ನಮ್ ಮಾತು ಕೇಳದಿದ್ರೆ ಕೊಲೆಯಾಗ್ತಿ... ಸಲ್ಮಾನ್ ಖಾನ್‌ಗೆ ಬೆದರಿಕೆ
ಕೃಷ್ಣಮೃಗ ಬೇಟೆ ಪ್ರಕರಣದ ಹಿನ್ನೆಲೆಯಲ್ಲಿ ಈ ಹಿಂದೆಯೂ ಅನೇಕ ಬಾರಿ ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಗೆ ಬಂದಿದ್ದವು. ಒಂದೇ ಒಂದು ಮಾತು ಕೇಳುವಂತೆ ಬೆದರಿಕೆ ಹಾಕುವವರ ಡಿಮಾಂಡ್. ಅದೇನು?
ನಟ ಸಲ್ಮಾನ್ ಖಾನ್ (Salman Khan) ಅವರನ್ನು ಕೊಲ್ಲುವುದಾಗಿ ಮತ್ತೊಮ್ಮೆ ಬೆದರಿಕೆ ಬಂದಿದೆ. ಈ ಹಿಂದೆಯೂ ಕೆಲ ಸಂದರ್ಭಗಳಲ್ಲಿ ಇವರಿಗೆ ಕೊಲೆ ಬೆದರಿಕೆಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಸ್ವಯಂ ರಕ್ಷಣೆಗಾಗಿ ಅವರು ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಮಾನ್ಯ ಮಾಡಿದ್ದ ಪೊಲೀಸರು ಶಸ್ತ್ರಾಸ್ತ್ರ ಪರವಾನಗಿಯನ್ನು ನೀಡಿದ್ದರು. 2022ರ ಮೇ 29 ರಂದು ಪಂಜಾಬ್‌ನ ಮಾನ್ಸಾ ಬಳಿ ಗಾಯಕ ಸಿಧು ಮೂಸ್ ವಾಲಾ ಅವರನ್ನು ಗುಂಡಿಕ್ಕಿ ಕೊಂದ ಕೆಲವೇ ದಿನಗಳ ನಂತರ ಜೂನ್ ಆರಂಭದಲ್ಲಿ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ (Saleem Khan) ಅವರಿಗೆ ಈ ಬೆದರಿಕೆ ಕರೆ ಬಂದಿದ್ದವು. ಸಲ್ಮಾನ್ ಅವರ ತಂದೆ ಪ್ರತಿದಿನ ಬೆಳಿಗ್ಗೆ ಜಾಗಿಂಗ್ ಮಾಡಿದ ನಂತರ ಕುಳಿತುಕೊಳ್ಳುವ ಬೆಂಚಿನ ಮೇಲೆ ಸಹಿ ಮಾಡದ ಪತ್ರವೊಂದನ್ನು ಇಡಲಾಗಿತ್ತು. ಅದರಲ್ಲಿ ಜೀವ ಬೆದರಿಕೆವೊಡ್ಡಲಾಗಿತ್ತು. ಆ ಸಂದರ್ಭದಲ್ಲಿ ಟೈಗರ್ 3 ಚಿತ್ರೀಕರಣ ಪ್ರಾರಂಭವಾಗಿತ್ತು. ಸಲ್ಮಾನ್ ಖಾನ್ ಅವರು ಜೀವ ಬೆದರಿಕೆ ಹಿನ್ನೆಲೆಯಲ್ಲಿ ಹೊಸದಾಗಿ ಬುಲೆಟ್ ಫ್ರೂಪ್ ಕಾರ್ ಅನ್ನು ಖರೀದಿಸಿದ್ದರು. ಬಾಡಿಗಾರ್ಡ್‌ಗಳ ಸಂಖ್ಯೆಯನ್ನೂ ಹೆಚ್ಚಿಸಿಕೊಂಡಿದ್ದರು. ಬೆದರಿಕೆ ಹಿನ್ನೆಲೆಯಲ್ಲಿ ಅನಗತ್ಯವಾಗಿ ವಿವಿಧ ಕಾರ್ಯಕ್ರಮಗಳಲ್ಲೂ ಭಾಗಿಯಾಗಿರಲಿಲ್ಲ. ಟೈಗರ್ 3 ಚಿತ್ರೀಕರಣಕ್ಕೂ ಅವರು ಬುಲೆಟ್ ಫ್ರೂಪ್ ಕಾರ್ ಅನ್ನು ತೆಗೆದುಕೊಂಡೇ ಹೋಗುತ್ತಿದ್ದರು.
