ಬಹುಭಾಷಾ ನಟಿ, ಸೌತ್ ಇಂಡಿಯನ್ ಬ್ಯೂಟಿ ನಯನತಾರಾ ಮದುವೆಯಾಗುವ ಸಂಭ್ರಮದಲ್ಲಿದ್ದಾರೆ. ಬಹುಕಾಲದ ಸ್ನೇಹಿತ ವಿಘ್ನೇಶ್ ಶಿವನ್ ಜೊತೆ ಮದುವೆಯಾಗಲು ನಿರ್ಧರಿಸಿದ್ದಾರೆ. 

ನಯನತಾರಾ ಹಾಗೂ ವಿಘ್ನೇಶ್ ಶಿವನ್ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದಾರೆ. ಅದೀಗ ಎಂಗೇಜ್ ಮೆಂಟ್ ವರೆಗೂ ಬಂದು ನಿಂತಿದೆ. ಈ ವರ್ಷ ಈ ಜೋಡಿ ಎಂಗೇಜ್ ಮೆಂಟ್ ಮಾಡಿಕೊಳ್ಳಲಿದ್ದಾರೆ. 2020 ರ ವೇಳೆಗೆ ಮದುವೆಯಾಗಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. 

ನಯನತಾರಾ ವಿಘ್ನೇಶ್ ತಾಯಿ ಜೊತೆಗಿನ ಅಂದರೆ ಭಾವೀ ಅತ್ತೆಯ ಕೈ ಹಿಡಿದಿರುವ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಇದು ವೈರಲ್ ಆಗಿದೆ. ಇದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಇವರಿಬ್ಬರೂ ಈ ವರ್ಷವೇ ಮದುವೆಯಾಗಲಿದ್ದಾರೆ ಎಂದು ಹೇಳುತ್ತಿದ್ದಾರೆ. 

ನಯನತಾರಾ ಸದ್ಯಕ್ಕೆ ಬೇರೆ ಬೇರೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ರಜನೀಕಾಂತ್ ಜೊತೆ ’ದರ್ಬಾರ್’, ಮೆಗಾಸ್ಟಾರ್ ಚಿರಂಜೀವಿ ಜೊತೆ ಸೈರಾ ನರಸಿಂಹ ರೆಡ್ಡಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.