ಸಲ್ಮಾನ್ ಖಾನ್‌ಗೆ ಮತ್ತೆ ಜೀವ ಬೆದರಿಕೆ; ಕೊಂದೇ ತೀರುತ್ತೇನೆ ಎಂದ ಗ್ಯಾಂಗ್‌ಸ್ಟರ್

ಸಲ್ಮಾನ್ ಖಾನ್ ಅವರನ್ನು ಕೊಂದೇ ತೀರುತ್ತೇನೆ ಎಂದು ಗ್ಯಾಂಗ್‌ಸ್ಟಾರ್ ಲಾರೆನ್ಸ್ ಬಿಷ್ಣೋಯ್  ಮತ್ತೆ ಬೆದರಿಕೆ ಹಾಕಿದ್ದಾನೆ.

Gangster Lawrence Bishnoi again threatens to kill Salman Khan sgk

ಸಲ್ಮಾನ್ ಖಾನ್ ಅವರನ್ನು ಕೊಂದೇ ತೀರುತ್ತೀನಿ ಎಂದು ಮತ್ತೊಮ್ಮೆ ಜೀವ ಬೆದರಿಕೆ ಬಂದಿದೆ. ಸಲ್ಲುನ ಕೊಲ್ಲಲು ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಈ ಮೊದಲೇ ಸ್ಕೆಚ್ ಹಾಕಿದ್ದ. ಈಗ ಸಲ್ಲುನ ಕೊಂದೇ ತೀರುವುದಾಗಿ ಮತ್ತೊಮ್ಮೆ ಹೇಳಿದ್ದಾನೆ. ಈ ಹೇಳಿಕೆ ಸಲ್ಮಾನ್ ಖಾನ್ ಹಾಗೂ ಅವರ ಅಭಿಮಾನಿಗಳಲ್ಲಿ ಆತಂಕ ಶುರುವಾಗಿದೆ. 2022ರ ಮೇ 29 ರಂದು ಪಂಜಾಬ್‌ನ ಮಾನ್ಸಾ ಬಳಿ ಗಾಯಕ ಸಿಧು ಮೂಸ್ ವಾಲಾ ಅವರನ್ನು ಗುಂಡಿಕ್ಕಿ ಕೊಂದ ಕೆಲವೇ ದಿನಗಳ ನಂತರ ಜೂನ್ ಆರಂಭದಲ್ಲಿ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೆ ಈ ಬೆದರಿಕೆ ಕರೆ ಬಂದಿದ್ದು. ಸಲ್ಮಾನ್​ ಖಾನ್​ ಜೀವ ಬೆದರಿಕೆ ಹಿನ್ನೆಲೆಯಲ್ಲಿ  ಹೊಸದಾಗಿ ಬುಲೆಟ್ ಫ್ರೂಪ್ ಕಾರ್ ಅನ್ನು ಖರೀದಿಸಿದ್ದರು.  ಬಾಡಿಗಾರ್ಡ್‌ಗಳ ಸಂಖ್ಯೆಯನ್ನೂ ಹೆಚ್ಚಿಸಿಕೊಂಡಿದ್ದರು. ಬೆದರಿಕೆ ಹಿನ್ನೆಲೆಯಲ್ಲಿ ಅನಗತ್ಯವಾಗಿ ವಿವಿಧ ಕಾರ್ಯಕ್ರಮಗಳಲ್ಲೂ ಭಾಗಿಯಾಗಿರಲಿಲ್ಲ.  ಟೈಗರ್ 3 ಚಿತ್ರೀಕರಣಕ್ಕೂ  ಅವರು ಬುಲೆಟ್ ಫ್ರೂಪ್ ಕಾರ್ ಅನ್ನು ತೆಗೆದುಕೊಂಡೇ ಹೋಗುತ್ತಿದ್ದರು.  

‘ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಅವರು ಬಿಕಾನೇರ್‌ನಲ್ಲಿರುವ ನಮ್ಮ ದೇವಸ್ಥಾನಕ್ಕೆ ಹೋಗಿಯೇ ತಪ್ಪಾಯಿತು ಎಂದು ಹೇಳಬೇಕು. ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ನನ್ನ ಜೀವನದ ಗುರಿ. ಸಲ್ಮಾನ್ ಖಾನ್ ಅವರ ಭದ್ರತೆಯನ್ನು ತೆಗೆದುಹಾಕಿದರೆ ನಾನು ಅವರನ್ನು ಕೊಲ್ಲುತ್ತೇನೆ’ ಎಂದು ಬಿಷ್ಣೋಯ್ ಎಬಿಪಿ ನ್ಯೂಸ್​ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾನೆ.