ಇವೆಲ್ಲಾ ಸ್ವಲ್ಪ ತಣ್ಣಗಾಗುತ್ತಿದ್ದಂತೆಯೇ ಈಗ ಮತ್ತೆ ಬೆದರಿಕೆ (Threatening) ಬಂದಿದೆ. ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ (Blackbuck poaching case) ಸಲ್ಮಾನ್ ಖಾನ್ ತಪ್ಪಿತಸ್ಥ ಎಂದು ಸಾಬೀತಾಗಿತ್ತು. ಆದರೆ ಸಲ್ಲು ಸದ್ಯ ಜಾಮೀನಿನ ಮೇಲೆ ಇದ್ದಾರೆ. ಆದರೆ ಆ ಕೃಷ್ಣಮೃಗಗಳನ್ನು ಬಿಷ್ಣೋಯ್ ಸಮುದಾಯವು ಪವಿತ್ರವೆಂದು ಪರಿಗಣಿಸುತ್ತದೆ. ಅದಕ್ಕಾಗಿಯೇ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಸಲ್ಮಾನ್ ಖಾನ್ ಅವರನ್ನು ಟಾರ್ಗೆಟ್ ಮಾಡಿದ್ದು, ಸಲ್ಮಾನ್ ಖಾನ್ ಅವರನ್ನು ಕೊಲೆ ಮಾಡಲು ಪ್ರಯತ್ನಿಸಿದ್ದರು. ಅವರಿಂದಲೇ ಹಿಂದಿನ ಬಾರಿಯೂ ಕೊಲೆ ಬೆದರಿಕೆ ಬಂದಿತ್ತು. ಅವರೀಗ ಜೈಲಿನಲ್ಲಿ ಇದ್ದು, ಮತ್ತೊಮ್ಮೆ ಬೆದರಿಕೆ ಬಂದಿದೆ. ಅಷ್ಟಕ್ಕೂ ಅವರ ಬೇಡಿಕೆ ಎಂದರೆ ಕೃಷ್ಣಮೃಗವನ್ನು ಕೊಂದಿರುವುದಕ್ಕೆ ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು ಎನ್ನುವುದು. ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ಅವರ ಭವಿಷ್ಯವನ್ನು ಯಾವುದೇ ನ್ಯಾಯಾಲಯ ನಿರ್ಧರಿಸುವುದಿಲ್ಲ ಎಂದು ಲಾರೆನ್ಸ್ ಬಿಷ್ಣೋಯ್ ಹೇಳಿದ್ದಾರೆ. ಪೊಲೀಸರ ಮುಂದೆ ನೀಡಿದ ಹೇಳಿಕೆಯಲ್ಲಿ, ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಈ ವಿಷಯದಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದರೆ (Apology) ತಮ್ಮ ಮನಸ್ಸು ಕೂಡ ಬದಲಾಗಬಹುದು ಎಂದು ಲಾರೆನ್ಸ್ ಬಿಷ್ಣೋಯ್ ಈ ಹಿಂದೆ ಹೇಳಿದ್ದರು. ಇದರ ಹೊರತಾಗಿಯೂ ಸಲ್ಮಾನ್ ಖಾನ್ ಕ್ಷಮೆ ಕೋರಿಲ್ಲ ಎನ್ನುವುದು ಅವರಿಗೆ ಇರುವ ಆಕ್ರೋಶ. ಕ್ಷಮೆ ಕೋರದೇ ಹೋದರೆ ಪರಿಣಾಮ ಎದುರಿಸಲು ಸಿದ್ಧ ಇರಿ ಎಂದು ಗ್ಯಾಂಗ್ ಎಚ್ಚರಿಕೆ ನೀಡಿದೆ. ಕ್ಷಮೆ ಕೋರದ ಸಲ್ಮಾನ್ ಅವರ ಅಹಂಕಾರವನ್ನು ಮುರಿಯುತ್ತೇವೆ ಎಂದಿದ್ದಾರೆ. ಕಳೆದ ವರ್ಷ ಆಗಸ್ಟ್ ನಲ್ಲಿ ಮುಂಬೈ ಪೊಲೀಸರು ಆತ್ಮರಕ್ಷಣೆಗಾಗಿ ಸಲ್ಮಾನ್ ಖಾನ್ ಅವರಿಗೆ ಗನ್ ಲೈಸೆನ್ಸ್ ನೀಡಿದ್ದರು. ಇದಲ್ಲದೇ, ಕಳೆದ ವರ್ಷ ನವೆಂಬರ್‌ನಲ್ಲಿ ಸಲ್ಮಾನ್ ಖಾನ್‌ಗೆ ಮಹಾರಾಷ್ಟ್ರ ಪೊಲೀಸರು Y+ ಭದ್ರತೆಯನ್ನು ಒದಗಿಸಿದ್ದರು. ಅದರ ಪ್ರಕಾರ ನಾಲ್ವರು ಶಸ್ತ್ರಸಜ್ಜಿತ ಭದ್ರತಾ ಸಿಬ್ಬಂದಿ ಯಾವಾಗಲೂ ಅವರೊಂದಿಗೆ ಇರುತ್ತಾರೆ.
