ಸಲ್ಮಾನ್​ ಖಾನ್​ ಬೆನ್ನುಬಿಡದ ಕೃಷ್ಣಮೃಗ! ಯೂಟ್ಯೂಬ್​ನಲ್ಲಿ ಕೊಲೆ ಬೆದರಿಕೆ ಹಾಕಿದ ಯುವಕ ಅರೆಸ್ಟ್​

ಸಲ್ಮಾನ್​ ಖಾನ್​ ಕ್ಷಮೆ ಕೋರುತ್ತಿಲ್ಲ,  ಕೃಷ್ಣಮೃಗ ಅವರ ಬೆನ್ನು ಬಿಡುತ್ತಿಲ್ಲ. ಇದೀಗ ನಟನನ್ನು ಕೊಲೆ ಮಾಡುವುದಾಗಿ ಯೂಟ್ಯೂಬ್​ನಲ್ಲಿ ಕೊಲೆ ಬೆದರಿಕೆ ಹಾಗಿದ್ದ ಯುವಕ ಅರೆಸ್ಟ್​ ಆಗಿದ್ದಾನೆ.
 

Mumbai Police arrest Rajasthan man over video threatening to kill Salman Khan suc

ನಟ ಸಲ್ಮಾನ್​ ಖಾನ್​  (Salman Khan) ಅವರ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಹೊರಗಡೆ ಗುಂಡಿನ ದಾಳಿ ನಡೆದಿದ್ದು, ಎರಡು ತಿಂಗಳಾಗಿದೆ. ಕಳೆದ ಏಪ್ರಿಲ್​ 14ರಂದು ಈ ಘಟನೆ ಸಂಭವಿಸಿತ್ತು. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.  ದಾಳಿ ಮಾಡಿದ್ದು ತಾವೇ ಎಂದು  ಕುಖ್ಯಾತ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯಿ ಗುಂಪಿನವರು ಒಪ್ಪಿಕೊಂಡಿದ್ದಾರೆ. ಇದಾಗಲೇ ಓರ್ವ ಆರೋಪಿ ಜೈಲಿನಲ್ಲಿಯೇ ಆತ್ಮಹತ್ಯೆಯನ್ನೂ ಮಾಡಿಕೊಂಡಿದ್ದಾರೆ. ಸಲ್ಮಾನ್​ ಖಾನ್​ ಅವರಿಗೆ  ಇದಾಗಲೇ ಲಾರೆನ್ಸ್​ ಸಾಕಷ್ಟು ಬಾರಿ  ಬೆದರಿಕೆ ಪತ್ರ ಕಳುಹಿಸಿದ್ದ. ಕೆಲವು ಬಾರಿ ನೇರವಾಗಿ ನಾನೂ ಈ ಕೃತ್ಯ ಮಾಡಿರುವುದಾಗಿಯೂ ಹೇಳಿದ್ದ. ಇದಾಗಲೇ ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ, ನಟನಿಗೆ ಟೈಟ್​ ಸೆಕ್ಯುರಿಟಿ ನೀಡಲಾಗಿದೆ. 

