಬ್ಬರೂ ಮಕ್ಕಳ ಜೊತೆ ಪ್ರವಾಸಕ್ಕೆ ತೆರಳಿದ್ದರು. ಪುಷ್ಪ-2 ಪ್ರಾರಂಭವಾದ ಬಳಿಕ ಎಲ್ಲಿಯೂ ಹೋಗಲು ಸಾಧ್ಯವಾಗದ ಕಾರಣ ಈಗಾಗಲೇ ಕುಟುಂಬದ ಜೊತೆ ಜಾಲಿ ಟ್ರಿಪ್ ಮುಗಿಸಿದ್ದಾರೆ. ಸದ್ಯ ವಾಪಾಸ್ ಆಗಿರುವ ಅಲ್ಲು ಅಲ್ಲು ಪುಷ್ಪ-2 ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದೆ. ಅಂದಹಾಗೆ ಫಹಾದ್ ಮತ್ತು ಅಲ್ಲು ಅರ್ಜುನ್ ಜೊತೆ ಇನ್ನು ಯಾರೆಲ್ಲ ಬೆಂಗಳೂರು ಚಿತ್ರೀಕರಣದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ಬಹಿರಂಗವಾಗಬೇಕಿದೆ.  

ಅಲ್ಲು ಅರ್ಜುನ್ 'ಪುಷ್ಪ-2' ಆಫರ್ ರಿಜೆಕ್ಟ್ ವದಂತಿ; ಸಮಂತಾ ಟೀಂ ಸ್ಪಷ್ಟನೆ

ಸುಕುಮಾರ್ ಬರೆದು ನಿರ್ದೇಶನ ಮಾಡುತ್ತಿರುವ ಪುಷ್ಪ: ದಿ ರೂಲ್ ಸಿನಿಮಾದಲ್ಲಿ  ಅಲ್ಲು ಅರ್ಜುನ್, ಫಹದ್ ಫಾಸಿಲ್ ಮತ್ತು ರಶ್ಮಿಕಾ ಮಂದಣ್ಣ ಸೇರಿದಂತೆ ಅನೇಕರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಳ್ಳುತ್ತಿದ್ದಾರೆ. ಅಂದುಕೊಂಡಂತೆ ಈ ಸಿನಿಮಾದ ಚಿತ್ರೀಕರಣ ನಡೆದು ಮುಕ್ತಾಯವಾದರೇ ಈ ವರ್ಷದ ಕೊನೆಯಲ್ಲಿ ಅಥವಾ ಮುಂದಿನ ವರ್ಷದ ಪ್ರಾರಂಭದಲ್ಲಿ ಸಿನಿಮಾ ರಿಲೀಸ್ ಆಗಲಿದೆ.  

Latest Videos
Follow Us:
Download App:
  • android
  • ios