'ನನ್ನ ಸಹೋದರ ಯೋಗಿ ಆದಿತ್ಯನಾಥ್' ಎಂದು UP ಮುಖ್ಯ ಮಂತ್ರಿಯನ್ನು ಕಂಗನಾ ರಣಾವತ್ ಹಾಡಿಗೊಳಿದ್ದಾರೆ. 

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ 'ಮಿಟ್ಟಿ ಮೇ ಮಿಲಾ ದೂಂಗಾ' (ಮಣ್ಣು ಮುಕ್ಕಿಸುತ್ತೇನೆ) ಹೇಳಿಕೆ ದೊಡ್ಡ ಮಟ್ಟದಲ್ಲಿ ಸಂಚಲನ ಮೂಡಿಸಿದೆ. ಈ ಹೇಳಿಕೆ ಈಗ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿದೆ. ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ಮಾಫಿಯಾಕ್ಕೆ ಸಂಬಂಧಿಸಿದಂತೆ ನಡೆದ ಆರೋಪಿಗಳ ಎನ್‌ಕೌಂಟರ್‌ ಘಟನೆ ಸಂಬಂಧ ಆದಿತ್ಯನಾಥ್ ಈ ಹೇಳಿಕೆ ನೀಡಿದ್ದರು. ಆದಿತ್ಯನಾಥ್ ಅವರ ಈ ಹೇಳಿಕೆ ಬೆನ್ನಲ್ಲೆ ನಟಿ ಕಂಗನಾ ರಣಾವತ್ ಪ್ರತಿಕ್ರಿಯೆ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದಿತ್ಯನಾಥ್ ಅವರನ್ನು ನನ್ನ ಸಹೋದರ ಎಂದು ಹೇಳುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. 

 ಉಮೇಶ್ ಪಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಅತೀಕ್ ಅಹ್ಮದ್ ಪುತ್ರ ಅಸದ್ ಮತ್ತು ಆತನ ಸಹಚರನನ್ನು ಪೊಲೀಸ್ ಎನ್‌ಕೌಂಟರ್‌ ಮಾಡಿದ್ದಾರೆ. ಈ ಘಟನೆ ಬಗ್ಗೆ ಅನೇಕರು ಪ್ರತಿಕ್ರಿಯೆ ನೀಡಿದ್ದು ಕಂಗನಾ ಕೂಡ ಟ್ವೀಟ್ ಮಾಡಿದ್ದಾರೆ. ಫೆಬ್ರವರಿ 25ರಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಹೇಳಿಕೆಯ ವಿಡಿಯೋ ಶೇರ್ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ. 'ನನ್ನ ಸಹೋದರ ಯೋಗಿ ಆದಿತ್ಯನಾಥ್ ಅವರ ಹಾಗೆ ಯಾರು ಇಲ್ಲ' ಎಂದು ಹೇಳಿದ್ದಾರೆ. 

Kangana Ranaut: ಕರಣ್​ ಜೋಹರ್​ಗೆ ಮುಂದೆ ಮುಂದೆ ಏನಾಗ್ತದೋ ನೋಡ್ತಿರಿ ಎಂದ ನಟಿ...

ಉಮೇಶ್ ಪಾಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದ ಅಸಾದ್‌ ಮತ್ತು ಗುಲಾಂ ತಲೆಗೆ 5 ಲಕ್ಷ ರೂ. ಬಹುಮಾನ ಘೋಷಣೆಯಾಗಿತ್ತು. ನಾಪತ್ತೆಯಾಗಿದ್ದ ಈ ಇಬ್ಬರನ್ನು ಝಾನ್ಸಿಯಲ್ಲಿ ಎನ್‌ಕೌಂಟರ್‌ ಮಾಡಿ ಹತ್ಯೆ ಮಾಡಲಾಗಿದೆ. ಉಮೇಶ್ ಪಾಲ್ ಹತ್ಯೆ ಬಳಿಕ ವಿವಿಧ ಜಿಲ್ಲೆಗಳಲ್ಲಿ ತಲೆಮರೆಸಿಕೊಂಡಿದ್ದ ಅಸಾದ್ ಹಾಗೂ ಆತನ ಸಹಚರ ಶೂಟರ್ ಗುಲಾಂ, ದಿಲ್ಲಿಯಿಂದ ಝಾನ್ಸಿಗೆ ತೆರಳುತ್ತಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ವಿಶೇಷ ಕಾರ್ಯಪಡೆಯ ತಂಡವು ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಪೊಲೀಸರು 42 ಸುತ್ತುಗಳ ಗುಂಡು ಹಾರಿಸಿ ಅವರಿಬ್ಬರನ್ನೂ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

Scroll to load tweet…

ಅನುಷ್ಕಾ ಕರಿಯರ್​ ಹಾಳು ಮಾಡಲು ಹೊರಟಿದ್ದ ಕರಣ್​ ಜೋಹರ್! ಶಾಕಿಂಗ್​ ವಿಡಿಯೋ ವೈರಲ್​

ಏನಿದು ಘಟನೆ

2005ರಲ್ಲಿ ಅಲಹಾಬಾದ್ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ನಾಯಕ ರಾಜು ಪಾಲ್ ಗೆದ್ದಿದ್ದರು. ಇದಾದ 1 ತಿಂಗಳಲ್ಲಿ ಅವರನ್ನು ಹತ್ಯೆ ಮಾಡಲಾಗಿತ್ತು. ಬಿಎಸ್‌ಪಿ ಶಾಸಕ ರಾಜು ಪಾಲ್ ಅವರ ಕೊಲೆಯ ಪ್ರತ್ಯಕ್ಷದರ್ಶಿ ಹಾಗೂ ವಕೀಲ ಉಮೇಶ್ ಪಾಲ್ ಅವರನ್ನು ಅವರ ನಿವಾಸದ ಹೊರಭಾಗದಲ್ಲಿ ಹಾಡಹಗಲೇ ಅತಿಕ್ ಅಹಮ್ಮದ್ ಗ್ಯಾಂಗ್ ಗುಂಡಿನ ದಾಳಿ ನಡೆಸಿ ಕೊಲ್ಲಲಾಗಿತ್ತು.