‘ಸಲ್ಮಾನ್ ಖಾನ್ ಕ್ಷಮೆಯಾಚಿಸಿದರೆ ಅಲ್ಲಿಗೆ ವಿಷಯ ಕೊನೆಗೊಳ್ಳುತ್ತದೆ. ಸಲ್ಮಾನ್ ಅಹಂಕಾರಿ. ಮೂಸೆ ವಾಲಾ ಕೂಡ ಹಾಗೇ ಇದ್ದ. ಸಲ್ಮಾನ್ ಖಾನ್‌ನ ಅಹಂ ರಾವಣನಿಗಿಂತ ದೊಡ್ಡದಾಗಿದೆ’ ಎಂದು ಲಾರೆನ್ಸ್ ಹೇಳಿದ್ದಾರೆ.  

ನನ್ನ ಮದುವೆ ಪ್ರಸ್ತಾಪ ರಿಜೆಕ್ಟ್ ಮಾಡಿದ್ರು ಜೂಹಿ ಚಾವ್ಲಾ ತಂದೆ; ಶಾಕಿಂಗ್ ವಿಚಾರ ಬಿಚ್ಚಿಟ್ಟ ಸಲ್ಮಾನ್ ಖಾನ್

1998ರಲ್ಲಿ ಹಮ್ ಸಾಥ್ ಸಾಥ್ ಹೇ ಚಿತ್ರದ ಶೂಟಿಂಗ್​ಗಾಗಿ  ರಾಜಸ್ಥಾನದ ಜೋಧ್‌ಪುರಕ್ಕೆ ಹೋಗಿದ್ದರು. ಸಫಾರಿಗೆ ಹೋದಾಗ ಒಂದು ಕೃಷ್ಣ ಮೃಗವನ್ನು ಬೇಟೆಯಾಡಿದ್ದರು. ಬಿಷ್ಣೋಯ್ ಸಮುದಾಯದವರು ಪ್ರಕೃತಿ ಆರಾಧಕರು. ವನ್ಯಜೀವಿ ಸಂರಕ್ಷಣೆಗಾಗಿ ಅವರು ಪ್ರಾಣವನ್ನು ಬೇಕಾದರೂ ನೀಡುತ್ತಾರೆ. ಜೋಧಪುರ್​ ಬಿಷ್ಣೋಯ್​ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರನ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಕೃಷ್ಣಮೃಗ ಕೊಲ್ಲುವುದನ್ನು ಬಿಷ್ಣೋಯ್​ಗಳು ಎಂದಿಗೂ ಸಹಿಸುವುದಿಲ್ಲ. ಹಾಗಾಗಿ ಸಲ್ಮಾನ್ ಖಾನ್ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದು ಸಲ್ಮಾನ್ ಹತ್ಯೆ ಮಾಡಿಯೇ ತೀರುತ್ತೇನೆ ಎಂದು ಬಹಿರಂಗವಾಗಿ ಹೇಳಿಕೊಳ್ಳುತ್ತಿದ್ದಾನೆ. 

ಒಂದೇ ಹುಡುಗಿ ಬೋರ್, ಕಂಟ್ರೋಲ್‌ಗೆ ಬರುವವರೆಗೂ ಮದ್ವೆ ಆಗಲ್ಲ: ಸಲ್ಲು ಹೇಳಿದ್ದ ಮಾತನ್ನ ರಿವೀಲ್ ಮಾಡಿದ ಭಾಗ್ಯಶ್ರೀ

ಸಲ್ಮಾನ್ ಖಾನ್ ಸದ್ಯ ಸಿನಿಮಾ ಶೂಟಿಂಗ್‌ಗಳಲ್ಲಿ ಬ್ಯುಸಿಯಾಗಿದ್ದಾರೆ. ‘ಕಿಸಿ ಕಾ ಭಾಯ್​ ಕಿಸಿ ಕಿ ಜಾನ್’ ಚಿತ್ರದ ಶೂಟಿಂಗ್ ಮುಗಿಸಿದ್ದು ರಿಲೀಸ್​ಗೆ ರೆಡಿ ಇದೆ. ಇತ್ತೀಚಿಗಷ್ಟೆ ಈ ಸಿನಿಮಾದ ಹಾಡು ರಿಲೀಸ್ ಆಗಿದ್ದು ಸಿಕ್ಕಾಪಟ್ಟೆ ಟ್ರೋಲ್ ಆಗಿತ್ತು. ಈ ಸಿನಿಮಾ ಜೊತೆಗ ಟೈಗರ್ -3 ಸಿನಿಮಾದ ಚಿತ್ರೀಕರಣ ಸಹ ಮುಗಿಸಿದ್ದಾರೆ. ಟೈಗರ್ 3 ಕೂಡ ರಿಲೀಸ್‌ಗೆ ಸಿದ್ಧವಾಗಿದೆ. ಈ ಎರಡು ಸಿನಿಮಾಗಳು ಈ ವರ್ಷವೇ ತೆರೆಗೆ ಬರುತ್ತಿದೆ.  

Latest Videos
Follow Us:
Download App:
  • android
  • ios