Asianet Suvarna News Asianet Suvarna News

ಹೊಂಬಾಳೆ ಫಿಲ್ಮ್ಸ್ ನಿರ್ಮಾಣದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತೆ ಕೀರ್ತಿ ಸುರೇಶ್ ಸಿನಿಮಾ; ಟೈಟಲ್ ಪೋಸ್ಟರ್ ರಿಲೀಸ್

ಹೊಂಬಾಳೆ ಫಿಲ್ಮ್ಸ್ ನಿರ್ಮಾಣದಲ್ಲಿ ತಮಿಳು ನಟಿ ಕೀರ್ತಿ ಸುರೇಶ್ ಸಿನಿಮಾ ಮಾಡುತ್ತಿದ್ದು ಟೈಟಲ್ ಪೋಸ್ಟರ್ ರಿಲೀಸ್ ಆಗಿದೆ. 

Hombale films announces movie with tamil actor Keerthy Suresh sgk
Author
First Published Dec 4, 2022, 5:52 PM IST

ಹೊಂಬಾಳೆ ಫಿಲ್ಮ್ಸ್ ಸ್ಯಾಂಡಲ್‌ವುಡ್‌ನ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆ. ಕೆಜಿಎಫ್ ಮತ್ತು ಕಾಂತಾರ ಸಿನಿಮಾ ಮೂಲಕ ದೇಶ-ವಿದೇಶಗಳಲ್ಲಿ ಸದ್ದು ಮಾಡುತ್ತಿರುವ ಹೊಂಬಾಳೆ ಫಿಲ್ಮ್ಸ್ ಕನ್ನಡ ಸಿನಿಮಾಗಳಿಗೆ ಮಾತ್ರ ಸೀಮಿತವಾಗಿರದೆ ಬೇರೆ ಬೇರೆ ಭಾಷೆಯ ಸಿನಿಮಾಗಳಿಗೂ ಬಂಡವಾಳ ಹೂಡುತ್ತಿದೆ. ಈಗಾಗಲೇ ಹೊಂಬಾಳೆ ಫಿಲ್ಮ್ಸ್ ತಮಿಳು, ತೆಲುಗು ಹಾಗೂ ಮಲಯಾಳಂ ಸಿನಿಮಾಗಳನ್ನು ಮಾಡುತ್ತಿದೆ. ಇದೀಗ ಹೊಂಬಾಳೆ ಫಿಲ್ಮ್ಸ್ ಬಾಲಿವುಡ್ ಕಡೆ ಹೊರಟಿದೆ ಎನ್ನುವ ಸುದ್ದಿ ವೈರಲ್ ಆಗಿದೆ.  ವಿಜಯ್ ಕಿರಗಂದೂರ್ ಅವರ ಹೊಂಬಾಳೆ ಫಿಲ್ಮ್ಸ್ ಹಿಂದಿ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟಿದ್ದು ಹಿಂದಿಯ ಸ್ಟಾರ್ ನಟ ಶಾರುಖ್ ಖಾನ್ ಗೆ ಸಿನಿಮಾ ಮಾಡಲಿದೆ ಎನ್ನಲಾಗಿದೆ. ಈ ನಡುವೆ ಹೊಂಬಾಳೆ ಫಿಲ್ಮ್ಸ್ ಮತ್ತೊಂದು ಇಂಟ್ರಸ್ಟಿಂಗ್ ಮಾಹಿತಿ ರಿವೀಲ್ ಮಾಡಿದೆ. ತಮಿಳಿನ ಖ್ಯಾತ ನಟಿ ಕೀರ್ತ ಸುರೇಶ್ ಜೊತೆ ಸಿನಿಮಾ ಮಾಡುತ್ತಿದ್ದು ಈಗಾಗಲೇ ಮಹೂರ್ತ ಕೂಡ ನೆರವೇರಿದೆ.  ಈ ಮೂಲಕ ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ತಮಿಳು ಸಿನಿಮಾರಂಗಕ್ಕೂ ಕಾಲಿಟ್ಟಿದೆ. 

