Oscars 2023: ಭಾರತಕ್ಕೆ ಮೊದಲ ಗೆಲುವು: ದಿ ಎಲಿಫೆಂಟ್ ವಿಸ್ಪರರ್ಸ್‌ಗೆ ಅತ್ಯುತ್ತಮ ಸಾಕ್ಷ್ಯಚಿತ್ರ ಶಾರ್ಟ್‌ ಫಿಲ್ಮ್ ಪ್ರಶಸ್ತಿ

ಭಾರತದ ದಿ ಎಲಿಫೆಂಟ್ ವಿಸ್ಪರರ್ಸ್ ಜೊತೆಗೆ, ಎಸ್‌ಎಸ್ ರಾಜಮೌಳಿ ಅವರ ಬ್ಲಾಕ್‌ಬಸ್ಟರ್ ಆರ್‌ಆರ್‌ಆರ್‌ನ ಜಾಗತಿಕವಾಗಿ ವೈರಲ್ ಆಗಿರುವ ನಾಟು ನಾಟು ಅತ್ಯುತ್ತಮ ಮೂಲ ಗೀತೆಗೆ ಸಹ ಈ ವರ್ಷ ನಾಮನಿರ್ದೇಶನಗೊಂಡಿದೆ ಮತ್ತು ಚಲನಚಿತ್ರ ನಿರ್ಮಾಪಕ ಶೌನಕ್ ಸೇನ್ ಅವರ ಆಲ್ ದಟ್ ಬ್ರೀತ್ಸ್ ಅತ್ಯುತ್ತಮ ಸಾಕ್ಷ್ಯಚಿತ್ರ ಫೀಚರ್ ಫಿಲ್ಮ್ ವಿಭಾಗದಲ್ಲಿ ಸ್ಪರ್ಧಿಸಿದೆ. 

oscars 2023 the elephant whisperers wins best documentary short subject ash

ಲಾಸ್‌ ಏಂಜಲೀಸ್‌ (ಮಾರ್ಚ್‌ 13, 2023): ಆಸ್ಕರ್ಸ್ 2023 ವಿಚಾರದಲ್ಲಿ ಭಾರತಕ್ಕೆ ಮೊದಲ ಗೆಲುವು ಸಿಕ್ಕಿದೆ.  ಅತ್ಯುತ್ತಮ ಸಾಕ್ಷ್ಯಚಿತ್ರ ಕಿರು ವಿಷಯ ಪ್ರಶಸ್ತಿ ಭಾರತದ ಪಾಲಾಗಿದೆ. ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶಿಸಿದ ಮತ್ತು ಗುನೀತ್ ಮೊಂಗಾ ನಿರ್ಮಿಸಿದ ‘ದಿ ಎಲಿಫೆಂಟ್ ವಿಸ್ಪರರ್ಸ್’ 95 ನೇ ಅಕಾಡೆಮಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಹಾಗೆ, ಈ ವರ್ಗದಲ್ಲಿ ನಾಮನಿರ್ದೇಶನಗೊಂಡಿದ್ದ ‘ಹಾಲೌಟ್’, ‘ದಿ ಮಾರ್ಥಾ ಮಿಚೆಲ್ ಎಫೆಕ್ಟ್’, ‘ಸ್ಟ್ರೇಂಜರ್ ಅಟ್ ದಿ ಗೇಟ್’, ಮತ್ತು ‘ಹೌ ಡು ಯು ಮೆಷರ್ ಎ ಇಯರ್’ ಚಿತ್ರಗಳನ್ನು ಸೋಲಿಸಿ ಈ ವಿಭಾಗದಲ್ಲಿ ಭಾರತದ ಚಿತ್ರ ಗೆದ್ದಿದೆ. 

‘ದಿ ಎಲಿಫೆಂಟ್ ವಿಸ್ಪರರ್ಸ್’ ಈ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಚಲನಚಿತ್ರವಾಗಿದೆ ಮತ್ತು 1969 ಹಾಗೂ 1979 ರಲ್ಲಿ ಕ್ರಮವಾಗಿ ಅತ್ಯುತ್ತಮ ಸಾಕ್ಷ್ಯಚಿತ್ರ ಕಿರುಚಿತ್ರಕ್ಕಾಗಿ ಸ್ಪರ್ಧಿಸಿದ ‘ದಿ ಹೌಸ್‌ ದಟ್‌ ಆನಂದ ಬಿಲ್ಟ್’ ಮತ್ತು ‘ಆನ್ ಎನ್‌ಕೌಂಟರ್ ವಿತ್ ಫೇಸ್‌ಗಳ’ ನಂತರ ನಾಮನಿರ್ದೇಶನಗೊಂಡ ಮೂರನೇ ಚಲನಚಿತ್ರವಾಗಿದೆ.

