'ಅವನು ಒಬ್ಬನೇ ಬರೋನು..ಮಾನ್ ಸ್ಟರ್' ಡೈಲಾಗ್ ಹೊಡೆದು KGFನಲ್ಲಿ ಮಿಂಚಿದ್ದ ನಟ ಮೋಹನ್ ಜುನೇಜ ಇನ್ನಿಲ್ಲ

ಸ್ಯಾಂಡಲ್ ವುಡ್‌ನ ಹಿರಿಯ ಹಾಸ್ಯ ಕಲಾವಿದ ಮೋಹನ್ ಜುನೇಜ(Mohan Juneja) ನಿಧನರಾಗಿದ್ದಾರೆ. ಆನಾರೋಗ್ಯದಿಂದ ಬಳಲುತ್ತಿದ್ದ ಮೋಹನ್ ಜುನೇಜ ರನ್ನು ಆಸ್ಪತ್ರೆಗೆ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಮೃತಪಟ್ಟಿದ್ದಾರೆ ಎಂದು ಕುಟುಂಬ ಮೂಲಗಳ ಮಾಹಿತಿ ನೀಡಿದೆ. ಮೋಹನ್ ಜುನೇಜ ನಿಧನಕ್ಕೆ ಆಪ್ತರು ಮತ್ತು ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

kgf actor mohan juneja passed away due to health problem in bengaluru sgk

ಸ್ಯಾಂಡಲ್ ವುಡ್‌ನ ಹಿರಿಯ ಹಾಸ್ಯ ಕಲಾವಿದ ಮೋಹನ್ ಜುನೇಜ(Mohan Juneja) ನಿಧನರಾಗಿದ್ದಾರೆ. ಆನಾರೋಗ್ಯದಿಂದ ಬಳಲುತ್ತಿದ್ದ ಮೋಹನ್ ಜುನೇಜ ರನ್ನು ಆಸ್ಪತ್ರೆಗೆ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಮೃತಪಟ್ಟಿದ್ದಾರೆ ಎಂದು ಕುಟುಂಬ ಮೂಲಗಳ ಮಾಹಿತಿ ನೀಡಿದೆ. ಮೋಹನ್ ಜುನೇಜ ನಿಧನಕ್ಕೆ ಆಪ್ತರು ಮತ್ತು ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ ಮೋಹನ್ ಜುನೇಜ ಅವರು ಹಾಸ್ಯ ಪಾತ್ರಗಳ ಮೂಲಕ ಜನಪ್ರಿಯರಾಗಿದ್ದರು. ಕೆಜಿಎಫ್ ಸಿನಿಮಾದ ಪಾತ್ರ ಮೋಹನ್ ಜುನೇಜ ಅವರಿಗೆ ಮತ್ತಷ್ಟು ಖ್ಯಾತಿ ತಂದುಕೊಟ್ಟಿತ್ತು.

ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ವಾಸವಾಗಿದ್ದ ಮೋಹನ್ ಜುನೇಜ ಅವರು ತಾಯಿ, ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಅನೇಕ ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಅವರು ಬಳಲುತ್ತಿದ್ದರು. ಆರೋಗ್ಯದಲ್ಲಿ ತೀವ್ರ ಏರುಪೇರು ಆದ ಹಿನ್ನೆಲೆಯಲ್ಲಿ ಹೆಸರಘಟ್ಟ ರಸ್ತೆಯ ಸಪ್ತಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿ ಆಗದೇ ಶುಕ್ರವಾರ (ಮೇ 6) ರಾತ್ರಿ ಮೋಹನ್ ಜುನೇಜ ನಿಧನರಾದರು.

ಕೆಜಿಎಫ್ ಸಿನಿಮಾದಲ್ಲಿ ರಾಕಿ ಭಾಯ್ ಗುಣಗಾನ ಮಾಡುವ ಪಾತ್ರದಲ್ಲಿ ಮಿಂಚಿದ್ದರು. ಈ ಸಿನಿಮಾದಲ್ಲಿ ರಾಕಿ ಭಾಯ್ ಬಗ್ಗೆ ಮಾಹಿತಿ ನೀಡುವ ಪಾತ್ರ ಮಾಡಿದ್ದರು. ಪತ್ರಕರ್ತ ಆನಂದ್ ಇಂಗಳಿಗಿಗೆ ರಾಕಿ ಭಾಯ್‌ ಬಗ್ಗೆ ಮಾಹಿತಿ ನೀಡುವ ವ್ಯಾಕ್ತಿಯಾಗಿ ಮಿಂಚಿದ್ದರು. ಕೆಜಿಎಫ್ ಮೊದಲ ಭಾಗದಲ್ಲಿ ಅವರ ಡೈಲಾಗ್ ಸಿಕ್ಕಾಪಟ್ಟೆ ಫೇಮಸ್ ಆಗಿತ್ತು. ರಾಕಿ ಭಾಯ್ ಬಗ್ಗೆ ವಿವರಣೆ ನೀಡುತ್ತಾ 'ಗ್ಯಾಂಗ್ ಕಟ್ಕೊಂಡು ಬರೋನು ಗ್ಯಾಂಗ್ ಸ್ಟರ್...ಅವನು ಒಬ್ಬನೇ ಬರೋನು..ಮಾನ್ ಸ್ಟರ್' ಎಂದು ಡೈಲಾಗ್ ಹೇಳಿ ಖ್ಯಾತಿಗಳಿಸಿದ್ದರು. ಕೆಜಿಎಫ್-2ನಲ್ಲೂ ಕಾಣಿಸಿಕೊಂಡಿದ್ದರು. ಹಾಸ್ಯ ಕಲಾವಿದನ ನಿಧನ ಅಭಿಮಾನಿಗಳಿಗೆ ನೋವು ತಂದಿದೆ.

