Asianet Suvarna News Asianet Suvarna News

'ಆದಿಪುರುಷ್' ಸೆಟ್‌ನಲ್ಲಿ ಕೃತಿಗೆ ಪ್ರಪೋಸ್ ಮಾಡಿದ್ರಾ ಪ್ರಭಾಸ್? 'ಬಾಹುಬಲಿ' ಸ್ಟಾರ್ ಲವ್ ಸ್ಟೋರಿ ಫುಲ್ ವೈರಲ್

ಪ್ರಭಾಸ್ ಮತ್ತು ಕೃತಿ ಸನೊನ್ ಮದುವೆ ವಿಚಾರ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇಬ್ಬರು ಮುಂದಿನ ವರ್ಷ ಹಸೆಮಣೆ ಏರಲಿದ್ದಾರೆ ಎನ್ನುವ ಮಾತು ಬಲವಾಗಿ ಕೇಳಿಬರುತ್ತಿದೆ. 

Prabhas Secretly Proposed to Kriti Sanon on the set Adipurush sgk
Author
First Published Nov 29, 2022, 5:37 PM IST

ಟಾಲಿವುಡ್ ಸ್ಟಾರ್ ಪ್ರಭಾಸ್ ಮದುವೆ ವಿಚಾರ ಸದ್ದು ಮಾಡುವುದು ಇದೇ ಮೊದಲಲ್ಲ. ಆಗಾಗ ಪ್ರಭಾಸ್ ಮದುವೆ ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ಆದರೆ ಈ ಬಾರಿ ಪ್ರಭಾಸ್ ಮದುವೆ ವಿಚಾರ ಬಲವಾಗಿ ಕೇಳಿಬರುತ್ತಿದೆ. ಬಾಹುಬಲಿ ಸ್ಟಾರ್ ಬಾಲಿವುಡ್ ಖ್ಯಾತ ನಟಿಯನ್ನು ವರಿಸಲಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಬಾಲಿವುಡ್ ಸ್ಟಾರ್ ನಟಿ ಕೃತಿ ಸನೊನ್ ಜೊತೆ ಪ್ರಭಾಸ್ ಹಸೆಮಣೆ ಏರಲು ಸಜ್ಜಾಗಿದ್ದಾರೆ ಎನ್ನುವ ಸುದ್ದಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಟಾಲಿವುಡ್ ನಿಂದ ಬಾಲಿವುಡ್‌ ವರೆಗೂ ಪ್ರಭಾಸ್ ಮತ್ತು ಕೃತಿ ಮದುವೆಯದ್ದೇ ಸದ್ದು ಸುದ್ದಿ. ಅಂದಹಾಗೆ ಇಬ್ಬರ ನಡುವೆ ಸ್ನೇಹಕ್ಕಿಂತ ಮಿಗಿಲಾದ ಬಂಧವಿದೆ ಎನ್ನುವ ಸುದ್ದಿ ಕಲೆವು ತಿಂಗಳ ಹಿಂದೆಯೇ ಸುದ್ದಿಯಾಗಿತ್ತು. ಆದರೆ ಇತ್ತೀಚೆಗಷ್ಟೆ ಬಾಲಿವುಡ್ ನಟ ವರುಣ್ ಧವನ್ ಹೇಳಿಕೆ ಇಬ್ಬರ ಮದುವೆ ವದಂತಿಗೆ ಮತ್ತಷ್ಟು ಪುಷ್ಠಿ ನೀಡಿತ್ತು. ಪ್ರಭಾಸ್ ಲೈಫ್‌ನಲ್ಲಿ ಒಬ್ಬಳು ಡಾರ್ಲಿಂಗ್ ಇದ್ದಾಳೆ ಎಂದು ಹೇಳುವ ಮೂಲಕ ವರುಣ್ ಅಚ್ಚರಿ ಮೂಡಿಸಿದ್ದರು. ಬಳಿಕ ಅಭಿಮಾನಿಗಳು ಪ್ರಭಾಸ್ ಡಾರ್ಲಿಂಗ್ ಯಾರು ಎಂದು ತಲೆಕೆಡಿಸಿಕೊಂಡಿದ್ದರು. ವರುಣ್ ಧವನ್ ಹೇಳಿಕೆ ಬೆನ್ನಲ್ಲೇ ಪ್ರಭಾಸ್ ಹೃದಯ ಕದ್ದ ಚೋರಿ ಮತ್ಯಾರು ಅಲ್ಲ ಕೃತಿ ಎನ್ನುವ ಮಾತು ಕೇಳಿಬರುತ್ತಿದೆ. 

