ಕಪೂರ್ ಫ್ಯಾಮಿಲಿ ಅನ್ಫ್ರೆಂಡ್ ಮಾಡಿದ ಮಲೈಕಾ: ಅರ್ಜುನ್ ಜೊತೆ ಸಾಕಾಗೋಯ್ತಾ?
ಮಲೈಕಾ ಅರೋರಾ ಮತ್ತು ಅರ್ಜುನ್ ಕಪೂರ್ ಸಂಬಂಧ ಹಳಸಿದೆ ಎನ್ನುವ ಮಧ್ಯೆಯೇ ಮಲೈಕಾ ಕಪೂರ್ ಫ್ಯಾಮಿಲಿ ಸದಸ್ಯರನ್ನು ಸೋಷಿಯಲ್ ಮೀಡಿಯಾದಲ್ಲಿ ಅನ್ಫಾಲೋ ಮಾಡಿದ್ದು ಮತ್ತಷ್ಟು ಗಾಸಿಪ್ಗೆ ಕಾರಣವಾಗಿದೆ.
ಮಲೈಕಾ ಅರೋರಾ (Malaika Arora) ಮತ್ತು ಅರ್ಬಾಜ್ ಖಾನ್ ಅವರನ್ನು ಹಿಂದಿನ ದಿನದ ಹಾಟೆಸ್ಟ್ ಜೋಡಿಗಳಲ್ಲಿ ಒಂದು ಎಂದೇ ಕರೆಯಲಾಗುತ್ತಿತ್ತು. ಆದರೆ ಅವರು ಬೇರ್ಪಟ್ಟು ಹಲವು ವರ್ಷಗಳೇ ಕಳೆದಿವೆ. 2017ರಲ್ಲಿ ಈ ಜೋಡಿ ಬೇರ್ಪಟ್ಟಿದೆ. ಮಲೈಕಾ ಅರೋರಾಗೆ ಈಗ 49 ವರ್ಷ ವಯಸ್ಸು. ಅರ್ಬಾಜ್ ಖಾನ್ ಜೊತೆ ಬೇರ್ಪಟ್ಟ ಬಳಿಕ 12 ವರ್ಷ ಚಿಕ್ಕವಾಗಿರುವ ನಟ ಅರ್ಜುನ್ ಕಪೂರ್ (Arjun Kapoor) ಜೊತೆ ಕೆಲ ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದಾರೆ ಮಲೈಕಾ. ಇವರಿಬ್ಬರು ಜೊತೆಯಾಗಿ ಕಾಣಿಸಿಕೊಂಡಾಗ ಆಗುವಷ್ಟು ಟ್ರೋಲ್ ಇನ್ನಾವುದಕ್ಕೂ ಆಗುತ್ತಿಲ್ಲ ಎನ್ನಬಹುದೇನೋ. ಅದೇನೇ ಇದ್ದರೂ ಇವರಿಬ್ಬರೂ ಯಾರಿಗೂ ಡೋಂಟ್ಕೇರ್ ಎನ್ನದೇ ಜೀವನ ನಡೆಸುತ್ತಿದ್ದಾರೆ. ಮಲೈಕಾ ಅರ್ಜುನ್ ಕಪೂರ್ ಜೊತೆ ಡೇಟಿಂಗ್ನಲ್ಲಿದ್ದರೂ ಮಗನಿಗಾಗಿ ಆಗಾಗ್ಗೆ ಅರ್ಬಾಜ್ ಖಾನ್ರನ್ನು ಭೇಟಿಯಾಗುವುದು, ತಬ್ಬಿಕೊಳ್ಳುವುದು ನಡೆದಿದ್ದು, ಇವುಗಳ ವಿಡಿಯೋಗಳೂ ವೈರಲ್ ಆಗುತ್ತಲೇ ಇರುತ್ತವೆ. ಆದರೆ ಇದರ ಬೆನ್ನಲ್ಲೇ ಇವರಿಬ್ಬರೂ ಬ್ರೇಕಪ್ ಆಗಿದ್ದಾರೆ ಎಂಬ ಭಾರಿ ಸುದ್ದಿ ಬಿ ಟೌನ್ನಲ್ಲಿ ಹರಿದಾಡುತ್ತಿದೆ. ಇಷ್ಟು ದಿನ ಮಲೈಕಾ ಜೊತೆ ಟ್ರಿಪ್ಗೆ ಹೋಗುತ್ತಿದ್ದ ಅರ್ಜುನ್ ಈಗ ಒಂಟಿಯಾಗಿ ತಿರುಗಾಡಲು ಶುರು ಮಾಡಿದ್ದೇ ಈ ಗಾಳಿ ಸುದ್ದಿಗೆ ಕಾರಣವಾಗಿದೆ.