ಮೋಹನ್ ಜುನೇಜ ಅನೇಕ ಪಾತ್ರದಲ್ಲಿ ಜನಪ್ರಿಯ ಪಾತ್ರಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಕನ್ನಡ ಸಿನಿರಸಿಕರನ್ನು ರಂಜಿಸಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಚೆಲ್ಲಾಟ ಸಿನಿಮಾ ಪಾತ್ರ ಕೂಡ ಫೇಮಸ್ ಆಗಿತ್ತು. ಮದುಮಗ ಎನ್ನುವ ಪಾತ್ರದಲ್ಲಿ ಮೋಹನ್ ಕಾಣಿಸಿಕೊಂಡಿದ್ದರು. ಇನ್ನು ಜೋಗಿ ಸಿನಿಮಾದಲ್ಲೂ ಮಿಂಚಿದ್ದರು. ಹೀಗೆ ಅನೇಕ ಸೂಪರ್ ಹಿಟ್ ಸಿನಿಮಾಗಳಲ್ಲಿ ಮೋಹನ್ ನಟಿಸಿದ್ದಾರೆ. ಮೋಹನ್ ಅವರ ಮೊದಲ ಸಿನಿಮಾ 'ವಾಲ್ ಪೋಸ್ಟರ್' ಮತ್ತು ಅವರ ಮೊದಲ ಧಾರಾವಾಹಿ 'ವಠಾರ'. ಅವರ ಮೊದಲ ಸಿನಿಮಾ ಮೂರ್ನಾಲ್ಕು ಪ್ರಶಸ್ತಿ ಪಡೆದುಕೊಂಡಿತ್ತು.

ಕನ್ನಡ ಮಾತ್ರವಲ್ಲದೆ ಬೇರೆ ಭಾಷೆಯ ಚಿತ್ರಗಳಲ್ಲೂ ಕೂಡ ಬಣ್ಣ ಹಚ್ಚಿದ್ದರು. ಸಿನಿಮಾ ಮಾತ್ರವಲ್ಲದೆ ಅನೇಕ ಧಾರಾವಾಹಿಗಳಲ್ಲೂ ನಟಿಸುವ ಮೂಲಕ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದ್ದಾರೆ. ಜೀ ಕನ್ನಡ (Zee Kannada) ವಾಹಿನಿಯಲ್ಲಿ ಪ್ರಸಾರವಾಗುವ ಹಿಟ್ಲರ್ ಕಲ್ಯಾಣ (Hitler Kalyana) ಧಾರಾವಾಹಿಯಲ್ಲಿ ಇತ್ತೀಚಿಗೆ ಕಾಣಿಸಿಕೊಂಡಿದ್ದರು. ಹೆಣ್ಣು ಮಕ್ಕಳಿಗೆ ತಾಳಿ ಮಹತ್ವ ಸಾರಿದ್ದರು. ಮೋಹನ್  ಅವರ ಆರ್ಥಿಕ ಜೀವನ ತುಂಬಾ ಕಷ್ಟದಲ್ಲಿತ್ತು. ಲಾಕ್ ಡೌನ್ ಸಮಯದಲ್ಲಿ ಅವರು ಜೀವನ ಸಂಕಷ್ಟಕ್ಕೆ ಸಿಲುಕಿತ್ತು. ಆ ಸಮಯದಲ್ಲಿ ಅವರಿಗೆ ನಟ ಉಪೇಂದ್ರ ಸಹಾಯ ಮಾಡಿದ್ದರು. ರಿಯಲ್ ಸ್ಟಾರ್ ಮಾಡಿದ ಸಹಾಯವನ್ನು ಮೋಹನ್ ವಿಡಿಯೋ ಮೂಲಕ ಬಹಿರಂಗ ಪಡಿಸಿ ಉಪೇಂದ್ರ ಅವರಿಗೆ ಧನ್ಯವಾದ ತಿಳಿಸಿದ್ದರು. ಅನೇಕ ಪಾತ್ರಗಳಿಗೆ ಬಣ್ಣ ಹಚ್ಚುವ ಮೂಲಕ ತೆರೆಮೇಲೆ ಮಿಂಚಿದ್ದ ಮೋಹನ್ ಇನ್ನುನೆನಪು ಮಾತ್ರ.

Latest Videos
Follow Us:
Download App:
  • android
  • ios