ಪವಿತ್ರಾ ಲೋಕೇಶ್-ನರೇಶ್ ಪ್ರೇಮ್ ಕಹಾನಿ, ರಮ್ಯಾ-ಸುಚೇಂದ್ರ ಪ್ರಸಾದ್ ವಿಲನ್: 'ಮತ್ತೆ ಮದುವೆ' ಟ್ರೇಲರ್ ಔಟ್

ಪವಿತ್ರಾ ಲೋಕೇಶ್ ಮತ್ತು ನರೇಶ್ ಪ್ರೇಮ್ ಕಹಾನಿಯ ಮತ್ತೆ ಮದುವೆ ಟ್ರೈಲರ್ ರಿಲೀಸ್ ಆಗಿದೆ. ಇದರಲ್ಲಿ ರಮ್ಯಾ-ಸುಚೇಂದ್ರ ಪ್ರಸಾದ್ ವಿಲನ್ ಎನ್ನುವ ಹಾಗೆ ತೋರಿಸಲಾಗಿದೆ.

pavitra lokesh and Naresh starrer matte maduve trailer released sgk

ಟಾಲಿವುಡ್ ನಟ ನರೇಶ್ ಹಾಗೂ ಕನ್ನಡದ ನಟಿ ಪವಿತ್ರಾ ಲೋಕೇಶ್ ನಟಿಸಿರುವ ಮತ್ತೆ ಮದುವೆ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ತಮ್ಮದೇ ರಿಯಲ್ ಲೈಫ್ ಘಟನೆಯನ್ನು ಈ ಜೋಡಿ ಸಿನಿಮಾ ಮಾಡಿರುವುದು ಟ್ರೇಲರ್ ನಲ್ಲಿ ಗೊತ್ತಾಗುತ್ತಿದೆ. ಈ ಹಿಂದೆ ರಿಲೀಸ್ ಆಗಿದ್ದ ಟೀಸರ್ ಬಹಳ ಸದ್ದು ಮಾಡಿತ್ತು. ಅದರ ಬೆನ್ನಲ್ಲೇ ಈಗ ಬಿಡುಗಡೆಯಾಗಿರುವ ಮತ್ತೆ ಮದುವೆ ಟ್ರೈಲರ್ ಸಂಚಲನ ಸೃಷ್ಟಿಸಿದೆ.

ಪವಿತ್ರಾ ಲೋಕೇಶ್ ಹಾಗೂ ನರೇಶ್ ನಡುವೆ ಪ್ರೀತಿ ಹುಟ್ಟಿದ್ದೇಗೆ? ಆ ಪ್ರೀತಿಗೆ ನರೇಶ್ ಮೂರನೇ ಪತ್ನಿ ರಮ್ಯಾ ರಘುಪತಿಯೇ ವಿಲನ್ ಆಗಿ ನಿಂತಿರುವುದು. ಈ ಮೂವರ ಜಗಳ ಹಾದಿ ಬೀದಿ ರಂಪವಾಗಿದ್ದು. ಮೈಸೂರು ಹೋಟೆಲ್ ನಲ್ಲಿ ನಡೆದ ಹೈಡ್ರಾಮಾ ಕಹಾನಿ. ಈ ವಯಸ್ಸಿನಲ್ಲಿ ನರೇಶ್ ಮತ್ತೆ ಪ್ರೀತಿಯಲ್ಲಿ ಬಿದ್ದಿರುವ ಬಗ್ಗೆ ಜನ ಹೀಯಾಳಿಸೋದು. ಹೀಗೆ ನಾನಾ ವಿಷಯಗಳು ಸದ್ಯ ರಿಲೀಸ್ ಆಗಿರುವ ಟ್ರೇಲರ್ ನಲ್ಲಿ ಅನಾವರಣವಾಗಿದೆ.

ಪ್ರತಿಷ್ಠಿತ ವಿಜಯ ಕೃಷ್ಣ ಮೂವೀಸ್ ಬ್ಯಾನರ್ ನಡಿ ನರೇಶ್ ನಿರ್ಮಾಣ ಮಾಡಿರುವ ಮತ್ತೆ ಮದುವೆ ಚಿತ್ರಕ್ಕೆ ಎಂ. ಎಸ್. ರಾಜು ಆಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದ್ದು ಎಂ.ಎಸ್. ರಾಜು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಹಾಗೂ ಮಧೂ ಒಳಗೊಂಡ ಬಹು ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

ಸುರೇಶ್ ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್ ಬಾಲ್ ರೆಡ್ಡಿ ಕ್ಯಾಮೆರಾ ವರ್ಕ್, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯ ಚಿತ್ರಕ್ಕಿದೆ. ಟೀಸರ್ ಮೂಲಕ ಸಂಚಲನ ಸೃಷ್ಟಿಸುತ್ತಿರುವ ಮತ್ತೆ ಮದುವೆ ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಮೂಡಿಬರ್ತಿದೆ.

