Asianet Suvarna News Asianet Suvarna News

ಸುಶಾಂತ್ ಸಿಂಗ್ ಸಾವಿಗೆ 'ಮಹಾ' ಟ್ವಿಸ್ಟ್​: ಮಹತ್ವದ ಸುಳಿವು ಸಿಕ್ಕಿದೆಯೆಂದ ಡಿಸಿಎಂ

ಮೂರು ವರ್ಷಗಳ ಹಿಂದೆ ಸಾವಿಗೀಡಾದ ನಟ ಸುಶಾಂತ್​ ಸಿಂಗ್​ ರಜಪೂತ್​ ಅವರ ಸಾವಿನ ಮಹತ್ವದ ಸಾಕ್ಷ್ಯ ಸಿಕ್ಕಿರುವುದಾಗಿ ಮಹಾರಾಷ್ಟ್ರ ಡಿಸಿಎಂ ಹೇಳಿದ್ದಾರೆ. 
 

Devendra Fadnavis reveals primary evidence is gathered to Sushant Singh death suc
Author
First Published Jun 29, 2023, 5:37 PM IST

ಬಾಲಿವುಡ್  ನಟ ಸುಶಾಂತ್ ಸಿಂಗ್ ರಜಪೂತ್ (Sushant Singh Rajput) ಅವರು ಎಲ್ಲರನ್ನೂ ಅಗಲಿ ಮೂರು ವರ್ಷಗಳೇ ಕಳೆದವು. ಇವರದ್ದು ಸಹಜ ಸಾವಲ್ಲ, ಕೊಲೆ ಎಂದು ಹೇಳುತ್ತಿರುವವರೇ ಬಹುತೇಕ ಮಂದಿ. ಆದರೆ ಅವರ ಸಾವಿನ ರಹಸ್ಯ ಮಾತ್ರ ಇನ್ನೂ ನಿಗೂಢವಾಗಿಯೇ ಉಳಿದಿದೆ.   2020 ಜೂನ್ 14ರಂದು ನಿಧನರಾದ  ಸುಶಾಂತ್ ಸಿಂಗ್ ರಜಪೂತ್  ಅವರ ಸಾವಿನ  ಪ್ರಕರಣ ಸದ್ಯ ಸಿಬಿಐ ಅಂಗಳದಲ್ಲಿದೆ. ಆದರೆ ಇನ್ನೂ ಕಾರಣ ಬಹಿರಂಗವಾಗಿಲ್ಲ. ತನಿಖೆಯ ಪ್ರಗತಿಯ ಬಗ್ಗೆಯೂ ಸಿಬಿಐ ತುಟಿ ಬಿಚ್ಚುತ್ತಿಲ್ಲ.  ಆದರೆ ಸುಶಾಂತ್ ಸಾವು ತೀವ್ರ ಚರ್ಚೆ ಹುಟ್ಟುಹಾಕುತ್ತಲೇ ಇದೆ. ಈ ಸಾವು ಕೆಲವು ಬಾಲಿವುಡ್ ಸ್ಟಾರ್ಸ್​ಗೆ ಸಂಕಷ್ಟ ತಂದಿತ್ತು  ಎನ್ನುವಷ್ಟರಲ್ಲಿ ಪ್ರಕರಣ ತನಿಖೆಯ ಪ್ರಗತಿ ನಿಧಾವಾಯಿತು ಎಂದು ಆರೋಪಿಸಲಾಗುತ್ತಿದೆ. ನಟನ  ಸಾವಿನ ಸುತ್ತ ಅನುಮಾನದ ಹುತ್ತ ಬೆಳೆಯುತ್ತಲೇ ಸಾಗಿದೆ.  ಸುಶಾಂತ್ ಸಿಂಗ್ ರಜಪೂತ್ ಅವರದ್ದು ಕೊಲೆ ಎಂದು ಅವರ ಮರಣೋತ್ತರ ಪರೀಕ್ಷೆ ಮಾಡಿದ್ದ ಕೂಪರ್​ ಆಸ್ಪತ್ರೆ ಸಿಬ್ಬಂದಿ ಸ್ಫೋಟಕ ಹೇಳಿಕೆ ನೀಡಿದ್ದರು. ಈ ಆಯಾಮದಲ್ಲೂ ಸಹ ಈಗಾಗಲೇ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಆದರೆ ಇದೀಗ ಮೂರು ವರ್ಷಗಳ ಬಳಿಕ ಈ ಸಾವಿಗೆ ಟ್ವಿಸ್ಟ್​ ಸಿಕ್ಕಿದೆ.  ನಟನ  ಸಾವಿನ  ಮೂರು ವರ್ಷಗಳ ಬಳಿಕ ಪ್ರಕರಣದಲ್ಲಿ ಪ್ರಮುಖ ಸಾಕ್ಷ್ಯಗಳು ಪತ್ತೆಯಾಗಿವೆ ಎಂದಿದ್ದಾರೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಂಡ್ನವೀಸ್​.  ತನಿಖೆಯನ್ನು ಮುಂಬೈ ಪೊಲೀಸರು (Mumbai Police) ಹಾಗೂ ಸಿಬಿಐ ತನಿಖೆ ನಡೆಸುತ್ತಲೇ ಇರುವ ನಡುವೆಯೇ ಈಗ ಡಿಸಿಎಂ ಮಹತ್ವದ ಸುಳುವು ನೀಡಿದ್ದಾರೆ. ಮಾಧ್ಯಮವೊಂದರ ಸಂದರ್ಶನದಲ್ಲಿ ದೇವೇಂದ್ರ ಫಡ್ನವೀಸ್​ ಅವರು ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.  ದಿಶಾ ಸಾಲಿಯಾನ್ ಹಾಗೂ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಮಹತ್ವದ ಸಾಕ್ಷ್ಯಗಳು ಲಭ್ಯವಾಗಿವೆ. ಆದರೆ ಆ ಸಾಕ್ಷ್ಯಗಳು ನಿಖರವೇ, ನಂಬಲರ್ಹವೇ, ಸತ್ಯವಾದುವೇ ಎಂಬ ಪರಿಶೀಲನೆ ನಡೆಯುತ್ತಿವೆ. ಕೆಲವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ, ಕೆಲವರ ಹೇಳಿಕೆ ದಾಖಲಿಸಿಕೊಳ್ಳುವುದು ಹಾಗೂ ಸಾಕ್ಷ್ಯಗಳ ಪರಿಶೀಲನೆ ಬಾಕಿ ಇದೆ ಎಂದಿದ್ದಾರೆ. ಇದರಿಂದ ಪ್ರಕರಣದ ತನಿಖೆಗೆ ತಿರುವು ಸಿಗುವ ಸಾಧ್ಯತೆ ಇದೆ.  ಪ್ರಕರಣ ಕುರಿತು ಸಾಕಷ್ಟು ಪುರಾವೆಗಳು ಸರ್ಕಾರದ ಬಳಿ ಇವೆ. ಕೆಲವು ಸಾಕ್ಷಗಳನ್ನು ಪೊಲೀಸರಿಗೂ ನೀಡುವಂತೆ ತಿಳಿಸಲಾಗಿದೆ. ಈ ಕುರಿತು ಕೆಲವರಿಂದ ಮಾಹಿತಿ ಸಹ ಅಧಿಕಾರಿಗಳು ಸಂಗ್ರಹಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ. 

