ಬೆಂಗಳೂರು (ಏ. 10): ವಿವೇಕ್ ಒಬೆರಾಯ್ ಅಭಿನಯದ ಬಹುನಿರೀಕ್ಷಿತ ಚಿತ್ರ ಪಿಎಂ ನರೇಂದ್ರ ಮೋದಿ ಬಯೋಪಿಕ್ ಬಿಡುಗಡೆಗೆ ಚುನಾವಣಾ ಆಯೋಗ ತಡೆ ನೀಡಿದೆ. 

"

ಚುನಾವಣೆ ಮುಗಿಯುವವರೆಗೆ ಚಿತ್ರ ಬಿಡುಗಡೆ ಮಾಡಬಾರದೆಂದು ಹೇಳಿದ್ದು, ನಾಳೆ ಬಿಡುಗಡೆ ದಿನಾಂಕ ನಿಗದಿಯಾಗುವುದೆಂದು ಚುನಾವಣಾ ಆಯೋಗ ಹೇಳಿದೆ. 

ರಾಜಕೀಯ ಪಕ್ಷಗಳಿಗೆ ಸಂಬಂಧಿಸಿದ ಅಥವಾ ವೈಯಕ್ತಿಕವಾಗಿರುವ ಯಾವುದೇ ಬಯೋಪಿಕ್ ನ್ನು ಚುನಾವಣೆ ಮುಗಿಯುವವರೆಗೆ ಪ್ರಸಾರ ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ. ಇದಕ್ಕೆ ಸಂಬಂಧಿಸಿದಂತೆ ಏನೇ ದೂರುಗಳಿದ್ದರು ಸುಪ್ರೀಂಕೋರ್ಟ್ ಅಥವಾ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಪೀಠ ವಿಚಾರಣೆ ನಡೆಸಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.  

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪಿಎಂ ಮೋದಿ ಬಯೋಪಿಕ್ ಬಿಡುಗಡೆಗೆ ತಡೆ ನೀಡಬೇಕೆಂದು ಕೋರಿ ನಿನ್ನೆ ಕಾಂಗ್ರೆಸ್ ನಾಯಕರೊಬ್ಬರು ಅರ್ಜಿ ಸಲ್ಲಿಸಿದ್ದರು. ಇಂತಹ ನಾನ್ಸೆನ್ಸ್ ವಿಚಾರಗಳಿಗೆ ಕೋರ್ಟ್ ನ ಅಮೂಲ್ಯ ಸಮಯ ಹಾಳಾಗುತ್ತದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿತ್ತು.

ಕಾಂಗ್ರೆಸ್ ಹೇಳಿದಂತೆ ಈ ಚಿತ್ರ ಆಡಳಿತಾರೂಢ ಬಿಜೆಪಿಯನ್ನು ಹೊಗಳುವಂತಿದೆಯಾ ಅಥವಾ ಬ್ಯಾಲೆನ್ಸ್ ಮಾಡುವಂತಿದೆಯಾ ಎಂದು ಚುನಾವಣಾ ಆಯೋಗ ನಿರ್ಧರಿಸಬೇಕೆಂದು ಹೇಳಿತ್ತು. 

ಮೋದಿ ಪಾತ್ರದಲ್ಲಿ ವಿವೇಕ್ ಒಬೆರಾಯ್ ಕಾಣಿಸಿಕೊಂಡಿದ್ದರು. ಉಮಂಗ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸಿದ್ದು ಸಂದೀಪ್ ಸಿಂಗ್ ನಿರ್ಮಿಸಿದ್ದಾರೆ. 

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.