ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಅವರಿಗೆ ಎರಡನೇ ಬಾರಿ ಕೊರೊನಾ ಪಾಸಿಟಿವ್ ಆಗಿದೆ. ಈ ಬಗ್ಗೆ ಸ್ವತಃ ಅಮಿತಾಭ್ ಬಚ್ಚನ್ ಅವರೇ ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗ ಪಡಿಸಿದ್ದಾರೆ. 

ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಅವರಿಗೆ ಎರಡನೇ ಬಾರಿ ಕೊರೊನಾ ಪಾಸಿಟಿವ್ ಆಗಿದೆ. ಈ ಬಗ್ಗೆ ಸ್ವತಃ ಅಮಿತಾಭ್ ಬಚ್ಚನ್ ಅವರೇ ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗ ಪಡಿಸಿದ್ದಾರೆ. ಕೊರೊನಾ ಸೋಂಕು ತಗುಲಿರುವ ಬಗ್ಗೆ ಮಾಹಿತಿ ನೀಡಿರುವ ಜೊತೆಗೆ ತನ್ನನ್ನು ಸಂಪರ್ಕ ಮಾಡಿರುವ ಎಲ್ಲರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ. ಅಮಿತಾಭ್ ಬಚ್ಚನ್ ಅವರಿಗೆ ಕೊರೊನಾ ಎಂದು ಗೊತ್ತಾಗುತ್ತಿದ್ದಂತೆ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿದೆ. ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಅಂದಹಾಗೆ ಅಮಿತಾಭ್ ಬಚ್ಚನ್ ಅವರಿಗೆ ಕೊರೊನಾ ಸೋಂಕು ತಗುಲುತ್ತಿರುವುದು ಇದೇ ಮೊದಲಲ್ಲ. 2020ರಲ್ಲಿ ಕೊರೊನಾ ಪಾಸಿಟಿವ್ ಆಗಿತ್ತು. ಆಗ ಅಮಿತಾಭ್ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲವು ದಿನಗಳ ಚಿಕಿತ್ಸೆ ಬಳಿಕ ಅಮಿತಾಭ್ ಗುಣಮುಖರಾಗಿ ಆಸ್ಪತ್ರೆಯಿಂದ ಡಿಶ್ಚಾರ್ಚ್ ಆಗಿದ್ದರು. ಅಮಿತಾಭ್ ಜೊತೆಗೆ ಪುತ್ರ ಅಭಿಷೇಕ್ ಬಚ್ಚನ್, ಸೊಸೆ ಐಶ್ವರ್ಯಾ ರೈ, ಮೊಮ್ಮಗಳು ಆರಾಧ್ಯ ಅವರಿಗೂ ಕೊರೊನಾ ಪಾಸಿಟಿವ್ ಆಗಿ ಆಸ್ಪತ್ರೆಗೆ ದಾಕಲಾಗಿದ್ದರು. ಬಳಿಕ ಎಲ್ಲರೂ ಗುಣಮುಖರಾಗಿ ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಿದ್ದರು. ಇದೀಗ ಮತ್ತೆ 79 ವರ್ಷದ ನಟ ಅಮಿತಾಭ್‌ಗೆ ಕೊರೊನಾ ಸೋಂಕು ತಗುಲಿರುವುದು ಅಭಿಮಾನಿಗಳಲ್ಲಿ ಆತಂಕ ಶುರುವಾಗಿದೆ. 

ಅಮಿತಾಭ್ ಬಚ್ಚನ್ ಅವರು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಪಟ್ಟೆ ಆಕ್ಟೀವ್ ಆಗಿದ್ದಾರೆ. ಸದಾ ಪೋಸ್ಟ್‌ಗಳನ್ನು ಶೇರ್ ಮಾಡುತ್ತಿರುತ್ತಾರೆ. ಇದೀಗ ತನಗೇ ಕೊರೊನಾ ಪಾಸಿಟಿವ್ ಬಂದಿರುವ ವಿಚಾರ ಶೇರ್ ಮಾಡಿದ್ದಾರೆ. 'ನನಗೆ ಕೊವಿಡ್​ ಪಾಸಿಟಿವ್​ ಆಗಿದೆ. ನನ್ನ ಸುತ್ತಮುತ್ತ ಇದ್ದವರು ಎಲ್ಲಾ ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಿ' ಎಂದು ಅಮಿತಾಭ್ ಬಚ್ಚನ್​ ಟ್ವೀಟ್​ ಮಾಡಿದ್ದಾರೆ.

