Asianet Suvarna News Asianet Suvarna News

Radhe Shyam: ಸಂಚಾರಿ ಹಾಡಿನಲ್ಲಿ ಸ್ಟೈಲಿಶ್ ಲುಕ್‌ನಲ್ಲಿ ಕಾಣಿಸಿಕೊಂಡ ವಿಕ್ರಮಾದಿತ್ಯ

'ಪ್ಯಾನ್ ಇಂಡಿಯಾ ಸ್ಟಾರ್‌' ಪ್ರಭಾಸ್‌ ರೆಬೆಲ್ ಸ್ಟಾರ್ ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ನಟಿಸಿರುವ ಔಟ್​ ಅ್ಯಂಡ್​ ಔಟ್ ಲವ್ ಕಮ್​​ ರೊಮ್ಯಾಂಟಿಕ್​ 'ರಾಧೆ ಶ್ಯಾಮ್' ಚಿತ್ರದ 'ಸಂಚಾರಿ' ಸಾಂಗ್ ಟಿ-ಸಿರೀಸ್ ಕನ್ನಡ ಯೂಟ್ಯೂಬ್‌ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ.

radhe shyam sanchari song out starrer prabhas pooja hegde gvd
Author
Bangalore, First Published Dec 16, 2021, 7:34 PM IST

'ಪ್ಯಾನ್ ಇಂಡಿಯಾ ಸ್ಟಾರ್‌' ಪ್ರಭಾಸ್‌ ರೆಬೆಲ್ ಸ್ಟಾರ್ ಪ್ರಭಾಸ್ (Prabhas) ಹಾಗೂ ಪೂಜಾ ಹೆಗ್ಡೆ (Pooja Hegde) ನಟಿಸಿರುವ ಔಟ್​ ಅ್ಯಂಡ್​ ಔಟ್ ಲವ್ ಕಮ್​​ ರೊಮ್ಯಾಂಟಿಕ್​ 'ರಾಧೆ ಶ್ಯಾಮ್' (Radhe Shyam) ಚಿತ್ರದ ಮತ್ತೊಂದು ಹಾಡು ಬಿಡುಗಡೆಯಾಗಿದೆ. 'ಸಂಚಾರಿ' (Sanchari) ಎಂಬ ಸಾಂಗ್ ಟಿ-ಸಿರೀಸ್ ಕನ್ನಡ ಯೂಟ್ಯೂಬ್‌ ಚಾನೆಲ್‌ನಲ್ಲಿ ಬಿಡುಗಡೆಯಾಗಿದ್ದು, ಧನಂಜಯ್​ ರಂಜನ್ (Dhananjay Ranjan) ​ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಜಸ್ಟಿನ್​ ಪ್ರಭಾಕರನ್ (Justin Prabhakaran)​ ಹಾಡಿಗೆ ಸಂಗೀತ ಸಂಯೋಜಿಸಿದ್ದು, ಸತ್ಯ ಪ್ರಕಾಶ್ (Sathya Prakash)​ ಕಂಠದಲ್ಲಿ ಮೂಡಿ ಬಂದಿದೆ. 

