ಪ್ರಧಾನಿ ಮೋದಿಗೇ ಯೋಗ ಹೇಳಿಕೊಡಲು ಹೋಗಿ ಪೇಚಿಗೆ ಸಿಲುಕಿದ್ದಾರೆ ನಟಿ ರಾಖಿ ಸಾವಂತ್​! ಅಷ್ಟಕ್ಕೂ ಆಗಿದ್ದೇನು? 

ಪ್ರಧಾನಿ ನರೇಂದ್ರ ಮೋದಿಯವರು ಪ್ರತಿನಿತ್ಯ ಯೋಗ ಮಾಡಿ ದೇಹ ಮತ್ತು ಮನಸ್ಸು ಎರಡನ್ನೂ ಫಿಟ್​ ಆಗಿಟ್ಟುಕೊಂಡಿರುವವರು. ಭಾರತದ ಪ್ರಾಚೀನ ಪದ್ಧತಿಯಾಗಿರುವ ಯೋಗವನ್ನು ಇಡೀ ವಿಶ್ವಕ್ಕೆ ಕೊಂಡೊಯ್ದಿರುವ ಕೀರ್ತಿ ಇವರಿಗೆ ಸಲ್ಲುತ್ತದೆ. ಇದೇ ಕಾರಣಕ್ಕೆ ಜೂನ್​ 21ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ ಎಂದೂ ಆಚರಿಸಲಾಗುತ್ತದೆ. ಹಲವಾರು ಆರೋಗ್ಯ ಸಮಸ್ಯೆಗಳು ಮತ್ತು ಮಾನಸಿಕ ಸಮಸ್ಯೆಗಳನ್ನು ದೂರ ಮಾಡುವ ಶಕ್ತಿ ಯೋಗಕ್ಕೆ ಇದೆ. ಇದೇ ಕಾರಣಕ್ಕೆ ನರೇಂದ್ರ ಮೋದಿಯವರು ಈ ವಿಷಯದಲ್ಲಿ ಇಷ್ಟು ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತಿದ್ದಾರೆ. ಪ್ರಧಾನಿ ಮಾತ್ರವಲ್ಲದೇ ಕೆಲವು ಸಿನಿ ತಾರೆಯರೂ ಯೋಗವನ್ನು ತಮ್ಮ ಜೀವನದಲ್ಲಿ ಪ್ರತಿನಿತ್ಯ ಅನುಸರಿಸುವ ಕಾರಣ ವಯಸ್ಸಾದರೂ ಎಳೆಯ ತರುಣ-ತರುಣಿಯರಂತೆ ಕಾಣುತ್ತಿದ್ದಾರೆ. ಇದೀಗ ಯೋಗದ ವಿಷಯ ಏಕೆ ಬಂತೆಂದರೆ, ಕಾಂಟ್ರವರ್ಸಿ ನಟಿ ರಾಖಿ ಸಾವಂತ್​ ಅವರಿಂದಾಗಿ!

ಹೌದು! ನಟಿ ರಾಖಿ ಸಾವಂತ್​ ಪ್ರಧಾನಿ ನರೇಂದ್ರ ಮೋದಿಯವರಿಗೇ ಯೋಗ ಕಲಿಸುವುದಾಗಿ ಹೇಳಿ ಪೇಚಿಗೆ ಸಿಲುಕಿದ್ದಾರೆ! ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಮತ್ತು ಅಶ್ಲೀಲ ವರ್ತನೆ ತೋರಿದ ಕಾರಣಕ್ಕೆ ಈಕೆಯ ವಿರುದ್ಧ ಮೀರತ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಷ್ಟಕ್ಕೂ ಆಗಿರುವುದು ಏನೆಂದರೆ ವಿಡಿಯೋ ಒಂದನ್ನು ಮಾಡಿರುವ ನಟಿ ರಾಖಿ ಸಾವಂತ್​, ಅದರಲ್ಲಿ ಮೋದಿಜಿ, ನನ್ನನ್ನು ನಿಮ್ಮ ಯೋಗ ತರಬೇತುದಾರನನ್ನಾಗಿ ಇರಿಸಿಕೊಳ್ಳಿ. ನಾನು ನಿಮ್ಮ ಆರೋಗ್ಯವನ್ನು ನೋಡಿಕೊಳ್ಳುತ್ತೇನೆಂದು ಹೇಳಿದ್ದಾರೆ. ಯೋಗ ಮಾಡುವುದು ಹೀಗೆ ಎಂದು ಪೋಸ್​ ಕೊಟ್ಟಿದ್ದಾರೆ. ಈ ವಿಡಿಯೋ ವೈರಲ್​​ ಆಗಿದೆ.

ಬಿಗ್​ಬಾಸ್​ಗೆ ಕಾಂಟ್ರವರ್ಸಿ ಜೋಡಿ ರಾಖಿ- ಆದಿಲ್​ ಖಾನ್​ ಎಂಟ್ರಿ? ನಟಿ ಹೇಳಿದ್ದೇನು ನೋಡಿ...