Scroll to load tweet…

ಬಾಲಿವುಡ್‌ನ ಅತಿ ಹೆಚ್ಚು ಶ್ರೀಮಂತ ಪಟ್ಟಿಯಲ್ಲಿ ಆಮೀರ್ ಖಾನ್‌ಗೆ ಐದನೇ ಸ್ಥಾನ

ಅಮಿತಾಭ್ ಬಚ್ಚನ್ ಸಿನಿಮಾಗಳಲ್ಲಿಯೂ ಸಖತ್ ಆಕ್ಟೀವ್ ಆಕ್ಟೀವ್ ಆಗಿದ್ದಾರೆ. ಈ ವಯಸ್ಸಿನಲ್ಲೂ ಅಮಿತಾಭ್ ಅನೇಕ ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ, ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಸದ್ಯ ಅಮಿತಾಭ್ ಬ್ರಹ್ಮಾಸ್ತ್ರ ರಿಲೀಸ್‌ಗೆ ಕಾಯುತ್ತಿದ್ದಾರೆ. ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಸದ್ಯ ಸಿನಿಮಾತಂಡ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದೆ. ಆಯಾನ್ ಮುಖರ್ಜಿ ಆಕ್ಷನ್ ಕಟ್ ಹೇಳಿದ್ದಾರೆ. 

ಕೌನ್ ಬನೇಗ ಕರೋಡ್‌ಪತಿ; ಸೀಸನ್ 1 ರಿಂದ 13ರ ವರೆಗೂ ಅಮಿತಾಭ್ ಪಡೆದ ಸಂಭಾವನೆಯ ಸಂಪೂರ್ಣ ಮಾಹಿತಿ ಬಹಿರಂಗ

ಇನ್ನು ಬಿಗ್ ಬಿ ಗುಡ್​ ಬೈ, ಉಂಚಾಯಿ ಹಾಗೂ ದಕ್ಷಿಣ ಭಾರತದ ಸ್ಟಾರ್ ಪ್ರಭಾಸ್ ಸಿನಿಮಾ ಸೇರಿದಂತೆ ಇನ್ನು ಮುಂತಾದ ಸಿನಿಮಾಗಳ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಸಿನಿಮಾ ಜೊತೆಗೆ ಬಿಗ್ ಬಿ ಕಿರುತೆರೆಯ ‘ಕೌನ್​ ಬನೇಗಾ ಕರೋಡ್​ಪತಿ’ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದ್ದಾರೆ. ಶೀಘ್ರದಲ್ಲಿ ಕೌನ್​ ಬನೇಗಾ ಕರೋಡ್​ಪತಿ ಕಾರ್ಯಕ್ರಮ ಪ್ರಾರಂಭವಾಲಿದೆ. ಇನ್ನು ದೀಪಿಕಾ ಪಡುಕೋಣೆ ಜೊತೆ ದಿ ಇಂಟರ್ನ್​ ಸಿನಿಮಾದಲ್ಲಿ ಅವರು ನಟಿಸಲಿದ್ದಾರೆ. ಇದೀಗ ಕೊರೊನಾ ಪಾಸಿಟಿವ್ ಆಗಿರುವುದು ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿ ಬೇಗ ಗುಣಮುಖರಾಗಿ ಸಿನಿಮಾ ಕೆಲಸಗಳಲ್ಲಿ ಮತ್ತೆ ತೊಡಗಿಕೊಳ್ಳಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.