ದಿ ಕಶ್ಮೀರ್ ಫೈಲ್ಸ್ ಸಿನಿಮಾವನ್ನು ಹೊಗಳಿದ್ದ ನಟ ಆಮೀರ್ ಖನ್ ಟ್ರೋಲಿಗೆ ಗುರಿಯಾಗಿದ್ದಾರೆ. ತನ್ನ ಲಾಲ್ ಸಿಂಗ್ ಚಡ್ಡಾ ಸಿನಿಮಾವನ್ನು ಉಳಿಸಿಕೊಳ್ಳಲು ಆಮೀರ್ ಕಾಶ್ಮೀರ್ ಫೈಲ್ಸ್ ಹೊಗಳಿದ್ದಾರೆ ಎಂದು ನೆಟ್ಟಿಗರು ಕಾಲೆಳೆಯುತ್ತಿದ್ದಾರೆ.

ದಿ ಕಾಶ್ಮೀರ್ ಫೈಲ್ಸ್(The Kashmir Files) ಸಿನಿಮಾಗೆ ಭಾರತದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿತ್ರದ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ. ಈ ನಡುವೆಯೂ ಪ್ರೇಕ್ಷಕರು ಸಿನಿಮಾ ಮೆಚ್ಚಿಕೊಂಡಿದ್ದಾರೆ. ಇನ್ನು ಕೆಲವರು ಅಸಮಾಧಾನ ಹೊರಹಾಕುತ್ತಿದ್ದಾರೆ. ಜೊತೆಗೆ ಒಂದಿಷ್ಟು ವಿವಾದ ಕೂಡ ಹುಟ್ಟಿಕೊಂಡಿದೆ. ಈಗಾಗಲೇ 200 ಕೋಟಿ ಕ್ಲಬ್ ನತ್ತಾ ಮುನ್ನುಗ್ಗುತ್ತಿರುವ ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಪ್ರೇಕ್ಷಕರು ಮುಗಿಬಿದ್ದು ವೀಕ್ಷಿಸುತ್ತಿದ್ದಾರೆ.

ನಿರ್ದೇಶಕ ವಿವೇಕ್ ಅಗ್ನಿಹೋತ್ರಿ((Vivek Agnihotri) ಸಾರಥ್ಯದಲ್ಲಿ ಬಂದ ಈ ಚಿತ್ರಕ್ಕೆ ಸಿನಿ ಗಣ್ಯರು ಮಾತ್ರವಲ್ಲದೆ ಅನೇಕ ರಾಜಕೀಯ ಗಣ್ಯರು ಸಹ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಆಮೀರ್ ಖಾನ್ ಹೇಳಿಕೆ

ಕಾಶ್ಮೀರ್ ಫೈಲ್ಸ್ ಸಿನಿಮಾದ ಬಗ್ಗೆ ಬಾಲಿವುಡ್ ಸ್ಟಾರ್ ನಟ ಆಮೀರ್ ಖಾನ್(Aamir Khan) ಸಹ ಪ್ರತಿಕ್ರಿಯೆ ನೀಡಿ ಚಿತ್ರವನ್ನು ಹಾಡಿ ಹೊಗಳಿದ್ದರು. ಖಂಡಿತವಾಗಿಯೂ ಈ ಸಿನಿಮಾ ನೋಡುತ್ತೇನೆ ಎಂದು ಆಮೀರ್ ಖಾನ್ ಹೇಳಿದ್ದರು. 'ನಾನು ಈ ಸಿನಿಮಾವನ್ನು ಖಂಡಿತವಾಗಿಯೂ ನೋಡುತ್ತೇನೆ. ಈ ಕತೆ ನಮ್ಮ ಇತಿಹಾಸದ ಒಂದು ಭಾಗವಾಗಿದೆ. ಕಾಶ್ಮೀರಿ ಪಂಡಿತರಿಗೆ ಏನಾಯಿತು ಎನ್ನುವುದು ನಿಜಕ್ಕೂ ದುಃಖಕರವಾಗಿದೆ. ಅಂತಹ ವಿಷಯದ ಮೇಲೆ ಯಾವುದೇ ಸಿನಿಮಾ ಬಂದರೂ ಭಾರತೀಯರು ನೋಡಬೇಕು' ಎಂದಿದ್ದರು.

