ಸೂಪರ್ ಸ್ಟಾರ್ ರಜನಿಕಾಂತ್ 'ದರ್ಬಾರ್' ಚಿತ್ರದ ಟ್ರೇಲರ್ ರಿಲೀಸ್ ಆಗಿದೆ.  'ತಲೈವಾ' ಕಮಿಷನರ್ ಆದಿತ್ಯ ಅರುನಾಚಲಂ ಪಾತ್ರದಲ್ಲಿ ಸಖತ್ ಖಡಕ್ ಆಗಿ ಕಾಣಿಸಿಕೊಂಡಿದ್ದಾರೆ.  ರಜನಿಕಾಂತ್ ಈ ಲುಕ್ ಅಭಿಮಾನಿಗಳಿಗೆ ಇಷ್ಟವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. 

ಹನಿಮೂನ್‌ನಲ್ಲಿ ಗಂಡನಿಗೆ ಒದ್ದ ಸಿಹಿ-ಕಹಿ ಚಂದ್ರು ಪುತ್ರಿ?

ತಮಿಳು, ತೆಲುಗು ಹಾಗೂ ಹಿಂದಿಯಲ್ಲಿ 'ದರ್ಬಾರ್' ಟ್ರೇಲರ್ ರಿಲೀಸ್ ಆಗಿದೆ.  ಎಲ್ಲವೂ ಅಂದುಕೊಂಡಂತೆ ಆದರೆ ಸಿನಿಮಾ 2020 ಜನವರಿ 10 ರಂದು ತೆರೆಗೆ ಬರಲಿದೆ ಎನ್ನಲಾಗಿದೆ. 

 

ರಜನಿಕಾಂತ್ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಖಡಕ್ ಪೊಲೀಸ್ ಅಧಿಕಾರಿ ಆದಿತ್ಯ ಅರುಣಾಚಲಂ ಹಾಗೂ ಸಾಮಾಜಿಕ ಕಾರ್ಯಕರ್ತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 

ಹೆಸರು ಬದಲಾಯಿಸಿಕೊಂಡ ಶಾನ್ವಿ ಶ್ರೀವಾಸ್ತವ್; ಇದಕ್ಕೆ 'ಅವನೇ' ಕಾರಣ!

ರಜನಿಗೆ ನಯನಾತಾರಾ ಜೋಡಿಯಾಗಿ ನಟಿಸಿದ್ದಾರೆ. ಎ ಆರ್ ಮುರುಗದಾಸ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಚಿತ್ರದ ಒಟ್ಟು ಬಜೆಟ್ 250 ಕೋಟಿ ಆಗಿದ್ದು ರಜನಿಕಾಂತ್ 100 ಕೋಟಿ ಸಂಭಾವನೆ ಪಡೆದಿದ್ದಾರೆ ಎಂಬ ಮಾತು ಕೇಳಿ ಬಂದಿದೆ.