Asianet Suvarna News Asianet Suvarna News

Allu Arjun Birthday; ವಿದೇಶಕ್ಕೆ ಹಾರಿದ ಸ್ಟೈಲಿಶ್ ಸ್ಟಾರ್, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ

ತೆಲುಗು ಸ್ಟಾರ್ ಅಲ್ಲು ಅರ್ಜುನ್​ ಅವರಿಗೆ ಇಂದು (ಏಪ್ರಿಲ್ 8) ಹುಟ್ಟುಹಬ್ಬದ ಸಂಭ್ರಮ. 40ನೇ ವಸಂತಕ್ಕೆ ಕಾಲಿಟ್ಟಿರುವ ಅಲ್ಲು ಅರ್ಜುನ್​ ವಿದೇಶದಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಸದ್ಯ ಅಲ್ಲು ಅರ್ಜುನ್ ಕುಟುಂಬದ ಜೊತೆ ಯೂರೋಪ್ ನಲ್ಲಿದ್ದಾರೆ.

 

Pushpa star Allu Arjun heads to Europe for 40th birthday
Author
Bengaluru, First Published Apr 8, 2022, 11:38 AM IST | Last Updated Apr 8, 2022, 11:38 AM IST

ತೆಲುಗು ಸ್ಟಾರ್ ಅಲ್ಲು ಅರ್ಜುನ್​ (Allu Arjun) ಅವರಿಗೆ ಇಂದು (ಏಪ್ರಿಲ್ 8) ಹುಟ್ಟುಹಬ್ಬದ(Birthday) ಸಂಭ್ರಮ. ಸ್ಟೈಲಿಶ್ ಸ್ಟಾರ್ ಹುಟ್ಟುಹಬ್ಬಕ್ಕೆ ಅನೇಕ ಸೆಲೆಬ್ರಿಟಿಗಳು, ಅಪಾರ ಸಂಖ್ಯೆಯ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳಿಂದ ಶುಭಾಶಯಗಳು ಮಳೆ ಸುರಿಸುತ್ತಿದ್ದಾರೆ. ಅಲ್ಲು ಅರ್ಜುನ್​ 40ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅಭಿಮಾನಿಗಳು ದೇಶದಾದ್ಯಂತ ಇರುವ ಅಭಿಮಾನಿಗಳು ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿ ಸಂಭ್ರಮಿಸುತ್ತಿದ್ದಾರೆ. ಪುಷ್ಪ(Pushpa movie) ಸಿನಿಮಾದ ಸಕ್ಸಸ್ ನಲ್ಲಿರುವ ಅರ್ಜುನ್ ಅವರಿಗೆ ಡಬಲ್ ಸಂಭ್ರಮ. ಹುಟ್ಟುಹಬ್ಬದ ಆಚರಣೆ ಜೊತೆಗೆ ಸಿನಿಮಾಗೆ ಸಿಕ್ಕ ಪ್ರತಿಕ್ರಿಯೆಯನ್ನು ಸೆಲೆಬ್ರೇಶನ್ ಮಾಡುತ್ತಿದ್ದಾರೆ.

ಅಂದಹಾಗೆ ಅಲ್ಲು ಅರ್ಜುನ್ ತಮ್ಮ 40ನೇ ವರ್ಷದ ಹುಟ್ಟುಹಬ್ಬವನ್ನು ವಿದೇಶದಲ್ಲಿ ಆಚರಣೆ ಮಾಡುತ್ತಿದ್ದಾರೆ. ಈಗಾಗಲೇ ಅಲ್ಲು ಅರ್ಜುನ್ ಕುಟುಂಬದ ಜೊತೆ ಯೂರೋಪ್(Europe) ಪ್ರವಾಸಕ್ಕೆ ತೆರಳಿದ್ದಾರೆ. ಪತ್ನಿ ಸ್ನೇಹ ಮತ್ತು ಇಬ್ಬರು ಮಕ್ಕಳಾದ ಅಯಾನ್ ಮತ್ತು ಅರ್ಹಾ ಜೊತೆ ವಿದೇಶಕ್ಕೆ ಹಾರಿದ್ದಾರೆ. ಚಿತ್ರೀಕರಣ ಪ್ರಾರಂಭವಾಗುವ ಮೊದಲು ಕುಟುಂಬದ ಜೊತೆ ವಿದೇಶಿ ಪ್ರವಾಸ ಎಂಜಾಯ್ ಮಾಡಿ ವಾಪಾಸ್ ಆಗುವ ಯೋಜನೆಯೊಂದಿಗೆ ಅಲ್ಲು ಯೂರೋಪ್ ಗೆ ತೆರಳಿದ್ದಾರೆ.

