ಅನುಷ್ಕಾ ಮತ್ತು ವಿರಾಟ್​ ಕೊಹ್ಲಿ ಅಭಿಮಾನಿಗಳಿಗೆ ಗುಡ್​ನ್ಯೂಸ್​ ಕೊಟ್ಟಿದ್ದಾರೆ. ತಮ್ಮ 2ನೇ ಮಗುವಿನ ಬಗ್ಗೆ ಕೊನೆಗೂ ಮೌನ ಮುರಿದಿದ್ದಾರೆ.  

ಸೆಲೆಬ್ರಿಟಿಗಳ ಮೇಲೆ ಸದಾ ಪಾಪರಾಜಿಗಳ ಕಣ್ಣು ನೆಟ್ಟಿರುತ್ತದೆ. ಅದರಲ್ಲಿಯೂ ಮದುವೆ, ಮಕ್ಕಳ ವಿಷಯದಲ್ಲಂತೂ ಇನ್ನಿಲ್ಲದ ಇಂಟರೆಸ್ಟ್​. ಅದೇ ರೀತಿ ಇತ್ತೀಚೆಗೆ ಬಹಳ ಚರ್ಚೆಯಲ್ಲಿರುವ ವಿಷಯ ಏನೆಂದರೆ, ನಟಿ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟರ್​ ವಿರಾಟ್​ ಕೊಹ್ಲಿ (Virat Kohli) ಅವರು ಎರಡನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇದ್ದಾರೆ ಎಂಬುದು. ಕೆಲವು ದಿನಗಳಿಂದ ಸುದ್ದಿ ಕೇಳಿಬರುತ್ತಲೇ ಇದೆ. ಆದರೆ ಈ ವಿಚಾರವನ್ನು ಇದುವರೆಗೆ ದಂಪತಿ ಬಿಟ್ಟುಕೊಟ್ಟಿರಲಿಲ್ಲ. 

ಕೆಲ ದಿನಗಳ ಹಿಂದೆ ಕ್ರಿಕೆಟ್​ ಮ್ಯಾಚ್​ ನಡೆಯುತ್ತಿದ್ದ ಸಂದರ್ಭದಲ್ಲಿ ಪತಿಯನ್ನು ಸಪೋರ್ಟ್​ ಮಾಡಲು ಅನುಷ್ಕಾ (Anushka Sharma) ಅಹಮದಾಬಾದ್​ಗೆ ಹೋಗಿದ್ದರು. ಅಹಮದಾಬಾದ್ ವಿಮಾನ ನಿಲ್ದಾಣದಿಂದ ಅನುಷ್ಕಾ ಶರ್ಮಾ ಹೊರಬರುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಡಿಯೋದಲ್ಲಿ, ಅನುಷ್ಕಾ ಶರ್ಮಾ ಸಂಪೂರ್ಣ ಭದ್ರತೆಯ ನಡುವೆ ಕಪ್ಪು ಉಡುಪಿನಲ್ಲಿ ವಿಮಾನ ನಿಲ್ದಾಣದಿಂದ ಹೊರ ಬರುತ್ತಿರುವುದನ್ನು ಕಾಣುತ್ತಿದ್ದರು. ಹೊಟ್ಟೆಯನ್ನು ಅವರು ಮುಚ್ಚಿಕೊಂಡಿದ್ದರು. ಆಗ ಇವರು ಗರ್ಭಿಣಿ ಎಂದು ಅಭಿಮಾನಿಗಳು ಹೇಳಿದ್ದರು.

ಡ್ರಾಮಾ ಕ್ವೀನ್​ನನ್ನೇ ಮೀರಿಸಿದ ಪೂನಂ ಪಾಂಡೆ: ನಿನಗಾಗಿ ತ್ಯಾಗ ಮಾಡಿದೆ ಎನ್ನುತ್ತಲೇ ರಾಖಿ ಹೀಗೆ ಆಕ್ರೋಶ!