ಸಲ್ಮಾನ್ ಖಾನ್ ನನ್ನ ಅಪ್ಪನಂತೆ ಎಂದ ನಟಿ ಪಾಲಕ್: ಬಿಡ್ತಾರೆಯೇ ಟ್ರೋಲಿಗರು?
'ಸಲ್ಮಾನ್ ಖಾನ್ ಬಗ್ಗೆ ಸಮಾಜದಲ್ಲಿ ಸಾಕಷ್ಟು ಕೋಪವಿದೆ, ಅವರು ನನ್ನ ಸಮಾಜವನ್ನು ಅವಮಾನಿಸಿದ್ದಾರೆ, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ, ಆದರೆ ಅವರು ಕ್ಷಮೆಯಾಚಿಸಲಿಲ್ಲ, ಅವರು ಕ್ಷಮೆಯಾಚಿಸದಿದ್ದರೆ ಪರಿಣಾಮ ಎದುರಿಸಲು ಸಿದ್ಧರಾಗಬೇಕು. ನಾನು ಯಾರ ಮೇಲೂ ಅವಲಂಬಿತನಲ್ಲ. ನನಗೆ ಬಾಲ್ಯದಿಂದಲೂ ಸಿಟ್ಟು. ಇನ್ನೊಮ್ಮೆ ಅವನ ಅಹಂಕಾರವನ್ನು ಮುರಿಯುತ್ತೇನೆ. ನಮ್ಮ ದೇವರ ಗುಡಿಗೆ ಬಂದು ಕ್ಷಮೆ ಕೇಳಬೇಕು. ನಮ್ಮ ಸಮಾಜ ಕ್ಷಮಿಸಿದರೆ ಅದಕ್ಕೆ ನಾನು ಏನನ್ನೂ ಹೇಳುವುದಿಲ್ಲ, ಸುಮ್ಮನಾಗುತ್ತೇನೆ' ಎಂದು ಲಾರೆನ್ಸ್ ಬಿಷ್ಣೋಯ್ ಈ ಹಿಂದೆ ಸಂದರ್ಶನವೊಂದರಲ್ಲಿ ಹೇಳಿದ್ದರು.
ನಾವು ಕೃಷ್ಣಮೃಗ ಬೇಟೆಯ ಪ್ರಕರಣದ ಬಗ್ಗೆ ಮಾತನಾಡುವುದಾದರೆ, ಚಿತ್ರೀಕರಣಕ್ಕೆಂದು ರಾಜಸ್ತಾನದಲ್ಲಿ ತಂಗಿದ್ದ ಸಲ್ಮಾನ್ ಖಾನ್ ಹಾಗೂ ಇತರೆ ಆರೋಪಿಗಳು 1998ರ ಅ.1 ಹಾಗೂ 2 ರ ನಡುವಣ ರಾತ್ರಿ ಜೋಧ್ಪುರ ಬಳಿಯ ಕಂಕಣಿ ಗ್ರಾಮದಲ್ಲಿ ಜಿಪ್ಸಿಯಲ್ಲಿ ಪ್ರಯಾಣಿಸುತ್ತಿದ್ದರು. ಆಗ ಅವರ ಕಣ್ಣಿಗೆ ಕೃಷ್ಣಮೃಗಗಳ ಹಿಂಡು ಕಾಣಿಸಿತ್ತು. ಚಾಲಕನ ಸೀಟಿನಲ್ಲಿ ಕುಳಿತಿದ್ದ ಸಲ್ಮಾನ್ ಆ ಹಿಂಡಿನತ್ತ ಗುಂಡು ಹಾರಿಸಿದ್ದರು. ಈ ವೇಳೆ 2 ಕೃಷ್ಣಮೃಗಗಳು ಮೃತಪಟ್ಟಿದ್ದವು. ಇದನ್ನು ಸಾರ್ವಜನಿಕರು ಗಮನಿಸಿ, ಬೆನ್ನಟ್ಟಿದಾಗ, ಮೃತ ಕೃಷ್ಣಮೃಗಗಳನ್ನು ಅಲ್ಲಿಯೇ ಬಿಟ್ಟು ಸಲ್ಮಾನ್ ಮತ್ತು ತಂಡ ಸ್ಥಳದಿಂದ ಪರಾರಿಯಾಗಿತ್ತು. ಈ ಪ್ರಕರಣದಲ್ಲಿ ಸಲ್ಮಾನ್ ಖಾನ್ ಅವರಿಗೆ ಐದು ವರ್ಷಗಳ ಶಿಕ್ಷೆಯಾಗಿದ್ದು, ಜಾಮೀನಿನ (Bail) ಮೇಲೆ ಹೊರಗಡೆ ಇದ್ದಾರೆ.
Bollywood Day: ಪಾಕಿಸ್ತಾನದ ಲಾಹೋರ್ ವಿವಿಯಲ್ಲಿ ಶಾರುಖ್, ಸಲ್ಮಾನ್, ಸುಶ್ಮಿತಾ!