ಚಿತ್ರೀಕರಣ ಮುಗಿಸಿ ವಾಪಾಸ್ ಆಗುತ್ತಿದ್ದ 'ಪುಷ್ಪ-2' ಕಲಾವಿದರ ಬಸ್ ಅಪಘಾತ
ಚಿತ್ರೀಕರಣ ಮುಗಿಸಿ ಆಂಧ್ರ ಪ್ರದೇಶಕ್ಕೆ ವಾಪಾಸ್ ಆಗುತ್ತಿದ್ದ ಪುಷ್ಪ-2 ಕಲಾವಿದರಿದ್ದ ಬಸ್ ಅಪಘಾತಕ್ಕೀಡಾಗಿದೆ.

ಅಲ್ಲು ಅರ್ಜುನ್ ನಟನೆಯ ಬಹುನಿರೀಕ್ಷೆಯ ಪುಷ್ಪಾ-2 ಸಿನಿಮಾದ ಕಲಾವಿದರಿದ್ದ ಬಸ್ ಅಪಘಾತಕ್ಕೀಡಾಗಿದೆ. ಪುಷ್ಪ-2 ಕಲಾವಿದರನ್ನು ಹೊತ್ತೊಯ್ಯುತ್ತಿದ್ದ ಬಸ್ ಇಂದು (ಮೇ 31) ತೆಲಂಗಾಣದಿಂದ ಆಂಧ್ರಪ್ರದೇಶಕ್ಕೆ ಹಿಂದಿರುಗುತ್ತಿದ್ದಾಗ ನಿಂತಿದ್ದ ಮತ್ತೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ. ಹೈದರಾಬಾದ್-ವಿಜಯವಾಡ ಹೆದ್ದಾರಿ ನಾರ್ಕೆಟ್‌ಪಲ್ಲಿ ಬಳಿ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಇಬ್ಬರು ಕಲಾವಿದರಿಗೆ ಗಾಯಗಳಾಗಿದ್ದು ತಕ್ಷಣ ಆಸ್ಪತ್ರೆಗೆ ಕರೆದೊಯಿಯ್ದು ಚಿಕಿತ್ಸೆ ನೀಡಲಾಗುತ್ತಿದೆ.
ನಿರ್ದೇಶಕ ಸುಕುಮಾರ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಪುಷ್ಪ 2 ಶೂಟಿಂಗ್ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ನಡೆಯುತ್ತಿದೆ. ಅಲ್ಲಿ ಒಂದು ವೇಳಾಪಟ್ಟಿಯನ್ನು ಪೂರ್ಣಗೊಳಿಸಿದ್ದಾರೆ. ಚಿತ್ರೀಕರಣ ಮುಗಿಸಿ ಕಲಾವಿದರು ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಿಂದ ಹೈದರಾಬಾದ್‌ಗೆ ಹಿಂತಿರುಗುತ್ತಿದ್ದರು. ಆಗ ಈ ಅವಘಡ ಸಂಭವವಿಸಿದೆ. ಶ್ರೀಕಾಕುಲಂ ಅರಣ್ಯ ಮತ್ತು ಕೃಷಿ ಭೂಮಿ ಹಾಗೂ ಕಲ್ಲಿನ ಭೂಪ್ರದೇಶವನ್ನು ಹೊಂದಿದೆ ಹಾಗಾಗಿ ಅದೇ ಜಾಗವನ್ನು ಶೂಟಿಂಗ್‌ಗಗೆ ಆಯ್ಕೆ ಮಾಡಿಕೊಂಡಿತ್ತು ಸಿನಿಮಾತಂಡ.
ಮೂರು ಭಾಗಗಳಲ್ಲಿ ಬರ್ತಿದೆಯಾ ರಕ್ತ ಚಂದನದ ಕಥೆ..ಫೈನಲ್ ಆಗಿದೆ ಶೀರ್ಷಿಕೆ..!
