Asianet Suvarna News Asianet Suvarna News

ಸೌತ್ ಸಿನಿರಂಗಕ್ಕೆ ಬಾಲಿವುಡ್ ಖ್ಯಾತ ನಟ ನವಾಜುದ್ದೀನ್ ಸಿದ್ದಿಕಿ ಎಂಟ್ರಿ: ಫಸ್ಟ್ ಲುಕ್ ರಿಲೀಸ್

ಸೌತ್ ಸಿನಿರಂಗಕ್ಕೆ ಬಾಲಿವುಡ್ ಖ್ಯಾತ ನಟ ನವಾಜುದ್ದೀನ್ ಸಿದ್ದಿಕಿ ಎಂಟ್ರಿ ಕೊಟ್ಟಿದ್ದಾರೆ. ಫಸ್ಟ್ ಲುಕ್ ರಿಲೀಸ್ ಆಗಿದೆ.

Nawazuddin Siddiqui starrer first look from Telugu debut Saindhav revealed on his birthday sgk
Author
First Published May 20, 2023, 12:06 PM IST | Last Updated May 20, 2023, 12:06 PM IST

ಬಾಲಿವುಡ್‌ನ ಖ್ಯಾತ ನಟ ಅದ್ಭುತ ಪ್ರತಿಭೆಯ ಮೂಲಕವೇ ಅಭಿಮಾನಿಗಳ ಹೃದಯ ಗೆದ್ದಿರುವ ನಟ ನವಾಜುದ್ದೀನ್ ಸಿದ್ದಿಕಿ ಕೊನೆಗೂ ಸೌತ್ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬಾಲಿವುಡ್‌ನ ಅನೇಕ ಸ್ಟಾರ್ಸ್ ದಕ್ಷಿಣ ಭಾರತದ ಕಡೆ ಮುಖ ಮಾಡುತ್ತಿದ್ದಾರೆ. ಇದೀಗ ನವಾಜುದ್ದೀನ್ ಸಿದ್ದಿಕಿ ಕೂಡ ಎಂಟ್ರಿ ಕೊಟ್ಟಿರುವುದು ಅವರ ಅಭಿಮಾನಿಗಳಿಗೆ ಸಂತಸ ನೀಡಿದೆ. ಯಾವುದೇ ಪಾತ್ರ ಕೊಟ್ಟರು‌ ಲೀಲಾಜಾಲವಾಗಿ ಅಭಿನಯಿಸುವ, ವಿಭಿನ್ನ ಪಾತ್ರಗಳ ಮೂಲಕ ಗಮನ ಸೆಳೆದಿರುವ ಸಿದ್ದಿಕಿ ಇದೀಗ ಸೌತ್‌ನಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಅಷ್ಟಕ್ಕೂ ಸಿದ್ದಿಕಿ ಎಂಟ್ರಿ ಕೊಟ್ಟಿರುವುದು ತೆಲುಗು ಸಿನಿಮಾರಂಗಕ್ಕೆ. 

ತೆಲುಗಿನ ಸೈಂಧವ್ ಸಿನಿಮಾ ಮೂಲಕ ದಕ್ಷಿಣ ಭಾರತದಲ್ಲಿ ಸದ್ದು ಮಾಡಲು ಸಿದ್ದಿಕಿ ತಯಾರಾಗಿದ್ದಾರೆ. ಟಾಲಿವುಡ್ ನಟ ವಿಕ್ಟರಿ ವೆಂಕಟೇಶ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಸೈಂಧವ್’. ಶೈಲೇಶ್ ಕೋಲನು ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ನವಾಜುದ್ದೀನ್ ಸಿದ್ದಿಕಿ ವಿಲನ್ ಆಗಿ ಬಣ್ಣ ಹಚ್ಚಿದ್ದಾರೆ. ಅವರ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಕ್ಯಾರೆಕ್ಟರ್ ಪೋಸ್ಟರ್ ರಿಲೀಸ್ ಮಾಡಿದೆ. ವಿಕಾಸ್ ಮಲಿಕ್ ಎಂಬ ಪಾತ್ರದಲ್ಲಿ ನವಾಜುದ್ದೀನ್ ಸಿದ್ದಿಕಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ರಿಲೀಸ್ ಆಗಿರುವ ಪಸ್ಟ್‌ನಲ್ಲಿ   ದುಬಾರಿ ಕಾರಿನ ಬಾನೆಟ್ ಮೇಲೆ ಕುಳಿತು ಬೀಡಿ ಸೇದುತ್ತಾ ಸಖತ್ ಕ್ಲಾಸ್ ಆಗಿ ಕಾಣಿಸಿಕೊಂಡಿದ್ದಾರೆ. 

