Asianet Suvarna News Asianet Suvarna News

ವಿಚ್ಛೇದನದಿಂದ ಹಿಂದೆ ಸರಿದ ಧನುಷ್-ಐಶ್ವರ್ಯಾ ರಜನಿಕಾಂತ್? ದಾಂಪತ್ಯ ಮುಂದುವರೆಸಲು ನಿರ್ಧಾರ

 ಧನುಷ್ ಮತ್ತು ಐಶ್ವರ್ಯಾ ಜೋಡಿ ವಿಚ್ಛೇದನದಿಂದ ಹಿಂದೆ ಸರಿಯುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಧನುಷ್ ಮತ್ತು ಐಶ್ವರ್ಯಾ ದಂಪತಿ ವಿಚ್ಛೇದನ ಕೈ ಬಿಟ್ಟು ದಾಂಪತ್ಯ ಮುಂದುವರೆಸಲು ನಿರ್ಧರಿಸಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ.

Dhanush and Aishwarya Rajinikanth decided to call off Divorce and To Save Their 18-Year-Old Marriage sgk
Author
First Published Oct 5, 2022, 2:46 PM IST

ದಕ್ಷಿಣ ಭಾರತದ ಖ್ಯಾತ ನಟ ಧನುಷ್ ಮತ್ತು ಪತ್ನಿ ಐಶ್ವರ್ಯಾ ಜೋಡಿ ಕಳೆದ 9 ತಿಂಗಳ ಹಿಂದೆ ವಿಚ್ಛೇದನ ವಿಚಾರಕ್ಕೆ ಸುದ್ದಿಯಾಗಿದ್ದರು. ತಮಿಳು ಸ್ಟಾರ್ ಜೋಡಿ ವಿಚ್ಛೇದನ ಘೋಷಿಸುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಸುಮಾರು 18 ವರ್ಷಗಳ ದಾಂಪತ್ಯ ಜೀವನ ಕಡಿದುಕೊಳ್ಳುವುದಾಗಿ ಧನುಷ್ ಮತ್ತು ಐಶ್ವರ್ಯಾ ದಂಪತಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದರು. ಜೊತೆಗೆ ತಮ್ಮ ಖಾಸಗಿತನಕ್ಕೆ ಗೌರವ ನೀಡಿ ಎಂದು ಕೇಳಿಕೊಂಡಿದ್ದರು. ಸ್ಟಾರ್ ಜೋಡಿಯ ವಿಚ್ಛೇದನದ ಸುದ್ದಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇಬ್ಬರೂ ದೂರ ದೂರ ಆಗಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿತ್ತು. ಆದರೀಗ 9 ತಿಂಗಳ ಬಳಿಕ ಧನುಷ್ ಮತ್ತು ಐಶ್ವರ್ಯಾ ಕಡೆಯಿಂದ ಸಿಹಿ ಸುದ್ದಿ ಸಿಕ್ಕಿದೆ. 

ತಮಿಳು ಸ್ಟಾರ್ ಧನುಷ್ ಮತ್ತು ಐಶ್ವರ್ಯಾ ಜೋಡಿ ವಿಚ್ಛೇದನದಿಂದ ಹಿಂದೆ ಸರಿಯುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಹೌದು ಧನುಷ್ ಮತ್ತು ಐಶ್ವರ್ಯಾ ದಂಪತಿ ವಿಚ್ಛೇದನ ಕೈ ಬಿಟ್ಟು ದಾಂಪತ್ಯ ಮುಂದುವರೆಸಲು ನಿರ್ಧರಿಸಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಇದು ಅವರ ಅಭಿಮಾನಿಗಳಿಗೆ ಮತ್ತು ಕುಟುಂಬಕ್ಕೆ ಸಂತಸ ತಂದಿದೆ. ಧನುಷ್ ಮತ್ತು ಐಶ್ವರ್ಯಾ ದಾಂಪತ್ಯದಲ್ಲಿ ಬಿರುಕು ಮೂಡಿದ ಬಳಿಕ ಇಬ್ಬರನ್ನು ಮತ್ತೆ ಒಂದು ಮಾಡಲು ರಜನಿಕಾಂತ್ ಮತ್ತು ಕುಟುಂಬದವರು ತುಂಬ ಪ್ರಯತ್ನ ಪಟ್ಟಿದ್ದಾರೆ ಎನ್ನಲಾಗಿದೆ. ರಜನಿಕಾಂತ್ ಅವರ ಮನೆಯಲ್ಲಿ ಸಂದಾನ ಸಭೆ ಮಾಡಲಾಗಿದ್ದು ಅಲ್ಲಿ ಧನುಷ್ ದಂಪತಿ ತಮ್ಮ ಸಮಸ್ಯೆ ಬಗೆಹರಿಸಿಕೊಂಡು ಒಟ್ಟಿಗೆ ಸಂಸಾರ ನಡೆಸಲು ಒಪ್ಪಿಕೊಂಡಿದ್ದಾರೆ ಎನ್ನುವ ಮಾತು ಕಳಿಬರುತ್ತಿದೆ. ಆದರೆ ಈ ಬಗ್ಗೆ ಧನುಷ್ ಅಥವಾ ಐಶ್ವರ್ಯ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ. 

