ಅಕ್ಷಯ್ ಕುಮಾರ್ v/s ಕಮಲ್ ಹಾಸನ್; ಬಾಕ್ಸ್ ಆಫೀಸ್‌ನಲ್ಲಿ ಮತ್ತೊಂದು ಮೆಗಾವಾರ್, ಗೆಲ್ಲೋರ್ಯಾರು?
ಮತ್ತೊಂದು ಬಾಕ್ಸ್ ಆಫೀಸ್ ವಾರ್‌ಗೆ ಸಿದ್ಧವಾಗುತ್ತಿದೆ ಭಾರತೀಯ ಸಿನಿಮಾರಂಗ. ಭಾರತೀಯ ಸಿನಿಮಾರಂಗದ ಇಬ್ಬರು ಸ್ಟಾರ್ ಕಲಾವಿದರ ಸಿನಿಮಾ ಒಂದೇ ದಿನ ತೆರೆಗೆ ಬರುತ್ತಿದೆ. ಹೌದು, ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್ ಮತ್ತು ಕಾಲಿವುಡ್ ಸ್ಟಾರ್ ಕಮಲ್ ಹಾಸನ್ ನಟನೆಯ ಬಹುನಿರೀಕ್ಷೆಯ ಸಿನಿಮಾ ಒಂದೇ ದಿನ ರಿಲೀಸ್ ಆಗುತ್ತಿದೆ.
ಮತ್ತೊಂದು ಬಾಕ್ಸ್ ಆಫೀಸ್ ವಾರ್‌ಗೆ ಸಿದ್ಧವಾಗುತ್ತಿದೆ ಭಾರತೀಯ ಸಿನಿಮಾರಂಗ. ಭಾರತೀಯ ಸಿನಿಮಾರಂಗದ ಇಬ್ಬರು ಸ್ಟಾರ್ ಕಲಾವಿದರ ಸಿನಿಮಾ ಒಂದೇ ದಿನ ತೆರೆಗೆ ಬರುತ್ತಿದೆ. ಹೌದು, ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್(Akshay kumar) ಮತ್ತು ಕಾಲಿವುಡ್ ಸ್ಟಾರ್ ಕಮಲ್ ಹಾಸನ್(Kamal haasan) ನಟನೆಯ ಬಹುನಿರೀಕ್ಷೆಯ ಸಿನಿಮಾ ಒಂದೇ ದಿನ ರಿಲೀಸ್ ಆಗುತ್ತಿದೆ. ಇಬ್ಬರು ಸ್ಟಾರ್ ನಟರ ಸಿನಿಮಾ ಒಂದೇ ದಿನ ತೆರೆಗೆ ಬರುತ್ತಿರುವುದರಿಂದ ಬಾಕ್ಸ್ ಆಫೀಸ್ ನಲ್ಲಿ ಮತ್ತೊಂದು ಕ್ಲ್ಯಾಶ್ ಆಗಲಿದೆ ಎಂದು ಸಿನಿ ಪಂಡಿತರು ಲೆಕ್ಕಾಚಾರ ಹಾಕುತ್ತಿದ್ದಾರೆ.
ಈ ಮೊದಲು ಯಶ್(Yash) ನಟನೆಯ ಕೆಜಿಎಫ್-2(KGF 2) ಮತ್ತು ತಮಿಳು ಸ್ಟಾರ್ ವಿಜಯ್(Vijay) ನಟನೆಯ ಬೀಸ್ಟ್ ಸಿನಿಮಾ ಒಂದು ದಿನದ ಅಂತರದಲ್ಲಿ ತೆರೆಗೆ ಬಂದಿತ್ತು. ಆದರೆ ಬಾಕ್ಸ್ ಆಫೀಸ್ ನಲ್ಲಿ ದೊಡ್ಡ ಮಟ್ಟದ ಕ್ಲ್ಯಾಶ್ ಆಗಲಿದೆ ಎಂದು ಸಿನಿಪಂಡಿತರ ಲೆಕ್ಕಾಚಾರ ಆಗಿತ್ತು. ಬೀಸ್ಟ್ v/s ಕೆಜಿಎಫ್-2 ಎನ್ನುವ ಸುದ್ದಿ ವೈರಲ್ ಆಗಿತ್ತು. ಬೀಸ್ಟ್ ಸಿನಿಮಾ ಯಶ್ ನಟನೆಯ ಕೆಜಿಎಫ್-2 ಮುಂದೆ ಹೀನಾಯ ಸೋಲು ಕಂಡಿತು. ಇದೀಗ ಕಮಲ್ ಹಾಸನ್ ನಟನೆಯ ವಿಕ್ರಮ್ ಮತ್ತು ಅಕ್ಷಯ್ ಕುಮಾರ್ ನಟನೆಯ ಪೃಥ್ವಿರಾಜ್ ಸಿನಿಮಾ ತೆರೆಗೆ ಬರುತ್ತಿದೆ. ಜೂನ್ 3ರಂದು ಈ ಸಿನಿಮಾ ತೆರೆಗೆ ಬರುತ್ತಿದೆ. ಈ ಸಿನಿಮಾ ಜೊತೆಗೆ ಮೇಜರ್ ಸಿನಿಮಾ ರಿಲೀಸ್ ಆಗುತ್ತಿದೆ.