ಹೇಳಿಕೇಳಿ ರಾಖಿ ಸಾವಂತ್​, ಆಕೆಯ ಡ್ರೆಸ್​ ಸೆನ್ಸ್​, ಅಸಭ್ಯ ವರ್ತನೆ, ಅಶ್ಲೀಲ ವರ್ತನೆ ಬೇರೆ ಹೇಳಬೇಕಾಗಿಲ್ಲ. ಮಾನಸಿಕ ಸ್ಥಿಮಿತ ಕಳೆದುಕೊಂಡವರಂತೆ ಕಳೆದ ಕೆಲವು ತಿಂಗಳುಗಳಿಂದ ಈಕೆ ವರ್ತಿಸುತ್ತಿರುವುದು ಎಲ್ಲರಿಗೂ ತಿಳಿದದ್ದೇ. ರಾಖಿ ಸಾವಂತ್​ ಮತ್ತು ಆದಿಲ್​ ಖಾನ್​ ಜೋಡಿಯ ವಿಷಯ ಕಳೆದೊಂದು ವರ್ಷದಿಂದ ಸಿಕ್ಕಾಪಟ್ಟೆ ಸದ್ದು ಮಾಡುತ್ತಲೇ ಇದೆ. ಒಂದಾದ ಮೇಲೊಂದರಂತೆ ನಾಟಕೀಯ ಬೆಳವಣಿಗೆಗಳು ಈ ಜೋಡಿಯ ನಡುವೆ ನಡೆಯುತ್ತಲೇ ಇದೆ. ಮೈಸೂರಿನ ಯುವಕ ಆದಿಲ್​ ಖಾನ್​ ಮದುವೆಯನ್ನು ನಿರಾಕರಿಸಿದ್ದು, ರಾಖಿ ರಂಪಾಟ ಮಾಡಿದ್ದು, ಕೊನೆಗೂ ಆದಿಲ್​ ಮದುವೆಯನ್ನು ಒಪ್ಪಿಕೊಂಡಿದ್ದು ಎಲ್ಲವೂ ಯಾವ ಸಿನಿಮಾ ಕಥೆಗಿಂತಲೂ ಭಿನ್ನವಾಗಿರಲಿಲ್ಲ. ಎಲ್ಲವೂ ಸುಖಾಂತ್ಯಗೊಂಡಿತು ಎನ್ನುವಾಗಲೇ ಆದಿಲ್ ತಮಗೆ ಮೋಸ ಮಾಡುತ್ತಿದ್ದಾರೆ, ಹಲ್ಲೆ ಮಾಡಿದ್ದಾರೆ, ಇನ್ನೊಬ್ಬಳ ಜೊತೆ ಅಕ್ರಮ ಸಂಬಂಧ ಹೊಂದಿದ್ದಾರೆ, ಆದಿಲ್‌ಗಾಗಿ ಇಸ್ಲಾಂಗೆ ಮತಾಂತರ ಮಾಡಿಕೊಂಡಿರುವೆ. ನಾನು ಇಸ್ಲಾಂ ಧರ್ಮವನ್ನು ಒಪ್ಪಿಕೊಂಡು ಆದಿಲ್‌ನ ಮದುವೆ ಆಗಿದ್ದೇನೆ ಎಂದೆಲ್ಲಾ ಆರೋಪಿಸಿದ್ದ ರಾಖಿ ಕೊನೆಗೆ ದೂರು ಕೊಟ್ಟರು. ಇದರಿಂದ ಆದಿಲ್​ (Adil Khan Durrani) ವಿರುದ್ಧ ಎಫ್​ಐಆರ್​ ದಾಖಲಾಗಿದ್ದು ಸದ್ಯ ಅವರು ಜೈಲಿಗೆ ಹೋದದ್ದು ಎಲ್ಲವೂ ವಿಚಿತ್ರವಾಗಿ ನಡೆದಂಥದ್ದು.

ಸದಾ ಸುದ್ದಿಯಲ್ಲಿರಲು, ಪ್ರಚಾರ ಗಿಟ್ಟಿಸಿಕೊಳ್ಳಲು ಹವಣಿಸುತ್ತಿರುವ ನಟಿ ಪ್ರಧಾನಿ ವಿರುದ್ಧ ಹೀಗೆ ಮಾತನಾಡಿ ಈಗ ಪೇಚಿಗೆ ಸಿಲುಕಿದ್ದಾರೆ. ಗೌರವಾನ್ವಿತ ನಾಯಕನ ಹಿತಾಸಕ್ತಿಗೆ ವಿರುದ್ಧವಾದ ಅಸಭ್ಯತೆ ಮತ್ತು ಅಸಭ್ಯತೆಯನ್ನು ಹೊಂದಿದೆ. ನಟಿ ತನ್ನ ಹೇಳಿಕೆ ಮತ್ತು ವಿಡಿಯೋದಲ್ಲಿ ದೇಶದ ಪ್ರಧಾನ ನಾಯಕನನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಯುಪಿಯ ಮೀರತ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ! 

ರಾಖಿ ಪತಿ ಆದಿಲ್‌ ಜೊತೆ ಶೆರ್ಲಿನ್‌ ಚೋಪ್ರಾ ಮತ್ತೆ ರೊಮ್ಯಾನ್ಸ್‌: ವಿಡಿಯೋ ನೋಡಿ ದಂಗಾದ ಫ್ಯಾನ್ಸ್‌!

Scroll to load tweet…