ಕನ್ನಡ ಹಾಡು ಹಾಡಲು ಹೇಳಿದ ಕಾರಣಕ್ಕೆ ಪೆಹಲ್ಗಾಂ ಉಗ್ರ ದಾಳಿಗೆ ಹೋಲಿಕೆ ಮಾಡಿದ ಗಾಯಕ ಸೋನು ನಿಗಮ್ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಈ ಪ್ರಕರಣ ಸಂಬಂಧ ಸೋನು ನಿಗಮ್‌ಗೆ ಕರ್ನಾಟಕ ಹೈಕೋರ್ಟ್‌ಗೆ ಬಿಗ್ ರಿಲೀಫ್ ನೀಡಿದೆ.

ಬೆಂಗಳೂರು(ಮೇ.15) ಕನ್ನಡಿಗರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಗಾಯಕ ಸೋನು ನಿಗಮ್ ಕಳೆದ ಕೆಲ ದಿನಗಳಿಂದ ಭಾರಿ ಸಂಕಷ್ಟಕ್ಕೆ ಸಿಲುಕಿದ್ದರು. ಕನ್ನಡ ಸಿನಿಮಾಗಳಿಂದ ಬ್ಯಾನ್, ಕರ್ನಾಟಕದಲ್ಲಿ ವೇದಿಕೆಗಳು ಬ್ಯಾನ್ ಸೇರಿದಂತೆ ಹಲವು ನಿರ್ಧಾರಗಳ ಬೆನ್ನಲ್ಲೇ ಸೋನು ನಿಗಮ್ ಕನ್ನಡಿಗರಲ್ಲಿ ಕ್ಷಮೆ ಕೇಳಿದ್ದರು. ಆದರೆ ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಆತಂಕದಲ್ಲಿದ್ದ ಸೋನು ನಿಗಮ್‌ಗೆ ಕರ್ನಾಟಕ ಹೈಕೋರ್ಟ್ ರಿಲೀಫ್ ನೀಡಿದೆ. ಗಾಯಕ ಸೋನು ನಿಗಮ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ಗುರುವಾರ ಪೊಲೀಸರಿಗೆ ನಿರ್ದೇಶನ ನೀಡಿದೆ. ಮುಂದಿನ ವಿಚಾರಣೆಯವರೆಗೂ ಈ ಆದೇಶ ಜಾರಿಯಲ್ಲಿರುತ್ತದೆ ಎಂದಿದೆ. 

ಸೋನು ನಿಗಮ್ ಖುದ್ದಾಗಿ ಹಾಜರಾಗಬೇಕಿಲ್ಲ
ಈ ಹಂತದಲ್ಲಿ ಸೋನು ನಿಗಮ್ ಅವರು ಹೇಳಿಕೆ ನೀಡಲು ಖುದ್ದಾಗಿ ಹಾಜರಾಗಬೇಕಾಗಿಲ್ಲ ಎಂದು ನ್ಯಾಯಾಲಯ ತಿಳಿಸಿದೆ. ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣನವರ್ ಅವರು ನಿಗಮ್ ಅವರ ಮೇಲಿನ ಪ್ರಕರಣವನ್ನು ರದ್ದುಗೊಳಿಸುವಂತೆ ಅರ್ಜಿ ವಿಚಾರಣೆ ನಡೆಸಿ ಮಧ್ಯಂತರ ಆದೇಶ ನೀಡಿದರು. ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ನಿಗಮ್ ವಿರುದ್ಧ ಪ್ರಕರಣ ದಾಖಲಾಗಿತ್ತು. ತನಿಖೆಗೆ ಸಹಕರಿಸಿದರೆ ಗಾಯಕನ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳುವುದಿಲ್ಲ ಎಂದು ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.

