ಕರಣ್ ಬ್ಯಾನ್ ಮಾಡಿದ್ದು ಎಲ್ಲರಿಗೂ ಗೊತ್ತು; ಭಾರತ ಬಿಟ್ಟ ಬಗ್ಗೆ ಪ್ರಿಯಾಂಕಾ ಮಾತಿಗೆ ಕಂಗನಾ ಪ್ರತಿಕ್ರಿಯೆ

ಭಾರತ ಬಿಟ್ಟ ಬಗ್ಗೆ ಪ್ರಿಯಾಂಕಾ ಚೋಪ್ರಾ ಹೇಳಿಕೆಗೆ ಕಂಗನಾ ರಣಾವತ್ ಪ್ರತಿಕ್ರಿಯೆ ನೀಡಿದ್ದು ಕರಣ್ ಜೋಹರ್ ಬ್ಯಾನ್ ಮಾಡಿದ್ದು ಎನ್ನಲಿಗೂ ಗೊತ್ತಿದೆ ಎಂದು ಹೇಳಿದ್ದಾರೆ. 

Kangana Ranaut says everyone knows Karan Johar had banned Priyanka Chopra sgk

ಬಾಲಿವುಡ್ ನಟಿ ಕಂಗನಾ ರಣಾವತ್ ಒಂದಲ್ಲೊಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ಯಾವುದೇ ಘಟನೆ ಅಥವಾ ವಿಚಾರಗಲ ಬಗ್ಗೆ ತಕ್ಷಣ ಪ್ರತಿಕ್ರಿಯೆ ನೀಡಿರುವ ನಟಿ ಕಂಗನಾ ಇದೀಗ ಪ್ರಿಯಾಂಕಾ ಚೋಪ್ರಾ ಬಗ್ಗೆ ಮಾತನಾಡಿದ್ದಾರೆ. ವೃತ್ತಿಜೀವನದ ಉತ್ತುಂಗದಲ್ಲಿದ್ದಾಗಲೇ ಹಾಲಿವುಡ್‌ಗೆ ಹಾರಿದ ಬಗ್ಗೆ ನಟಿ ಪ್ರಿಯಾಂಕಾ ಚೋಪ್ರಾ ಮಾತನಾಡಿದ್ದರು. ಸಂದರ್ಶನವೊಂದರಲ್ಲಿ ಪ್ರಿಯಾಂಕಾ ಸಿನಿಮಾರಂಗದ ರಾಜಕೀಯದಿಂದ ಬೇಸತ್ತಿದ್ದೆ, ಮೂಲೆಗೆ ತೆಳ್ಳಲ್ಪಟ್ಟಿದ್ದೆ ಎಂದು ಹೇಳಿದ್ದರು. ಈ ಬಗ್ಗೆ ಕಂಗನಾ ರಣಾವತ್ ಪ್ರತಿಕ್ರಿಯೆ ನೀಡಿದ್ದಾರೆ. ಕರಣ್ ಜೋಹರ್ ಬ್ಯಾನ್ ಮಾಡಿದ್ದರಿಂದ ಬಾಲಿವುಡ್ ತೊರೆದಿರುವ ಬಗ್ಗೆ ಎಲ್ಲರಿಗೂ ಗೊತ್ತಿದೆ ಎಂದು ಕಂಗನಾ ಹೇಳಿದ್ದಾರೆ.  

ಕಂಗನಾ ಮತ್ತು ಪ್ರಿಯಾಂಕಾ ಚೋಪ್ರಾ ಒಟ್ಟಿಗೆ ಕೆಲಸ ಮಾಡಿದ್ದಾರೆ. 2008ರಲ್ಲಿ ಬಂದ ಫ್ಯಾಷನ್ ಸಿನಿಮಾದಲ್ಲಿ ಪ್ರಿಯಾಂಕಾ ಮತ್ತು ಕಂಗನಾ ಒಟ್ಟಿಗೆ ತೆರೆಹಂಚಿಕೊಂಡಿದ್ದರು. ಆದರೆ ಇಬ್ಬರ ನಡುವೆ ಉತ್ತಮ ಸ್ನೇಹ ಬಾಂಧವ್ಯವಿರಲ್ಲ. ಇದೀಗ ಪ್ರತಿಕ್ರಿಯೆ ನೀಡಿರುವ ಕಂಗನಾ ಬಾಲಿವುಡ್ ಬಗ್ಗೆ ಪ್ರಿಯಾಂಕಾ ಕೂಡ ಬಾಲಿವುಡ್ ಕರಾಳ ಮುಖ ಬೆಚ್ಚಿಟ್ಟಿದ್ದಾರೆ ಎಂದು ಕಂಗನಾ ಹೇಳಿದ್ದಾರೆ. 'ಬಾಲಿವುಡ್ ಬಗ್ಗೆ ಪ್ರಿಯಾಂಕಾ ಚೋಪ್ರಾ ಕೂಡ ಇದನ್ನೇ ಹೇಳುತ್ತಿದ್ದಾರೆ. ಜನರ ಗುಂಪು ಪ್ರಿಯಾಂಕಾ ವಿರುದ್ಧ ತಿರುಗಿಬಿತ್ತು. ಆಕೆಯನ್ನು ಬೆದರಿಸಿದರು. ಅವಳನ್ನು ಓಡಿಸಿದರು. ಸಿನಿಮಾರಂಗದ ಸ್ವಯಂ ನಿರ್ಮಿತ ಮಹಿಳೆಯನ್ನು ಭಾರತದಿಂದ ಓಡಿಸಿದರು. ಕರಣ್ ಜೋಹರ್ ಆಕೆಯನ್ನು ಬ್ಯಾನ್ ಮಾಡಿದ್ದರು ಎನ್ನುವುದು ಕೂಡ ಪ್ರತಿಯೊಬ್ಬರಿಗೂ ಗೊತ್ತು' ಎಂದು ಹೇಳಿದ್ದಾರೆ.  

