Asianet Suvarna News Asianet Suvarna News
breaking news image

ಪ್ರಜ್ವಲ್‌ ರೇವಣ್ಣ ಮುಸ್ಲಿಂ ಆಗಿದಿದ್ರೆ ಸುಮ್ನೆ ಬಿಡ್ತಿದ್ರಾ? ಕೇಸ್‌ಗೆ ಸ್ವರಾ ಭಾಸ್ಕರ್ ಧರ್ಮದ ಲೇಪ!

ಹಾಸನ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಪ್ರಜ್ವಲ್‌ ರೇವಣ್ಣ ಅವರದು ಎನ್ನಲಾದ ಸೆಕ್ಸ್ ವೀಡಿಯೋಗಳು ಹಾಸನದ ಹಲವು ಕಡೆ ಓಡಾಡುತ್ತಿದ್ದಂತೆ, ಪ್ರಜ್ವಲ್ ರೇವಣ್ಣ ರಾಜ್ಯದಿಂದ ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ. ರಾಜ್ಯ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಗಳನ್ನು..

Bollywood actress Swara Bhaskar talks about MP Prajwal Revanna Video Scandal srb
Author
First Published May 3, 2024, 5:30 PM IST

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಮಹಿಳಾ ದೌರ್ಜನ್ಯ ಪ್ರಕರಣವೀಗ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಹೆಚ್ಚು ರಾಜಕೀಯ ಬಣ್ಣ ಪಡೆದುಕೊಳ್ಳುತ್ತಿರುವ ಈ ಕೇಸ್‌, ಕರ್ನಾಟಕ ಮಾತ್ರವಲ್ಲ ಇಡೀ ದೇಶಾದ್ಯಂತ ಸಂಚಲನ ಸೃಷ್ಟಿಸುತ್ತಿದೆ. ಈಗ ಈ ಪ್ರಕರಣದ ಬಗ್ಗೆ ಬಾಲಿವುಡ್‌ ನಟಿ ಸ್ವರಾ ಭಾಸ್ಕರ್‌ (Swara Bhaskar), ಧರ್ಮವನ್ನೂ ಎಳೆದುತಂದು ಪ್ರತಿಕ್ರಿಯಿ ನೀಡಿದ್ದಾರೆ. 

ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ ಅವರ ಮೊಮ್ಮಗ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕಳೆದೊಂದು ವಾರದಿಂದ ಭಾರೀ ಚರ್ಚೆಯಲ್ಲಿದ್ದಾರೆ. ಅದಕ್ಕೆ ಕಾರಣ ಅವರ ಮೇಲೆ ಬಂದಿರುವ ಲೈಂಗಿಕ ಹಗರಣ. ದೊಡ್ಡ ಮಟ್ಟದ ಲೈಂಗಿಕ ಹಗರಣದಲ್ಲಿ ಭಾಗಿಯಾಗಿದ್ದಾರೆಂಬ ಗಂಭೀರ ಆರೋಪವನ್ನೇ ಸಂಸದ ಪ್ರಜ್ವಲ್ ರೇವಣ್ಣ ಎದುರಿಸುತ್ತಿದ್ದಾರೆ. ಕೊಲೆ ಬೆದರಿಕೆ , ಲೈಂಗಿಕ ಶೋಷಣೆ, ಸೆಕ್ಸ್ ವಿಡಿಯೋ ರೆಕಾರ್ಡ್ ಸೇರಿದಂತೆ ಹಲವು ಕೇಸ್‌ಗಳು ದಾಖಲಾಗಿವೆ. ಎಸ್‌ಐಟಿ (SIT)ಯು ಈ ಪ್ರಕರಣದ ತನಿಖೆ ನಡೆಸುತ್ತಿದೆ. ‌

'ಬಂಧನ 2' ಸಿನಿಮಾ ಶೂಟಿಂಗ್ ನಿಲ್ಲಿಸಲು ನಾನೇ ಹೇಳಿದ್ದು; ಸಂಚಲನ ಸೃಷ್ಟಿಸಿದ ಆದಿತ್ಯ ಹೇಳಿಕೆ!

