ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ರಾಜಕೀಯ ಗಣ್ಯರು ಪ್ರೀತಿಯ ಶುಭಾಶಯ ತಿಳಿಸಿದ್ದಾರೆ.  ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ, ಸಿದ್ಧರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ವಿಶ್ ಮಾಡಿದ್ದಾರೆ.

ಮಾರ್ಚ್ 17 ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್(Puneeth Rajkuma) ಅಭಿಮಾನಿಗಳ ಪಾಲಿಗೆ ವಿಶೇಷ ದಿನ. ಅಪ್ಪು ಹುಟ್ಟುಹಬ್ಬದ(Birthday) ಆಚರಣೆ ಜೊತೆಗೆ ಜೇಮ್ಸ್ ಸಿನಿಮಾ(James movie) ಬಿಡುಗಡೆ ಸಂಭ್ರಮ. ಪ್ರತಿವರ್ಷ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಅಭಿಮಾನಿಗಳು ಅದ್ದೂರಿಯಾಗಿ, ಸಂಭ್ರಮದಿಂದ ಆಚರಿಸುತ್ತಿದ್ದರು. ಆದರೆ ಈ ಬಾರಿ ಅಪ್ಪು ಇಲ್ಲವಲ್ಲಾ ಎನ್ನುವ ನೋವಿನಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ಹುಟ್ಟುಹಬ್ಬದ ವಿಶೇಷವಾಗಿ ಪವರ್ ಸ್ಟಾರ್ ನಟನೆಯ ಕೊನೆಯ ಸಿನಿಮಾ ಜೇಮ್ಸ್ ವನ್ನು ರಿಲೀಸ್ ಮಾಡಲಾಗಿದೆ. ಇಂದು ಬಿಡುಗಡೆಯಾದ ಅಪ್ಪು ಕೊನೆಯ ಸಿನಿಮಾ ಜೇಮ್ಸ್ ಅನ್ನು ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತ ಮಾಡಿದ್ದಾರೆ. ಬೆಳ್ಳಂಬೆಳಗ್ಗೆಯೇ ಅಭಿಮಾನಿಗಳು ಚಿತ್ರಮಂದಿರಕ್ಕೆ ತೆರಳಿ ಪವರ್ ಸ್ಟಾರ್ ಅನ್ನು ತೆರೆಮೇಲೆ ನೋಡಿ ಕಣ್ತುಂಬಿಕೊಂಡಿದ್ದಾರೆ.

ಪುನೀತ್ ರಾಜ್ ಕುಮಾರ್ ದೈಹಿಕವಾಗಿ ಜೊತೆಗಿಲ್ಲ. ಆದರೆ ಅವರು ಬಿಟ್ಟು ಹೋಗಿರುವ ಅಪಾರ ನೆನಪುಗಳ ಮೂಲಕ ಸದಾ ಜೊತೆಯಲ್ಲಿದ್ದಾರೆ. ಅದೇ ನೆನಪಿನಲ್ಲಿ ಅಭಿಮಾನಿಗಳು ಕಾಲಕಳೆಯುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಳೆಯೇ ಹರಿಯುತ್ತಿದೆ. ಅಭಿಮಾನಿಗಳು, ಸಿನಿಮಾ ಗಣ್ಯರ ಜೊತೆಗೆ ರಾಜಕೀಯ ಗಣ್ಯರು ವಿಶ್ ಮಾಡುತ್ತಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ(Basavaraj Bomma), ಮಾಜಿ ಸಿಎಂ ಯಡಿಯೂರಪ್ಪ(B.S Yediyurappa), ಸಿದ್ದರಾಮಯ್ಯ(Siddaramaiah), ಹೆಚ್.ಡಿ ಕುಮಾರಸ್ವಾಮಿ(HD Kumaraswamy) ಸೇರಿದಂತೆ ಅನೇಕ ಗಣ್ಯರು ಟ್ವಿಟ್ಟರ್ ಮೂಲಕ ಅಪ್ಪುಗೆ ವಿಶ್ ಮಾಡಿದ್ದಾರೆ.

