ಕೆಜಿಎಫ್-2 ಈಗಾಗಲೇ ಅನೇಕ ದಾಖಲೆಗಳನ್ನು ನಿರ್ಮಾಣ ಮಾಡಿದೆ. ಘಟಾನುಘಟಿ ಸ್ಟಾರ್‌ಗಳ ದಾಖಲೆಗಳನ್ನು ಬ್ರೇಕ್ ಮಾಡಿರುವ ಯಶ್ ಸಿನಿಮಾ ಇದೀಗ ಮತ್ತೊಂದು ದಾಖಲೆ ಬರೆದಿದೆ. ಹೌದು, ದಕ್ಷಿಣ ಕೊರಿಯಾದ ಸಿಯೋಲ್​​ನಲ್ಲೂ ರಾಕಿ ಭಾಯ್​ ಚಿತ್ರ ಪ್ರದರ್ಶನಗೊಂಡಿದೆ. ಈ ಮೂಲಕ ಸೌತ್ ಕೊರಿಯಾದಲ್ಲಿ ಪ್ರದರ್ಶನಗೊಂಡಿರುವ ಮೊದಲ ಕನ್ನಡ ಚಿತ್ರ ಸಿನಿಮಾ ಇದಾಗಿದೆ.

ಕೆಜಿಎಫ್-2 ಈಗಾಗಲೇ ಅನೇಕ ದಾಖಲೆಗಳನ್ನು ನಿರ್ಮಾಣ ಮಾಡಿದೆ. ಘಟಾನುಘಟಿ ಸ್ಟಾರ್‌ಗಳ ದಾಖಲೆಗಳನ್ನು ಬ್ರೇಕ್ ಮಾಡಿರುವ ಯಶ್ ಸಿನಿಮಾ ಇದೀಗ ಮತ್ತೊಂದು ದಾಖಲೆ ಬರೆದಿದೆ. ಹೌದು, ದಕ್ಷಿಣ ಕೊರಿಯಾದ ಸಿಯೋಲ್​​ನಲ್ಲೂ ರಾಕಿ ಭಾಯ್​ ಚಿತ್ರ ಪ್ರದರ್ಶನಗೊಂಡಿದೆ. ಈ ಮೂಲಕ ಸೌತ್ ಕೊರಿಯಾದಲ್ಲಿ ಪ್ರದರ್ಶನಗೊಂಡಿರುವ ಮೊದಲ ಕನ್ನಡ ಚಿತ್ರ ಸಿನಿಮಾ ಇದಾಗಿದೆ. ಯಶ್ ನಟನೆಯ ಕೆಜಿಎಫ್-2 ಸಿನಿಮಾ ಪ್ರಪಂಚದಾದ್ಯಂತ ಭಾರಿ ಯಶಸ್ಸನ್ನು ಗಳಿಸಿದೆ. ವಿಶ್ವದ ಅನೇಕ ದೇಶಗಳಲ್ಲಿ ಕೆಜಿಎಫ್-2 ಬಿಡುಗಡೆಯಾಗಿದೆ.

ಇದೀಗ ಮೊದಲ ಬಾರಿಗೆ ಕನ್ನಡದ ಸಿನಿಮಾವೊಂದು ದಕ್ಷಿಣ ಕೊರಿಯಾದಲ್ಲಿ ಬಿಡುಗಡೆಯಾಗುತ್ತಿದೆ. ಈ ಮೂಲಕ ರಾಕಿ ಭಾಯ್ ಮಾರುಕಟ್ಟೆ ಮತ್ತಷ್ಟು ವಿಸ್ತಾರವಾಗುತ್ತಿದೆ. ಅಭಿಮಾನಿ ಬಳಗ ದೊಡ್ಡದಾಡುತ್ತಿದೆ. ಭಾರತ, ನೇಪಾಳ ಮತ್ತು ಬಾಂಗ್ಲದೇಶದಲ್ಲಿ ರಾಕಿ ಭಾಯ್ ನನ್ನು ನೋಡಿ ಪ್ರೇಕ್ಷಕರು ಫುಲ್ ಖುಷ್ ಆಗಿದ್ದಾರೆ. ಎಲ್ಲಾ ದೇಶಗಳಲ್ಲಿಯೂ ಅಭಿಮಾನಿಗಳು ಕೆಜಿಎಫ್-2 ನೋಡಿ ಎಂಜಾಯ್ ಮಾಡುತ್ತಿದ್ದಾರೆ. ರಾಕಿ ಭಾಯ್ ನನ್ನು ಹಾಡಿಹೊಗಳುತ್ತಿದ್ದಾರೆ.

ದಕ್ಷಿಣ ಕೊರಿಯಾದ ಸಿಯೋಲ್​ನಲ್ಲಿ ಕೆಜಿಎಫ್-2 ಹಿಂದಿ ಅವತರಣಿಕೆಯಲ್ಲಿ ತೆರೆಕಂಡಿದೆ. ಮೊದಲ ಪ್ರದರ್ಶನ ಕಂಡ ಕನ್ನಡದ ಮೊದಲ ಸಿನಿಮಾ ವೀಕ್ಷಿಸಿದ ಅಭಿಮಾನಿಗಳು ಸಂತಸವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಟ್ವಿಟರ್​​ನಲ್ಲಿ ಒಂದಿಷ್ಟು ಫೋಟೋಗಳು ಸಿಕ್ಕಾಪಟ್ಟೆ ವೈರಲ್​​ ಆಗಿವೆ.

