Asianet Suvarna News Asianet Suvarna News

ಮತ್ತೆ ಒಂದಾದ 'ಪಠಾಣ್' ಜೋಡಿ; ಶಾರುಖ್ 'ಜವಾನ್'ಗೆ ದೀಪಿಕಾ ಪಡುಕೋಣೆ ಎಂಟ್ರಿ

ಶಾರುಖ್ ಖಾನ್ ಮತ್ತು ನಯನತಾರಾ ನಟನೆಯ ಜವಾನ್ ಸಿನಿಮಾಗೆ ಮತ್ತೋರ್ವ ಖ್ಯಾತ ನಟಿ ದೀಪಿಕಾ ಪಡುಕೋಣೆ ಎಂಟ್ರಿ ಕೊಟ್ಟಿದ್ದಾರೆ. 

Deepika Padukone joins to Shah Rukh Khan and Nayanthara shatter Jawan film sgk
Author
First Published Apr 2, 2023, 1:36 PM IST

ಪಠಾಣ್ ಸಕ್ಸಸ್ ಬಳಿಕ ಶಾರುಖ್ ಖಾನ್ ಜವಾನ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಜವಾನ್ ಸಿನಿಮಾದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದು ಸಾಕಷ್ಟು ಚಿತ್ರೀಕರಣ ಮಾಡಿ ಮುಗಿಸಿದ್ದಾರೆ. ಜವಾನ್ ಚಿತ್ರಕ್ಕೆ ತಮಿಳಿನ ಖ್ಯಾತ ನಿರ್ದೇಶಕ ಆಟ್ಲೀ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮೊದಲ ಬಾರಿಗೆ ಶಾರುಖ್ ಮತ್ತು ಆಟ್ಲೀ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ. ಮೊದಲ ಬಾರಿಗೆ ಬಾಲಿವುಡ್‌ಗೆ ಎಂಟ್ರಿ ಕೊಟ್ಟಿರುವ ಆಟ್ಲೀ ಕುಮಾರ್ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ಈಗಾಗಲೇ ಪುಟ್ಟ ಟೀಸರ್ ರಿಲೀಸ್ ಆಗಿದ್ದು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ನಿರೀಕ್ಷೆ ಕೂಡ ಹೆಚ್ಚಾಗಿದೆ. 

ಅಂದಹಾಗೆ ಜವಾನ್ ಸಿನಿಮಾದಲ್ಲಿ ನಾಯಕಿಯಾಗಿ ನಯನತಾರಾ ನಟಿಸುತ್ತಿದ್ದಾರೆ. ಮೊದಲ ಬಾರಿಗೆ ನಯನತಾರಾ ಬಾಲಿವುಡ್ ಕಿಂಗ್ ಖಾನ್ ಜೊತೆ ನಟಿಸುತ್ತಿದ್ದಾರೆ. ಇದು ನಯನತಾರಾ ಅವರ ಮೊದಲ ಬಾಲಿವುಡ್ ಸಿನಿಮಾವಾಗಿದೆ. ನಯನತಾರಾ ಮತ್ತು ಶಾರುಖ್ ಜೊತೆ ಮತ್ತೋರ್ವ ಸ್ಟಾರ್ ನಟಿ ಎಂಟ್ರಿ ಕೊಟ್ಟಿದ್ದಾರೆ. ಹೌದು ಶಾರುಖ್ ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ನಟಿ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ. ಈಗಾಗಲೇ ಪಠಾಣ್ ಸಿನಿಮಾ ಮೂಲಕ ಮೋಡಿ ಮಾಡಿರುವ ಶಾರುಖ್ ಮತ್ತು ದೀಪಿಕಾ ಇದೀಗ ಮತ್ತೆ ಜವಾನ್ ಸಿನಿಮಾದಲ್ಲೂ ಕಾಣಿಸಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಸಂತಸ ಮೂಡಿಸಿದೆ. 

