ರಾಜಮೌಳಿ ಸಿನಿಮಾದಲ್ಲಿ ಕರಾವಳಿ ಸುಂದರಿ; ಪ್ರಭಾಸ್ ಬಳಿಕ ಮಹೇಶ್ ಬಾಬು ಜೊತೆ ದೀಪಿಕಾ ರೊಮ್ಯಾನ್ಸ್

ಎಸ್ ಎಸ್ ರಾಜಮೌಳಿ ನಿರ್ದೇಶನದ ಹೊಸ ಸಿನಿಮಾಗೆ ದೀಪಿಕಾ ನಾಯಕಿ ಎನ್ನುವ ಮಾತು ಕೇಳಿಬರುತ್ತಿದೆ. ಸದ್ಯ ಪ್ರಭಾಸ್ ಸಿನಿಮಾದಲ್ಲಿ ನಟಿಸುತ್ತಿರುವ ದೀಪಿಕಾ ಬಳಿಕ ಮಹೇಶ್ ಬಾಬು ಜೊತೆ ರೊಮ್ಯಾನ್ಸ್ ಮಾಡಲಿದ್ದಾರೆ ಎನ್ನಲಾಗಿದೆ. 

Deepika Padukone likely to star in Mahesh Babu and SS Rajamoulis action adventure film sgk

ಬಾಲಿವುಡ್ ಸ್ಟಾರ್ ನಟಿ ದೀಪಿಕಾ ಪಡುಕೋಣೆ ಇತ್ತೀಚೆಗಷ್ಟೆ ಶಾರುಖ್ ಖಾನ್ ಜೊತೆ ಪಠಾಣ್ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಸದ್ಯ ಪ್ರಭಾಸ್ ನಟನೆಯ ಇನ್ನು ಹೆಸರಿಡದ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಮಹಾನಟಿ ಖ್ಯಾತಿಯ ನಾಗ್ ಅಶ್ವಿನ್ ಆಕ್ಷನ್ ಕಟ್ ಹೇಳುತ್ತಿರುವ ಹೊಸ ಸಿನಿಮಾದಲ್ಲಿ ದೀಪಿಕಾ ನಾಯಕಿಯಾಗಿ ಮಿಂಚುತ್ತಿದ್ದಾರೆ. ಈ ಮೂಲಕ ದೀಪಿಕಾ ಅನೇಕ ವರ್ಷಗಳ ಬಳಿಕ ಮತ್ತೆ ಸೌತ್ ಕಡೆ ಮುಖ ಮಾಡಿದ್ದರು. ಇದೀಗ ದೀಪಿಕಾ ಮತ್ತೊಂದು ಸೌತ್ ಸಿನಿಮಾಗೆ ಸಹಿ ಮಾಡಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಎಸ್ ಎಸ್ ರಾಜಮೌಳಿ ನಿರ್ದೇಶನದ ಹೊಸ ಸಿನಿಮಾಗೆ ದೀಪಿಕಾ ನಾಯಕಿ ಎನ್ನುವ ಮಾತು ಕೇಳಿಬರುತ್ತಿದೆ.

ಖ್ಯಾತ ನಿರ್ದೇಶಕ ರಾಜಮೌಳಿ ಜೊತೆ ನಟಿಸಲು ಅನೇಕ ಸ್ಟಾರ್ ಕಲಾವಿದರು ತುದಿಗಾಲಿನಲ್ಲಿ ನಿಂತಿದ್ದಾರೆ. ಆದರೆ ರಾಜಮೌಳಿ ಪಾತ್ರಕ್ಕೆ ಯಾರು ಹೊಂದಿಕೆಯಾಗ್ತಾರೆ ಎಂದು ಅಳೆದು ತೂಗಿ ಕಲಾವಿದರನ್ನು ಆಯ್ಕೆ ಮಾಡುತ್ತಾರೆ. ಇದೀಗ ಜಕ್ಕಣ್ಣ ಜೊತೆ ನಟಿಸುವ ಅವಕಾಶ ದೀಪಿಕಾ ಪಾಲಾಗಿದೆ ಎನ್ನಲಾಗಿದೆ. ಆರ್ ಆರ್ ಆರ್ ಸಿನಿಮಾಗೆ ಬಾಲಿವುಡ್ ಸ್ಟಾರ್ ಅಲಿಯಾ ಭಟ್ ಅವರನ್ನು ಕರೆತಂದಿದ್ದರು. ಇದೀಗ ದೀಪಿಕಾ ಹೆಸರು ಕೇಳಿಬರುತ್ತಿದೆ. ರಾಜಮೌಳಿ ಅವರ ಹೊಸ ಸಿನಿಮಾಗೆ ಇನ್ನು ಟೈಟಲ್ ಇಟ್ಟಿಲ್ಲ ಚಿತ್ರದ ಬಗ್ಗೆ ಯಾವುದೇ ಮಾಹಿತಿ ರಿವೀಲ್ ಮಾಡಿಲ್ಲ ಆದರೀಗ ನಾಯಕಿ ಸ್ಥಾನಕ್ಕೆ ಕರ್ನಾಟಕ ಸುಂದರಿಯ ಹೆಸರು ಕೇಳಿಬರುತ್ತಿದೆ. 

