ಈವೆಂಟ್ ಮ್ಯಾನೇಜ್ಮೆಂಟ್ ಕಂಪನಿಯೊಂದು ನೀಡಿದ ದೂರಿನ ಮೇರೆಗೆ ಬಾಲಿವುಡ್ ನಟಿ ಸನ್ನಿ ಲಿಯೋನ್ ಮತ್ತು ಇತರ ಇಬ್ಬರನ್ನು ಬಂಧಿಸುವುದನ್ನು ಕೇರಳ ಹೈಕೋರ್ಟ್ ಬುಧವಾರ ತಡೆಹಿಡಿದಿದೆ.

ಸುಮಾರು 29 ಲಕ್ಷ ರೂ.ಗಳ ಪಾವತಿಯನ್ನು ಸ್ವೀಕರಿಸಿದ ನಂತರ ಇಲ್ಲಿ ನಡೆಯುವ ಸಮಾರಂಭದಲ್ಲಿ ಪಾಲ್ಗೊಳ್ಳಲು ವಿಫಲರಾಗಿದ್ದಾರೆ ಎಂದು ಆರೋಪಿಸಲಾಗಿತ್ತು. ನ್ಯಾಯಮೂರ್ತಿ ಅಶೋಕ್ ಮೆನನ್ ಅವರು ಸನ್ನಿ, ಅವರ ಪತಿ ಡೇನಿಯಲ್ ವೆಬರ್ ಮತ್ತು ಇನ್ನೊಬ್ಬ ವ್ಯಕ್ತಿಯ ಮುಂಜಾಮೀನು ಅರ್ಜಿಗೆ ಮಧ್ಯಂತರ ಆದೇಶ ಹೊರಡಿಸಿದ್ದಾರೆ.

26 ಲಕ್ಷ ಪಡೆದು ವಂಚಿಸಿದ್ರಾ ಸನ್ನಿ ಲಿಯೋನ್..? ಹಾಟ್ ನಟಿಯ ವಿರುದ್ಧ ಕೇಸ್

ಸಿಆರ್‌ಪಿಸಿ 41 (ಎ) (ಪೊಲೀಸರ ಮುಂದೆ ಹಾಜರಾಗಲು ಸೂಚನೆ) ಪ್ರಕಾರ ಅರ್ಜಿದಾರರಿಗೆ ನೋಟಿಸ್ ನೀಡುವವರೆಗೂ ಅವರನ್ನು ಬಂಧಿಸದಂತೆ ನ್ಯಾಯಾಲಯ ನಿರ್ದೇಶನ ನೀಡಿತು.

ಕಳೆದ ಒಂದು ತಿಂಗಳಿನಿಂದ ಕೇರಳದಲ್ಲಿ ವೆಕೇಷನ್ ಎಂಜಾಯ್ ಮಾಡುತ್ತಿರುವ ಸನ್ನಿ ಲಿಯೋನ್ ಕೊರೋನಾ ವೈರಸ್‌ ಕಾರಣದಿಂದ ತಾನು ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.