ಆದರೆ ಇದರ ಬೆನ್ನಲ್ಲೇ ಇವರಿಬ್ಬರೂ ಬ್ರೇಕಪ್ ಆಗಿದ್ದಾರೆ ಎಂಬ ಭಾರಿ ಸುದ್ದಿ ಬಿ ಟೌನ್ನಲ್ಲಿ ಹರಿದಾಡುತ್ತಿದೆ. ಇಷ್ಟು ದಿನ ಮಲೈಕಾ ಜೊತೆ ಟ್ರಿಪ್ಗೆ ಹೋಗುತ್ತಿದ್ದ ಅರ್ಜುನ್ ಈಗ ಒಂಟಿಯಾಗಿ ತಿರುಗಾಡಲು ಶುರು ಮಾಡಿದ್ದೇ ಈ ಗಾಳಿ ಸುದ್ದಿಗೆ ಕಾರಣವಾಗಿದೆ. ಅದೇ ಇನ್ನೊಂದೆಡೆ, ಕೆಲವು ದಿನಗಳಿಂದ ನಟಿ ಕುಶಾ ಕಪಿಲಾ ಅವರ ಹೆಸರು ಅರ್ಜುನ್ ಕಪೂರ್ ಜತೆ ಥಳುಕು ಹಾಕಿಕೊಂಡಿದೆ. ಕುಶಾ ಜೊತೆ ಅರ್ಜುನ್ ಕಪೂರ್ (Arjun Kapoor) ಡೇಟಿಂಗ್ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈಗ ಚಿಕ್ಕ ವಯಸ್ಸಿನ ಕುಶಿ ಜೊತೆ ಹೆಸರು ಕೇಳಿಬರುತ್ತಿದ್ದಂತೆಯೇ ಅವರಿಬ್ಬರ ಸುದ್ದಿ ಸಕತ್ ಕೇಳಿಬರುತ್ತಿದೆ. ಅಷ್ಟಕ್ಕೂ ಇವರಿಬ್ಬರ ಹೆಸರು ಥಳಕು ಹಾಕಲು ಕಾರಣ ಏನೆಂದರೆ, ಈ ಹಿಂದೆ, ಅರ್ಜುನ್ ಕಪೂರ್ ಮತ್ತು ಕುಶಾ ಕಪಿಲಾ ನಿರ್ದೇಶಕ ಕರಣ್ ಜೋಹರ್ ಅವರ ಮನೆಯಲ್ಲಿ ಕಾಣಿಸಿಕೊಂಡಿದ್ದರು. ಆದರೆ ಇಲ್ಲಿ ಮಲೈಕಾ ಅರೋರಾ ಬಂದಿರಲಿಲ್ಲ. ಅಷ್ಟೇ ಅಲ್ಲದೇ, ಅರ್ಜುನ ಕಪೂರ್ ಸೋಲೋ ಟ್ರಿಪ್ ಮಾಡುತ್ತಿದ್ದಾರೆ. ಇವೆಲ್ಲವನ್ನೂ ಒಂದಕ್ಕೊಂದು ಜೋಡಿಸಿ ಈ ರೂಮರ್ಸ್ ಹರಡಲಾಗುತ್ತಿದೆ.
ಅರ್ಜುನ್ ಕಪೂರ್‌ಗೆ ಮಲೈಕಾ ಸಹವಾಸ ಸಾಕಾಯ್ತಾ? ನಟಿ ಕುಶಾ ಜೊತೆ ಏನಿದು ವಿಷ್ಯ?
