ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ದಾಳಿ ನಡೆದಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈನ ಬಾಂದ್ರಾ ನಿವಾಸದಲ್ಲಿ ಈ ದಾಳಿ ನಡೆದಿದ್ದು, ಖಾನ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ (ollywood actor Saif Ali Khan) ಮೇಲೆ ಚಾಕುವಿನಿಂದ ದಾಳಿ ನಡೆಸಲಾಗಿದೆ. ಚಾಕುವಿನಿಂದ ಇರಿಯಲಾಗಿದ್ದು, ಸದ್ಯ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮುಂಬೈನ ಬಾಂದ್ರಾ ನಿವಾಸದಲ್ಲಿ ಈ ದಾಳಿ ನಡೆದಿದ್ದು, ಸೈಫ್ ಅಲಿ ಖಾನ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಬೆಳಗಿನ ಜಾವ ಮೂರು ಗಂಟೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಲೀಲಾವತಿ ಅಸ್ಪತ್ರೆಯ ನುರಿತ ವೈದ್ಯರ ತಂಡ ಶಸ್ತ್ರಚಿಕಿತ್ಸೆ ನಡೆಸುತ್ತಿದೆ. ಬೆಳಗ್ಗೆ 5.30ರಿಂದಲೇ ಶಸ್ತ್ರಚಿಕಿತ್ಸ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಮೂರು ಕಡೆ ಚಾಕುವಿನಿಂದ ಇರಿಯಲಾಗಿದ್ದು, ಒಟ್ಟು ಆರು ಭಾಗದಲ್ಲಿ ಗಾಯಗಳಾಗಿವೆ. ಕತ್ತು, ಬೆನ್ನು ಮತ್ತು ಹೊಟ್ಟೆಯ ಭಾಗಕ್ಕೆ ಇರಿಯಲಾಗಿದ್ದು, ಖಾನ್ ಕುಟುಂಬಸ್ಥರೆಲ್ಲರೂ ಆಸ್ಪತ್ರೆಯಲ್ಲಿದ್ದಾರೆ. ಆಸ್ಪತ್ರೆಗೆ ಪೊಲೀಸರು ಸಹ ಭೇಟಿ ನೀಡಿದ್ದು, ಕುಟುಂಬಸ್ಥರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಮನೆ ಕಳ್ಳತನಕ್ಕೆ ಬಂದಿದ್ದ ವ್ಯಕ್ತಿಯಿಂದ ಈ ದಾಳಿ ನಡೆದಿದೆ ಎನ್ನಲಾಗಿದೆ. ಪೊಲೀಸರು ಆರೋಪಿಯ ಬಂಧನಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಗುರುವಾರ ಬೆಳಗಿನ ಜಾವ ಬಾಂದ್ರಾದಲ್ಲಿರುವ ಸೈಫ್ ಅಲಿ ಖಾನ್ ನಿವಾಸಕ್ಕೆ ನುಗ್ಗಿದ ವ್ಯಕ್ತಿ, ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಸದ್ಯ ಸೈಫ್ ಅಲಿ ಖಾನ್ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Scroll to load tweet…
Scroll to load tweet…
Scroll to load tweet…