Asianet Suvarna News Asianet Suvarna News

Love Anthem Song: 'ರಾಧೆ ಶ್ಯಾಮ್' ಚಿತ್ರದ ಹಾಡಿನ ಬಗ್ಗೆ ನಟ ಪ್ರಭಾಸ್ ಪೋಸ್ಟ್

ಟಾಲಿವುಡ್‌ ರೆಬೆಲ್ ಸ್ಟಾರ್ ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ಅಭಿನಯದ ಬಹು ನಿರೀಕ್ಷಿತ ರಾಧೆ ಶ್ಯಾಮ್ ಚಿತ್ರದ ಮತ್ತೊಂದು ಹಾಡಿನ ಬಿಡುಗಡೆ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಭಾಸ್ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.

radhe shyam romantic song love anthem poster out starrer Prabhas gvd
Author
Bangalore, First Published Nov 28, 2021, 4:36 PM IST
  • Facebook
  • Twitter
  • Whatsapp

ಟಾಲಿವುಡ್‌ (Tollywood) ರೆಬೆಲ್ ಸ್ಟಾರ್ ಪ್ರಭಾಸ್ (Prabhas) ಹಾಗೂ ಪೂಜಾ ಹೆಗ್ಡೆ (Pooja Hegde) ಅಭಿನಯದ ಬಹು ನಿರೀಕ್ಷಿತ 'ರಾಧೆ ಶ್ಯಾಮ್' (Radhe Shyam) ಚಿತ್ರದ ಬಿಡುಗಡೆ ಆಗಿರುವ ಟೀಸರ್​, ಪೋಸ್ಟರ್​ಗಳಲ್ಲಿ ಪ್ರಭಾಸ್​ ಅವರು ಲವರ್​ ಬಾಯ್​ ಆಗಿ ಕಾಣಿಸಿಕೊಂಡಿದ್ದಾರೆ. ಇಡೀ ಸಿನಿಮಾ ತುಂಬ ಡಿಫರೆಂಟ್​ ಆಗಿ ಮೂಡಿಬಂದಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಈ ಎಲ್ಲ ಕಾರಣಗಳಿಂದಾಗಿ 'ರಾಧೆ ಶ್ಯಾಮ್' ಚಿತ್ರದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಇದೀಗ ನಟ ಪ್ರಭಾಸ್ ಚಿತ್ರದ ಮತ್ತೊಂದು ಹಾಡಿನ ಬಿಡುಗಡೆ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ಚಿತ್ರದ 'ಯಾರೋ ಇವರ್ಯಾರೋ ಕನವರಿಸೋ ಪ್ರೇಮಿಗಳಾ' ಲಿರಿಕಲ್ ಹಾಡನ್ನು (Lyrical Song) ಚಿತ್ರತಂಡ ಬಿಡುಗಡೆ ಮಾಡಿತ್ತು. ಈಗ ಚಿತ್ರದ ಪ್ರೇಮಗೀತೆಯನ್ನು ಬಿಡುಗಡೆ ಮಾಡುವುದಾಗಿ ನಟ ಪೋಸ್ಟ್ ಮಾಡಿದ್ದಾರೆ. ಈ ಬಗ್ಗೆ 'ಚಿತ್ರದ ಮುಂದಿನ ಹಾಡು ಲವ್‌ ಅಂಥೆಮ್ ಪ್ರೀತಿಯ ಮಾಂತ್ರಿಕತೆಗೆ ಸಾಕ್ಷಿಯಾಗಲು ನೀವು ಸಿದ್ಧರಿದ್ದೀರಾ. ನಾಳೆ ಹಾಡಿನ ಟೀಸರ್ ಬಿಡುಗಡೆ ಎಂದು ಕ್ಯಾಪ್ಷನ್ ಬರೆದು ಚಿತ್ರದ ಪೋಸ್ಟರ್‌ವೊಂದನ್ನು ಪ್ರಭಾಸ್ ಹಂಚಿಕೊಂಡಿದ್ದಾರೆ. ಈ ಪೋಸ್ಟರ್‌ನಲ್ಲಿ ಪ್ರಭಾಸ್ ಮತ್ತು ಪೂಜಾ ಹೆಗ್ಡೆ ಕೆಮಿಸ್ಟ್ರಿ ಸಖತ್ತಾಗಿದ್ದು, ಇಬ್ಬರೂ ಒಬ್ಬರನ್ನೊಬ್ಬರ ಕಣ್ಣಲ್ಲಿ ಕಣ್ಣೀಟು ನೋಡುತ್ತಿರುವುದನ್ನು ಕಾಣಬಹುದಾಗಿದೆ.