KGF 2; ಚಿತ್ರೀಕರಣ ವೇಳೆ ಪ್ರಶಾಂತ್ ನೀಲ್ ಕಾಲೆಳೆದ ರವೀನಾ ಟಂಡನ್; ಮೇಕಿಂಗ್ ವಿಡಿಯೋ ವೈರಲ್

ಅಂದಹಾಗೆ ಕೆಜಿಎಫ್-2 ಸಿನಿಮಾ ವಿಶ್ವದಾದ್ಯಂತ ಏಪ್ರಿಲ್​ 14ರಂದು ಬಿಡುಗಡೆಯಾಗಿದೆ. ಕನ್ನಡ, ಹಿಂದಿ, ಮಲಯಾಳಂ, ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ರಿಲೀಸ್​ ಆಗಿದೆ. ಎಲ್ಲಾ ಭಾಷೆಯಲ್ಲೂ ಉತ್ತಮ ಪ್ರದರ್ಶನ ವ್ಯಕ್ತವಾಗಿದೆ. ಬಿಡುಗಡೆಯಾಗಿ ತಿಂಗಳು ಸಮೀಪಿಸುತ್ತಿದ್ದರೂ ಕೆಜಿಎಫ್-2 ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಈಗಾಗಲೇ ಎಲ್ಲಾ ದಾಖಲೆಗಳನ್ನು ಪುಡಿ ಪುಡಿ ಮಾಡಿರುವ ಕೆಜಿಎಫ್-2 ಹಿಂದಿಯಲ್ಲಿ ಅತೀ ಹೆಚ್ಚು ಕಲೆಕ್ಷನ್ ಮಾಡಿರುವ 2ನೇ ಸಿನಿಮಾ ಇದಾಗಿದೆ.

ಈಗಾಗಲೇ ಕೋಟಿ ಕೋಟಿ ಬಾಚಿಕೊಂಡಿರುವ ಕೆಜಿಎಫ್-2 ಕಲೆಕ್ಷನ್ ಅಬ್ಬರ ಇನ್ನೂ ಮುಂದುವರೆದಿದೆ. ಭಾರತದ ಘಟಾನುಘಟಿ ಸ್ಟಾರ್‌ಗಳನ್ನು ಹಿಂದಿಕ್ಕಿ ಮುನ್ನುಗ್ಗುತ್ತಿರುವ ಕೆಜಿಎಫ್-2 ಸದ್ಯ ಹಿಂದಿ ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ 2ನೇ ಸ್ಥಾನದಲ್ಲಿದೆ. ಆಮೀರ್ ಖಾನ್ ನಟನೆಯ ದಂಗಲ್, ಆರ್ ಆರ್ ಆರ್ ಕಲೆಕ್ಷನ್ ಹಿಂದಿಕ್ಕಿ 2ನೇ ಸಿನಿಮಾದಲ್ಲಿದೆ.

ಭಾರತದ ಟಾಪ್ 3 ಸಿನಿಮಾಗಳ ಕಲೆಕ್ಷನ್ ವಿವರ

ಮೊದಲ ಸ್ಥಾನದಲ್ಲಿರುವ ದಂಗಲ್(Dangal) ಸಿನಿಮಾ 2024 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. 1810 ಕೋಟಿ ರೂಪಾಯಿ ಗಳಿಕೆ ಮಾಡುವ ಮೂಲಕ ಬಾಹುಬಲಿ -2(Bahubali 2) ಎರಡನೇ ಸ್ಥಾನದಲ್ಲಿದೆ. 1100 ಕೋಟಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ 3ನೇ ಸ್ಥಾನದಲ್ಲಿದೆ ಕೆಜಿಎಫ್-2.

Scroll to load tweet…


KGF 2; ಬಾಕ್ಸ್ ಆಫೀಸ್‌ನಲ್ಲಿ ರಾಕಿ ರಣಾರ್ಭಟ, ರೆಕಾರ್ಡುಗಳು ಧೂಳಿಪಟ

ಪ್ರಶಾಂತ್ ನೀಲ್ ನಿರ್ದೇಶನ, ಯಶ್ ಮತ್ತು ಸಂಜಯ್ ದತ್ ನಟನೆ, ರವೀನಾ ಟಂಡನ್, ಶ್ರೀನಿಧಿ ಶೆಟ್ಟಿ, ಅರ್ಚನಾ ಜೋಯಿಶ್ ಹೀಗೆ ಪ್ರತಿಯೊಂದು ಪಾತ್ರಗಳು ಅಭಿಮಾನಿಗಳ ಹೃದಯ ಗೆದ್ದಿದೆ. ಆಕ್ಷನ್ ದೃಶ್ಯ, ಸಂಗೀತ, ಮಾಸ್ ಎಲಿಮೆಂಟ್, ತಾಯಿ ಸೆಂಟಿಮೆಂಟ್ ಪ್ರತಿಯೊಂದು ವಿಭಾಗದಲ್ಲೂ ಕೆಜಿಎಫ್-2 ಅಭಿಮಾನಿಗಳ ಪ್ರೇಕ್ಷಕರ ಮನಸೆಳೆದಿದೆ.