ಕನ್ನಡಕ್ಕಾಗಿ ಕಠಿಣ ನಿರ್ಧಾರ: ಕುಲದಲ್ಲಿ ಕೀಳ್ಯಾವುದೋ ಚಿತ್ರದ ಸೋನು ನಿಗಮ್‌ ಹಾಡಿಗೆ ಗೇಟ್‌ ಪಾಸ್‌

ಏನಿದು ಪ್ರಕರಣ?
ಏಪ್ರಿಲ್ 22 ರಂದು ಬೆಂಗಳೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ನಿಗಮ್ ಅವರ ಹೇಳಿಕೆಯಿಂದ ಈ ವಿವಾದ ಭುಗಿಲೆದ್ದಿತ್ತು. ಈ ಹೇಳಿಕೆಯು ಅನೇಕ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ವರದಿಯಾಗಿದೆ. ಈ ಹೇಳಿಕೆಗಳ ನಂತರ, ಬೆಂಗಳೂರಿನ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. 

ಮೇ 3 ರಂದು, ಭಾರತೀಯ ದಂಡ ಸಂಹಿತೆಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ನಿಗಮ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದರಲ್ಲಿ ಸೆಕ್ಷನ್ 351(2) (ಕ್ರಿಮಿನಲ್ ಬೆದರಿಕೆ), ಸೆಕ್ಷನ್ 352(1) (ಶಾಂತಿ ಭಂಗಕ್ಕೆ ಪ್ರಚೋದನೆ ನೀಡುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಮತ್ತು ಸೆಕ್ಷನ್ 353 (ಸಾರ್ವಜನಿಕ ಅಪರಾಧಕ್ಕೆ ಪ್ರಚೋದನೆ) ಸೇರಿವೆ. ಕನ್ನಡಪರ ಸಂಘಟನೆ ಕರ್ನಾಟಕ ರಕ್ಷಣಾ ವೇದಿಕೆಯ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಧರ್ಮರಾಜ್ ಎ. ಅವರ ದೂರಿನ ಮೇರೆಗೆ ಈ ಪ್ರಕರಣ ದಾಖಲಾಗಿದೆ.

ಕನ್ನಡಿಗ ಸಮುದಾಯವನ್ನು "ಭಾವನಾತ್ಮಕವಾಗಿ ಪ್ರಚೋದಿಸುವ" ಮತ್ತು "ಭಾವನೆಗಳಿಗೆ ಧಕ್ಕೆ ತರುವ" ಹೇಳಿಕೆಗಳನ್ನು ನಿಗಮ್ ನೀಡಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ. ಇದು ರಾಜ್ಯದ ವಿವಿಧ ಭಾಷಾ ಸಮುದಾಯಗಳ ನಡುವೆ ಅಶಾಂತಿಯನ್ನು ಹುಟ್ಟುಹಾಕಬಹುದು. ಎಫ್‌ಐಆರ್ ನಂತರ, ಮೇ 5 ರಂದು ಸೋನು ನಿಗಮ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿದರು. ತಮ್ಮ ಹೇಳಿಕೆಗಳಿಂದ ಉಂಟಾದ ನೋವಿಗೆ ಅವರು ತಮ್ಮ ವಿಷಾದ ವ್ಯಕ್ತಪಡಿಸಿದರು. ಸಾಮಾಜಿಕ ಮಾಧ್ಯಮದಲ್ಲಿ ನಿಗಮ್, "ಕ್ಷಮಿಸಿ ಕರ್ನಾಟಕ. ನಿಮ್ಮ ಮೇಲಿನ ನನ್ನ ಪ್ರೀತಿ ನನ್ನ ಅಹಂಗಿಂತ ದೊಡ್ಡದು. ನಿಮ್ಮನ್ನು ಯಾವಾಗಲೂ ಪ್ರೀತಿಸುತ್ತೇನೆ" ಎಂದು ಹೇಳಿದ್ದರು.

'ಇದು ಚಿಕ್ಕ ಟ್ರೀಸರ್..' ಪಾಕಿಸ್ತಾನಕ್ಕೆ ಚಂದನ್ ಶೆಟ್ಟಿ ಎಚ್ಚರಿಕೆ! ಸೋನು ನಿಗಮ್‌ಗೂ ವಾರ್ನ್!