ಮಾತು ಮುಂದುವರೆಸಿದ ಆಮೀರ್ ಖಾನ್, 'ಈ ಚಿತ್ರ ಮಾನವೀತೆಯ ಇರುವ ಎಲ್ಲಾ ಜನರ ಭಾವನೆಗಳನ್ನು ಮುಟ್ಟಿದೆ. ನಾನು ಖಂಡಿತವಾಗಿ ಸಿನಿಮಾ ವೀಕ್ಷಿಸುತ್ತೇನೆ. ಈ ಸಿನಿಮಾ ಯಶಸ್ವಿಯಾಗಿರುವುದು ನೋಡಿ ನನಗೆ ತುಂಬಾ ಸಂತೋಷವಾಗಿದೆ' ಎಂದು ಹೇಳಿದರು.

The Kashmir Files ಪ್ರತಿಯೊಬ್ಬ ಭಾರತೀಯನು ನೋಡಬೇಕಾದ ಸಿನಿಮಾ; ಆಮೀರ್ ಖಾನ್

ಟ್ರೋಲಿಗೆ ಗುರಿಯಾದ ಆಮೀರ್ ಹೇಳಿಕೆ

ಆರ್ ಆರ್ ಆರ್ ಸಿನಿಮಾದ ಪ್ರಮೋಷನ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಂದಿದ್ದ ಆಮೀರ್ ಈ ಹೇಳಿಕೆ ನೀಡಿದ್ದರು. ಆದರೆ ಆಮೀರ್ ಖಾನ್ ಪ್ರತಿಕ್ರಿಯೆ ನೆಟ್ಟಿಗರನ್ನು ಕೆರಳಿಸಿದೆ. ಆಮೀರ್ ಖಾನ್ ಅವರನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡುತ್ತಿದ್ದಾರೆ. ಆಮೀರ್ ಮಾತಿಗೆ ಪ್ರತಿಕ್ರಿಯೆ ನೀಡಿರುವ ನೆಟ್ಟಿಗರು, ತನ್ನ ಸಿನಿಮಾ ಲಾಲ್ ಸಿಂಗ್ ಚಡ್ಡಾ ಅವರನ್ನು ಉಳಿಸಿಕೊಳ್ಳಲು ಆಮೀರ್ಇಂತ ಹೇಳಿಕೆ ನೀಡಿದ್ದಾರೆ ಎನ್ನುತ್ತಿದ್ದಾರೆ.

ಫ್ಲಾಪ್ ಚಿತ್ರವನ್ನು ಉಳಿಸಿಕೊಳ್ಳಲು ಆಮೀರ್ ಈ ರೀತಿ ಹೇಳಿಕೆ ನೀಡಿದ್ದಾರೆ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಇನ್ನೂ ಕೆಲವರು ಆಮೀರ್ ಮತ್ತು ಪತ್ನಿ ಕಿರಣ್ ರಾವ್ ಇಬ್ಬರು ಅಸಹಿಷ್ಣತೆ ಹೇಳಿಕೆ ನೀಡಿದ್ದ ಹಳೆಯ ವಿಡಿಯೋ ಕ್ಲಿಪ್ ಅನ್ನು ಶೇರ್ ಮಾಡಿ ತರಾಟೆ ತೆಗೆದುಕೊಂಡಿದ್ದಾರೆ.