ಕೊನೆಗೂ ದಂಪತಿ ಅಭಿಮಾನಿಗಳ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ಎರಡನೆಯ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಹೇಳಿಕೊಂಡಿದ್ದಾರೆ. ಇದನ್ನು ಕೇಳಿ ಅಭಿಮಾನಿಗಳು ಫುಲ್​ ಖುಷ್​ ಆಗಿದ್ದಾರೆ. ‘ಜೀರೋ’ ಸಿನಿಮಾ ತೆರೆಕಂಡ ಬಳಿಕ ಅವರು ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಈಗಾಗಲೇ ಒಪ್ಪಿಕೊಂಡ ‘ಚಕ್ದಾ ಎಕ್ಸ್​ಪ್ರೆಸ್​’ ಸಿನಿಮಾದ ಬಿಡುಗಡೆ ತಡವಾಗುತ್ತಿದೆ. ಎರಡನೇ ಮಗು ಪಡೆಯುವ ಉದ್ದೇಶದಿಂದಲೇ ಅವರು ನಟನೆಯಿಂದ ದೂರ ಉಳಿದುಕೊಂಡಿದ್ದಾರೆ ಎಂಬುದು ಹಲವರ ಊಹೆ ಇದೀಗ ನಿಜವಾಗಿದೆ. ಅದಾದ ಬಳಿಕ ಸ್ಟೇಡಿಯಂಗೆ ಬಿಳಿಯ ಮಿನಿ ಡ್ರೆಸ್​ನಲ್ಲಿ ನಟಿ ಕಾಣಿಸಿಕೊಂಡಿದ್ದು, ಅವರ ಬೇಬಿ ಬಂಪ್​ ಕಾಣಿಸುವಂತಿತ್ತು. ಆದರೂ ದಂಪತಿ ಗುಟ್ಟು ರಿವೀಲ್​ ಮಾಡಿರಲಿಲ್ಲ. 

ಇದಾದ ಬಳಿಕ ಅನುಷ್ಕಾ ಹೊರಗಡೆ ಅಷ್ಟಾಗಿ ಎಲ್ಲಿಯೂ ಕಾಣಿಸಿಕೊಳ್ಳದ ಕಾರಣ, ಈಕೆ ಎರಡನೆಯ ಮಗುವಿನ ನಿರೀಕ್ಷೆಯಲ್ಲಿ ಇರುವುದು ನಿಜ ಎಂದೇ ಹೇಳಲಾಗಿತ್ತು. ಆದರೆ ಇದೀಗ ಈ ಜೋಡಿಯ ಫೋಟೋ ಒಂದು ವೈರಲ್​ ಆಗಿದ್ದು, ಇದು ಅನುಷ್ಕಾ ಗರ್ಭಿಣಿ ಹೌದೋ, ಅಲ್ಲವೋ ಎಂಬ ಬಗೆಗಿನ ಊಹಾಪೋಹಗಳಿಗೆ ತೆರೆ ಎಳೆದಿದೆ. ಇದರಲ್ಲಿ ಇಬ್ಬರೂ ಖುಷಿ ಖುಷಿಯಾಗಿ ಪೋಸ್​ ನೀಡಿದ್ದಾರೆ. ಇದರಲ್ಲಿಯೂ ಅನುಷ್ಕಾ ಶರ್ಮಾ ಬೇಬಿ ಬಂಪ್​ ನೋಡಬಹುದು. ಆಕೆ ಹೊಟ್ಟೆಯ ಮೇಲೆ ಕೈಯಿಟ್ಟಿದ್ದಾರೆ. ಇಷ್ಟು ನೋಡುತ್ತಿದ್ದಂತೆಯೇ ನಟಿ ಗರ್ಭಿಣಿ ಸುದ್ದಿ ನಿಜ ಎಂದು ಹೇಳಲಾಗಿತ್ತು. ಇದೀಗ ಅದು ನಿಜವಾಗಿದೆ. ದಂಪತಿ ಖುದ್ದು ಇದನ್ನು ರಿವೀಲ್​ ಮಾಡಿದ್ದಾರೆ. 

ನಾನು ಸತ್ತಿಲ್ಲ, ಹ್ಯಾಂಗ್​ ಓವರ್​ ಕುರಿತು ಅರಿವು ಮೂಡಿಸ್ತಿದ್ದೇನೆ.. ಪೂನಂಗೆ ತಿರುಗೇಟು ಕೊಟ್ಟ ಉರ್ಫಿ ಹೇಳಿದ್ದೇನು?