ಅಕ್ಷಯ್ ಕುಮಾರ್ ನಟನೆಯ ಪೃಥ್ವಿರಾಜ್ ಸಿನಿಮಾವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ವೀಕ್ಷಿಸುತ್ತಿದ್ದಾರೆ. ಜೂನ್ 1ರಂದು ದೆಹಲಿಯಲ್ಲಿ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ. ವಿಶೇಷ ಶೋನಲ್ಲಿ ಅಮಿತ್ ಷಾ ಪೃಥ್ವಿರಾಜ್ ಸಿನಿಮಾವನ್ನು ಕಣ್ತುಂಬಿಕೊಳ್ಳಲಿದ್ದಾರೆ ಎಂದು ಆಂಗ್ಲ ಮಾಧ್ಯಮಗಳು ವರದಿ ಮಾಡಿವೆ. ಯಶ್ ರಾಜ್ ಫಿಲ್ಮ್ಸ್ ನಲ್ಲಿ ನಿರ್ಮಾಣವಾಗಿರುವ ಪೃಥ್ವಿ ರಾಜ್ ಸಿನಿಮಾವನ್ನು ಅಮಿತ್ ಶಾ ಜೊತೆ ಇನ್ನು ಅನೇಕ ಹಿರಿಯ ರಾಜಕಾರಣಿಗಳು ವೀಕ್ಷಿಸಲಿದ್ದಾರೆ ಎನ್ನಲಾಗಿದೆ.
ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್(Akshay Kumar) ನಟನೆಯ ಪೃಥ್ವಿರಾಜ್(Prithviraj) ಸಿನಿಮಾ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಈಗಾಗಲೇ ಟ್ರೈಲರ್ ರಿಲೀಸ್ ಆಗಿದ್ದು ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ. ಟ್ರೈಲರ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಅಭಿಮಾನಿಗಳು ಸಿನಿಮಾ ವೀಕ್ಷಿಸಲು ಕಾತರದಿಂದ ಕಾಯುತ್ತಿದ್ದಾರೆ. ಬಹುನಿರೀಕ್ಷೆಯ ಸಿನಿಮಾ ಜೂನ್ 3ರಂದು ತೆರೆಗೆ ಬರುತ್ತಿದೆ. ಹಿಂದಿ ಸೇರಿದಂತೆ ತಮಿಳು ಮತ್ತು ತೆಲುಗಿನಲ್ಲೂ ತೆರೆಗೆ ಬರುತ್ತಿದೆ. ಅಂದಹಾಗೆ ಈ ಸಿನಿಮಾದ ಬಗ್ಗೆ ಮತ್ತೊಂದು ಇಂಟ್ರಸ್ಟಿಂಗ್ ಮಾಹಿತಿ ಬಹಿರಂಗವಾಗಿದೆ. ಪೃಥ್ವಿರಾಜ್ ಸಿನಿಮಾವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ(Amit shah) ವೀಕ್ಷಿಸುತ್ತಿದ್ದಾರೆ. ಜೂನ್ 1ರಂದು ದೆಹಲಿಯಲ್ಲಿ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ. ವಿಶೇಷ ಶೋನಲ್ಲಿ ಅಮಿತ್ ಷಾ ಪೃಥ್ವಿರಾಜ್ ಸಿನಿಮಾವನ್ನು ಕಣ್ತುಂಬಿಕೊಳ್ಳಲಿದ್ದಾರೆ ಎಂದು ಆಂಗ್ಲ ಮಾಧ್ಯಮಗಳು ವರದಿ ಮಾಡಿವೆ. ಯಶ್ ರಾಜ್ ಫಿಲ್ಮ್ಸ್ ನಲ್ಲಿ ನಿರ್ಮಾಣವಾಗಿರುವ ಪೃಥ್ವಿ ರಾಜ್ ಸಿನಿಮಾವನ್ನು ಅಮಿತ್ ಶಾ ಜೊತೆ ಇನ್ನು ಅನೇಕ ಹಿರಿಯ ರಾಜಕಾರಣಿಗಳು ವೀಕ್ಷಿಸಲಿದ್ದಾರೆ ಎನ್ನಲಾಗಿದೆ.