ಗುಂಡಿನ ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿರುವ ಪೊಲೀಸರು ಇದೀಗ ರಾಜಸ್ಥಾನದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ರಾಜಸ್ಥಾನದ ಬುಂದಿ ಮೂಲದ 25 ವರ್ಷದ ಬನ್ವಾರಿಲಾಲ್ ಲಾತುರ್‌ಲಾಲ್ ಗುಜಾರ್ (25) ಎಂದು  ಅಪರಾಧ ವಿಭಾಗದ ಅಧಿಕಾರಿ ತಿಳಿಸಿದ್ದಾರೆ. ಗುರ್ಜರ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ವಿಡಿಯೋವೊಂದನ್ನು ಅಪ್‌ಲೋಡ್ ಮಾಡಿದ್ದು, ಅದರಲ್ಲಿ 'ಲಾರೆನ್ಸ್ ಬಿಷ್ಣೋಯ್, ಗೋಲ್ಡಿ ಬ್ರಾರ್ ಮತ್ತು ಇತರ ಗ್ಯಾಂಗ್ ಸದಸ್ಯರು ನನ್ನೊಂದಿಗಿದ್ದಾರೆ ಮತ್ತು ಸಲ್ಮಾನ್ ಖಾನ್ ಅವರು ಇನ್ನೂ ಕ್ಷಮೆ ಕೇಳದ ಕಾರಣ ನಾನು ಅವರನ್ನು ಕೊಲ್ಲಲಿದ್ದೇನೆ' ಎಂದಿದ್ದ. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ. ಆರೋಪಿಯು ರಾಜಸ್ಥಾನದ ಹೆದ್ದಾರಿಯೊಂದರಲ್ಲಿ ವಿಡಿಯೋ ಮಾಡಿ ತನ್ನ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ್ದ.  ತನಿಖೆಗಾಗಿ ತಂಡವನ್ನು ರಾಜಸ್ಥಾನಕ್ಕೆ ಕಳುಹಿಸಲಾಗಿತ್ತು. ಅಲ್ಲಿ ಆತನನ್ನು ಅರೆಸ್ಟ್​ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ದೇವಸ್ಥಾನಕ್ಕೆ ಬಂದು ಕ್ಷಮೆ ಕೋರುತ್ತಾರಾ ಸಲ್ಮಾನ್​ ಖಾನ್? ಬಾಲಿವುಡ್​ ಭಾಯಿಜಾನ್​ಗೆ ಎಚ್ಚರಿಕೆ!

ಅಷ್ಟಕ್ಕೂ  ಬಿಷ್ಣೋಯಿ ಜನಾಂಗಕ್ಕೆ ಸಲ್ಮಾನ್​ ಖಾನ್​ ವಿರುದ್ಧ ಯಾಕಿಷ್ಟು ಕೋಪ ಎಂದರೆ  ಅದಕ್ಕೆ ಕಾರಣ, ಕೃಷ್ಣಮೃಗ ಬೇಟೆ. ಲಾರೆನ್ಸ್​ ಬಿಷ್ಣೋಯ್​ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಇದಾಗಲೇ ಹಲವಾರು ಬಾರಿ ಬೆದರಿಕೆ ಹಾಕಿದ್ದಾನೆ.  ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ (Blackbuck poaching case) ಸಲ್ಮಾನ್ ಖಾನ್ ತಪ್ಪಿತಸ್ಥ ಎಂದು ಸಾಬೀತಾಗಿದ್ದೇ ಈ ಬೆದರಿಕೆಗೆ ಕಾರಣ. ಈ ಪ್ರಕರಣದಲ್ಲಿ ಸಲ್ಮಾನ್​ ಸದ್ಯ ಜಾಮೀನಿನ ಮೇಲೆ ಇದ್ದರೂ, ಬಿಷ್ಣೋಯ್ ಸಮುದಾಯವರು ಮಾತ್ರ ನಟನ ಬೆನ್ನ ಬಿದ್ದಿದ್ದಾನೆ. ಏಕೆಂದರೆ,  ಕೃಷ್ಣಮೃಗಗಳನ್ನು ಬಿಷ್ಣೋಯ್ ಸಮುದಾಯವು ಪವಿತ್ರವೆಂದು ಪರಿಗಣಿಸುತ್ತದೆ. ಅದಕ್ಕಾಗಿಯೇ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಸಲ್ಮಾನ್ ಖಾನ್ ಅವರನ್ನು ಟಾರ್ಗೆಟ್ ಮಾಡಿದ್ದಾನೆ.  ಕೃಷ್ಣಮೃಗವನ್ನು ತಾವು ಬೇಟೆಯಾಡಿದ್ದಲ್ಲ ಎಂದು ಸಲ್ಮಾನ್​ ಖಾನ್ ಹೇಳಿಕೆ ನೀಡಿದ್ದಾರೆ. ಆದರೆ ತಪ್ಪಿತಸ್ಥರು ಯಾರು ಎನ್ನುವುದು ನಮಗೆ ಗೊತ್ತಿದೆ. ಆದ್ದರಿಂದ ಸಲ್ಮಾನ್ ಬಂದು ಕ್ಷಮೆ  ಕೋರಬೇಕು ಎನ್ನುವುದು ಅವರ ಬೇಡಿಕೆ. 

