ಮಂಗಳೂರು: ದಿಯಾ ಸಿನಿಮಾ ಖ್ಯಾತಿಯ ನಟ ಪೃಥ್ವಿ ಅಂಬಾರ್‌ ಅವರಿಗೆ ಮಾತೃ ವಿಯೋಗ ಉಂಟಾಗಿದೆ.

ಮಂಗಳೂರು: ದಿಯಾ ಸಿನಿಮಾ ಖ್ಯಾತಿಯ ನಟ ಪೃಥ್ವಿ ಅಂಬಾರ್‌ ಅವರಿಗೆ ಮಾತೃ ವಿಯೋಗ ಉಂಟಾಗಿದೆ. ಅವರ ತಾಯಿ ಸುಜಾತ ವೀರಪ್ಪ ಅಂಬಾರ್ ಅವರು ಅಲ್ಪಕಾಲ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸುಜಾತ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ನೇತಾರರಾದ ಶ್ರೀ ವೀರಪ್ಪ ಅಂಬಾರ್ ಅವರ ಧರ್ಮಪತ್ನಿಯಾಗಿದ್ದು, ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದರು. ಇವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ. ದುರ್ಗಾಪರಮೇಶ್ವರಿ ಮಹಿಳಾ ಸಂಘದ ಕಾರ್ಯದರ್ಶಿಯಾಗಿದ್ದ ಸುಜಾತ ಅವರು ಹಲವು ರೀತಿಯ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಇನ್ನು ಇವರ ಪುತ್ರ ಪೃಥ್ವಿ ಅಂಬಾರ್‌ ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿದ್ದು, ದಿಯಾ ಸಿನಿಮಾ ಮೂಲಕ ಸಾಕಷ್ಟು ಹೆಸರು ಮಾಡಿದ್ದಾರೆ.