ಮೂರು ಸಿನಿಮಾಗಳು ಒಟ್ಟಿಗೆ ತೆರೆಗೆ ಬರುತ್ತಿರುವ ಬಗ್ಗೆ ನಟ ಅಕ್ಷಯ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಒಳ್ಳೆಯದು, ಪ್ರತಿಯೊಬ್ಬರ ಸಿನಿಮಾವೂ ಉತ್ತಮ ರೀತಿಯಲ್ಲಿ ಇರಲಿದೆ ಎಂದು ಭಾವಿಸುತ್ತೇನೆ. ಯಾರೋಬ್ಬರು ಸಿನಿಮಾವನ್ನು ಬಿಡುಗಡೆ ಮಾಡವುದನ್ನು ನಾವು ತಡೆಯಲು ಸಾಧ್ಯವಿಲ್ಲ. ಅಲ್ಲವೇ?, ಪ್ರತಿ ಚಿತ್ರವೂ ಬ್ಯುಸಿನೆಸ್ ಮಾಡುತ್ತವೆ. ನಾವು ಒಗ್ಗಟ್ಟಾಗಿ ಇರಬೇಕು. ಆದರೆ ದುರದೃಷ್ಟವಶಾತ್ ನಾವು ಯಾವಾಗಲು ವಿಭಜನೆಯ ಬಗ್ಗೆ ಮಾತನಾಡುತ್ತೇವೆ. ಯಾರು ಒಂದಾಗುವ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ.
ಅಜಯ್ ದೇವಗನ್ ಗೆ ಅಕ್ಷಯ್ ಕುಮಾರ್ ಸಾಥ್; ಗುಟ್ಕಾ ಗ್ಯಾಂಗ್ ಎಂದು ಕಾಲೆಳೆದ ನೆಟ್ಟಿಗರು
ಪೃಥ್ವಿರಾಜ್ ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಜೊತೆ ಮಾನುಷಿ ಚಿಲ್ಲರ್ ನಟಿಸಿದ್ದಾರೆ. ಮೊದಲ ಬಾರಿಗೆ ಮಾನುಷಿ ಚಿಲ್ಲರ್ ಬಣ್ಣದ ಲೋಕದಲ್ಲಿ ಮಿಂಚುತ್ತಿದ್ದಾರೆ. ಈ ಸಿನಿಮಾದಲ್ಲಿ ಸೋನು ಸೂದ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
Vikram Trailer; ಕಮಲ್ ಹಾಸನ್ 'ವಿಕ್ರಮ್' ಸಿನಿಮಾದಲ್ಲಿ ಯಶ್ KGF 2 ಗನ್, ನೆಟ್ಟಿಗರ ಟ್ರೋಲ್
ಇನ್ನು ಕಮಲ್ ಹಾಸನ್ ನಟನೆಯ ವಿಕ್ರಮ್ ಸಿನಿಮಾ ಟ್ರೈಲರ್ ಕೂಡ ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ. ಈ ಸಿನಿಮಾದಲ್ಲಿ ಕಮಲ್ ಹಾಸನ್ ಜೊತೆಗೆ ದಕ್ಷಿಣ ಭಾರತದ ಸ್ಟಾರ್ ನಟರಾದ ಫಹಾದ್ ಫಾಸಿಲ್, ವಿಜಯ್ ಸೇತುಪತಿ ನಟಿಸುತ್ತಿದ್ದಾರೆ. ಇನ್ನು ನಟ ಸೂರ್ಯ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜೂನ್ 3ರಂದು ಬರುತ್ತಿರುವ ವಿಕ್ರಮ್ ಮತ್ತು ಪೃಥ್ವಿರಾಜ್ ಸಿನಿಮಾಗಳಲ್ಲಿ ಯಾರು ಗೆಲ್ಲುತ್ತಾರೆ, ಪ್ರೇಕ್ಷಕರ ಹೃದಯ ಯಾರು ಗೆಲ್ತಾರೆ ಎಂದು ಕಾದುನೋಡಬೇಕು.