'ಅವನೇ ಶ್ರೀಮನ್ನಾರಾಯಣ' ನಿರ್ದೇಶಕರ ಜೊತೆ ಶಿವಣ್ಣ ಸಿನಿಮಾ; ಸೂಪರ್ ಹೀರೋ ಆಗ್ತಿದ್ದಾರೆ ಸೆಂಚುರಿ ಸ್ಟಾರ್
ಅವನೇ ಶ್ರೀಮನ್ನಾರಾಯಣ(Avane Srimannarayana) ಸಿನಿಮಾ ನಿರ್ದೇಶಕ ಸಚಿನ್ ರವಿ ಮುಂದಿನ ಸಿನಿಮಾ ಹೇಗಿರಲಿದೆ? ಯಾವ ಸ್ಟಾರ್‌ಗೆ ಆಕ್ಷನ್ ಕಟ್ ಹೇಳ್ತಾರೆ? ಅನ್ನೋ ಪ್ರಶ್ನೆ ಚಿತ್ರರಸಿಕರ ಮನದಲ್ಲಿತ್ತು. ಇದೀಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಸಚಿನ್ ಮುಂದಿನ ಸಿನಿಮಾವನ್ನು ಶಿವಣ್ಣನಿಗೆ ನಿರ್ದೇಶನ ಮಾಡಲಿದ್ದಾರೆ ಎನ್ನುವ ವಿಚಾರ ಬಹಿರಂಗವಾಗಿದೆ.
ರಕ್ಷಿತ್ ಶೆಟ್ಟಿ ನಟನೆಯ ಅವನೇ ಶ್ರೀಮನ್ನಾರಾಯಣ(Avane Srimannarayana) ಸಿನಿಮಾ ನಿರ್ದೇಶಕ ಸಚಿನ್ ರವಿ ಮುಂದಿನ ಸಿನಿಮಾ ಹೇಗಿರಲಿದೆ? ಯಾವ ಸ್ಟಾರ್‌ಗೆ ಆಕ್ಷನ್ ಕಟ್ ಹೇಳ್ತಾರೆ? ಯಾವ ರೀತಿಯ ಸಿನಿಮಾ ಮಾಡಲಿದ್ದಾರೆ? ಅನ್ನೋ ಪ್ರಶ್ನೆ ಚಿತ್ರರಸಿಕರ ಮನದಲ್ಲಿತ್ತು. ಇದೀಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಸಚಿನ್ ಮುಂದಿನ ಸಿನಿಮಾವನ್ನು ಶಿವಣ್ಣನಿಗೆ ನಿರ್ದೇಶನ ಮಾಡಲಿದ್ದಾರೆ ಎನ್ನುವ ವಿಚಾರ ಬಹಿರಂಗವಾಗಿದೆ. ಅವರನೇ ಶ್ರೀಮನ್ನಾರಾಯಣ ಸಿನಿಮಾ ಬಿಡುಗಡೆಯಾಗಿ ಎರಡು ವರ್ಷಗಳ ಮೇಲಾಗಿದೆ. ಆದರೂ ನಿರ್ದೇಶಕ ಸಚಿನ್ ಯಾವುದೇ ಸಿನಿಮಾಗೂ ಆಕ್ಷನ್ ಕಟ್ ಹೇಳಿರಲಿಲ್ಲ. ಇದೀಗ ಶಿವಣ್ಣ ಜೊತೆ ಸಿನಿಮಾ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಅಶ್ವತ್ಥಾಮನಾಗಲಿದ್ದಾರೆ ಶಿವಣ್ಣ
ಸಚಿನ್ ರವಿ ನಿರ್ದೇಶನ ಮಾಡಲಿರುವ ಮುಂದಿನ ಸಿನಿಮಾದಲ್ಲಿ ಶಿವರಾಜ್ ಕುಮಾರ್(Shivarajkumar) ಮಹಾಭಾರತದ ಅಶ್ವತ್ಥಾಮನಾಗಿ ಬಣ್ಣ ಹಚ್ಚಲಿದ್ದಾರೆೆ ಎನ್ನಲಾಗಿದೆ. ಇದೊಂದು ಪಕ್ಕಾ ಆಕ್ಷನ್ ಪ್ಯಾಕ್ಡ್ ಸ್ಪೈ ಥ್ರಿಲ್ಲರ್ ಕಥಾಹಂದರವನ್ನು ಒಳಗೊಂಡಿದೆ. ಅಮರತ್ವ ಪಡೆದಿರುವ ಅಶ್ವತ್ಥಾಮನ ಸುತ್ತಾ ಸಾಗುವ ಇಡೀ ಕಥೆಯಲ್ಲಿ ಶಿವಣ್ಣ ಸೂಪರ್ ಹೀರೋ ಆಗಿ ಕಾಣಿಸಿಕೊಳ್ಳಲಿದ್ದಾರೆ. ಶಿವಣ್ಣ ಈಗಾಗಲೇ ಅನೇಕ ಪಾತ್ರಗಳಲ್ಲಿ ಮಿಂಚಿದ್ದಾರೆ. ತರಹೇವಾರಿ ಪಾತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಇದೀಗ ಮತ್ತೊಂದು ವಿಭಿನ್ನ ಪಾತ್ರದ ಮೂಲಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ.