ಅಂದಹಾಗೆ ಅಲ್ಲು ಅರ್ಜುನ್​ ಅವರದ್ದು ಸಿನಿಮಾ ಹಿನ್ನೆಲೆಯ ಕುಟುಂಬ. ಅಲ್ಲು ಅರ್ಜುನ್​ ತಂದೆ ಅಲ್ಲು ಅರವಿಂದ್​ ಅವರು ತೆಲುಗು ಸಿನಿಮಾರಂಗದಲ್ಲಿ ಖ್ಯಾತ ನಿರ್ಮಾಪಕರು. ಬಾಲನಟನಾಗಿಯೇ ಚಿತ್ರರಂಗಕ್ಕೆ ಕಾಲಿಟ್ಟ ಅಲ್ಲು ಅರ್ಜುನ್​ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸಾಕಷ್ಟು ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಹಲವು ಪ್ರತಿಭಾವಂತ ನಿರ್ದೇಶಕರ ಜೊತೆ ಕೆಲಸ ಮಾಡಿದ್ದಾರೆ. ಪುಷ್ಪ ಸಿನಿಮಾ ಬಳಿಕ ಸ್ಟೈಲಿಶ್ ಸ್ಟಾರ್ ಪ್ಯಾನ್​ ಇಂಡಿಯಾ ಸ್ಟಾರ್​ ಆಗಿ ಹೊರಹೊಮ್ಮಿದ್ದಾರೆ.

ರಿಯಲ್‌ ಲೈಫ್‌ ಶ್ರೀವಲ್ಲಿ ಪಡೆಯಲು ಸಾಕಷ್ಟು ಕಷ್ಪಪಟ್ಟ ಅಲ್ಲು ಅರ್ಜುನ್‌!

ಅಲ್ಲು ಅರ್ಜುನ್ ಸದ್ಯ ಪುಷ್ಪ-2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಮೊದಲ ಭಾಗ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡ ಬಳಿಕ ಪಾರ್ಟ್-2 ಮೇಲೆ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ. ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ, ಅಲ್ಲು ಅರ್ಜುನ್ ಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಮಲಯಾಳಂನ ಖ್ಯಾತ ನಟ ಫಹಾದ್ ಫಾಸಿಲ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಮೊದಲ ಭಾಗದ ಕೊನೆಯಲ್ಲಿ ಬಂದಿದ್ದ ಫಹಾದ್, ಪಾರ್ಟ್-2ನಲ್ಲಿ ಅಬ್ಬರಿಸಲಿದ್ದಾರೆ. ಪುಷ್ಪ ಸಿನಿಮಾ ಬಳಿಕ ಅಲ್ಲು ಅರ್ಜುನ್ ಮಾರುಕಟ್ಟೆ ಕೂಡ ದೊಡ್ಡದಾಗಿದೆ. ಹಿಂದಿಯಲ್ಲೂ ಅತೀ ಹೆಚ್ಚು ಬೇಡಿಕೆ ಸೃಷ್ಟಿಯಾಗಿದೆ.

