ಅಮಿತಾಭ್​ ಬಚ್ಚನ್​ ಆರೋಗ್ಯದಲ್ಲಿ ದಿಢೀರ್​ ಏರುಪೇರು- ಆಸ್ಪತ್ರೆಗೆ ದಾಖಲು: ನಟನಿಂದ ಅಚ್ಚರಿಯ ಟ್ವೀಟ್​!

ನಟ ಅಮಿತಾಭ್​ ಬಚ್ಚನ್​ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದಕ್ಕೂ ಮುನ್ನ ಅವರು ಮಾಡಿರುವ ಟ್ವೀಟ್​ ಕುತೂಹಲ ಕೆರಳಿಸಿದೆ. 
 

Amitabh Bachchan hospitalised undergoes angioplasty in leg at Mumbais Kokilaben Hospital suc

ಬಾಲಿವುಡ್‌ನ ಹಿರಿಯ ನಟ ಅಮಿತಾಭ್​ ಬಚ್ಚನ್ ಅವರಿಗೆ ದಿಢೀರನೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಮುಂಬೈನ  ಕೋಕಿಲಾ ಬೆನ್ ಆಸ್ಪತ್ರೆಯಲ್ಲಿ ನಟಿಯನ್ನು  ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ. ನಟನ  ಆಂಜಿಯೋಪ್ಲಾಸ್ಟಿಗೆ ಒಳಗಾಗಿದ್ದಾರೆ, ಕಾಲಿಗೆ ಸರ್ಜರಿ ಮಾಡಲಾಗಿದೆ ಎಂದು ಹೇಳಲಾಗುತ್ತಿದ್ದರೂ ಈ ಬಗ್ಗೆ ಇನ್ನಷ್ಟೇ ಖಚಿತ ಮಾಹಿತಿ ಹೊರಬರಬೇಕಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ. ವರದಿಯ ಪ್ರಕಾರ,  ಬಿಗಿ ಭದ್ರತೆಯ ನಡುವೆ ಇಂದು ಮುಂಜಾನೆ ಆಸ್ಪತ್ರೆಗೆ ದಾಖಲಿಸಲಾಗಿದೆ.  ಆಸ್ಪತ್ರೆಗೆ ದಾಖಲಾಗುವ ಸ್ವಲ್ಪ ಮುಂಚೆ ‘ಯಾವಾಗಲೂ ಕೃತಜ್ಞರಾಗಿರುತ್ತೇನೆ’ ಎಂದು ಬರೆದುಕೊಂಡಿರುವುದು ಇನ್ನಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಅಂದಹಾಗೆ ಅಮಿತಾಭ್​ ಅವರಿಗೆ ಈಗ 81 ವರ್ಷ ವಯಸ್ಸು. ಈ ವರ್ಷದ ಆರಂಭದಲ್ಲಿ, ಅಮಿತಾಬ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಗಾಳಿ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಆ ನಂತರ ಇದೊಂದು ಸುಳ್ಳು ಸುದ್ದಿ ಎಂದು ತಿಳಿದು ಬಂದಿತ್ತು. ಈಗಲೂ ಹಾಗೆಯೇ ಆಗಲಿ ಎಂದು ಎಲ್ಲರೂ ಹೇಳುತ್ತಿದ್ದಾರೆ. ನಟನ ಆರೋಗ್ಯಕ್ಕಾಗಿ ಹಲವರು ಪ್ರಾರ್ಥಿಸುತ್ತಿದ್ದಾರೆ. ಅಮಿತಾಭ್​ ಬಚ್ಚನ್​ ಅವರು,  ಕಮಲ್ ಹಾಸನ್ ಮತ್ತು ದೀಪಿಕಾ ಪಡುಕೋಣೆ ಜೊತೆಗೆ, ಪ್ರಭಾಸ್, ದಿಶಾ ಪಟಾನಿಯ ಕಲ್ಕಿ 2898 AD ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದನ್ನು ನಾಗ್ ಅಶ್ವಿನ್ ನಿರ್ದೇಶಿಸಿದ್ದಾರೆ.  ಮೊನ್ನೆಯಷ್ಟೇ ಈ ಚಿತ್ರದ ಅಪ್‌ಡೇಟ್‌ವೊಂದನ್ನು ಹಂಚಿಕೊಂಡಿದ್ದು.."ನಿನ್ನೆ ರಾತ್ರಿ ಶೂಟಿಂಗ್ ಮುಗಿಸಿ ಬಂದಿದ್ದೇನೆ. ಚಿತ್ರದ ಚಿತ್ರೀಕರಣ ಎಲ್ಲವೂ ಮುಗಿದಿದೆ. ಅಂದುಕೊಂಡಂತೆ ಮೇ 9ಕ್ಕೆ ಚಿತ್ರ ತೆರೆಕಾಣಲಿದೆ ಎಂದು" ಮಾಹಿತಿಯನ್ನು ಹಂಚಿಕೊಂಡಿದ್ದರು. 