ಅರ್ಜುನ್ ಕಪೂರ್, ಮಲೈಕಾ ಬ್ರೇಕಪ್ ಮಾಡಿಕೊಂಡಿದ್ದಾರೋ ಇಲ್ಲವೋ ತಿಳಿದಿಲ್ಲ. ಆದರೆ ಇದೀಗ ಇನ್ನೊಂದು ಹೆಜ್ಜೆ ಮುಂದಕ್ಕೆ ಹೋಗಿರುವ ಮಲೈಕಾ, ಅರ್ಜುನ್ ಕಪೂರ್ ಜೊತೆಗಿನ ಬ್ರೇಕಪ್ ವದಂತಿಗಳ ನಡುವೆ ಕಪೂರ್ ಫ್ಯಾಮಿಲಿಯ ಸದಸ್ಯರನ್ನು ಸಾಮಾಜಿಕ ಜಾಲತಾಣದಿಂದ ಅನ್ಫಾಲೋ ಮಾಡಿದ್ದಾರೆ! ಮಲೈಕಾ ಅವರ ಪೋಸ್ಟ್‌ನ ಸ್ಕ್ರೀನ್‌ಗ್ರಾಬ್, ಸ್ಟ್ರಾಂಗ್ ಎಂಬ ಉಲ್ಲೇಖವನ್ನು ಒಳಗೊಂಡಿತ್ತು, ಇದನ್ನು ರೆಡ್ಡಿಟ್ ಥ್ರೆಡ್‌ನಲ್ಲಿ (reddit thread) ಹಂಚಿಕೊಳ್ಳಲಾಗಿದೆ. ಇದರಲ್ಲಿ ಮಲೈಕಾ ಅವರು, ಅರ್ಜುನ್ ಕಪೂರ್ ಸಹೋದರಿಯರಾದ ಜಾನ್ವಿ ಕಪೂರ್, ಅಂಶುಲಾ ಕಪೂರ್ ಮತ್ತು ಖುಷಿ ಕಪೂರ್ ಅವರನ್ನು ಅನ್ಫಾಲೋ ಮಾಡಿದ್ದಾರೆ. ಆದರೆ ಕುತೂಹಲ ಎಂದರೆ ಅರ್ಜುನ್ ಕಪೂರ್ ಅವರನ್ನು ಇನ್ನೂ ಫಾಲೋ ಮಾಡುತ್ತಿದ್ದಾರೆ.
ಚರ್ಚಾ ವೇದಿಕೆಯಾದ ರೆಡ್ಡಿಟ್‌ನಲ್ಲಿ ಸ್ಕ್ರೀನ್‌ಶಾಟ್ (screenshot) ಹಂಚಿಕೊಂಡ ತಕ್ಷಣ, ನೆಟಿಜನ್‌ಗಳು ತಮ್ಮ ಅಭಿಪ್ರಾಯಗಳೊಂದಿಗೆ ಕಾಮೆಂಟ್ ವಿಭಾಗಗಳನ್ನು ಸ್ಫೋಟಿಸುತ್ತಿದ್ದಾರೆ. ವಯಸ್ಸಿನಲ್ಲಿ ಎಷ್ಟು ಅಂತರ ಇರಬೇಕು ಎಂದು ಹಿರಿಯರು ಮಾಡಿದ್ದು ಇದೇ ಕಾರಣಕ್ಕೆ ಎಂದು ಕೆಲವರು ಹೇಳಿದ್ದರೆ, ಅರ್ಜುನ್ ಕಪೂರ್‌ಗೆ ಈಗ ಮಲೈಕಾ ಅಜ್ಜಿ ಎಂದು ತಿಳಿದಿರಬೇಕು ಎಂದು ಕಾಲೆಳೆದಿದ್ದಾರೆ. ಈ ಸಿನಿಮಾ ಮಂದಿಯದ್ದು ಇಷ್ಟೇ ಬಿಡಿ, ಇವರಿಗೆ ಸಂಬಂಧ, ಲೈಂಗಿಕತೆ ಎಲ್ಲವೂ ಮಾಮೂಲು. ಇವತ್ತು ಒಬ್ಬನು/ಒಬ್ಬಳು ನಾಳೆ ಮತ್ತೊಬ್ಬರು ಅಷ್ಟೇ ಎನ್ನುತ್ತಿದ್ದಾರೆ.
ಅರ್ಜುನ್ ಕಪೂರ್ ಬ್ರೇಕಪ್ ಸುದ್ದಿ ಬೆನ್ನಲ್ಲೇ ಮಾಜಿ ಪತಿಯ ಲವ್ ಸ್ಟೋರಿ ನೆನಪಿಸಿಕೊಂಡ ಮಲೈಕಾ!