ಇದನ್ನು ಓದಿ: Oscars 2023: ಆಸ್ಕರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಪ್ರಾರಂಭ: ರೆಡ್ ಕಾರ್ಪೆಟ್ ಮೇಲೆ ಕಾಣಿಸಿಕೊಂಡ 'ಆರ್​ಆರ್​ಆರ್' ಟೀಂ

ತಮಿಳುನಾಡಿನ ಮುದುಮಲೈ ರಾಷ್ಟ್ರೀಯ ಉದ್ಯಾನವನದಲ್ಲಿ ದಿ ಎಲಿಫೆಂಟ್ ವಿಸ್ಪರರ್ಸ್ ಚಿತ್ರವನ್ನು ಶೂಟಿಂಗ್ ಮಾಡಲಾಗಿದೆ.  ಸ್ಥಳೀಯ ದಂಪತಿ ಬೊಮ್ಮನ್ ಮತ್ತು ಬೆಳ್ಳಿಯ ಆರೈಕೆಯಲ್ಲಿರುವ ರಘು ಎಂಬ ಅನಾಥ ಆನೆ ಮರಿಯ ಕಥೆಯನ್ನು ಈ ಸಾಕ್ಷ್ಯಚಿತ್ರ ಒಳಗೊಂಡಿದೆ. ಸಾಕ್ಷ್ಯಚಿತ್ರವು ಅವರ ನಡುವೆ ಬೆಳೆಯುವ ಬಾಂಧವ್ಯವನ್ನು ಮಾತ್ರವಲ್ಲದೆ ಅವರ ಸುತ್ತಮುತ್ತಲಿನ ನೈಸರ್ಗಿಕ ಸೌಂದರ್ಯವನ್ನು ತೋರಿಸುತ್ತದೆ. ಎಲಿಫೆಂಟ್ ವಿಸ್ಪರರ್ಸ್ ಡಿಸೆಂಬರ್ 2022 ರಲ್ಲಿ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿತ್ತು.

ಅಚಿನ್ ಜೈನ್ ಮತ್ತು ಗುನೀತ್ ಮೊಂಗಾ ಈ ಡಾಕ್ಯುಮೆಂಟರಿ ಕಿರು ಚಿತ್ರವನ್ನು ನಿರ್ಮಿಸಿದ್ದಾರೆ ಮತ್ತು ಕಾರ್ತಿಕಿ ಗೊನ್ಸಾಲ್ವಿಸ್ ಇದನ್ನು ನಿರ್ದೇಶಿಸಿದ್ದಾರೆ. 41 ನಿಮಿಷಗಳ ಈ ಕಿರುಚಿತ್ರವು ಎರಡು ಅನಾಥ ಮರಿ ಆನೆಗಳನ್ನು ದತ್ತು ಪಡೆದ ತಮಿಳುನಾಡಿನ ಮುದುಮಲೈ ಹುಲಿ ಸಂರಕ್ಷಿತ ಪ್ರದೇಶದ ಕುಟುಂಬವನ್ನು ಆಧರಿಸಿದ ಕತೆ. ಇನ್ನು, ಈ ಕಿರುಚಿತ್ರದ ವಿಶೇಷವೆಂದರೆ ಇದು ಚಲನಚಿತ್ರ ನಿರ್ಮಾಪಕ ಗೊನ್ಸಾಲ್ವಿಸ್ ಅವರ ಚೊಚ್ಚಲ ನಿರ್ದೇಶನದ ಚಿತ್ರವೂ ಆಗಿದೆ.

ಇದನ್ನೂ ಓದಿ: Oscars 2023: ಆಸ್ಕರ್‌ ಪ್ರಶಸ್ತಿಗೆ ಕ್ಷಣಗಣನೆ: ಭಾರತದ ಮೂರು ಚಿತ್ರಗಳು ಪ್ರಶಸ್ತಿಯ ರೇಸ್‌ನಲ್ಲಿ

ಭಾರತದ ದಿ ಎಲಿಫೆಂಟ್ ವಿಸ್ಪರರ್ಸ್ ಜೊತೆಗೆ, ಎಸ್‌ಎಸ್ ರಾಜಮೌಳಿ ಅವರ ಬ್ಲಾಕ್‌ಬಸ್ಟರ್ ಆರ್‌ಆರ್‌ಆರ್‌ನ ಜಾಗತಿಕವಾಗಿ ವೈರಲ್ ಆಗಿರುವ ನಾಟು ನಾಟು ಅತ್ಯುತ್ತಮ ಮೂಲ ಗೀತೆಗೆ ಸಹ ಈ ವರ್ಷ ನಾಮನಿರ್ದೇಶನಗೊಂಡಿತ್ತು ಮತ್ತು ಚಲನಚಿತ್ರ ನಿರ್ಮಾಪಕ ಶೌನಕ್ ಸೇನ್ ಅವರ ಆಲ್ ದಟ್ ಬ್ರೀತ್ಸ್ ಅತ್ಯುತ್ತಮ ಸಾಕ್ಷ್ಯಚಿತ್ರ ಫೀಚರ್ ಫಿಲ್ಮ್ ವಿಭಾಗದಲ್ಲಿ ಸ್ಪರ್ಧಿಸಿದೆ. ಈ ಪೈಕಿ ನಾಟು ನಾಟು ಹಾಡಿಗೆ ಪ್ರಶಸ್ತಿ ಲಭಿಸಿದೆ. 

ಇನ್ನು, ಭಾರತೀಯ ಖ್ಯಾತ ನಟಿ ದೀಪಿಕಾ ಪಡುಕೋಣೆ ಈ ಬಾರಿ ಆಸ್ಕರ್‌ನ ನಿರೂಪಕಿಯಾಗಿ ಮಿಂಚುತ್ತಿದ್ದಾರೆ. ಈ ಹಿಂದೆ ನಟಿ ಪ್ರಿಯಾಂಕಾ ಚೋಪ್ರಾ ಸಹ ನಿರೂಪಕಿಯಾಗಿದ್ದರು. 

Latest Videos
Follow Us:
Download App:
  • android
  • ios