Aamir Khan; ಕುಡಿತದ ಚಟದಿಂದ ಹೊರಬಂದ ಬಗ್ಗೆ ಬಹಿರಂಗ ಪಡಿಸಿದ ಮಿಸ್ಟರ್ ಪರ್ಫೆಕ್ಷನಿಸ್ಟ್

ಆಮೀರ್ ಖಾನ್ ಸದ್ಯ ಲಾಲ್ ಸಿಂಗ್ ಚಡ್ಡಾ ಸಿನಿಮಾ ಬಿಡುಗಡೆಗೆ ಕಾಯುತ್ತಿದ್ದಾರೆ. ಈ ಸಿನಿಮಾದಲ್ಲಿ ನಾಯಕಿಯಾಗಿ ಕರೀನಾ ಕಪೂರ್ ಕಾಣಿಸಿಕೊಂಡಿದ್ದಾರೆ. ಅಂದಹಾಗೆ ಇದು ಹಾಲಿವುಡ್ ನ ಫಾರೆಸ್ಟ ಗಂಪ್ ಸಿನಿಮಾದ ರಿಮೇಕ್ ಆಗಿದ್ದು, ಆಗಸ್ಟ್ 11ಕ್ಕೆ ಸಿನಿಮಾ ಬಿಡುಗಡೆಯಾಗುತ್ತಿದೆ.

ಕಶ್ಮೀರ್ ಫೈಲ್ಸ್ ಸಿನಿಮಾ ಬಗ್ಗೆ

ದಿ ಕಾಶ್ಮೀರ್ ಫೈಲ್ಸ್ ಚಿತ್ರದಲ್ಲಿ 1990ರ ಸಮಯದಲ್ಲಿ ನಡೆದ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆಯ ಬಗ್ಗೆ ಕಟ್ಟಿಕೊಡಲಾಗಿದೆ. ಈ ಸಿನಿಮಾದಲ್ಲಿ ಬಾಲಿವುಡ್ ಖ್ಯಾತ ನಟ ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ದರ್ಶನ್ ಕುಮಾರ್, ಪಲ್ಲವಿ ಜೋಶಿ, ಪುನೀತ್ ಇಸ್ಸಾರ್, ಪ್ರಕಾಶ್ ಬೆಳವಾಡಿ ಸೇರಿದಂತೆ ಅನೇಕ ಕಲಾವಿದರು ಬಣ್ಣ ಹಚ್ಚಿದ್ದಾರೆ.

ಸಿನಿಮಾ ಬಿಡುಗಡೆ ಬಳಿಕ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ(Vivek Agnihotri) ಗೃಹ ಸಚಿವಾಲಯವು ವೈ ಕೆಟಗರಿ ಭದ್ರತೆ(Y security) ನೀಡಲಾಗಿದೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಿಡುಗಡೆಯಾಗಿ ವಾರದ ಬಳಿಕ ತಮ್ಮ ಕುಟುಂಬಕ್ಕೆ ಬೆದರಿಕೆ ಇದು ಎಂದು ನಿರ್ದೇಶಕ ಅಗ್ನಿಹೋತ್ರಿ ಹೇಳಿದ್ದರು. ಇನ್ನು ಸಿನಿಮಾ ಬಿಡುಗಡೆಗೂ ಮೊದಲು ನಿರ್ದೇಶಕ ಅಗ್ನಿಹೋತ್ರಿ ಅವರು ತಮ್ಮ ಟ್ವಿಟ್ಟರ್ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದರು, ಅಲ್ಲದೆ ಈ ಸಿನಿಮಾ ಬಿಡುಗಡೆ ಮಾಡದಂತೆ ಬೆದರಿಕೆ ಕರೆಗಳು ಬಂದಿತ್ತು ಮತ್ತು ಅಸಭ್ಯ ಕರೆಗಳು ಬರುತ್ತಿದ್ದವು ಎಂದು ಅಗ್ನಿಹೋತ್ರಿ ಹೇಳಿಕೊಂಡಿದ್ದರು.