ಮತ್ತೆ ಒಂದಾಗ್ತಾರಾ ಧನುಷ್- ಐಶ್ವರ್ಯಾ ಜೋಡಿ? ಫೋಟೋ ವೈರಲ್

ನಟ ಧನುಷ್ ಅವರ ತೀವ್ರ ಕೆಲಸದ ಒತ್ತಡದಿಂದ ಸಂಬಂಧದಲ್ಲಿ ಬಿರುಕು ಮೂಡಿದೆ ಎನ್ನಲಾಗಿದೆ. ಧನುಷ್ ವರ್ಕೋಹಾಲಿಕ್ ಆಗಿದ್ದು ಕೆಲಸಕ್ಕೆ ಹೆಚ್ಚು ಒತ್ತು ಕೊಡುತ್ತಾರೆ. ಇದರಿಂದ ಕುಟುಂಬದ ಕಡೆ ಹೆಚ್ಚು ಗಮನ ಹರಿಸಲು ಸಾಧ್ಯವಾಗುತ್ತಿರಲಿಲ್ಲ. ಹಾಗಾಗಿ ಐಶ್ವರ್ಯಾ ವಿಚ್ಛೇದನಕ್ಕೆ ಮುಂದಾಗಿದ್ದರು ಎನ್ನಲಾಗಿದೆ. ಇದೀಗ ಮತ್ತೆ ಒಂದಾಗಿ ಜೀವನ ನಡೆಸಲು ನಿರ್ಧಾರಿಸಿದ್ದಾರೆ ಎನ್ನುವ ಸುದ್ದಿ ಕೇಳಿ ಅಭಿಮಾನಿಗಳು ಫುಲ್ ಖುಶ್ ಆಗಿದ್ದಾರೆ. 

ಸೂಪರ್ ಸ್ಟಾರ್ ಧನುಷ್‌ ಅವರ 150 ಕೋಟಿ ಬೆಲೆಯ ಬಂಗಲೆ ಒಳಗೆ ಹೇಗಿದೆ ನೋಡಿ

ಧನುಷ್ ಮತ್ತು ಐಶ್ವರ್ಯಾ ಜೋಡಿ 2004ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈ ಜೋಡಿಗೆ ಯಾತ್ರ ಮತ್ತು ಲಿಂಗ ಎನ್ನುವ ಇಬ್ಬರು ಮಕ್ಕಳಿದ್ದಾರೆ. ಸುಮಾರು 18 ವರ್ಷಗಳ ಸಂಸಾರ ನಡೆಸಿದ ಈ ಜೋಡಿ ಈ ವರ್ಷದ ಪ್ರಾರಂಭದಲ್ಲಿ ವಿಚ್ಛೇದನ ಪಡೆಯುತಿರುವುದಾಗಿ ಅನೌನ್ಸ್ ಮಾಡಿ ಅಚ್ಚರಿ ಮೂಡಿಸಿದ್ದರು. ಇದೀಗ ಮತ್ತೆ ಒಂದಾಗಿದ್ದಾರೆ ಎನ್ನುವ ಸುದ್ದಿ ಅಭಿಮಾನಿಗಳಿಗೆ ಸಂತಸ ತಂದಿದ್ದು ನೆಚ್ಚಿನ ಜೋಡಿ ಖುಷಿಯಾಗಿ ಜೊತೆಯಲ್ಲಿ ಇರಲಿ ಎಂದು ಹಾರೈಸುತ್ತಿದ್ದಾರೆ. 

Follow Us:
Download App:
  • android
  • ios