ಸದ್ಯ ಕೀರ್ತಿ ಸುರೇಶ್ ಸಿನಿಮಾದ ಪೋಸ್ಟರ್ ಶೇರ್ ಮಾಡುವ ಮೂಲಕ ಹೊಂಬಾಳೆ ಫಿಲ್ಮ್ಸ್ ಮಾಹಿತಿ ಬಹಿರಂಗ ಪಡಿಸಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಜೊತೆ ಹೊಂಬಾಳೆ ಫಿಲ್ಮ್ಸ್ ಸಿನಿಮಾ ಮಾಡುತ್ತಿರುವುದು ಅಭಿಮಾನಿಗಳಿಗೆ ಸಂತಸ ತಂದಿದೆ. ಅಂದಹಾಗೆ ಸಿನಿಮಾಗೆ ರಘುನಾಥ ಎಂದು ಟೈಟಲ್ ಇಡಲಾಗಿದೆ.  
ಹಿಂದಿಯಲ್ಲಿ 'ದಿ ಫ್ಯಾಮಿಲಿ ಮ್ಯಾನ್' ವೆಬ್ ಸೀರೀಸ್ ಸೇರಿದಂತೆ ಕೆಲವು ಚಿತ್ರಗಳಿಗೆ ಕಥೆ-ಚಿತ್ರಕಥೆ ಬರೆದಿದ್ದ ಸುಮನ್ ಕುಮಾರ್ ರಘುನಾಥ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. 'ರಘುತಥಾ' ಒಂದು ಮಹಿಳಾ ಪ್ರಧಾನ ಚಿತ್ರವಾಗಿದ್ದು, ಒಬ್ಬ ಯುವತಿಯ ಸುತ್ತ ಸುತ್ತುತ್ತದೆ. ಆಕೆ ತನ್ನ ನೆಲ ಮತ್ತು ಜನರನ್ನು ರಕ್ಷಿಸುವ ನಿಟ್ಟಿನಲ್ಲಿ ಏನೆಲ್ಲ ಸಾಹಸಗಳನ್ನು ಮಾಡುತ್ತಾಳೆ ಎನ್ನುವುದನ್ನು ಹಾಸ್ಯವಾಗಿ ತೋರಿಸಲಾಗುತ್ತೆ ಎನ್ನಲಾಗಿದೆ. 

ಹೇಗಿದ್ದ ಕೀರ್ತಿ ಹೇಗಾದ್ರು ನೋಡಿ; 2.25 ಲಕ್ಷ ರೂ. ಮುತ್ತಿನ ಗೌನ್‌ನಲ್ಲಿ ಮಿಂಚಿದ 'ಮಹಾನಟಿ'

ಅಂದಹಾಗೆ ಈ ಸಿನಿಮಾದಲ್ಲಿ ಕೀರ್ತಿ ಸುರೇಶ್ ಜತೆಗೆ ಎಂ.ಎಸ್. ಭಾಸ್ಕರ್, ದೇವದರ್ಶಿನಿ, ರವೀಂದ್ರ ವಿಜಯ್, ರಾಜೇಶ್ ಬಾಲಕೃಷ್ಣನ್ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಅಂದಹಾಗೆ ಈಗಾಗಲೇ  `ರಘುತಥಾ' ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದ್ದು, 2023ರ ಬೇಸಿಗೆ ರಜೆಯ ಸಂದರ್ಭದಲ್ಲಿ ಈ  ಸಿನಿಮಾ ಬಿಡುಗಡೆಯಾಗಲಿದೆ.

ಗೆಳತಿ ಮದುವೆಲಿ ಮಿಂಚಿದ 'ಮಹಾನಟಿ'; ಪಡ್ಡೆಗಳ ನಿದ್ದೆ ಕದ್ದ ಕೀರ್ತಿಯ ಸೀರೆ ಫೋಟೋ

ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಅನೇಕ ಸಿನಿಮಾಗಳು ಬರ್ತಿವೆ. ಕನ್ನಡ ಮಾತ್ರವಲ್ಲದೇ ಬೇರೆ ಬೇರೆ ಭಾಷೆಯ ಸಿನಿಮಾಗಳನ್ನು ಮಾಡುತ್ತಿರುವುದು ವಿಶೇಷ. ಕಾಂತಾರ ಸಕ್ಸಸ್ ನಲ್ಲಿರುವ ಹೊಂಬಾಳೆ ಬಳಿ ಸದ್ಯ ಪ್ರಭಾಸ್ ಜೊತೆ ಸಲಾರ್, ಮಲಯಾಳಂ ಸ್ಟಾರ್ ಪೃಥ್ವಿರಾಜ್ ಜೊತೆ ಟೈಸನ್, ಶ್ರೀಮುರಳಿ ಜೊತೆ ಬಘೀರ, ರಕ್ಷಿತ್ ಶೆಟ್ಟಿ ಜೊತೆ ರಿಚರ್ಡ್ ಆಂಟನಿ, ಫಹಾದ್ ಫಾಸಿಲ್ ಜೊತೆ ಧೂಮಂ ಹಾಗೂ ಸೂರರೈ ಪೊಟ್ರು ನಿರ್ದೇಶಕಿ ಸುಧಾ ಕೊಂಗಾರ ಜೊತೆಯೂ ಸಿನಿಮಾ ಮಾಡುತ್ತಿದೆ. ಇದೀಗ ಕೀರ್ತಿ ಸುರೇಶ್ ಜೊತೆ ರಘುತಾಥ ಸಿನಿಮಾ ಅನೌನ್ಸ್ ಮಾಡಿ ಅಚ್ಚರಿ ಮೂಡಿಸಿದೆ.
 

Follow Us:
Download App:
  • android
  • ios