ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜರಾಗಿದ್ದು ಅನಾರೋಗ್ಯದ ನಿಮಿತ್ತ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗುತ್ತಿಲ್ಲ.  

ಈ ಬಗ್ಗೆ ಬೇಸರ ವ್ಯಕ್ತಪಡಿಸುತ್ತಾ, ' ಜ್ವರದಿಂದ ಬಳಲುತ್ತಿದ್ದೇನೆ.  ಪ್ರಯಾಣ ಮಾಡಲು ಸಾಧ್ಯವಾಗುತ್ತಿಲ್ಲ. ದೆಹಲಿಯಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ವಿಷಾದಿಸುತ್ತೇನೆ' ಎಂಡು ಟ್ವೀಟ್ ಮಾಡಿದ್ದಾರೆ. 

 

ದೆಹಲಿಯ ವಿಜ್ಞಾನ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಉಪಸ್ಥಿತರಿದ್ದಾರೆ. 

ಸಿಹಿ-ಕಹಿ ಚಂದ್ರು ಕಿರಿಯ ಪುತ್ರಿ 'ಖುಷಿ' ಹೀಗಿದ್ದಾರೆ ನೋಡಿ!

ಹಿಂದಿ ಚಲನಚಿತ್ರ ರಂಗಕ್ಕೆ ಅಮಿತಾಬ್ ಅಪಾರ ಕೊಡುಗೆಯನ್ನು ಪರಿಗಣಿಸಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಹಿಂದೆ ಅಗ್ನಿಪಥ್, ಬ್ಲಾಕ್, ಪಾ ಹಾಗೂ ಪೀಕೂ ಸಿನಿಮಾಗಳಿಗೆ ನ್ಯಾಷನಲ್ ಫಿಲ್ಮ್ ಅವಾರ್ಡನ್ನು ಪಡೆದುಕೊಂಡಿದ್ದಾರೆ. 1984 ರಲ್ಲಿ ಪದ್ಮಶ್ರೀ ಪ್ರಶಸ್ತಿ, 2001 ರಲ್ಲಿ ಪದ್ಮಭೂಷಣ ಹಾಗೂ 2015 ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ಪಡೆದುಕೊಂಡಿದ್ದರು. 

ವಯಸ್ಸು ಫಾರ್ಟಿ ಪ್ಲಸ್; ಈ ನಟಿಯ ಬೋಲ್ಡ್ ಲುಕ್‌ಗೆ ಫ್ಯಾನ್ಸ್ ಫಿದಾ!

ಸದ್ಯ ಆಯುಷ್ಮಾನ್ ಖುರಾನಾ ಜೊತೆ 'ಗುಲಾಬೋ ಸಿತಾವೋ' ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. 

ಡಿಸೆಂಬರ್ 23ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