ನಿರ್ದೇಶನದ ಜೊತೆಗೆ ನಿರ್ಮಾಣಕ್ಕಿಳಿದ ಸಚಿನ್
ಸಚಿನ್ ಈ ಸಿನಿಮಾಗೆ ನಿರ್ದೇಶನದ ಜೊತೆಗೆ ನಿರ್ಮಾಣ ಜವಾಬ್ದಾರಿ ಕೂಡ ಹೊತ್ತಿದ್ದು, ತಮ್ಮದೇ ಹೋಮ್ ಬ್ಯಾನರ್ ಜೊತೆಗೆ ಕಾರ್ಪೊರೇಟ್ ಕಂಪನಿಯೊಂದರ ಜೊತೆಗೂಡಿ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಸದ್ಯದಲ್ಲಿಯೇ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಿನಿಮಾ ತಂಡ ನೀಡಲಿದೆ.
ಪೊಲೀಸರಿಗಾಗಿ ಹಾಡಿ ಕುಣಿದ ಶಿವರಾಜ್ ಕುಮಾರ್: ಟಗರು 2 ಸಿನಿಮಾಗೆ ಶಿವಣ್ಣನ ಸಿದ್ದತೆ
ಕನ್ನಡದ ಮಟ್ಟಿಗೆ ಸೂಪರ್ ಹೀರೋ ಕನ್ಸೆಪ್ಟ್ ನ ಮೊದಲ ಸಿನಿಮಾ ಇದಾಗಿದ್ದು, ಈ ಚಿತ್ರದಲ್ಲಿ ಶಿವಣ್ಣ ಹಿಂದೆಂದೂ ಕಾಣದ ರೀತಿಯಲ್ಲಿ ಕಂಗೊಳಿಸಲಿದ್ದಾರೆ. ಜೊತೆಗೆ ವಿಎಫ್‌ಎಕ್ಸ್‌ಗೂ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಸದ್ಯ ಸಿನಿಮಾ ಬಗ್ಗೆ ಇಷ್ಟು ಗುಟ್ಟುಬಿಟ್ಟು ಕೊಟ್ಟಿರುವ ಸಚಿನ್, ಮುಂದಿನ ದಿನಗಳಲ್ಲಿ ಉಳಿದ ಕಲಾವಿದರು ಹಾಗೂ ತಂತ್ರಜ್ಞಾನ ತಂಡವನ್ನು ಪರಿಚಯಿಸಲಿದ್ದು, ಬರುವ ಸೆಪ್ಟಂಬರ್ ನಿಂದ ಶೂಟಿಂಗ್ ಶುರುವಾಗುವ ಬಗ್ಗೆ ಮಾಹಿತಿ ನೀಡಿದ್ದಾರೆ.
ವೆಬ್ ಸೀರಿಸ್ ಲೋಕಕ್ಕೆ ಎಂಟ್ರಿ ಕೊಟ್ಟ ಶಿವಣ್ಣನಿಗೆ ಮಗಳು ನಿವೇದಿತಾ ಸಾಥ್
ಅಂದಹಾಗೆ ಶಿವಣ್ಣ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬೈರಾಗಿ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ನೀ ಸುಗೋವರೆಗೂ, ವೇದಾ ಸಿನಿಮಾ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇದೀಗ ಅವನೇ ಶ್ರೀಮನ್ನಾರಾಯಣ ನಿರ್ದೇಶಕರ ಜೊತೆಯೂ ಸಿನಿಮಾ ಮಾಡುವ ಮೂಲಕ ಸಾಲು ಸಾಲು ಸಿನಿಮಾಗಳ ಲಿಸ್ಟ್ ಗೆ ಈ ಹೊಸ ಸಿನಿಮಾ ಸೇರ್ಪಡೆಯಾಗಿದೆ.