Asianet Suvarna News Asianet Suvarna News

'ಚಂದ್ರಮುಖಿ-2' ಎಂಟ್ರಿಗೆ ಮುಹೂರ್ತ ಫಿಕ್ಸ್: ಗಣೇಶ ಚತುರ್ಥಿಗೆ ಕಮಾಲ್ ಮಾಡುತ್ತಾ ರಾಘವ್ ಲಾರೆನ್ಸ್-ಕಂಗನಾ ಜೋಡಿ!

ಸೌತ್ ಸಿನಿ ದುನಿಯಾದ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಭತ್ತಳಿಕೆ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಚಂದ್ರಮುಖಿ-2 ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಖ್ಯಾತ ನಿರ್ದೇಶಕ, ನಟ ಹಾಗೂ ಸ್ಟಾರ್ ಕೊರಿಯೋಗ್ರಾಫರ್ ರಾಘವ್ ಲಾರೆನ್ಸ್ ಹಾಗೂ ಬಾಲಿವುಡ್ ಬ್ಯೂಟಿ ಕಂಗನಾ ನಟನೆಯ ಈ ಚಿತ್ರ ಸೆಪ್ಟಂಬರ್ 19ರ ಗಣೇಶ್ ಚತುರ್ಥಿಗೆ ಸ್ಪೆಷಲ್ ಆಗಿ ವಿಶ್ವಾದ್ಯಂತ ತೆರೆಗಪ್ಪಳಿಸಲಿದೆ.

Kangana Ranaut Raghava Lawrence starrer Chandramukhi 2 to release on Sep 19th Ganesh Chaturthi gvd
Author
First Published Jun 29, 2023, 8:24 PM IST

ಕಂಗನಾ ರಣಾವತ್ ಅವರು ಇತ್ತೀಚೆಗೆ 'ಎಮರ್ಜೆನ್ಸಿ' ಚಿತ್ರದ ಮೂಲಕ ಹೈಪ್ ಕ್ರಿಯೇಟ್ ಮಾಡಿದ್ದರು. ಈ ಬೆನ್ನಲ್ಲೇ ತಮ್ಮ ಫ್ಯಾನ್ಸ್‌ಗೆ ಕಂಗನಾ ಸಿಹಿಸುದ್ದಿ ನೀಡಿದ್ದಾರೆ. 'ಚಂದ್ರಮುಖಿ'ಯಾಗಿ ಅಭಿಮಾನಿಗಳ ಮುಂದೆ ಬರೋದ್ದಕ್ಕೆ ಕೌಂಟ್ ಡೌನ್ ಶುರುವಾಗಿದೆ. ಕಂಗನಾ ಸಿನಿಮಾ ಅಂದಾಕ್ಷಣ ಅಭಿಮಾನಿಗಳಿಗೆ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. 

ಸೌತ್ ಸಿನಿ ದುನಿಯಾದ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಭತ್ತಳಿಕೆ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಚಂದ್ರಮುಖಿ-2 ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಖ್ಯಾತ ನಿರ್ದೇಶಕ, ನಟ ಹಾಗೂ ಸ್ಟಾರ್ ಕೊರಿಯೋಗ್ರಾಫರ್ ರಾಘವ್ ಲಾರೆನ್ಸ್ ಹಾಗೂ ಬಾಲಿವುಡ್ ಬ್ಯೂಟಿ ಕಂಗನಾ ನಟನೆಯ ಈ ಚಿತ್ರ ಸೆಪ್ಟಂಬರ್ 19ರ ಗಣೇಶ್ ಚತುರ್ಥಿಗೆ ಸ್ಪೆಷಲ್ ಆಗಿ ವಿಶ್ವಾದ್ಯಂತ ತೆರೆಗಪ್ಪಳಿಸಲಿದೆ. ಖ್ಯಾತ ಹಿರಿಯ ನಿರ್ದೇಶಕ ಪಿ.ವಾಸು ನಿರ್ದೇಶನದ 65ನೇ ಚಿತ್ರ ಚಂದ್ರಮುಖಿ-2.