ಹಾಲಿವುಡ್‌ ಮಾರ್ಕೆಟ್ ಮೇಲೆ ಕಣ್ಣಿಟ್ಟ ರಾಜಮೌಳಿ; ಮಹೇಶ್ ಬಾಬು ಚಿತ್ರಕ್ಕೆ 'ಆವೆಂಜರ್' ಸ್ಟಾರ್ ಕರೆತಂದ ನಿರ್ದೇಶಕ

ಅಂದಹಾಗೆ ಮಹೇಶ್ ಬಾಬುಗೆ ಆಕ್ಷನ್ ಕಟ್ ಹೇಳುತ್ತಿರುವ ರಾಜಮೌಳಿ ಅವರ ಹೊಸ ಸಿನಿಮಾ ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿದೆ. ಪ್ಯಾನ್ ಇಂಡಿಯಾ ಮಾತ್ರ ವಲ್ಲದೇ ಪ್ಯಾನ್ ವರ್ಲ್ಡ್‌ ಮೇಲೆ ಕಣ್ಣಿಟ್ಟಿದ್ದಾರೆ ಜಕ್ಕಣ್ಣ. ಹಾಗಾಗಿ ದೀಪಿಕಾ ಅವರನ್ನು ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ. ಈಗಾಗಲೇ ದೀಪಿಕಾ ಜೊತೆ ಮಾತುಕತೆ ನಡೆಸಿದ್ದು ದೀಪಿಕಾ ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರಂತೆ. ಹೊಸ ಸಿನಿಮಾದ ಬಗ್ಗೆ ರಾಜಮೌಳಿ ಕಡೆಯಿಂದ ಇನ್ನು ಅಧಿಕೃತ ಘೋಷಣೆಯಾಗಿಲ್ಲ. ಹಾಗಾಗಿ ಅಭಿಮಾನಿಗಳು ಮಹೇಶ್ ಬಾಬು ಜೊತೆಗಿನ ಸಿನಿಮಾದ ಅಪ್ ಡೇಟ್‌ಗಾಗಿ ಕಾತರದಿಂದ ಕಾಯುತ್ತಿದ್ದಾರೆ. 

ದಾಂಪತ್ಯದಲ್ಲಿ ಬಿರುಕು; ವದಂತಿಗೆ ಬ್ರೇಕ್ ಹಾಕಿದ ನಟ ರಣ್ವೀರ್ ಸಿಂಗ್ 'ಕ್ವೀನ್' ಹೇಳಿಕೆ

ರಾಜಮೌಳಿ ಸದ್ಯ ಆರ್ ಆರ್ ಆರ್ ಸಿನಿಮಾದ ಪ್ರಮೋಷನ್ ನಲ್ಲಿ ಬ್ಯುಸಿಯಾಗಿದ್ದಾರೆ. ಆರ್ ಆರ್ ಆರ್ ಅನೇಕ ದೇಶಗಳಲ್ಲಿ ರಿಲೀಸ್ ಆಗಿದ್ದು ಪ್ರಮೋಷನ್ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಸಿನಿಮಾತಂಡ ಜಪಾನ್‌ನಲ್ಲಿ ಪ್ರಮೋಷನ್ ಮಾಡುತ್ತಿದೆ. ಆರ್ ಆರ್ ಆರ್ ಸಿನಿಮಾದ ಪ್ರಚಾರ ಕಾರ್ಯ ಮುಗಿದ ಬಳಿಕ ರಾಜಮೌಳಿ ಹೊಸ ಸಿನಿಮಾದ ಅಪ್ ಡೇಟ್ ನೀಡುವ ಸಾಧ್ಯತೆ ಇದೆ. ಇತ್ತ ದೀಪಿಕಾನ ನಾಗ್ ಅಶ್ವಿನ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದಲ್ಲಿ ಅಮಿತಾಭ್ ಬಚ್ಚನ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಶೂಟಿಂಗ್ ಆರಂಭವಾಗಿದ್ದು ಸದ್ಯದಲ್ಲೇ ಟೈಟಲ್ ರಿವೀಲ್ ಆಗುವ ಸಾಧ್ಯತೆ ಇದೆ. 
  

Latest Videos
Follow Us:
Download App:
  • android
  • ios