ಹಿರಿಯ ಬಾಲಿವುಡ್ ನಟ ಮತ್ತು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅವರ ಸ್ಥಿತಿ ಹಠಾತ್ತನೆ ಹದಗೆಟ್ಟಿದೆ. ಅವರಿಗೆ ನಿನ್ನೆ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಅವರು ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರನ್ನು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದರು.
ಬಾಲಿವುಡ್‌ನ ‘ಡಿಸ್ಕೋ ಡ್ಯಾನ್ಸರ್’ ಖ್ಯಾತಿಯ ಮಿಥುನ್ ಚಕ್ರವರ್ತಿ ಆಸ್ಪತ್ರೆಗೆ ದಾಖಲು
ಬಾಲಿವುಡ್‌ನ ‘ಡಿಸ್ಕೋ ಡ್ಯಾನ್ಸರ್’ ಖ್ಯಾತಿಯ ಮಿಥುನ್ ಚಕ್ರವರ್ತಿ ಅವರಿಗೆ ಗುರುವಾರ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಅವರ ದೇಹದಲ್ಲಿ ಈ ಹಿಂದೆ ಅಳವಡಿಸಲಾಗಿದ್ದ ಮೆಟಲ್ ಪ್ಲೇಟ್‌ನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆದುಹಾಕಲಾಗಿದೆ. ಈ ಕಾರಣಕ್ಕಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವಿಚಾರ ತಿಳಿಯುತ್ತಿದ್ದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಶುಭೇಂದು ಅಧಿಕಾರಿ ಆಸ್ಪತ್ರೆಗೆ ತೆರಳಿ ಮಿಥುನ್ ಚಕ್ರವರ್ತಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಈ ಬಗ್ಗೆ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಮಿಥುನ್ ಚಕ್ರವರ್ತಿಗೆ ಶಸ್ತ್ರಚಿಕಿತ್ಸೆ
ಮಿಥುನ್ ಚಕ್ರವರ್ತಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ ರಾತ್ರಿ ಅವರಿಗೆ ಆಸ್ಪತ್ರೆಯಲ್ಲಿ ಸಣ್ಣ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ವೈದ್ಯರ ಪ್ರಕಾರ, ಇದು ಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸೆಯಾಗಿದ್ದು, ಅವರ ದೇಹದಲ್ಲಿ ಈ ಹಿಂದೆ ಅಳವಡಿಸಲಾಗಿದ್ದ ಮೆಟಲ್ ಪ್ಲೇಟ್‌ನ್ನು ತೆಗೆದುಹಾಕಲಾಗಿದೆ. ಸದ್ಯ ಮಿಥುನ್ ಚಕ್ರವರ್ತಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಸಿಎಂ ಶುಭೇಂದು ಅಧಿಕಾರಿ ಆಸ್ಪತ್ರೆಗೆ ಭೇಟಿ
ಶುಕ್ರವಾರ ಬೆಳಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಶುಭೇಂದು ಅಧಿಕಾರಿ ಮಿಥುನ್ ಚಕ್ರವರ್ತಿ ಅವರನ್ನು ಭೇಟಿಯಾಗಲು ಆಸ್ಪತ್ರೆಗೆ ತೆರಳಿದರು. ನಟನನ್ನು ಭೇಟಿಯಾಗಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ ಅವರು, ಚಿಕಿತ್ಸೆ ನೀಡುತ್ತಿರುವ ವೈದ್ಯಕೀಯ ತಂಡದೊಂದಿಗೂ ಮಾತುಕತೆ ನಡೆಸಿ ಆರೋಗ್ಯದ ಮಾಹಿತಿ ಪಡೆದರು.
ಮಿಥುನ್ ಆರೋಗ್ಯದ ಬಗ್ಗೆ ಶುಭೇಂದು ಅಧಿಕಾರಿ ಅಪ್‌ಡೇಟ್
ಮಿಥುನ್ ಚಕ್ರವರ್ತಿ ಅವರನ್ನು ಭೇಟಿಯಾದ ಬಳಿಕ ಶುಭೇಂದು ಅಧಿಕಾರಿ ಅವರ ಆರೋಗ್ಯದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಮಿಥುನ್ ಚಕ್ರವರ್ತಿ ದೈಹಿಕ ಅನಾರೋಗ್ಯದ ಕಾರಣ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ಭೇಟಿ ಮಾಡಿ ಮಾತನಾಡಿದ್ದು, ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೇ ಮಿಥುನ್ ಚಕ್ರವರ್ತಿ ಅವರ ಆರೋಗ್ಯ ಇದೀಗ ಸಾಮಾನ್ಯ ಸ್ಥಿತಿಯಲ್ಲಿದೆ. ವೈದ್ಯರ ಮೇಲ್ವಿಚಾರಣೆಯಲ್ಲಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಶೀಘ್ರದಲ್ಲೇ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ನಿರೀಕ್ಷೆಯಿದೆ ಎಂದು ಶುಭೇಂದು ಅಧಿಕಾರಿ ತಿಳಿಸಿದ್ದಾರೆ.
2024ರಲ್ಲೂ ಆಸ್ಪತ್ರೆಗೆ ದಾಖಲಾಗಿದ್ದರು
ಮಿಥುನ್ ಚಕ್ರವರ್ತಿ ಆಸ್ಪತ್ರೆಗೆ ದಾಖಲಾಗಿರುವುದು ಇದೇ ಮೊದಲ ಬಾರಿಯಲ್ಲ. 2024ರ ಫೆಬ್ರವರಿಯಲ್ಲಿ ಮೆದುಳಿನ ಪಾರ್ಶ್ವವಾಯು ಹಾಗೂ ಎದೆನೋವಿನ ಸಮಸ್ಯೆಯಿಂದ ಅವರನ್ನು ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಗಲೂ ಶುಭೇಂದು ಅಧಿಕಾರಿ ಆಸ್ಪತ್ರೆಗೆ ತೆರಳಿ ಮಿಥುನ್ ಚಕ್ರವರ್ತಿ ಅವರ ಆರೋಗ್ಯ ವಿಚಾರಿಸಿದ್ದರು.
ನಿಟ್ಟುಸಿರು ಬಿಟ್ಟ ಅಭಿಮಾನಿಗಳು
ಮಿಥುನ್ ಚಕ್ರವರ್ತಿ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ಹೊರಬಂದ ಬಳಿಕ ಅವರ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿತ್ತು. ಆದರೆ ಇದೀಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಹೊರಬಂದಿರುವುದು ಅಭಿಮಾನಿಗಳಿಗೆ ನೆಮ್ಮದಿ ತಂದಿದೆ.


