ಸಮಂತಾ ಮಾಜಿ ಪತಿ ನಾಗಚೈತನ್ಯ ಮತ್ತೆ ಮದುವೆ ಆಗುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ನಾಗ ಚೈತನ್ಯ ಮರುಮದುವೆ ಸುದ್ದಿ ಟಾಲಿವುಡ್ ಅಂಗಳದಲ್ಲಿ ವೈರಲ್ ಆಗಿದೆ. ಮೂಲಗಳ ಪ್ರಕಾರ ನಾಗಚೈತನ್ಯ ಶೀಘ್ರದಲ್ಲೇ ಮತ್ತೊಮ್ಮೆ ಮದುವೆಯಾಗುತ್ತಿದ್ದಾರಂತೆ.

ತೆಲುಗಿನ ಸೂಪರ್ ಜೋಡಿ ಎನಿಸಿಕೊಂಡಿದ್ದ ಸಮಂತಾ(Samantha) ಮತ್ತು ನಾಗಚೈತನ್ಯ(Naga Chaitanya) ವಿಚ್ಛೇದನ ನೀಡುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಇಬ್ಬರ ವಿಚ್ಛೇದನದ 2021ರಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. 2021ರಲ್ಲಿ ಅಕ್ಟೋಬರ್ ನಲ್ಲಿ ಈ ಜೋಡಿ ವಿಚ್ಛೇದನ ಪಡೆಯುತ್ತಿರುವ ಬಗ್ಗೆ ಅಧಿಕೃತವಾಗಿ ಬಹಿರಂಗ ಪಡಿಸಿದ್ದರು. ಅಭಿಮಾನಿಗಳಿಗೆ ಈ ಸುದ್ದಿ ದೊಡ್ಡ ಆಘಾತ ನೀಡಿತ್ತು. ಇಬ್ಬರು ಮತ್ತೆ ಒಂದಾಗಲಿ ಎಂದು ಅನೇಕರು ಹರಿಸಿದ್ದರು. ಆದರೆ ಈ ಜೋಡಿ ಮತ್ತೆ ಒಂದಾಗುವುದಿರಲಿ ಸಾಮಾಜಿಕ ಜಾಲತಾಣದಲ್ಲಿ ನಾಗ ಚೈತನ್ಯ ಅವರನ್ನು ಅನ್ ಫಾಲೋ ಮಾಡುವ ಮೂಲಕ ಮಾಜಿ ಪತಿಯಿಂದ ತುಂಬಾ ದೂರ ಆಗಲು ಪ್ರಯತ್ನಿಸುತ್ತಿದ್ದಾರೆ.

ಸದ್ಯ ಸಮಂತಾ ಮಾಜಿ ಪತಿ ನಾಗಚೈತನ್ಯ ಮತ್ತೆ ಮದುವೆ ಆಗುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ನಾಗ ಚೈತನ್ಯ ಮರುಮದುವೆ ಸುದ್ದಿ ಟಾಲಿವುಡ್ ಅಂಗಳದಲ್ಲಿ ವೈರಲ್ ಆಗಿದೆ. ಮೂಲಗಳ ಪ್ರಕಾರ ನಾಗಚೈತನ್ಯ ಶೀಘ್ರದಲ್ಲೇ ಮತ್ತೊಮ್ಮೆ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಎಲ್ಲಾ ಕಡೆ ಹಬ್ಬುತ್ತಿದ್ದು, ಈ ಕುರಿತು ಭಾರೀ ಚರ್ಚೆಯಾಗುತ್ತಿದೆ. ಆದರೆ ನಾಗ ಚೈತನ್ಯ ಯಾರನ್ನು ಮದುವೆಯಾಗುತ್ತಿದ್ದಾರೆ ಎನ್ನುವುದು ಬಹಿರಂಗವಾಗಿಲ್ಲ. ಆದರೆ ಮೂಲಗಳ ಪ್ರಕಾರ ನಾಗ ಚೈತನ್ಯ ಯಾವುದೇ ಸಿನಿಮಾ ತಾರೆಯರನ್ನು ಮದುವೆಯಾಗುತ್ತಿಲ್ಲ ಎನ್ನಲಾಗುತ್ತಿದೆ. ಸಿನಿಮಾರಂಗದಿಂದ ದೂರ ಇರುವ ಹುಡುಗಿಯನ್ನು ನಾಗ್ ಚೈತನ್ಯ ಮದುವೆಯಾಗುತ್ತಿದ್ದಾರೆ ಎನ್ನಲಾಗಿದೆ.