ಅಂದಹಾಗೆ ಪ್ರಭಾಸ್ ಮತ್ತು ಕೃತಿ ಇಬ್ಬರೂ ಆದಿಪುರುಷ್ ಸಿನಿಮಾದಲ್ಲಿ ನಟಿಸಿದ್ದಾರೆ. ಈಗಾಗಲೇ ಶೂಟಿಂಗ್ ಮುಗಿಸಿದ್ದು ಪೋಸ್ಟ್ ಪ್ರೋಡಕ್ಷನ್ ಕೆಲಸದಲ್ಲಿ ಆದಿಪುರುಷ್ ನಿರತವಾಗಿದೆ. ಅಂದಹಾಗೆ ಸದ್ಯ ಕೇಳಿಬರುತ್ತಿರುವ ಮಾಹಿತಿ ಪ್ರಕಾರ ಪ್ರಭಾಸ್ ಮತ್ತು ಕೃತಿ ನಡುವೆ ಪ್ರೀತಿ ಪ್ರಾರಂಭವಾಗಿದ್ದೇ ಆದಿಪುರುಷ್ ಸಿನಿಮಾ ಸೆಟ್‌ನಿಂದ ಎಂದು ಹೇಳಲಾಗುತ್ತಿದೆ. ಟಾಲಿವುಡ್ ಸ್ಟಾರ್ ಪ್ರಭಾಸ್ ಶೂಟಿಂಗ್ ಸೆಟ್‌ನಲ್ಲಿಯೇ ಕೃತಿಗೆ ಲವ್ ಪ್ರಪೋಸ್ ಮಾಡಿದ್ದರು ಎನ್ನಲಾಗಿದೆ. ಪ್ರಭಾಸ್ ಪ್ರಪೋಸ್‌ಗೆ ಕೃತಿ ಶಾಕ್ ಆದರೂ ನಂತರ ಗ್ರೀನ್ ಸಿಗ್ನಲ್ ನೀಡಿದರು ಎನ್ನಲಾಗಿದೆ.

ಅಂದಹಾಗೆ ಪ್ರಭಾಸ್ ಮತ್ತು ಕೃತಿ ಇಬ್ಬರೂ ಆದಿಪುರುಷ್ ಸಿನಿಮಾ ರಿಲೀಸ್ ಆದಮೇಲೆ ಮದುವೆಯಾಗ್ತಾರೆ ಎನ್ನುವ ಮಾತು ಕೇಳಿಬರುತ್ತಿದೆ. ಅಂದಹಾಗೆ ಆದಿಪುರುಷ್ ಸಿನಿಮಾ ಜೂನ್ ತಿಂಗಳಲ್ಲಿ ರಿಲೀಸ್ ಆಗುತ್ತಿದೆ. ಅಂದರೆ ಇಬ್ಬರೂ ಮುಂದಿನ ವರ್ಷದ ಕೊನೆಯಲ್ಲಿ ಹಸೆಮಣೆ ಏರುವ ಸಾಧ್ಯತೆ ಇದೆ. ಇಬ್ಬರ ಪ್ರೀತಿ, ಮದುವೆ ವಿಚಾರ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದರೂ ಸಹ ಪ್ರಭಾಸ್ ಅಥವಾ ಕೃತಿ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಹೊರ ಬಂದಿಲ್ಲ.  

ಪ್ರಭಾಸ್ ಲವ್ ಲೈಫ್ ಬಗ್ಗೆ ಸುಳಿವು ನೀಡಿದ ನಟ ವರುಣ್; ಬಾಹುಬಲಿ ಸ್ಟಾರ್ ಹೃದಯ ಕದ್ದ ಚೋರಿ ಯಾರು?

ಪ್ರಭಾಸ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಾಹುಬಲಿ ಸಿನಿಮಾ ಬಳಿಕ ಪ್ರಭಾಸ್ ಸಿನಿಮಾಗಳು ಸಕ್ಸಸ್ ಕಂಡಿಲ್ಲ. ಸಾಹೋ ಮತ್ತು ರಾಧೆ ಶ್ಯಾಮ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದರು. ಆದರೆ ಈ ಸಿನಿಮಾಗಳು ಸಹ ಅಭಿಮಾನಿಗಳ ಹೃದಯ ಗೆಲ್ಲುವಲ್ಲಿ ವಿಫಲವಾಯಿತು. ಹಾಗಾಗಿ ಪ್ರಭಾಸ್ ಮುಂದಿನ ಸಿನಿಮಾಗಳ ಮೇಲೆ ನಿರೀಕ್ಷೆ ಹೆಚ್ಚಾಗಿದೆ. 

'ಆದಿಪುರುಷ್' ಟ್ರೋಲ್‌ಗೆ ಕೊನೆಗೂ ಮೌನ ಮುರಿದ ಕೃತಿ; ನಿರ್ದೇಶಕರ ಬಗ್ಗೆ ಹೆಮ್ಮೆ ಇದೆ ಎಂದ ನಟಿ

ಸದ್ಯ ಪ್ರಭಾಸ್ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಸಲಾರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸಲಾರ್ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಈಗಾಗಲೇ 50ರಷ್ಟು ಚಿತ್ರೀಕರಣ ಮುಗಿದಿದೆ. ಈ ಸಿನಿಮಾದಲ್ಲಿ ಪ್ರಭಾಸ್‌ಗೆ ಜೋಡಿಯಾಗಿ ಶ್ರುತಿ ಹಾಸನ್ ನಟಿಸಿದ್ದಾರೆ. ಇನ್ನೂ ನಾಗ್ ಅಶ್ವಿನ್ ಅವರ ಜೊತೆಯೂ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ವಿಶೇಷ ಎಂದರೆ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಕೂಡ ನಟಿಸುತ್ತಿದ್ದಾರೆ. 


    

Follow Us:
Download App:
  • android
  • ios