ನಿಂತಿದ್ದ ಬಸ್‌ಗೆ ಡಿಕ್ಕಿ
ತಾಂತ್ರಿಕ ತೊಂದರೆಯಿಂದ ಆರ್‌ಟಿಸಿ ಬಸ್ ಕೆಟ್ಟು ನಿಂತಿತ್ತು. ರಸ್ತೆ ಬದಿಯಲ್ಲೇ ಚಾಲಕ ಬಾಸ್ ನಿಲ್ಲಿಸಿದ್ದರು. ಕಲಾವಿದರನ್ನು ಹೊತ್ತೊಯ್ಯುತ್ತಿದ್ದ ಬಸ್ಸಿನ ಚಾಲಕ ಹಾಳಾಗಿ ನಿಂತಿದ್ದ ಆರ್‌ಟಿಸಿ ಬಸ್ಸನ್ನು ಗಮನಿಸದೆ ಡಿಕ್ಕಿ ಹೊಡೆದಿದ್ದಾರೆ ಎಂದು ವರದಿಯಾಗಿದೆ. ಕೆಲವರಿಗೆ ಚಿಕ್ಕ ಪುಟ್ಟ ಗಾಯಗಳಾಗಿದ್ದು ಸ್ಥಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ಬಗ್ಗೆ ಸಿನಿಮಾತಂಡ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಸಿನಿಮಾಗೆ ಸುಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ‘ಮೈತ್ರಿ ಮೂವೀ ಮೇಕರ್ಸ್’ ಬ್ಯಾನರ್ ಮೂಲಕ ಸಿನಿಮಾ ನಿರ್ಮಾಣ ಆಗುತ್ತಿದೆ. ಅದ್ದೂರಿ ಬಜೆಟ್ನಲ್ಲಿ ತಯಾರಾಗುತ್ತಿರುವ ‘ಪುಷ್ಪ 2’ ಸಿನಿಮಾಗೆ ಬಿರುಸಿನ ಚಿತ್ರೀಕರಣ ನಡೆಯುತ್ತಿತ್ತು. ಆದರೆ ಈಗ ಕಲಾವಿದರ ಬಸ್‌ಗೆ ಅಪಘಾತ ಆಗಿರುವುದರಿಂದ ಶೂಟಿಂಗ್ಗೆ ಬ್ರೇಕ್ ಬೀಳಬಹುದಾ ಎಂಬ ಪ್ರಶ್ನೆ ಎದುರಾಗಿದೆ.
ರಶ್ಮಿಕಾ ಫ್ಯಾನ್ಸ್‌ಗೆ ಇದು ಶಾಕಿಂಗ್ ಸುದ್ದಿ: ಪುಷ್ಪ2ನಲ್ಲಿ ಶ್ರೀವಲ್ಲಿ ಸತ್ತು ಹೋಗ್ತಾಳಂತೆ ?
ಪುಷ್ಪ 2 ಚಿತ್ರದಲ್ಲಿ ಅಲ್ಲು ಅರ್ಜುನ್, ಫಹದ್ ಫಾಸಿಲ್ ಮತ್ತು ರಶ್ಮಿಕಾ ಮಂದಣ್ಣ ಸೇರಿದಂತೆ ಅನೇಕರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ವರ್ಷದ ಕೊನೆಯಲ್ಲಿ ಸಿನಿಮಾ ರಿಲೀಸ್ ಮಾಡುವ ಪ್ಲಾನ್ ಮಾಡಿದೆ ಸಿನಿಮಾಂಡ. ಮೊದಲ ಭಾಗ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡಿರುವ ಕಾರಣ 2ನೇ 2ಭಾಗವನ್ನು ಮತ್ತಷ್ಟು ಅದ್ದೂರಿಯಾಗಿ ತೆರೆಮೇಲೆ ತೋರಲು ಸಿನಿಮಾತಂಡ ನಿರ್ಧರಿಸಿದ್ದು ಅಭಿಮಾನಿಗಳ ನಿರೀಕ್ಷೆ ಕೂಡ ಹೆಚ್ಚಾಗಿದೆ.