ಕರಣ್ ಜೋಹರ್ ಜೊತೆಗಿನ ವೈಪರೀತ್ಯದ ಬಗ್ಗೆ ಮಾಧ್ಯಮಗಳು ವ್ಯಾಪಕವಾಗಿ ಬರೆದಿವೆ. ಪ್ರಿಯಾಂಕಾಗೆ ಕಿರುಕುಳ ನೀಡಲಾಯಿತು. ಒಂದು ಹಂತದಲ್ಲಿ ಭಾರತ ಬಿಟ್ಟು ಹೊರಡಬೇಕಾಯಿತು' ಎಂದು ಕಂಗನಾ ಹೇಳಿದ್ದಾರೆ. 

ಹಾಲಿವುಡ್ ಎಂಟ್ರಿ ಬಗ್ಗೆ ಶಾರುಖ್ ಖಾನ್ ಮಾತಿಗೆ ಪ್ರಿಯಾಂಕಾ ಚೋಪ್ರಾ ತಿರುಗೇಟು

ಡಾಕ್ಸ್ ಶೆಫರ್ಡ್ ಅವರ ಪಾಡ್‌ಕಾಸ್ಟ್ ಆರ್ಮ್‌ಚೇರ್ ಎಕ್ಸ್‌ಪರ್ಟ್‌ನಲ್ಲಿ ಮಾತನಾಡದ  ಪ್ರಿಯಾಂಕಾ ಭಾರತ ಬಿಟ್ಟು ಯಾಕೆ ಬಂದಿದ್ದು ಎಂದು ಬಹಿರಂಗಪಡಿಸಿದ್ದಾರೆ. ತನಗೆ ಉತ್ತಮ ಪಾತ್ರಗಳು ಸಿಗುತ್ತಿರಲಿಲ್ಲ, ಉದ್ಯಮ ರಾಜಕೀಯದ ನಡುವೆ ಪರದಾಟದ ಕಾರಣ ಬಿಡಬೇಕಾಯಿತು ಎಂದು ಹೇಳಿದ್ದಾರೆ.  
'ನಾನು ಇಂಡಸ್ಟ್ರಿಯಲ್ಲಿ (ಬಾಲಿವುಡ್) ಮೂಲೆಗೆ ತಳ್ಳಲ್ಪಟ್ಟಿದ್ದೆ, ನನ್ನನ್ನು ಯಾವುದೇ ಸಿನಿಮಾಗೆ ಆಯ್ಕೆ ಮಾಡುತ್ತಿರಲಿಲ್ಲ. ನಾನು ಬಾಲಿವುಡ್ ಜನರ ಜೊತೆ ಗೋಮಾಂಸ ತಿಂದಿದ್ದೇನೆ. ನನಗೆ ಆ ಆಟದಲ್ಲಿ ಆಡಲು ಇಷ್ಟವಿರಲ್ಲ. ಆ ರಾಜಕೀಯದಿಂದ ಬೇಸತ್ತಿದ್ದೆ ಮತ್ತು ನನಗೆ ಬ್ರೇಕ್ ಬೇಕಿತ್ತು' ಎಂದು ಹೇಳಿದ್ದಾರೆ.

2023 ರ ಟಾಪ್ 10 ಬಾಲಿವುಡ್‌ನ ಅತ್ಯಂತ ಸುಂದರ ನಟಿಯರ ಪಟ್ಟಿ ಇದು!

ಪ್ರಿಯಾಂಕಾ ಚೋಪ್ರಾ ಸದ್ಯ ಹಾಲಿವುಡ್ ಸಿನಿಮಾಗಳಲ್ಲಿ, ಸೀರಿಸ್‌ಗಳಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್‌ನಲ್ಲಿ ಕೊನೆಯದಾಗಿ ಪ್ರಿಯಾಂಕಾ ವೈಟ್ ಟೈಗರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಸದ್ಯ ಇಂಗ್ಲಿಷ್‌‌ನ ದಿ ಮ್ಯಾಟ್ರಿಕ್, ಸಿಟಾಡೆಲ್, ಲವ್ ಎಗೇನ್‌ನಲ್ಲಿ ಬ್ಯುಸಿಯಾಗಿದ್ದಾರೆ. ಕ್ವಾಂಟಿಕೋ ಟಿವಿ ಶೋ ಪ್ರಿಯಾಂಕಾ ಅವರಿಗೆ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟಿತ್ತು.  

 

Latest Videos
Follow Us:
Download App:
  • android
  • ios