 ಸುಶಾಂತ್ ಸಿಂಗ್ ನಿಧನದ ನಂತರ ಹೆಚ್ಚಾಯ್ತಾ ಬಾಲಿವುಡ್​ನಲ್ಲಿ ಬೈಕಾಟ್​ ಟ್ರೆಂಡ್?

ಸುಶಾಂತ್ ಸಿಂಗ್ ಹಾಗೂ ದಿಶಾ ಸಾಲಿಯಾನ್ ಪ್ರಕರಣದ ತನಿಖೆಯಲ್ಲಿ ಅಂತಿಮ ವರದಿ ಇನ್ನೂ ಸಲ್ಲಿಸಿಲ್ಲ, ಈಗಲೂ ತನಿಖೆ ಚಾಲ್ತಿಯಲ್ಲಿದೆ.  ಈ ಪ್ರಕರಣಗಳ ಬಗ್ಗೆ ಮಹತ್ವದ ಹೇಳಿಕೆಯನ್ನು ನೀಡುವ ಸಮಯ ಹತ್ತಿರ ಬಂದಿದೆ, ಮಾತನಾಡುವ ಸಮಯದಲ್ಲಿ ನಾನು ಆ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ. ಈ ಮೂಲಕ ಈ ಸಾವಿನ ಹಿಂದೆ ದೊಡ್ಡ ಕಾರಣವೇ ಇದೆ ಎಂಬುದನ್ನು ಅವರು ಸೂಚ್ಯವಾಗಿ ತಿಳಿಸಿದ್ದಾರೆ.
 
ಸುಶಾಂತ್ ಸಿಂಗ್ ಮತ್ತು ರಿಯಾ ಚಕ್ರವತಿ ಪ್ರೀತಿಸುತ್ತಿದ್ದರು ಎನ್ನಲಾಗಿತ್ತು. ಸುಶಾಂತ್ ಸಾವಿನ ಬಳಿಕ ರಿಯಾ ಚಕ್ರವರ್ತಿ ಅವರು ಸಾವಿನ ಕುರಿತ ಮಾದಕವಸ್ತು ಆರೋಪದಲ್ಲಿ ಸುಮಾರು ಒಂದು ತಿಂಗಳು ಸೆರೆವಾಸ ಅನುಭವಿಸಿದರು. ಪ್ರಕರಣ ಸಂಬಂಧ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು. ಅವರನ್ನು ಹೊರತುಪಡಿಸಿದರೆ,  ಕರಣ್ ಜೋಹರ್, ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್, ಶ್ರದ್ಧಾ ಕಪೂರ್, ಅರ್ಜುನ್ ರಾಮ್​ಪಾಲ್, ಮಹೇಶ್ ಭಟ್, ರಕುಲ್ ಪ್ರೀತ್ ಸಿಂಗ್ ಇನ್ನು ಹಲವು ಖ್ಯಾತನಾಮರಿಗೆ ನೊಟೀಸ್ ನೀಡಿ ವಿಚಾರಣೆ ನಡೆಸಲಾಯ್ತು. ಆದರೆ ಈ ವರೆಗೆ ಸುಶಾಂತ್ ಸಿಂಗ್ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

Rhea Chakraborty: ವೇಶ್ಯೆ ಎಂದವರಿಗೆ ನಟಿ ತಿರುಗೇಟು- ಮುಂದಿನ ಬೇಟೆ ಯಾರು ಎಂದ ಟ್ರೋಲಿಗರು!

Follow Us:
Download App:
  • android
  • ios