ಪುಷ್ಪ ಸಿನಿಮಾದಲ್ಲಿ ರಾ ಲುಕ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಸಖತ್ ಟ್ರೀಟ್ ನೀಡಿದ್ದರು. ಸುಕುಮಾರ್ ನಿರ್ದೇಶನ ಮತ್ತು ಹಾಡುಗಳು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಈ ಸಿನಿಮಾ ಬಳಿಕ ಅಲ್ಲು ಅರ್ಜುನ್ ಸಿನಿಮಾ ಪಯಣ ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ. ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರಹೊಮ್ಮಿದ್ದರಿಂದ ಮುಂದಿನ ಸಿನಿಮಾಗಳು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಇರಲಿದೆಯಾ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ.

'RRR' ಸಿನಿಮಾವನ್ನು ಹಾಡಿ ಹೊಗಳಿದ ಅಲ್ಲು ಅರ್ಜುನ್ ಮತ್ತು ಮಹೇಶ್ ಬಾಬು

ಈ ಸಿನಿಮಾ ಬಳಿಕ ಅಲ್ಲಿ ಅರ್ಜುನ್ ನಿರ್ದೇಶಕ ವೇಣು ಶ್ರೀರಾಮ್ ಮತ್ತು ಕೊರಟಾಲ ಶಿವ ಸೇರಿದಂತೆ ಮುಂತಾದವರ ಜೊತೆ ಸಿನಿಮಾ ಮಾಡಲಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಆದರೆ ಈ ಬಗ್ಗೆ ಅಳ್ಲು ಅರ್ಜುನ್ ಎಲ್ಲೂ ಬಹಿರಂಗಪಡಿಸಿಲ್ಲ. ಸದ್ಯ ಪುಷ್ಪ-2 ಸಿನಿಮಾ ಕಡೆ ಹೆಚ್ಚು ಗಮನ ಹರಿಸಿದ್ದಾರೆ. ಇನ್ನು ಪುಷ್ಪ ಸಿನಿಮಾಗೆ ಅಲ್ಲು ಅರ್ಜುನ್ ಭರ್ಜರಿ ಮೊತ್ತದ ಸಂಬಾವನೆ ಪಡೆದಿದ್ದಾರೆ ಎನ್ನುವ ಮಾತು ಕೇಳಿಬಂದಿದೆ. ಮೂಲಗಳ ಪ್ರಕಾರ ಅಲ್ಲು ಅರ್ಜುನ್ ಪುಷ್ಪ ಸಿನಿಮಾಗೆ ಬರೋಬ್ಬರಿ 35 ಕೋಟಿ ರೂಪಾಯಿ ಸಂಭಾವನೆ ಪಡೆದುಕೊಂಡಿದ್ದರು ಎಂದು ಹೇಳಲಾಗಿದೆ. ಆ ಚಿತ್ರ ಭರ್ಜರಿ ಗೆಲುವು ಕಂಡಿದ್ದರಿಂದ ಈಗ ಅವರು ಸಂಭಾವನೆ ಏರಿಸಿಕೊಂಡಿದ್ದಾರೆ. ಮುಂಬರುವ ಸಿನಿಮಾಗಳಿಗೆ ಅವರು 50 ಕೋಟಿ ರೂಪಾಯಿ ಡಿಮ್ಯಾಂಡ್​ ಮಾಡುತ್ತಿದ್ದಾರೆ ಎಂದು ಮೂಲಗಳು ಹೇಳುತ್ತಿವೆ. ಪುಷ್ಪ-2 ಬಿಡುಗಡೆಯಾದ ಬಳಿಕ ಅಲ್ಲು ಅರ್ಜುನ್ ಬೇಡಿಕೆ ಮತ್ತಷ್ಟು ಹೆಚ್ಚಾಗಲಿದ್ದು, ಮಾರುಕಟ್ಟೆ ಕೂಡ ದೊಡ್ಡ ಮಟ್ಟದಲ್ಲಿ ವಿಸ್ತರಿಸಲಿದೆ.

Latest Videos
Follow Us:
Download App:
  • android
  • ios