ಸಿಎಂ ಬಸವರಾಜ್ ಬೊಮ್ಮಾಯಿ:

'ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ ಕನ್ನಡಿಗರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಕರ್ನಾಟಕ ರತ್ನ, ಪ್ರೀತಿಯ ಅಪ್ಪು ದಿ. ಡಾ. ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಪ್ರೀತಿ ಪೂರ್ವಕ ನಮನಗಳು. ಅತಿ ಚಿಕ್ಕ ವಯಸ್ಸಿನಲ್ಲಿ ನೀವು ಮಾಡಿದ ಸಾಧನೆ, ಗಳಿಸಿದ ಜನಪ್ರಿಯತೆ, ಮಾಡಿದ ಜನಸೇವೆಯನ್ನು ಬಣ್ಣಿಸಲು ಪದಗಳೇ ಸಾಲದು.' 

Scroll to load tweet…

ಬಿ.ಎಸ್ ಯಡಿಯೂರಪ್ಪ:

'ನಾಡಿನ ಪ್ರೀತಿ ಗಳಿಸಿದ್ದ ಅಪ್ರತಿಮ, ಸಹೃದಯಿ ಕಲಾವಿದ, ಕನ್ನಡಿಗರ ಕಣ್ಮಣಿ, ಡಾ.ರಾಜ್ ಕುಟುಂಬದ ಕುಡಿ, ಚಿಕ್ಕ ವಯಸ್ಸಿನಲ್ಲಿಯೇ ಅಪಾರವಾದದ್ದನ್ನು ಸಾಧಿಸಿ, ಅಕಾಲಿಕವಾಗಿ ನಮ್ಮನ್ನಗಲಿದ ಅಭಿಮಾನಿಗಳ ಪಾಲಿನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಆ ಸಾಧಕ ಚೇತನಕ್ಕೆ ಅಭಿಮಾನಪೂರ್ವಕ ನಮನಗಳು.'

Scroll to load tweet…

ಹೆಚ್.ಡಿ ಕುಮಾರಸ್ವಾಮಿ:

'ಕನ್ನಡ ಚಿತ್ರರಂಗದ ಅಸ್ತಿಯಾಗಿದ್ದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಮರೆಯಲಾಗದ ಆ ತಾರೆಗೆ ನನ್ನ ಭಾವಪೂರ್ಣ ನಮನಗಳು. ಕನ್ನಡಿಗರ ಪಾಲಿಗೆ ಸದಾ ಸ್ಫೂರ್ತಿಯ ಚಿಲುಮೆ ಆಗಿರುವ ಅವರು ನಮ್ಮ ಪಾಲಿಗೆ ಸದಾ ಅಮರ. #ಪುನೀತ್_ರಾಜಕುಮಾರ್'

Scroll to load tweet…

ಸಿದ್ದರಾಮಯ್ಯ;

'ಪುನೀತ್ ರಾಜಕುಮಾರ್ ನಮ್ಮಿಂದ ಕಣ್ಮರೆಯಾಗಿದ್ದರೂ ಸರಳ,‌ ಸಜ್ಜನಿಕೆ, ಪ್ರೀತಿ, ಆತ್ಮವಿಶ್ವಾಸದಿಂದ ಕೂಡಿದ್ದ ಅವರ ಪ್ರತಿಭಾಶಾಲಿ ವ್ಯಕ್ತಿತ್ವ ಪ್ರೇರಕಶಕ್ತಿಯಾಗಿ ಕೋಟ್ಯಂತರ ಹೃದಯದಲ್ಲಿ ಅಜರಾಮರ. ಹುಟ್ಟುಹಬ್ಬದ ದಿನ ಅಪ್ಪುವನ್ನು ಪ್ರೀತಿ ಮತ್ತು ದು:ಖದಿಂದ ಸ್ಮರಿಸುತ್ತೇನೆ.'

ಆರಗ ಜ್ಞಾನೇಂದ್ರ:

'ನಾಡಿನ ಖ್ಯಾತ ನಟ, ಪವರ್ ಸ್ಟಾರ್ ದಿ. ಶ್ರೀ ಪುನೀತ್ ರಾಜ್‌ಕುಮಾರ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವಪೂರ್ವಕ ನಮನಗಳು. ಅವರ ಸರಳ ವ್ಯಕ್ತಿತ್ವ, ಬದುಕು, ಸಾಧನೆಗಳು ಒಂದು ಸ್ಪೂರ್ತಿಯ ಸೆಲೆ. ನಮ್ಮ ನಾಡು ನುಡಿಗೆ ಅವರ ಕೊಡುಗೆಗಳನ್ನು ಎಂದೂ ಮರೆಯಲಾಗದು.'