ಬಿಡುಗಡೆಯಾದ 'ಸಂಚಾರಿ' ಹಾಡಿನಲ್ಲಿ ಪ್ರಭಾಸ್ ಹಲವು ಪಯಣ, ಸಾಹಸಗಳನ್ನು ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಯುರೋಪ್‌ನ ಅದ್ಭುತ ಸ್ಥಳಗಳಲ್ಲಿ ಹಾಡನ್ನು ಚಿತ್ರೀಕರಿಸಲಾಗಿದ್ದು, ಸ್ಟೈಲಿಶ್ ಲುಕ್‌ನಲ್ಲಿ ಪ್ರಭಾಸ್ ಕಾಣಿಸಿಕೊಂಡಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಹಾಡು ಬಿಡುಗಡೆಯಾಗಿದ್ದು, ಎಲ್ಲ ಕಡೆಗಳಿಂದ ಹಾಡಿಗೆ ಮೆಚ್ಚುಗೆ ಕೇಳಿ ಬರುತ್ತಿದೆ. ಈ ಹಾಡಿನ ಬಗ್ಗೆ ನಟ ಪ್ರಭಾಸ್ ತಮ್ಮ ಇನ್‌ಸ್ಟಾಗ್ರಾಮ್‌ (Instagram) ಖಾತೆಯಲ್ಲಿ 'ವಿಕ್ರಮಾದಿತ್ಯನಂತೆಯೇ ಜೀವನವನ್ನು ಪ್ರೀತಿಸಿ! ಸಂಚಾರಿ ಸಾಂಗ್‌ನ ಮೂಲಕ ಅವನನ್ನು ಚೆನ್ನಾಗಿ ತಿಳಿದುಕೊಳ್ಳಿ. ಇದೀಗ ಪೂರ್ತಿ ಹಾಡು ರಿಲೀಸ್ ಆಗಿದೆ ಎಂದು ಪೋಸ್ಟ್‌ ಮಾಡಿದ್ದಾರೆ.

Radhe Shyam: ಪ್ರಭಾಸ್-ಪೂಜಾ ಹೆಗ್ಡೆ ಜೋಡಿಯ ಹೃದಯ ಸ್ಪರ್ಶಿ 'ಸೋಚ್ಲಿಯಾ' ಹಾಡು ರಿಲೀಸ್

'ರಾಧೆ ಶ್ಯಾಮ್'ನಲ್ಲಿ ವಿಕ್ರಮಾದಿತ್ಯನ ಲುಕ್‌ನಲ್ಲಿ ಪ್ರಭಾಸ್ ಪರಿಚಯದ ಟೀಸರ್‌ (Teaser) ಈಗಾಗಲೇ ಬಿಡುಗಡೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಸಖತ್ ಹವಾ ಸೃಷ್ಟಿಸಿದೆ. ಈಗಾಗಲೇ ಬಿಡುಗಡೆ ಆಗಿರುವ ಚಿತ್ರದ ಟೀಸರ್​, ಪೋಸ್ಟರ್​ಗಳಲ್ಲಿ ಪ್ರಭಾಸ್​ ಅವರು ಲವರ್​ ಬಾಯ್​ ಆಗಿ ಕಾಣಿಸಿಕೊಂಡಿದ್ದಾರೆ. ಇಡೀ ಸಿನಿಮಾ ತುಂಬ ಡಿಫರೆಂಟ್​ ಆಗಿ ಮೂಡಿಬಂದಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಹಾಗೂ ನಟ ಪ್ರಭಾಸ್ 'ಸಾಹೋ' (Saaho) ಚಿತ್ರದ ನಂತರ ಈ ಚಿತ್ರದಲ್ಲಿ ನಟಿಸುತ್ತಿದ್ದು, ಈ ಎಲ್ಲ ಕಾರಣಗಳಿಂದಾಗಿ 'ರಾಧೆ ಶ್ಯಾಮ್' ಚಿತ್ರದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಮುಖ್ಯವಾಗಿ ಈ ಚಿತ್ರದಲ್ಲಿ ಪ್ರಭಾಸ್ ತಾಯಿಯಾಗಿ ಭಾಗ್ಯಶ್ರೀ (Bhagyashree) ನಟಿಸುತ್ತಿದ್ದು, ಮತ್ತೊಂದು ಪ್ರಮುಖ ಪಾತ್ರದಲ್ಲಿ ಕೃಷ್ಣರಾಜು (KrishnaRaju) ಕಾಣಿಸಿಕೊಳ್ಳಲಿದ್ದಾರೆ.
 