ಕೊಲೆ ಬೆದರಿಕೆ ಒಡ್ಡಿರುವ ಆರೋಪ ಹೊತ್ತ ಲಾರೆನ್ಸ್ ಬಿಷ್ಣೋಯ್ ಜೈಲಿನಲ್ಲಿ ಇದ್ದು, ಈಗ ಪದೇ ಪದೇ  ಮತ್ತೆ ಬೆದರಿಕೆ ಹಾಕುತ್ತಲೇ ಇದ್ದಾನೆ.  ಅಷ್ಟಕ್ಕೂ ಆತನ ಬೇಡಿಕೆ ಎಂದರೆ ಕೃಷ್ಣಮೃಗವನ್ನು ಕೊಂದಿರುವುದಕ್ಕೆ ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು ಎನ್ನುವುದು. ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ಅವರ ಭವಿಷ್ಯವನ್ನು ಯಾವುದೇ ನ್ಯಾಯಾಲಯ ನಿರ್ಧರಿಸುವುದಿಲ್ಲ ಎಂದು ಲಾರೆನ್ಸ್ ಬಿಷ್ಣೋಯ್ ಇದಾಗಲೇ ಹೇಳಿದ್ದಾನೆ.  ಪೊಲೀಸರ ಮುಂದೆ ನೀಡಿದ ಹೇಳಿಕೆಯಲ್ಲಿ, ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಈ ವಿಷಯದಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದರೆ (Apology) ತಮ್ಮ ಮನಸ್ಸು ಕೂಡ ಬದಲಾಗಬಹುದು ಎಂದು ಲಾರೆನ್ಸ್ ಬಿಷ್ಣೋಯ್ ಈ ಹಿಂದೆ ಹೇಳಿದ್ದ. ಇದರ ಹೊರತಾಗಿಯೂ ಸಲ್ಮಾನ್​ ಖಾನ್​ ಕ್ಷಮೆ ಕೋರಿಲ್ಲ ಎನ್ನುವುದು ಅವರಿಗೆ ಇರುವ ಆಕ್ರೋಶ. ಕ್ಷಮೆ ಕೋರದೇ ಹೋದರೆ  ಪರಿಣಾಮ ಎದುರಿಸಲು ಸಿದ್ಧ ಇರಿ ಎಂದು ಗ್ಯಾಂಗ್​ ಎಚ್ಚರಿಕೆ ನೀಡುತ್ತಲೇ ಇದೆ.  ಕ್ಷಮೆ ಕೋರದ ಸಲ್ಮಾನ್ ಅವರ ಅಹಂಕಾರವನ್ನು ಮುರಿಯುತ್ತೇವೆ ಎಂದಿದ್ದ. ಈಗಲೂ ಅದನ್ನೇ ಈ ಗುಂಪಿನವರು ಕೇಳುತ್ತಿದ್ದಾರೆ. ಆದರೆ ಸಲ್ಲು ಭಾಯಿ ಇದಕ್ಕೆ ಇದುವರೆಗೆ ಒಪ್ಪಲಿಲ್ಲ. 

ಐಶ್​ ಮಾತ್ರವಲ್ಲ ಸಲ್ಮಾನ್​ ಹಾರ್ಟ್​ ಬ್ರೇಕ್​ ಮಾಡಿದ್ರು ಈ ನಟಿ! ಅಪ್ಪನ ಕಾರಣದಿಂದ ಮದ್ವೆ ಕ್ಯಾನ್ಸಲ್​

Latest Videos
Follow Us:
Download App:
  • android
  • ios