ಈ ಸಿನಿಮಾದಲ್ಲಿ ಕನ್ನಡದ ನಟಿ ಶ್ರದ್ಧಾ ಶ್ರೀನಾಥ್ ನಾಯಕಿಯಾಗಿ ನಟಿಸುತ್ತಿದ್ದಾರೆ. ನಟಿ ಶ್ರದ್ಧಾ, ಮನೋಜ್ಞ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಡಾ. ರೇಣು ಪಾತ್ರದಲ್ಲಿ ರುಹಾನಿ ಶರ್ಮಾ ಮತ್ತು ಜಾಸ್ಮಿನ್ ಪಾತ್ರದಲ್ಲಿ ಆಂಡ್ರಿಯಾ ಜೆರೆಮಿಯಾ ಕಾಣಿಸಿಕೊಂಡಿದ್ದಾರೆ. ಸಂತೋಷ್ ನಾರಾಯಣನ್ ಸಂಗೀತ ನಿರ್ದೇಶನ, ಎಸ್ ಮಣಿಕಂದನ್ ಛಾಯಾಗ್ರಹಣ, ಗ್ಯಾರಿ ಬಿಎಚ್ ಸಂಕಲನ ಮತ್ತು ಅವಿನಾಶ್ ಕೊಲ್ಲಾ ನಿರ್ಮಾಣ ವಿನ್ಯಾಸ ಚಿತ್ರಕ್ಕಿದೆ. 

ಮೌನ ಯಾವತ್ತು ಶಾಂತಿ ನೀಡಲ್ಲ; ಪತ್ನಿ ಅರೋಪಗಳಿಗೆ ಪ್ರತಿಕ್ರಿಯಿಸಿದ ನವಾಜುದ್ದೀನ್ ಬೆಂಬಲಕ್ಕೆ ಕಂಗನಾ

ನಿಹಾರಿಕಾ ಎಂಟರ್ಟೈನ್ಮೆಂಟ್ ಅಡಿ ವೆಂಕಟ್ ಬೋಯನಪಲ್ಲಿ ನಿರ್ಮಿಸುತ್ತಿರುವ ಸೈಂಧವ್‌ ಚಿತ್ರಕ್ಕೆ ಕಿಶೋರ್ ತಲ್ಲೂರ್ ಸಹ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ. ಸೈಂಧವ ಪ್ಯಾನ್ ಇಂಡಿಯಾ ಚಲನಚಿತ್ರವಾಗಿದ್ದು,  ಡಿಸೆಂಬರ್ 22 ರಂದು ಕ್ರಿಸ್ಮಸ್ ವಿಶ್ವಾದ್ಯಂತ ರಿಲೀಸ್ ಆಗಲಿದೆ.‌

'ರಿಷಬ್ ಶೆಟ್ಟಿ ಮೇಲೆ ನನಗೆ ಹೊಟ್ಟೆಕಿಚ್ಚು' ಎಂದ ನವಾಝುದ್ದೀನ್ ಸಿದ್ದಿಕಿ; ಕಾಂತಾರ ಶಿವನ ರಿಯಾಕ್ಷನ್ ವೈರಲ್

ಅಂದಹಾಗೆ ನವಾಜುದ್ದೀನ್ ಸಿದ್ದಿಕಿ ಕನ್ನಡದ ಸ್ಟಾರ್ ಕಾಂತಾರ ಹೀರೋ ರಿಷಬ್ ಶೆಟ್ಟಿ ನಿರ್ಮಾಣದ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ  ಸುದ್ದಿ ವೈರಲ್ ಆಗಿತ್ತು. ಈ ಮೊದಲು ರಿಷಬ್ ಶೆಟ್ಟಿ ನವಾಜುದ್ದೀನ್ ಸಿದ್ದಿಕಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇಬ್ಬರ ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗಿತ್ತು. ರಿಷಬ್ ಶೆಟ್ಟಿ ಅವರನ್ನು ನವಾಜುದ್ದೀನ್ ಸಿದ್ದಿಕಿ ಹಾಡಿಹೊಗಳಿದ್ದರು. ರಿಷಬ್ ಜೊತೆ ಸಿನಿಮಾ ಮಾಡುತ್ತಾರೆ ಎಂದು ಹೇಳಲಾಗಿತ್ತು. ಇದೀಗ ತೆಲುಗು ಸಿನಿಮಾ ಮೂಲಕ ಸೌತ್ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ನವಾಜುದ್ದೀನ್ ಸಿದ್ದಿಕಿ ಅವರನ್ನು ತೆಲುಗು ಸಿನಿಮಾದಲ್ಲಿ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ.  

Latest Videos
Follow Us:
Download App:
  • android
  • ios