 
 
 
 
 
 
 
 
 
 
 
 
 
 
 

A post shared by Prabhas (@actorprabhas)


ರೆಟ್ರೋ ಕಾಲದ ಲವ್ ಸ್ಟೋರಿಯನ್ನು ಹೊಂದಿರುವ 'ರಾಧೆ ಶ್ಯಾಮ್‌'ನ ಈ ಹಾಡಿನ ವಿಡಿಯೋ ಸಹ ಬಹಳ ಸುಂದರವಾಗಿದ್ದು, ಯೂರೋಪಿನ ಅಂದವನ್ನು ಕಣ್ಣಿಗೆ ಕಟ್ಟುವಂತೆ ಚಿತ್ರೀಕರಣ ಮಾಡಲಾಗಿದೆ. ಅಲ್ಲದೇ ಚಿತ್ರದ ರೊಮ್ಯಾಂಟಿಕ್ ಸಾಂಗ್ 'ಆಶಿಕಿ ಆ ಗಯಿ' ಎಂಬ ಹಾಡು ಬಿಡುಗಡೆಯಾಗಿದ್ದು, ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ಅಂತೂ ಮುದ್ದು ಮುದ್ದಾಗಿ ಕಾಣಿಸಿಕೊಂಡಿದ್ದರು. ಚಿತ್ರದ ಟೀಸರ್ ವಿಕ್ರಮಾದಿತ್ಯನನ್ನು ಪ್ರತಿಯೊಬ್ಬರ ಭೂತ ಮತ್ತು ಭವಿಷ್ಯವನ್ನು ತಿಳಿದಿರುವ ಕೆಲವು ವಿಲಕ್ಷಣ ಕೌಶಲ್ಯಗಳನ್ನು ಹೊಂದಿರುವ ವ್ಯಕ್ತಿ ಎಂದು ತೋರಿಸಿದೆ. ಚಿತ್ರದ ನಾಯಕಿ ಪೂಜಾ ಹೆಗ್ಡೆ ಇತ್ತೀಚೆಗೆ ಚಿತ್ರದ ಡಬ್ಬಿಂಗ್‌ನ್ನು ಪೂರ್ಣಗೊಳಿಸಿದ್ದಾರೆ.

Radhe Shyam ಸಾಂಗ್ ರಿಲೀಸ್: ಫ್ಯಾಂಟಸಿ ಲೋಕದಲ್ಲಿ ಪ್ರಭಾಸ್-ಪೂಜಾ ಹೆಗ್ಡೆ

'ರಾಧೆ ಶ್ಯಾಮ್' ಚಿತ್ರಕ್ಕೆ ರಾಧಾ ಕೃಷ್ಣ ಕುಮಾರ್ (Radha Krishna Kumar) ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದು, ಪೂಜಾ ಹೆಗ್ಡೆ ಪ್ರೇರಣಾ ಎಂಬ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಇಟಲಿ, ಜಾರ್ಜಿಯಾ, ಫ್ರಾನ್ಸ್ ಮತ್ತು ಇತರ ಯುರೋಪಿಯನ್ ದೇಶಗಳಲ್ಲಿ ಚಿತ್ರವನ್ನು ಚಿತ್ರೀಕರಿಸಲಾಗಿದ್ದು, ಪ್ರಭಾಸ್ ವಿಕ್ರಮಾದಿತ್ಯ ಎಂಬ ಹಸ್ತಸಾಮುದ್ರಿಕ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಚಿತ್ರವು 1970ರ ಯುರೋಪ್ ಹಿನ್ನಲೆಯಲ್ಲಿದೆ ಎಂದು ಹೇಳಲಾಗುತ್ತಿದೆ. ಭಾಗ್ಯಶ್ರೀ, ಕುನಾಲ್ ರಾಯ್ ಕಪೂರ್, ಸತ್ಯನ್, ಪ್ರಿಯದರ್ಶಿ, ಮುರಳಿ ಶರ್ಮಾ, ಸಶಾ ಚೆಟ್ರಿ, ರಿದ್ಧಿ ಕುಮಾರ್ ಸೇರಿದಂತೆ ಇತರರು ಚಿತ್ರದ ತಾರಾಬಳಗದಲ್ಲಿದ್ದಾರೆ. ಚಿತ್ರವು 2022ರ ಜನವರಿ 14ರಂದು ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ವಿಶ್ವದಾದ್ಯಂತ ತೆರೆ ಕಾಣಲಿದೆ.
 

Follow Us:
Download App:
  • android
  • ios