Radhe Shyam ಸಾಂಗ್ ರಿಲೀಸ್: ಫ್ಯಾಂಟಸಿ ಲೋಕದಲ್ಲಿ ಪ್ರಭಾಸ್-ಪೂಜಾ ಹೆಗ್ಡೆ

'ರಾಧೆ ಶ್ಯಾಮ್' ಚಿತ್ರದ ಈ ಹಾಡಿನ ಟೀಸರ್ ಹಿಂದಿ ಆವೃತ್ತಿಯಲ್ಲಿ ನಾಳೆ ಮಧ್ಯಾಹ್ನ 1 ಗಂಟೆಗೆ ಮತ್ತು ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂ ಆವೃತ್ತಿಗಳು ಸಂಜೆ 7 ಗಂಟೆಗೆ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. ಈ ಹಿಂದೆ ಧನಂಜಯ್ ರಂಜನ್ ಸಾಹಿತ್ಯದಲ್ಲಿ 'ಯಾರೋ ಇವರ್ಯಾರೋ ಕನವರಿಸೋ ಪ್ರೇಮಿಗಳಾ, ಯಾರೋ ಇವರ್ಯಾರೋ ಕೊನೆಯಿರದ ಪಯಣಿಗರಾ' ಎಂಬ ಹಾಡು ಮೂಡಿಬಂದಿದ್ದು, ಸಂಪೂರ್ಣ ಆ್ಯನಿಮೇಷನ್‌ನಲ್ಲಿ ಚಿತ್ರೀಕರಣ ಮಾಡಿ, ಹೊಸ ಫ್ಯಾಂಟಸಿ ಲೋಕವನ್ನೇ ಸೃಷ್ಟಿ ಮಾಡಿತ್ತು. ಈ ಹಾಡು ತೆಲುಗು, ತಮಿಳು, ಹಾಗೂ ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಿ ಸಿನಿರಸಿಕರಿಂದ ಒಳ್ಳೆಯ ಪ್ರತಿಕ್ರಿಯೆಯನ್ನು ಪಡೆದಿತ್ತು.

'ರಾಧೆ ಶ್ಯಾಮ್'ನಲ್ಲಿ ವಿಕ್ರಮಾದಿತ್ಯನ ಲುಕ್‌ ರಿವೀಲ್

ಈ ಹಿಂದೆ ಚಿತ್ರತಂಡ ಪ್ರಭಾಸ್ ಹುಟ್ಟುಹಬ್ಬದ ಪ್ರಯುಕ್ತ ವಿಕ್ರಮಾದಿತ್ಯನ ಲುಕ್‌ನ್ನು ಪರಿಚಯಿಸಿತ್ತು. ರೊಮ್ಯಾಂಟಿಕ್​ ಕಥಾ ಹೊಂದಿರುವ ಈ ಚಿತ್ರದಲ್ಲಿ ಪ್ರಭಾಸ್, ವಿಕ್ರಮಾದಿತ್ಯ ಎಂಬ ಲವರ್​ ಬಾಯ್ (Lover Boy)​ ಲುಕ್​ನಲ್ಲಿ ಕಾಣಿಸಿಕೊಂಡಿದ್ದು, ಪೂಜಾ ಹೆಗ್ಡೆ ಪ್ರೇರಣಾ ಪಾತ್ರವನ್ನು ನಿರ್ವಹಿಸಲಿದ್ದಾರೆ.  ರಾಧಾ ಕೃಷ್ಣ ಕುಮಾರ್ (Radha Krishna Kumar) ನಿರ್ದೇಶನವಿರುವ ಈ ಚಿತ್ರಕ್ಕೆ ಭೂಷಣ್ ಕುಮಾರ್, ವಂಶಿ ಮತ್ತು ಪ್ರಮೋದ್ ನಿರ್ಮಾಣ ಮಾಡಿದ್ದಾರೆ. ಜಸ್ಟಿನ್ ಪ್ರಭಾಕರನ್ ಸಂಗೀತ ಸಂಯೋಜನೆ, ಮನೋಜ್ ಪರಮಹಂಸ ಛಾಯಾಗ್ರಹಣ ಮತ್ತು ಕೋಟಗಿರಿ ವೆಂಕಟೇಶ್ವರ ರಾವ್ ಸಂಕಲನ ಚಿತ್ರಕ್ಕಿದೆ. 

'ರಾಧೆ ಶ್ಯಾಮ್' ಚಿತ್ರದ ಚಿತ್ರೀಕರಣ ಇದುವರೆಗೆ ಹೈದರಾಬಾದ್, ಟುರಿನ್ (ಇಟಲಿ) ಮತ್ತು ಜಾರ್ಜಿಯಾದಲ್ಲಿ ನಡೆದಿದ್ದು, ಸಚಿನ್ ಖೇಡೇಕರ್, ಭಾಗ್ಯಶ್ರೀ, ಕುನಾಲ್ ರಾಯ್ ಕಪೂರ್, ಸತ್ಯನ್, ಪ್ರಿಯದರ್ಶಿ, ಮುರಳಿ ಶರ್ಮಾ, ಸಶಾ ಚೆಟ್ರಿ, ರಿದ್ಧಿ ಕುಮಾರ್ ಸೇರಿದಂತೆ ಇತರರು ಚಿತ್ರದ ತಾರಾಬಳಗದಲ್ಲಿದ್ದಾರೆ. ಚಿತ್ರವು 2022ರ ಜನವರಿ 14ರಂದು ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ತೆರೆಕಾಣಲಿದೆ.
 

 
 
 
 
 
 
 
 
 
 
 
 
 
 
 

A post shared by Prabhas (@actorprabhas)

Follow Us:
Download App:
  • android
  • ios