'ಚಂದ್ರಮುಖಿ' ಚಿತ್ರದ ಸೆಟ್‌ನಲ್ಲಿ ಕಂಗನಾ ರಣಾವತ್‌ ಹೋಳಿ ಆಡಿದ್ದು ಹೇಗೆ ನೋಡಿ

2005ರಲ್ಲಿ ಬಿಡುಗಡೆಯಾಗಿದ್ದ ಕ್ಲಾಸಿಕ್ ಸಿನಿಮಾ ಚಂದ್ರಮುಖಿ ಬಾಕ್ಸಾಫೀಸ್‌ನಲ್ಲಿ ಹೊಸ ದಾಖಲೆ ಸೃಷ್ಟಿಸಿತ್ತು. ಸೂಪರ್ ಸ್ಟಾರ್ ರಜನಿಕಾಂತ್ ನಾಯಕನಾಗಿ ನಟಿಸಿದ್ದ ಹಿಟ್ ಲೀಸ್ಟ್ ಸೇರಿತ್ತು. 18 ವರ್ಷದ ಬಳಿಕ ಚಂದ್ರಮುಖಿ ಸೀಕ್ವೆಲ್ ಬರ್ತಿದ್ದು, ನಿರೀಕ್ಷೆಯನ್ನು ಹೆಚ್ಚಿಸಿದೆ. ಲೈಕಾ ಸಂಸ್ಥೆಯ ಒಡೆಯ ಸುಭಾಷ್ ಕರಣ್ ಬಹಳ ಅದ್ಧೂರಿಯಾಗಿ ಚಿತ್ರ ನಿರ್ಮಿಸಿದ್ದು, ಆಸ್ಕರ್ ಅವಾರ್ಡ್ ವಿನ್ನರ್ ಎಂ.ಎಂ ಕೀರವಾಣಿ ಸಂಗೀತ ನಿರ್ದೇಶನ, ಆರ್ ಡಿ ರಾಜಶೇಖರ್ ಛಾಯಾಗ್ರಹಣ, ಅಂಥೋನಿ ಸಂಕಲನ ಚಿತ್ರಕ್ಕಿದೆ. 

Kangana Ranaut: ಮತ್ತೊಂದು ತಮಿಳು ಚಿತ್ರದಲ್ಲಿ ಕಂಗನಾ: ಈ ಬಾರಿ ಚಂದ್ರಮುಖಿಯಾಗಿ ನಟಿ!

ವಡಿವೇಲು, ಲಕ್ಷ್ಮೀ ಮೆನನ್, ಮಹಿಮಾ ನಂಬಿಯಾರ್, ರಾಧಿಕಾ ಶರತ್ ಕುಮಾರ್, ಸುರೇಶ್ ಮೆನನ್ ತಾರಾಬಳಗದಲ್ಲಿದ್ದಾರೆ. 18 ವರ್ಷದ ಬಳಿಕ ಗಣೇಶ ಹಬ್ಬಕ್ಕೆ ಚಂದ್ರಮುಖಿ-2 ಸೀಕ್ವೆಲ್ ತೆಲುಗು, ತಮಿಳು, ಹಿಂದಿ, ಕನ್ನಡ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಸ್ಕ್ರೀನ್‌ಗೆ ಲಗ್ಗೆ ಇಡಲಿದೆ. ರಾಘವ್ ಲಾರೆನ್ಸ್- ಕಂಗನಾ ನಟನೆಯ ಚಂದ್ರಮುಖಿ 2 ಸಿನಿಮಾ ನೋಡಲು ಅಭಿಮಾನಿಗಳು ಎದುರು ನೋಡ್ತಿದ್ದಾರೆ. ರಾಘವ್- ಕಂಗನಾ ಜೋಡಿ ಮೋಡಿ ಮಾಡುತ್ತಾ ಕಾದುನೋಡಬೇಕಿದೆ.

Follow Us:
Download App:
  • android
  • ios