ಪುನೀತ್ ರಾಜ್ ಕುಮಾರ್ ಗೆ ಮೈಸೂರು ವಿವಿಯಿಂದ ಡಾಕ್ಟರೇಟ್; ಭಾವುಕರಾದ ಅಶ್ವಿನಿ
ಮೈಸೂರು ವಿವಿ 102ನೇ ಘಟಿಕೋತ್ಸವದಲ್ಲಿ ನಟ ಪುನೀತ್ ರಾಜ್‍ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ. ಅಪ್ಪು ಪತ್ನಿ ಅಶ್ವಿನಿ ಗೌರವ ಡಾಕ್ಟರೇಟ್ ಪ್ರಶಸ್ತಿ ಸ್ವೀಕರಿಸಿದರು.
ಮೈಸೂರು ವಿವಿ 102ನೇ ಘಟಿಕೋತ್ಸವದಲ್ಲಿ ನಟ ಪುನೀತ್ ರಾಜ್‍ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ. ಅಪ್ಪು ಪತ್ನಿ ಅಶ್ವಿನಿ ಗೌರವ ಡಾಕ್ಟರೇಟ್ ಪ್ರಶಸ್ತಿ ಸ್ವೀಕರಿಸಿದರು. ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್ ಪದವಿ ಪ್ರದಾನ ವೇಳೆ ಇಡೀ ಡಾ.ರಾಜ್ ಕುಮಾರ್ ಕುಟುಂಬ ಹಾಜರಿತ್ತು. ಈ ವೇಳೆ ಭಾವುಕರಾಗಿದ್ದಾರೆ. ಗಣ್ಯರ ಸಾಲಿನಲ್ಲಿ ಕುಳಿತ್ತಿದ್ದ ಪುನೀತ್ ರಾಜ್ ಕುಮಾರ್ ಸಹೋದರಿಯರು, ಅಪ್ಪು ಪರವಾಗಿ ಅವರ ಪತ್ನಿ ಅಶ್ವಿನಿ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಕೊಡುವಾಗ ಕಣ್ಣಲ್ಲಿ ನೀರು ತುಂಬಿಕೊಂಡಿದ್ದರು.
ಈ ಸಮಯದಲ್ಲಿ ರಾಜ್ ಕುಟುಂಬದಿಂದ ಎರಡು ಚಿನ್ನದ ಪದಕ ಘೋಷಣೆ ಮಾಡಲಾಯಿತು. ಅಶ್ವಿನಿ ಪುನೀತ್ ರಾಜ್ ಕುಮಾರ್‌ರಿಂದ ಎರಡು ಬಂಗಾರದ ಪದಕ ಘೋಷಣೆ ಮಾಡಿದ್ದು ಬಿಸಿನೆಸ್ ಮ್ಯಾನೆಜ್‌ಮೆಂಟ್ ಮತ್ತು ಲಲಿತಾಕಲಾ ವಿಭಾಗಕ್ಕೆ ಒಂದು ಚಿನ್ನದ ಪದಕ ಘೋಷಣೆಯಾಗಿದೆ. ಪಾರ್ವತಮ್ಮ ರಾಜ್‍ಕುಮಾರ್ ಹೆಸರಿನಲ್ಲಿ ಬಿಸಿನೆಸ್ ಮ್ಯಾನೆಜ್‌ಮೆಂಟ್ ವಿಭಾಗಕ್ಕೆ ಚಿನ್ನದ ಪದಕ. ಪುನೀತ್ ರಾಜ್‍ಕುಮಾರ್ ಹೆಸರಿನಲ್ಲಿ ಲಲಿತಾಕಲಾ ವಿಭಾಗಕ್ಕೆ ಚಿನ್ನದ ಪದಕ ನೀಡಲಾಗಿದ್ದು, ಎರಡು ಚಿನ್ನದ ಪದಕವನ್ನು ಅಶ್ವಿನಿ ಪುನೀತ್ ರಾಜ್‍ಕುಮಾರ್ ವಿತರಿಸಲಿದ್ದಾರೆ.
