Asianet Suvarna News Asianet Suvarna News

ಟೈಗರ್ ಶ್ರಾಫ್ ಜೊತೆಗಿನ ವಿಡಿಯೋ ಶೇರ್ ಮಾಡಿ ಗಾಸಿಪ್ ನಿಜವೆಂದ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಮತ್ತು ಟೈಗರ್ ಇಬ್ಬರೂ ಸಿನಿಮಾ ಮಾಡುತ್ತಿದ್ದಾರೆ, ಇಬ್ಬರನ್ನು ಒಟ್ಟಿಗೆ ಕಣ್ತುಂಬಿಕೊಳ್ಳಬಹುದು ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಆದರೀಗ ರಶ್ಮಿಕಾ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ಅಂದಹಾಗೆ ಕಿರಿಕ್ ಪಾರ್ಟಿ ನಟಿ ಟೈಗರ್ ಶ್ರಾಫ್ ಜೊತೆ ನಟಿಸಿದ್ದೇನೊ ನಿಜ ಆದರೆ ಸಿನಿಮಾದಲ್ಲಿ ಅಲ್ಲ, ಬದಲಿಗೆ ಇಬ್ಬರು ಒಂದು ಜಾಹೀರಾತಿಗಾಗಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.

gossip is true Rashmika Mandanna and Tiger Shroff join hands for a project sgk
Author
Bengaluru, First Published Jul 12, 2022, 11:23 AM IST

ನಟಿ ರಶ್ಮಿಕಾ ಮಂದಣ್ಣ ತೆಲುಗು, ತಮಿಳು ಬಳಿಕ ಬಾಲಿವುಡ್‌ ನಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗುತ್ತಿದ್ದಾರೆ. ಹಿಂದಿಯಲ್ಲಿ ರಶ್ಮಿಕಾ ಮಂದಣ್ಣ ಮೊದಲ ಸಿನಿಮಾ ರಿಲೀಸ್ ಆಗುವ ಮೊದಲೇ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಿಗೆ ಸಹಿ ಹಾಕಿದ್ದಾರೆ. ಈಗಾಗಲೇ ರಶ್ಮಿಕಾ ಹಿಂದಿಯಲ್ಲಿ ಅಧಿಕೃತವಾಗಿ ಮೂರು ಸಿನಿಮಾಗಳನ್ನು ಘೋಷಣೆ ಮಾಡಿದ್ದಾರೆ. ಎರಡು ಸಿನಿಮಾಗಳ ಚಿತ್ರೀಕರಣ ಮುಗಿಸಿ  ಇದೀಗ ಮೂರನೇ ಹಿಂದಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ರಶ್ಮಿಕಾ ಮತ್ತೊಂದು ಸಿನಿಮಾಗೆ ಸಹಿ ಮಾಡಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಬಾಲಿವುಡ್ ನಟ ಟೈಗರ್ ಶ್ರಾಫ್ ಜೊತೆ ರಶ್ಮಿಕಾ ನಟಿಸುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಟೈಗರ್ ಶ್ರಾಫ್ ಮುಂದಿನ ಸಿನಿಮಾದಲ್ಲಿ ರಶ್ಮಿಕಾ ನಾಯಕಿ ಎನ್ನುವ ಸುದ್ದಿ ಬಾಲಿವುಡ್‌ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಇದೀಗ ರಶ್ಮಿಕಾ ಈ ಬಗ್ಗೆ ಪ್ರತಿಕ್ರಿಯೆ ನೀಡುವ ಮೂಲಕ ತನ್ನ ಮತ್ತು ಟೈಗರ್ ಶ್ರಾಫ್ ಬಗ್ಗೆ ಹರಿದಾಡುತ್ತಿದ್ದ ಗಾಸಿಪ್ ನಿಜವೆಂದು ಒಪ್ಪಿಕೊಂಡಿದ್ದಾರೆ. 

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ಟೈಗರ್ ಶ್ರಾಫ್ (Tiger Shroff) ಇಬ್ಬರೂ ಸಿನಿಮಾ ಮಾಡುತ್ತಿದ್ದಾರೆ, ಇಬ್ಬರನ್ನು ಒಟ್ಟಿಗೆ ಕಣ್ತುಂಬಿಕೊಳ್ಳಬಹುದು ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಆದರೀಗ ರಶ್ಮಿಕಾ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ಅಂದಹಾಗೆ ಕಿರಿಕ್ ಪಾರ್ಟಿ ನಟಿ ಟೈಗರ್ ಶ್ರಾಫ್ ಜೊತೆ ನಟಿಸಿದ್ದೇನೊ ನಿಜ ಆದರೆ ಸಿನಿಮಾದಲ್ಲಿ ಅಲ್ಲ, ಬದಲಿಗೆ ಇಬ್ಬರು ಒಂದು ಜಾಹೀರಾತಿಗಾಗಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಈ ಬಗ್ಗೆ ಸ್ವತಃ ರಶ್ಮಿಕಾ ಬಹಿರಂಗ ಪಡಿಸಿದ್ದಾರೆ. ಟೈಗರ್ ಶ್ರಾಫ್ ಜೊತೆಗಿನ ವಿಡಿಯೋ ಶೇರ್ ಮಾಡಿರುವ ರಶ್ಮಿಕಾ ಗಾಸಿಪ್ ನಿಜವೆಂದು ಹೇಳಿದ್ದಾರೆ. 'ನನ್ನ ಮತ್ತು ಟೈಗರ್ ಶ್ರಾಫ್ ಬಗ್ಗೆ ಕೇಳಿಬರುತ್ತಿದ್ದ ಗಾಸಿಪ್ ನಿಜ. ನಾನು ಮತ್ತು ಟೈಗರ್ ಶ್ರಾಫ್ ಇಬ್ಬರು ಜಾಹೀರಾತಿನಲ್ಲಿ ಒಟ್ಟಿಗೆ ನಟಿಸಿದ್ದೇವೆ. ಅದ್ಭುತವಾದ ಅನುಭವ' ಎಂದು ಇನ್ಸ್ಟಾಗ್ರಾಮ್ ನಲ್ಲಿ ಬರೆದುರಕೊಂಡಿದ್ದಾರೆ.  