ಈ ಸಿನಿಮಾ ಲೆಜೆಂಡರಿ ರಾಜ ಪೃಥ್ವಿರಾಜ್ ಚೌಹಾಣ್ ಬಗ್ಗೆ ಇರುವ ಚಿತ್ರವಾಗಿದೆ. ಪೃಥ್ವಿರಾಜ್ ಪಾತ್ರದಲ್ಲಿ ಅಕ್ಷಯ್ ಕುಮಾರ್ ಕಾಣಿಸಿಕೊಂಡಿದ್ದಾರೆ. ಅಮಿತ್ ಶಾ ಸಿನಿಮಾ ವೀಕ್ಷಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ನಿರ್ದೇಶಕ ಧ್ವಿವೇದಿ, ನಮ್ಮ ದೇಶದ ಗೌರವಾನ್ವಿತ ಗೃಹ ಸಚಿವರಾದ ಅಮಿತ್ ಶಾ ಅವರು ಭಾರತಮಾತೆಯ ವೀರ ಪುತ್ರರರಲ್ಲಿ ಒಬ್ಬರಾಗಿರುವ ಸಮ್ರಾಟ್ ಪೃಥ್ವಿರಾಜ್ ಚೌಹಾಣ್ ಅವರ ಅದ್ಭುತ ಜೀವನದ ಮಹಾಕಾವ್ಯವನ್ನು ವೀಕ್ಷಿಸುತ್ತಿರುವುದು ನಮಗೆಲ್ಲ ಗೌರವದ ವಿಚಾರ ಎಂದು ಹೇಳಿದ್ದಾರೆ.
ಅಕ್ಷಯ್ ಕುಮಾರ್ v/s ಕಮಲ್ ಹಾಸನ್; ಬಾಕ್ಸ್ ಆಫೀಸ್‌ನಲ್ಲಿ ಮತ್ತೊಂದು ಮೆಗಾವಾರ್, ಗೆಲ್ಲೋರ್ಯಾರು?
ನಿರ್ದೇಶಕ ಚಂದ್ರಪ್ರಕಾಶ್ ಧ್ವಿವೇದಿ ಈ ಮೊದಲು ಪ್ರಸಿದ್ಧ ಚಾಣಕ್ಯ ಮತ್ತು ಪಿಂಜಾರ್ ಧಾರಾವಾಹಿ ನಿರ್ದೇಶನ ಮಾಡಿ ಖ್ಯಾತಿಗಳಿಸಿದ್ದರು. 1991ರಲ್ಲಿ ಚಾಣಕ್ಯ ಮತ್ತು 2003ರಲ್ಲಿ ಪಿಂಜಾರ್ ಪ್ರಸಾರವಾಗಿತ್ತು. ಕಿರುತೆರೆಯಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸಿದ ಧಾರಾವಾಹಿ ಇದಾಗಿತ್ತು. ಇದೀಗ ಐತಿಹಾಸಿಕ ಪೃಥ್ವಿರಾಜ್ ಪಾತ್ರವನ್ನು ಅಭಿಮಾನಿಗಳ ಮುಂದೆ ತರುವ ಪ್ರಯತ್ನ ಮಾಡಿದ್ದಾರೆ. ದೊಡ್ಡ ಬಜೆಟ್ ನಲ್ಲಿ ತಯಾರಾಗಿರುವ ಈ ಸಿನಿಮಾ, 18 ವರ್ಷಗಳ ಕಾಲ ಸಂಶೋಧನೆ ನಡೆಸಿ ಸಿದ್ಧಪಡಿಸಿದ ಕಥೆಯನ್ನು ಆಧರಿಸಿದೆ. ಈ ಸಿನಿಮಾವನ್ನು ಅಮಿತ್ ಶಾ ವೀಕ್ಷಣೆ ಮಾಡುವ ಮೂಲಕ ಸಿನಿಮಾಗೆ ಮತ್ತಷ್ಟು ಉತ್ತೇಜನ ಸಿಕ್ಕಂತೆ ಆಗಿದೆ.
ಅಕ್ಷಯ್ ಕುಮಾರ್ 'ಪೃಥ್ವಿರಾಜ್' ಮತ್ತೊಂದು ವಿವಾದ: ಹೆಸರು ಬದಲಾವಣೆಗೆ ಕರ್ಣಿ ಸೇನೆ ಆಗ್ರಹ
ಅಂದಹಾಗೆ ಸಿನಿಮಾದಲ್ಲಿ ಅಕ್ಷಯ್ ಕುಮಾರ್‌ಗೆ ನಾಯಕಿಯಾಗಿ ವಿಶ್ವ ಸುಂದರಿ ಮಾನುಷಿ ಚಿಲ್ಲರ್ ನಟಿಸಿದ್ದಾರೆ. ಮೊದಲ ಬಾರಿಗೆ ಮಾನುಷಿ ಬಣ್ಣದ ಲೋಕದಲ್ಲಿ ಮಿಂಚುತ್ತಿದ್ದಾರೆ. ಇನ್ನು ಉಳಿದಂತೆ ಸೋನು ಸೂದ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಸಿನಿಮಾ ಹೇಗಿರಲಿದೆ ಎಂದು ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ.
