ಮೆಗಾ ಕುಟುಂಬಕ್ಕೆ ಹೆಣ್ಣು ಮಗು ಎಂಟ್ರಿ ಕೊಟ್ಟಿದೆ. ರಾಮ್ ಚರಣ್ ಮತ್ತು ಉಪಾಸನಾ ದಂಪತಿ ಹೆಣ್ಣು ಮಗುವನ್ನು ಸ್ವಾಗತಿಸಿದ್ದಾರೆ. ಮೊಮ್ಮಗಳ ಬಗ್ಗೆ ನಟ ಚಿರಂಜೀವಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ.
ಟಾಲಿವುಡ್ ಸ್ಟಾರ್ ರಾಮ್ ಚರಣ್ ಮತ್ತು ಉಪಾಸನಾ ದಂಪತಿ ಮೊದಲ ಮಗುವನ್ನು ಸ್ವಾಗತಿಸಿದ್ದಾರೆ. ಇಂದು (ಜೂನ್ 20) ಬೆಳಗ್ಗೆ ಉಪಾಸನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ರಾಮ್ ಚರಣ್ ಮತ್ತು ಉಪಾಸನಾ ದಂಪತಿಗೆ ಶುಭಾಶಯಗಳ ಸುರಿಮಳೆಯೇ ಬರುತ್ತಿದೆ. ಅಭಿಮಾನಿಗಳು ಸಿನಿಮಾ ಗಣ್ಯರು, ಆಪ್ತರು ಸೇರಿದಂತೆ ಅನೇಕರು ವಿಶ್ ಮಾಡುತ್ತಿದ್ದಾರೆ. ಇನ್ನು ವಿಶೇಷ ಎಂದರೆ ತಾತ ಮೆಗಾಸ್ಟಾರ್ ಚಿರಂಜೀವಿ ಮೊಮ್ಮಗಳನ್ನು ಪ್ರೀತಿಯಿಂದ ಸ್ವಾಗತಿಸಿ ಭಾವುಕ ಪೋಸ್ಟ್ ಶೇರ್ ಮಾಡಿದ್ದಾರೆ.
'ಲಿಟಲ್ ಮೆಗಾ ಪ್ರಿನ್ಸೆಸ್‌ಗೆ ಸುಸ್ವಾಗತ. ನಿನ್ನ ಆಗಮನ ಲಕ್ಷಾಂತರ ಮೆಗಾ ಕುಟುಂಬದಲ್ಲಿ ಉತ್ಸಾಹ ತುಂಬಿದ್ದಿಯಾ. ನೀನು ಪೋಷಕರಾದ ರಾಮ್ ಚರಣ್ ಮತ್ತು ಉಪಾಸನಾ ಕೊನಿಡೇಲಾ ಮತ್ತು ನಾವು ಅಜ್ಜ-ಅಜ್ಜಿಯರಿಗೆ ಸಂತೋಷ ಮತ್ತು ಹೆಮ್ಮೆ ಪಡುವಂತೆ ಮಾಡಿದ್ದೀಯಾ' ಎಂದು ಬರೆದುಕೊಂಡಿದ್ದಾರೆ.
ಇಂದು ಬೆಳಗ್ಗೆ ಹೈದರಾಬಾದ್ ಅಪೋಲೋ ಆಸ್ಪತ್ರೆಯಲ್ಲಿ ರಾಮ್ ಚರಣ್ ಮತ್ತು ಅವರ ಪತ್ನಿ ಉಪಾಸನಾ ತಮ್ಮ ಮೊದಲ ಮಗುವನ್ನು ಸ್ವಾಗತಿಸಿದರು. ಅಪೋಲೋ ಆಸ್ಪತ್ರೆ ಬಿಡುಗಡೆ ಮಾಡಿರುವ ವೈದ್ಯಕೀಯ ಬುಲೆಟಿನ್ ಮೂಲಕ ಮಗು ಜನಿಸಿದ ಸುದ್ದಿಯನ್ನು ಬಹಿರಂಗ ಪಡಿಸಿದ್ದಾರೆ. ಹೇಳಿಕೆಯಲ್ಲಿ, 'ಉಪಾಸನಾ ಕಾಮಿನೇನಿ ಕೊನಿಡೇಲಾ ಮತ್ತು ರಾಮ್ ಚರಣ್ ಕೊನಿಡೇಲಾ 2023 ರ ಜೂನ್ 20 ರಂದು ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನ ಅಪೋಲೋ ಆಸ್ಪತ್ರೆಯಲ್ಲಿ ಹೆಣ್ಣು ಮಗುವನ್ನು ಸ್ವಾಗತಿಸಿದ್ದಾರೆ. ಮಗು ಮತ್ತು ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ' ಎಂದು ಬಹಿರಂಗ ಪಡಿಸಿದರು.