ಟೈಗರ್ ಶ್ರಾಫ್ ಜೊತೆ ರಶ್ಮಿಕಾ ಮಂದಣ್ಣ ರೊಮ್ಯಾನ್ಸ್

ಅಂದಹಾಗೆ ಟೈಗರ್ ಶ್ರಾಫ್ ಮುಂದಿನ ಸಿನಿಮಾದಲ್ಲಿ ರಶ್ಮಿಕಾ ನಾಯಕಿಯಾಗಿ ನಟಿಸುತ್ತಿದ್ದಾರೆ ಎನ್ನುವ ಮಾತು ಕೇಳಿಬಂದಿತ್ತು. ನಿರ್ದೇಶಕ ಶಶಾಂಕ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಹೊಸ ಸಿನಿಮಾದಲ್ಲಿ ಟೈಗರ್ ಶ್ರಾಫ್‌  ಜೊತೆ ಫ್ರೆಶ್ ಜೋಡಿ ಹುಡುಕುತ್ತಿದ್ದ ನಿರ್ದೇಶಕರಿಗೆ ರಶ್ಮಿಕಾ ಸರಿಯಾದ ಆಯ್ಕೆ ಎಂದು ನಿರ್ಧರಿಸಿ ರಶ್ಮಿಕಾರನ್ನೇ ಸೆಲೆಕ್ಟ್ ಮಾಡಿದ್ದರು ಎನ್ನುವ ಸುದ್ದಿ ಜೋರಾಗಿ ಸದ್ದು ಮಾಡಿತ್ತು. 

ಹಣ ಕೊಟ್ಟು ಕರ್ನಾಟಕ ಕ್ರಶ್ ಆದ್ರಾ ರಶ್ಮಿಕಾ ? ಶುರುವಾಯ್ತು ಕಿರಿಕ್ ಹುಡುಗಿಯರ ಕಿತ್ತಾಟ!

ಇನ್ನು ರಶ್ಮಿಕಾ ಸಿನಿಮಾ ವಿಚಾರಗಳ ಬಗ್ಗೆ ಹೇಳುವುದಾದರೆ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಹಿಂದಿಯಲ್ಲಿ ರಶ್ಮಿಕಾ ನಟನೆಯ ಮಿಷನ್ ಮಜ್ನು, ಗುಡ್ ಬೈ ಸಿನಿಮಾದ ಚಿತ್ರೀಕರಣ ಮುಗಿಸಿದ್ದು ರಿಲೀಸ್‌ಗೆ ಎದುರು ನೋಡುತ್ತಿದ್ದಾರೆ. ಮಿಷನ್ ಮಜ್ನು ಸಿನಿಮಾದಲ್ಲಿ ಸಿದ್ಧಾರ್ದ್ ಮಲ್ಹೋತ್ರ ನಾಯಕನಾಗಿ ನಟಿಸಿದ್ದಾರೆ. ಇನ್ನು ಗುಡ್ ಬೈ ಸಿನಿಮಾದಲ್ಲಿ ಅಮಿತಾಬ್ ಬಚ್ಚನ್ ಜೊತೆ ನಟಿಸಿದ್ದಾರೆ. ಸದ್ಯ ರಶ್ಮಿಕಾ ಹಿಂದಿಯಲ್ಲಿ ರಣಬೀರ್ ಕಪೂರ್ ಜೊತೆ ಅನಿಮಲ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಜೊತೆಗೆ ತಮಿಳಿನಲ್ಲಿ ದಳಪತಿ ವಿಜಯ್ ಜೊತೆ ನಟಿಸುತ್ತಿದ್ದಾರೆ. ಈ ಸಿನಿಮಾ ಬಳಿಕ ರಶ್ಮಿಕಾ ಬಹುನಿರೀಕ್ಷೆಯ ಪುಷ್ಪ-2 ಸಿನಿಮಾದಲ್ಲಿ ಬ್ಯುಸಿಯಾಗಲಿದ್ದಾರೆ.

Follow Us:
Download App:
  • android
  • ios