ಅಮಿತಾಭ್-ಅಭಿಷೇಕ್​ ಒಟ್ಟಿಗೇ ಇಲ್ವಾ? ಇನ್​ಸ್ಟಾದಲ್ಲಿನ ಚಾಟ್​ ನೋಡಿ ಇದೆಲ್ಲಾ ಯಾಕೆ ಬೇಕು ಕೇಳ್ತಿದ್ದಾರೆ ಫ್ಯಾನ್ಸ್​!

 
ಈಚೆಗಷ್ಟೇ ಅಮಿತಾಭ್​ ಅವರು, ಅಯೋಧ್ಯೆಯ ರಾಮಲಲ್ಲಾ ಪ್ರಾಣಪ್ರತಿಷ್ಠೆ ನಡೆದು ಮೂರನೇ ವಾರದಲ್ಲಿಯೇ  ಭೇಟಿ ಕೊಟ್ಟಿದ್ದರು. ಪ್ರಾಣಪ್ರತಿಷ್ಠೆ ದಿನವೂ ವಿಶೇಷ ಆಹ್ವಾನದ ಮೇರೆಗೆ ಅಯೋಧ್ಯೆಯಲ್ಲಿದ್ದ ಅಮಿತಾಭ್​ ಬಚ್ಚನ್​  ಪುನಃ ಎರಡನೆಯ ಬಾರಿ ಭೇಟಿ ಕೊಟ್ಟಿದ್ದು ವಿಶೇಷ ಪೂಜೆ ಸಲ್ಲಿಸಿದ್ದರು. ಇದರ ವಿಡಿಯೋಗಳು ವೈರಲ್​ ಆಗಿವೆ. ಇದೇ ವೇಳೆ ನಟ ರಾಮ ಮಂದಿರಕ್ಕೆ ವಿಶೇಷ ಆಭರಣಗಳನ್ನು ನೀಡಿರುವ ಫೋಟೋಗಳು ಸೋಷಿಯಲ್​ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ. 

ಇವರು, ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೂ ಮುನ್ನ ಅಯೋಧ್ಯೆಯಲ್ಲಿ ನಿವೇಶನ ಖರೀದಿಸಿದ್ದಾರೆ. 7-ಸ್ಟಾರ್ ಮಿಶ್ರ-ಬಳಕೆಯ ಎನ್‌ಕ್ಲೇವ್ ದಿ ಸರಯುನಲ್ಲಿ  ಮುಂಬೈ ಮೂಲದ ಡೆವಲಪರ್ ದಿ ಹೌಸ್ ಆಫ್ ಅಭಿನಂದನ್ ಲೋಧಾ (HoABL) ಅವರಿಂದ ಖರೀದಿಸಿರುವ ಈ ನಿವೇಶನದ ಮೌಲ್ಯ 14.5 ಕೋಟಿ ರೂಪಾಯಿಗಳು. 'ನನ್ನ ಹೃದಯದಲ್ಲಿ ವಿಶೇಷ ಸ್ಥಾನವನ್ನು ಹೊಂದಿರುವ ಅಯೋಧ್ಯೆಯಲ್ಲಿ ಈ ಪ್ರಯಾಣವನ್ನು ಪ್ರಾರಂಭಿಸಲು ನಾನು ಎದುರು ನೋಡುತ್ತಿದ್ದೇನೆ. ಅಯೋಧ್ಯೆಯ ಕಾಲಾತೀತ ಆಧ್ಯಾತ್ಮಿಕತೆ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಯು ಭೌಗೋಳಿಕ ಗಡಿಗಳನ್ನು ಮೀರಿದ ಭಾವನಾತ್ಮಕ ಸಂಬಂಧವನ್ನು ಬೆಸೆದಿದೆ. ಇದು ಅಯೋಧ್ಯೆಯ ಆತ್ಮಕ್ಕೆ ಹೃತ್ಪೂರ್ವಕ ಪ್ರಯಾಣದ ಪ್ರಾರಂಭವಾಗಿದೆ. ಅಲ್ಲಿ ಸಂಪ್ರದಾಯ ಮತ್ತು ಆಧುನಿಕತೆ ಎರಡೂ ಅಸ್ತಿತ್ವದಲ್ಲಿದೆ. ಜಾಗತಿಕ ಆಧ್ಯಾತ್ಮಿಕ ರಾಜಧಾನಿಯಲ್ಲಿ ನನ್ನ ಮನೆಯನ್ನು ನಿರ್ಮಿಸಲು ನಾನು ಎದುರು ನೋಡುತ್ತಿದ್ದೇನೆ' ಎಂದು ಈ ಸಂದರ್ಭದಲ್ಲಿ ಹೇಳಿದ್ದರು.

ಕುಟುಂಬಕ್ಕಾಗಿ ಸಿನಿಮಾ ತೊರೆಯುವ ನಿರ್ಧರಿಸಿದ್ದ ಆಮೀರ್ ಖಾನ್​ ಇಬ್ಬರೂ ಪತ್ನಿಯರಿಂದ ದೂರವಾಗಿದ್ದೇಕೆ?

Latest Videos
Follow Us:
Download App:
  • android
  • ios