ನರೇಶ್​, ಪವಿತ್ರಾ ಲೋಕೇಶ್​ 'ಮತ್ತೆ ಮದುವೆ'ಗೆ ಡೇಟ್​ ಫಿಕ್ಸ್​- ಕಿಸ್ಸಿಂಗ್​ ಟೀಸರ್​ ಬಿಡುಗಡೆ

ಕಳೆದ ವರ್ಷ ನಟ ನರೇಶ್ ಮತ್ತು ಪವಿತ್ರಾ ಲೋಕೇಶ್ ಹಾಗೂ ನರೇಶ್ 3ನೇ ಪತ್ನಿ ರಮ್ಯಾ ರಘುಪತಿ ಭಾರಿ ಸದ್ದು ಮಾಡಿದ್ದರು. ಮೂವರು ಮಾಧ್ಯಮಗಳ ಮುಂದೆ ಆರೋಪ ಪ್ರತ್ಯಾರೋಪಗಳನ್ನು ಮಾಡುವ ಮೂಲಕ ಸಂಸಾರದ ವಿಚಾರವನ್ನು ಬೀದಿಗೆ ತಂದಿದ್ದರು. ತಮ್ಮ ಹಾಗೂ ನರೇಶ್ ದಾಂಪತ್ಯದಲ್ಲಿ ಬಿರುಕು ಮೂಡಲು ನಟಿ ಪವಿತ್ರಾ ಲೋಕೇಶ್ ಕಾರಣ ಎಂದು ರಮ್ಯಾ ರಘುಪತಿ ಆರೋಪಿಸಿದ್ದರು. ಇದನ್ನು ನರೇಶ್ ಮತ್ತು ಪವಿತ್ರಾ ಇಬ್ಬರೂ ಅಲ್ಲಗಳೆದಿದ್ದರು.

ಬಳಿಕ ಮೈಸೂರಿನ ಹೋಟೆಲ್‌ನಲ್ಲಿ ನರೇಶ್ ಹಾಗೂ ಪವಿತ್ರಾ ಒಟ್ಟಿಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ಆ ಹೈಡ್ರಾಮಾದ ವಿಡಿಯೋ ಸಖತ್ ವೈರಲ್ ಆಗಿತ್ತು. ರಮ್ಯಾ ಪತಿ ನರೇಶ್ಗೆ ಚಪ್ಪಲಿಯಲ್ಲಿ ಹೊಡೆಯಲು ಹೋಗಿದ್ದರು. ಈ ಎಲ್ಲಾ ಘಟನೆಗಳನ್ನೇ ಇಟ್ಟುಕೊಂಡು ಪವಿತ್ರಾ ಮತ್ತು ನರೇಶ್ ಇಬ್ಬರೂ ಸಿನಿಮಾ ಮೂಲಕ ಬರ್ತಿದ್ದಾರೆ. ಟ್ರೈಲರ್ ನೋಡ್ತಿದ್ರೆ ಈ ಸಿನಿಮಾದಲ್ಲಿ 3ನೇ ಪತ್ನಿ ರಮ್ಯಾ ರಘುಪತಿ ಹಾಗೂ ಪವಿತ್ರಾ ಲೋಕೇಶ್ ಪತಿ ಸುಚೇಂದ್ರ ಪ್ರಸಾದ್ ಇಬ್ಬರನ್ನು ವಿಲನ್‌ಗಳ ರೀತಿ ತೋರಿಸಿದ್ದಾರೆ. ಟ್ರೈಲರ್ ಮೂಲಕ ಸದ್ದು ಮಾಡುತ್ತಿರುವ ಎರಡನೇ ಮದುವೆ ಸಿನಿಮಾ ಹೇಗಿರಲಿದೆ ಎಂದು ಕಾದು ನೋಡಬೇಕಿದೆ. 

Latest Videos
Follow Us:
Download App:
  • android
  • ios