ಹೆಣ್ಣು ಮಗುವಿಗೆ ತಂದೆಯಾದ RRR ರಾಮ್ ಚರಣ್; ಮೆಗಾ ಫ್ಯಾಮಿಲಿಯಲ್ಲಿ ಫುಲ್ ಸಂಭ್ರಮ!
ಇದೇ ವೇಳೆ ಚಿರಂಜೀವಿ ಮತ್ತು ಅವರ ಪತ್ನಿ ಸುರೇಖಾ ದಂಪತಿಗೆ ಆಸ್ಪತ್ರೆಗೆ ಭೇಟಿ ನೀಡಿ ಮೊಮ್ಮಗಳನ್ನು ನೋಡಿದರು. ರಾಮ್ ಚರಣ್ ಮತ್ತು ಉಪಾಸನಾರನ್ನು ಭೇಟಿ ಮಾಡಿದ ನಂತರ ಚಿರಂಜೀವಿ ಮತ್ತು ಪತ್ನಿ ಆಸ್ಪತ್ರೆಯಿಂದ ಹೊರಹೋಗುತ್ತಿರುವ ವೀಡಿಯೊ ವೈರಲ್ ಆಗಿದೆ. ಸೋಮವಾರ ರಾತ್ರಿ ಉಪಾಸನಾ ಮತ್ತು ರಾಮ್ ಚರಣ್ ದಂಪತಿ ಅಪೋಲೋ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದ್ದರು. ಇಂದು ಬೆಳಗ್ಗೆ ಮಗುವಿಗೆ ಜನ್ಮ ನೀಡಿದ್ದಾರೆ.
ಮತ್ತೆ ಚಿರಂಜೀವಿ ಮನೆಗೆ ಶಿಫ್ಟ್ ಆಗ್ತಿದ್ದಾರೆ ರಾಮ್ ಚರಣ್-ಉಪಾಸನಾ ದಂಪತಿ: ಕಾರಣವೇನು?
ರಾಮ್ ಚರಣ್ ಮತ್ತು ಉಪಾಸನಾ ದಂಪತಿ 2012 ರಲ್ಲಿ ಜೂನ್ 14 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇಬ್ಬರೂ ಮದುವೆಯಾಗಿ 10 ವರ್ಷಗಳ ಬಳಿಕ ಮುದ್ದಾದ ಮಗುವಿಗೆ ಜನ್ಮ ನೀಡಿದ್ದಾರೆ. ಉಪಾಸನಾ ಗರ್ಭಿಣಯಾಗಿರುವ ವಿಚಾರವನ್ನು ಡಿಸೆಂಬರ್‌ನಲ್ಲಿ ಬಹಿರಂಗ ಪಡಿಸಿದ್ದರು. 'ಉಪಾಸನಾ ಮತ್ತು ರಾಮ್ ಚರಣ್ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಹಂಚಿಕೊಳ್ಳಲು ನಾವು ಸಂತೋಷಪಡುತ್ತೇವೆ. ಸುರೇಖಾ ಮತ್ತು ಚಿರಂಜೀವಿ ಕೊನಿಡೇಲ, ಶೋಬನಾ ಮತ್ತು ಅನಿಲ್ ಕಾಮಿನೇನಿಯವರಿಂದ ಪ್ರೀತಿ ಮತ್ತು ಕೃತಜ್ಞತೆಗಳೊಂದಿಗೆ' ಎಂದು ಬಹಿರಂಗ ಪಡಿಸಿದ್ದರು. ಇದೀಗ ಮಗಳು ಬಂದ ಖುಷಿಯಲ್ಲಿದ್ದಾರೆ.