ಜವಾನ್ ಸಿನಿಮಾದ ಪ್ರಮುಖ ಹಾಡಿಗೆ ದೀಪಿಕಾ ಪಡುಕೋಣೆ ಹೆಜ್ಜೆ ಹಾಕುತ್ತಿದ್ದಾರೆ ಎನ್ನುವ ಸುದ್ದಿ ಕೇಳಿ ಬರುತ್ತಿದೆ. ದೀಪಿಕಾ ಮತ್ತು ಶಾರುಖ್ ಖಾನ್ ವಿಶೇಷ ಹಾಡಿಗೆ ಹೆಜ್ಜೆ ಹಾಕುತ್ತಿದ್ದು ಈ ಹಾಡಿನ ಚಿತ್ರೀಕರಣ  ಇದೇ ಏಪ್ರಿಲ್ ಮೊದಲ ವಾರದಲ್ಲಿ ಪ್ರಾರಂಭವಾಗಲಿದೆ. ಏಪ್ರಿಲ್ 15ರೊಳಗೆ ಈ ಹಾಡಿನ ಚಿತ್ರೀಕರಣ ಮುಗಿಸಲಿದ್ದಾರೆ ಎನ್ನಲಾಗಿದೆ. ಜವಾನ್ ಸಿನಿಮಾಗೆ ಸೌತ್‌ನ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅನಿರುದ್ಧ್ ಸಂಗೀತದಲ್ಲಿ ಮೂಡಿಬರುತ್ತಿರುವ ಹಾಡಿಗೆ ಶಾರುಖ್ ಮತ್ತು ದೀಪಿಕಾ ಡಾನ್ಸ್ ಮಾಡುತ್ತಿದ್ದಾರೆ. 

ಶಾರುಖ್ ಖಾನ್ 'ಜವಾನ್' ಚಿತ್ರದ ಪ್ರಮುಖ ದೃಶ್ಯಗಳು ಲೀಕ್; ನೆಕ್ಸ್ಟ್ ಲೆವೆಲ್ ಎಂದ ಫ್ಯಾನ್ಸ್

ಜವಾನ್ ಸಿನಿಮಾದ ಚಿತ್ರೀಕರಣ ಮೇ ತಿಂಗಳಲ್ಲಿಯೇ ಮುಗಿಸಿ ಜೂನ್ ತಿಂಗಳಲ್ಲಿ ರಿಲೀಸ್ ಮಾಡಲು ಸಿನಿಮಾತಂಡ ನಿರ್ದರಿಸಿದೆ. ಜೂನ್‌ನಲ್ಲಿ ರಿಲೀಸ್ ಮಾಡುವ ಸಲುವಾಗಿ ಸಿನಿಮಾತಂಡ ಭರ್ಜರಿಯಾಗಿ ಚಿತ್ರೀಕರಣ ಮಾಡುತ್ತಿದೆ. ಸದ್ಯದಲ್ಲೇ ಶೂಟಿಂಗ್ ಮುಗಿಸಿ ಸಿನಿಮಾತಂಡ ಪೋಸ್ಟ್ ಪ್ರೊಡಕ್ಷನ್‌ನಲ್ಲಿ ಸಿನಿಮಾತಂಡ ಬ್ಯುಸಿಯಾಗಲಿದ್ದಾರೆ. ಶಾರುಖ್ ಮತ್ತು ದೀಪಿಕಾ ಹೆಜ್ಜೆ ಹಾಕುತ್ತಿರುವ ಜವಾನ್ ಸಾಂಗ್ ಹೇಗಿರಲಿದೆ ಎಂದು ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. 

JAWAN: ಶಾರುಖ್​ಗಾಗಿ 16 ವರ್ಷದ ರೂಲ್ಸ್​ ಬ್ರೇಕ್​- ಬಿಕಿನಿಯಲ್ಲಿ ನಟಿ ನಯನತಾರಾ?

ಶಾರುಖ್ ಖಾನ್ ಜವಾನ್ ಸಿನಿಮಾದ ಜೊತೆಗೆ ಡಂಕಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಡಂಕಿ ಸಿನಿಮಾಗೆ ಖ್ಯಾತ ನಿರ್ದೇಶಕ ರಾಜ್ ಕುಮಾರ್ ಹಿರಾನಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಡಂಕಿಯಲ್ಲಿ ತಾಪ್ಸಿ ಪನ್ನು ನಟಿಸುತ್ತಿದ್ದಾರೆ. ಮೊದಲ ಬಾರಿಗೆ ಶಾರುಖ್ ಮತ್ತು ತಾಪ್ಸಿ ಅಭಿಮಾನಿಗಳ ಮುಂದೆ ಬರ್ತಿದ್ದಾರೆ. 

Follow Us:
Download App:
  • android
  • ios