ಅಂದಹಾಗೆ ನಾಗಚೈತನ್ಯ, ಸಮಂತಾ ಜೊತೆ ಮದುವೆಯಾಗುವುದಕ್ಕೂ ಮೊದಲು ತಮಿಳು ನಟಿ ಶ್ರುತಿ ಹಾಸನ್ ಜೊತೆ ಡೇಟಿಂಗ್ ಮಾಡುತ್ತಿದ್ದರು. ಬಳಿಕ ಶ್ರುತಿ ಹಾಸನ್ ಅವರಿಂದ ದೂರ ಆಗಿ ಈ ನಟ ಸಮಂತಾ ಅವರನ್ನು ಪ್ರೀತಿಸಿ ಮದುವೆ ಮಾಡಿಕೊಂಡಿದ್ದರು. ಸಮಂತಾ ಅವರಿಂದ ವಿಚ್ಛೇದನ ಪಡೆದು ದೂರ ಆದ ಬಳಿಕ ನಾಗ ಚೈತನ್ಯ ಹೆಸರು ಮತ್ತೋರ್ವ ನಟಿಯ ಜೊತೆ ಕೇಳಿಬರುತ್ತಿತ್ತು. ಮಜಿಲಿ ಸಹನಟಿ ದಿವ್ಯಾಂಶ ಕೌಶಿಕ್ ಅವರೊಂದಿಗೆ ಪ್ರೀತಿಯಲ್ಲಿದ್ದಾರೆ ಎಂಬ ವದಂತಿ ಕೇಳಿಬರುತ್ತಿದೆ. ಈ ಸುದ್ದಿ ಬೆನ್ನಲ್ಲೇ ನಾಗ ಚೈತನ್ಯ ಯಾವುದೇ ನಟಿಯರನ್ನು ಮದುವೆಯಾಗಲು ಆಸಕ್ತಿ ತೋರಿಸುತ್ತಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ. 

ವಿಚ್ಛೇದನದ ಬಳಿಕ ಮೊದಲ ಬಾರಿಗೆ ಮಾಜಿ ಪತಿಯ ಫೋಟೋ ಶೇರ್ ಮಾಡಿದ ಸಮಂತಾ

ಹಾಗಾಗಿ ನಾಗ ಚೈತನ್ಯ ಸಿನಿಮಾರಂಗದಿಂದ ದೂರ ಇರುವ ಹುಡುಗಿಯೊಂದಿಗೆ ಎರಡನೇ ಮದುವೆಯಾಗುತ್ತಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅಕ್ಕಿನೇನಿ ಕುಟುಂಬವೇ ಬಹಿರಂಗ ಪಡಿಸಬೇಕಿದೆ. ಇನ್ನು ನಟಿ ಸಮಂತಾ ವಿಚ್ಛೇದನದ ಬಳಿಕ ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ದಿ ಫ್ಯಾಮಿಲಿ ಮ್ಯಾನ್ ಮತ್ತು ಪುಷ್ಪ ಸಿನಿಮಾದ ಸಕ್ಸಸ್ ಸಮಂತಾ ಅವರಿಗೆ ಅವಕಾಶಗಳು ಮತ್ತಷ್ಟು ಹೆಚ್ಚಾಗಿದೆ. ಸದ್ಯ ತಮಿಳು ಮತ್ತು ತೆಲುಗು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸಮಂತಾ ಬಾಲಿವುಡ್ ಕಡೆಯೂ ಮುಖ ಮಾಡಲಿದ್ದಾರೆ. ಸದ್ಯ ಯಶೋದಾ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಬಹುಭಾಷೆಯಲ್ಲಿ ತಯಾರಾಗುತ್ತಿದೆ. ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದ್ದು, ಚಿತ್ರದಲ್ಲಿ ಆಕ್ಷನ್ ದೃಶ್ಯಗಳು ಜಾಸ್ತಿ ಇರಲಿದೆಯಂತೆ. ಸ್ಟಂಟ್ ನಿರ್ದೇಶನ ಮಾಡಲು ಹಾಲಿವುಡ್ ನಿಂದ ಸ್ಟಂಟ್ ಮಾಸ್ಟರ್ ಸಮಂತಾ ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ. ಇನ್ನು ರಾಜ್ ಮತ್ತು ಡಿಕೆ ನಿರ್ದೇಶನದ ಹೊಸ ವೆಬ್ ಸೀರಿಸ್ ನಲ್ಲಿ ಸಮಂತಾ ನಟಿಸುತ್ತಿದ್ದು, ವರುಣ್ ಧವನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ನಾಗ ಚೈತನ್ಯ ಕೊನೆಯದಾಗಿ ಬಂಗರಾಜು ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಲವ್ ಸ್ಟೋರಿ ಸಕ್ಸಸ್ ನಲ್ಲಿರುವ ಚೈತನ್ಯ ಸದ್ಯ ಥ್ಯಾಂಕ್ ಯು, ಲಾಲ್ ಸಿಂಗ್ ಚಡ್ಡಾ ಮತ್ತು ಇನ್ನು ಹೆಸರಿಡದ ಒಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.