ಹಾಸನ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಪ್ರಜ್ವಲ್‌ ರೇವಣ್ಣ ಅವರದು ಎನ್ನಲಾದ ಸೆಕ್ಸ್ ವೀಡಿಯೋಗಳು ಹಾಸನದ ಹಲವು ಕಡೆ ಓಡಾಡುತ್ತಿದ್ದಂತೆ, ಪ್ರಜ್ವಲ್ ರೇವಣ್ಣ ರಾಜ್ಯದಿಂದ ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ. ರಾಜ್ಯ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಗಳನ್ನು ಆಡಳಿತಾರೂಢ ಕಾಂಗ್ರೆಸ್‌ ಟೀಕಿಸಿತ್ತು. ಈ ಪ್ರಕರಣ ಪರಸ್ಪರ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದೆ. ಜೆಡಿಎಸ್‌ ಪಕ್ಷದಿಂದಲೇ ಪ್ರಜ್ವಲ್‌ ರೇವಣ್ಣ ಅವರನ್ನು ಉಚ್ಚಾಟನೆ ಸಹ ಮಾಡಲಾಗಿತ್ತು. ಹರಿದಾಡುತ್ತಿರುವ ವಿಡಿಯೋಗಳನ್ನು ಮಾರ್ಫ್‌ ಮಾಡಲಾಗಿದೆ. ಈ ಬಗ್ಗೆ ನನ್ನ ವಕೀಲರು ಮಾತನಾಡುತ್ತಾರೆ ಎಂದೂ ಪ್ರಜ್ವಲ್‌ ರೇವಣ್ಣ ಟ್ವಿಟ್‌ ಮೂಲಕ ಹೇಳಿಕೆ ಕೊಟ್ಟಿದ್ದಾರೆ. 

ಅಮೆರಿಕಾದಲ್ಲಿ ಇಂಡಿಯನ್ ಆಗಿರುವುದು ಅಷ್ಟು ಸುಲಭದ ಕೆಲಸವಲ್ಲ; ನಟಿ ಪ್ರಿಯಾಂಕಾ ಚೋಪ್ರಾ

ಇದೀಗ ಈ ಪ್ರಕರಣದ ಬಗ್ಗೆ ಬಾಲಿವುಡ್‌ನ ಹಲವು ಸಿನಿಮಾಗಳಲ್ಲಿ ನಟಿಸಿದ್ದ ನಟಿ ಸ್ವರಾ ಭಾಸ್ಕರ್ ಮಾತನಾಡಿದ್ದಾರೆ. ಕಳೆದ ವರ್ಷವಷ್ಟೇ ಸಾಮಾಜಿಕ ಹೋರಾಟಗಾರ ಫಹಾದ್‌ ಅಹ್ಮದ್‌ ಜತೆ ವಿವಾಹವಾಗಿ ಸಾಕಷ್ಟು ಸುದ್ದಿಯಾಗಿದ್ದ ಸ್ವರಾ ಭಾಸ್ಕರ್‌, ಇದೀಗ ಪ್ರಜ್ವಲ್‌ ರೇವಣ್ಣ ಕೇಸ್‌ ಬಗ್ಗೆ ಮಾತನಾಡಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಸ್ವರಾ ಭಾಸ್ಕರ್, ಆ ಪೋಸ್ಟ್‌ನಲ್ಲಿ ಕೇಂದ್ರ ಬಿಜೆಪಿ ಆಡಳಿತಾರೂಢ ಮೋಡಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 

ಜನ್ಮದಿನದಂದೇ 'ವೀರ್‌'ನಾಗಿ ಜೆಕೆ ಎಂಟ್ರಿ, ಸೂಪರ್ ಸ್ಟೈಲ್‌ ಮೋಷನ್ ಪೋಸ್ಟರ್ ರಿಲೀಸ್!

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮೌನವಾಗಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ ಸ್ವರಾ ಭಾಸ್ಕರ್. ಈ ಬಗ್ಗೆ 'ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ಬಗ್ಗೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮೌನವಾಗಿರುವುದಕ್ಕೆ ನಾವೇಕೆ ಬೆಚ್ಚಿಬಿದ್ದಿದ್ದೇವೆ? ಗೊತ್ತಿದ್ದೂ ಮೋದಿ ಅವರ ಪರ ಪ್ರಚಾರ ಮಾಡಿದ್ದು ನಮಗೇಕೆ ಆಘಾತ ತಂದಿದೆ? ಕಥುವಾ, ಉನ್ನಾವೋ, ಹತ್ರಾಸ್, ಕುಲದೀಪ್ ಸೆಂಗರ್, ಬ್ರಿಜ್‌ಭೂಷಣ್‌ ಶರಣ್ ಮತ್ತು ಇತರರ ಉದಾಹರಣೆ ನಮ್ಮಲ್ಲಿದೆ! ಅಪರಾಧಿ ಮುಸ್ಲಿಂ ಅಥವಾ ಟಿಎಂಸಿ/ ಕಾಂಗ್ರೆಸ್‌ನವರಾಗಿದ್ದರೆ ಮಾತ್ರ ಅವರು ಮಹಿಳಾ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುತ್ತಾರೆ' ಎಂದು ಸ್ವರಾ ಭಾಸ್ಕರ್‌ ಬರೆದುಕೊಂಡಿದ್ದಾರೆ.

 

 

Latest Videos
Follow Us:
Download App:
  • android
  • ios