Asianet Suvarna News Asianet Suvarna News

ಕನ್ನಡ ಚಿತ್ರರಂಗ ಇಂದು ಚುಕ್ಕಾಣಿ ಇಲ್ಲದ ಹಡಗಿನಂತಾಗಿದೆ: ಸಂಗೀತ ನಿರ್ದೇಶಕ ಹಂಸಲೇಖ ಬೇಸರ

ಕನ್ನಡ ಚಿತ್ರರಂಗ ಚುಕ್ಕಾಣಿ ಇಲ್ಲದ ಹಡಗಿನಂತಾಗಿದೆ ಎಂದು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ವಿರುದ್ಧ ಸಂವಾದ ಕಾರ್ಯವೊಂದರಲ್ಲಿ ಬೇಸರ ಹೊರಹಾಕಿದ್ದಾರೆ.

Music director Hamsalekha talks about Kannada cinema and film industry rav
Author
First Published Sep 12, 2023, 1:35 PM IST

ಬೆಂಗಳೂರು (ಸೆ.12): ಕನ್ನಡ ಚಿತ್ರರಂಗ ಚುಕ್ಕಾಣಿ ಇಲ್ಲದ ಹಡಗಿನಂತಾಗಿದೆ ಎಂದು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ವಿರುದ್ಧ ಸಂವಾದ ಕಾರ್ಯವೊಂದರಲ್ಲಿ ಬೇಸರ ಹೊರಹಾಕಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಇಂದಿನ ಬದಲಾವಣೆಗಳ ಬಗ್ಗೆ ಬೇಸರ ವ್ಯಕ್ತಪಡಿಸಿದರು. ದೊಡ್ಡ ದೊಡ್ಡ ಮಹನೀಯರು ಸೇರಿ ಸಂಸ್ಥೆಯನ್ನ ಕಟ್ಟಿ ಬೆಳೆಸಿದ್ರು. ಮೂರು ವರ್ಗಗಳನ್ನೂ ಜೊತೆಯಲ್ಲಿ ಕರೆದುಕೊಂಡು ಹೋಗುತ್ತಿದ್ರು. ನಿರ್ಮಾಪಕ, ಪ್ರದರ್ಶಕ ಹಾಗೂ ವಿತರಕ ವಲಯವನ್ನ ಒಗ್ಗಟ್ಟಿನ ತ್ರಿಶೂಲವಾಗಿಟ್ಟುಕೊಂಡು ಕೆಲಸ ಮಾಡಿದ್ರು. ಆದರೆ ಪ್ಯಾನ್ ಇಂಡಿಯಾದ ವ್ಯಾಪಾರದ ಸೋಗು ಬಂದಿದೆ. ಇದರಿಂದಾಗಿ ಕನ್ನಡ ಚಿತ್ರರಂಗ ಇಂದು ದಿಕ್ಕು ತಪ್ಪಿ ಹೋಗಿದೆ. ಕನ್ನಡದಲ್ಲೇ ಬದುಕಬೇಕಾ ಅಥವಾ ಕನ್ನಡವನ್ನಟ್ಟಿಕೊಂಡು ಎಲ್ಲರ ಜೊತೆಯಲ್ಲಿ‌ ಬದುಕಬೇಕಾ ಎನ್ನುವ ದೊಡ್ಡ ತಾಪತ್ರಯ ಎದುರಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. 

ಕನ್ನಡದ ಕಾಲು ಹಿಡಿದುಕೊಂಡ್ರೆ, ನಮ್ಮನ್ನ ಕಾಪಾಡುತ್ತೆ: ಮೈಸೂರು ದಸರಾ ಉದ್ಘಾಟಕ ಹಂಸಲೇಖ

ಈ ಹಿಂದೆ ಒಬ್ಬೊಬ್ಬ ಹೀರೋನ ಸಿನಿಮಾದಲ್ಲಿ ಕನ್ನಡದ ಹಾಡು ಇರುತ್ತಿತ್ತು. ಈಗ ಕನ್ನಡದ ಬಗ್ಗೆ ಹಾಡು ಹೇಳಲು ಹೆದರುತ್ತಿದ್ದಾರೆ. ಏಕೆಂದ್ರೆ ಇಲ್ಲಿ ಹಾಡಿದ ಹಾಡು ಅಲ್ಲಿ ಸಲ್ಲುವುದಿಲ್ಲ. ಅಲ್ಲಿ ಹಾಡಿದ ಹಾಡು ಇಲ್ಲಿ ಸಲ್ಲುವುದಿಲ್ಲ. ಹೀಗಾಗಿ ಇಂದು ಬರೀ ಆಕ್ಷನ್ ನೇ ರಿಯಾಕ್ಷನ್ ಆಗಿದೆ ಎಂದರು.

ಇಂದಿನ ಸಿನಿಮಾಗಳಲ್ಲಿ ಸಂಬಂಧಗಳು ಯಾವುದೂ ಇರುವುದಿಲ್ಲ. ಬರೀ ಹೊಡಿ-ಬಡಿ ಕಿವಿ ಮುಚ್ಚಿಕೊಳ್ಳೋ ರೀತಿ ಅಬ್ಬರದ ಸಂಗೀತ.  ಇದು ಎಲ್ಲಾ ಭಾಷೆಗಳಲ್ಲಿ ಮ್ಯಾಚ್ ಆಗುತ್ತೆ ಅಂಥ ತಿಳಿದುಕೊಂಡಿದ್ದಾರೆ.ಹಾಗಾಗಿ ಇಂದಿನ ಎಲ್ಲ ಸಿನಿಮಾಗಳಲ್ಲಿ ಹೊಡಿಬಡಿ ಹಾಡುಗಳು ಸಾಮಾನ್ಯವಾಗಿಬಿಟ್ಟಿವೆ. 

ಈ ಬಾರಿ ಮೈಸೂರು ದಸರಾ ಉದ್ಘಾಟನೆಗೆ ನಾದಬ್ರಹ್ಮ ಹಂಸಲೇಖ ಆಯ್ಕೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಕನ್ನಡ ಚಿತ್ರರಂಗದಲ್ಲಿ ಹೊಸ ನಿರ್ದೇಶಕರು 250 ಜನ ಇದ್ದಾರೆ, ಹೊಸ ನಿರ್ಮಾಪಕರು 500 ಜನ ಇದ್ದಾರೆ. ಇವರ್ಯಾರಿಗೂ ನಮ್ಮ ಚೇಂಬರ್ ನ ಸಂಪರ್ಕವೇ ಇಲ್ಲ. ಎಲ್ಲರನ್ನ ಕರೆದು ಚರ್ಚೆ ಮಾಡುವವರೇ ಇಲ್ಲದಂತಾಗಿದೆ. ಮುಂದಿನ ದಿನದಲ್ಲಿ ಯಾರಾದ್ರು ಬಂದು ಆ ಚುಕ್ಕಾಣಿಯನ್ನ ಹಿಡಿಬೇಕು. ಸಂಸ್ಕೃತಿ ಮಾರ್ಗದಲ್ಲಿ, ಕನ್ನಡ ಮಾರ್ಗದಲ್ಲಿ ಕನ್ನಡ ಚಲನಚಿತ್ರವನ್ನ ನಡೆಸುವಂತಾಗಬೇಕು ಎಂದು ಹೇಳಿದರು.
 

Follow Us:
Download App:
  • android
  • ios