"
ಸ್ನತಕೋತ್ತರ ಪದವಿಯಲ್ಲಿ ಭಾವನ 21ಚಿನ್ನದ ಪದಕ ಪಡೆದು ಸಂತಸ ಪಟ್ಟಿದ್ದಾರೆ. ವಿದ್ಯಾರ್ಥಿನಿ ಕೆಮಿಸ್ಟ್ರಿ ವಿಭಾಗದಲ್ಲಿ 21 ಚಿನ್ನದ ಪದಕ ಬೇಟೆಯಾಡಿದ್ದಾರೆ. ಪುನೀತ್ ರಾಜ್‍ಕುಮಾರ್ ಕುಟುಂಬದ ಆಶೀರ್ವಾದ ಪಡೆದ ಚಿನ್ನದ ಹುಡುಗಿ ಭಾವನ, ನಟ ರಾಘವೇಂದ್ರ ರಾಜ್‌ಕುಮಾರ್ ಹಾಗೂ ಪತ್ನಿ ಮಂಗಳ ರಾಜ್ಕುಮಾರ್ ಜೊತೆ ಸಂಭ್ರಮ ಹಂಚಿಕೊಂಡರು. ಚಿನ್ನದ ಹುಡುಗಿಗೆ ರಾಜ್ ಕುಟುಂಬ ಅಭಿನಂದನೆ ಸಲ್ಲಿಸಿದೆ.
ಇನ್ನು ಮೈಸೂರು ವಿವಿ ಘಟಿಕೋತ್ಸವದಲ್ಲಿ ನಟ ರಾಘವೇಂದ್ರ ರಾಜ್ ಕುಮಾರ್ ಮಾತನಾಡಿ, 'ಜೀವನ ಒಂದು ಚಕ್ರ ಇದ್ದಂತೆ. ನಮ್ಮ ತಂದೆಗೂ ಇದೇ ವಿವಿಯಲ್ಲಿ ಗೌರವ ಡಾಕ್ಟರೇಟ್ ಕೊಟ್ಟಿದ್ರು. ಇಂದು ನನ್ನ ತಮ್ಮನಿಗೂ ಇದೇ ವಿವಿಯಲ್ಲಿ ಗೌರವ ಡಾಕ್ಟರೇಟ್ ಸಿಕ್ಕಿದೆ. ನನಗೆ ಇದು ವೇದಿಕೆ ರೀತಿ ಕಾಣುಸ್ತಿಲ್ಲ. ಸರಸ್ವತಿಯ ಮಂದಿರ ತರ ಕಾಣ್ತಿದೆ. ನಿಮ್ಮ ಕೆಲಸವನ್ನ ಶ್ರದ್ದೆಯಿಂದ ಮಾಡಿದ್ರೆ ಪ್ರಶಸ್ತಿಗಳು ಹುಡುಕಿ ಬರುತ್ತವೇ ಅಂತ ಪುನೀತ್ ಯಾವಾಗಲೂ ಹೇಳ್ತಿದ್ದ. ಹೂವಿನಿಂದ ನಾರು ಸ್ವರ್ಗ ಸೇರಿದಂತೆ ನನ್ನ ತಮ್ಮನಿಂದ ನಾನು ಸ್ವರ್ಗ ನೋಡುತ್ತಿದ್ದೇನೆ. ಈ ಗೌರವ ಡಾಕ್ಟರೇಟ್ ನಮ್ಮ ಕುಟುಂಬದ ಜವಾಬ್ದಾರಿಯನ್ನು ಹೆಚ್ಚಿಸಿದೆ. ಅಶ್ವಿನಿ ಮಾರ್ಗದರ್ಶನದಲ್ಲಿ ನಾವೆಲ್ಲರೂ ಸಾಮಾಜಿಕ ಸೇವೆ ಮುಂದುವರೆಸುತ್ತೇವೆ' ಎಂದರು.
;